ತೆಲುಗು ಚಿತ್ರರಂಗದ ಮೋಸ್ಟ್ ಹ್ಯಾಂಡ್ ಸಮ್ ಹಾಗೂ ಮಾಸ್ ಹೀರೋ ಜ್ಯೂನಿಯರ್ ಎನ್ಟಿಆರ್. ಆರ್ಆರ್ಆರ್ ಚಿತ್ರದ ಮೂಲಕ ವಿಶ್ವಾದ್ಯಂತ ಅಭಿಮಾನಿ ಬಳಗ ಹೊಂದಿರುವ ಜ್ಯೂನಿಯರ್ ಎನ್ಟಿಆರ್ ಹೊಸ ಸಿನಿಮಾವನ್ನು ನಿರ್ದೇಶಕ ಕೊರಟಾಲ ಶಿವ ಜೊತೆ ಹೊಸ ಚಿತ್ರ ಮಾಡುತ್ತಿರೋದು ಗೊತ್ತಿರುವ ವಿಚಾರ. ಈಗಾಗಲೇ ಚಿತ್ರದ ಶೂಟಿಂಗ್ ಪ್ರಾರಂಭವಾದರೂ ಚಿತ್ರತಂಡ ಮಾತ್ರ ಇದುವರೆಗೂ ಶೀರ್ಷಿಕೆಯನ್ನು ಘೋಷಣೆ ಮಾಡಿರಲಿಲ್ಲ.
ಇದನ್ನೂ ಓದಿ: ವಿಚಿತ್ರ ಡ್ರೆಸ್ ತೊಟ್ಟ ಉರ್ಫಿ ಜಾವೇದ್: ನೆಟಿಜನ್‌ಗಳಿಂದ ಮತ್ತೊಮ್ಮೆ ಟ್ರೋಲ್
ಎನ್ಟಿಆರ್ ಜನ್ಮದಿನ ಹಿನ್ನೆಲೆ ಚಿತ್ರದ ಹೆಸರು ಘೋಷಣೆ: ಶನಿವಾರ ಜ್ಯೂನಿಯರ್ ಎನ್ಟಿಆರ್ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಈ ಸಂದರ್ಭದಲ್ಲಿ ಚಿತ್ರದ ಹೆಸರನ್ನು ಘೋಷಿಸಲಾಗಿದೆ. ಚಿತ್ರಕ್ಕೆ ‘ದೇವರ’ ಎಂಬ ಶೀರ್ಷಿಕೆ ಇಡಲಾಗಿದ್ದು, ಚಿತ್ರದ ಫಸ್ಟ್ಲುಕ್ ಪೋಸ್ಟರ್ ಸಹ ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಲಾಗಿದೆ. ಈ ಪೋಸ್ಟರ್ನಲ್ಲಿ ಜ್ಯೂನಿಯರ್ ಎನ್.ಟಿ.ಆರ್ ಕಪ್ಪು ಬಣ್ಣದ ಲುಂಗಿ ಮತ್ತು ಶರ್ಟ್ ತೊಟ್ಟು, ಸಮುದ್ರದ ಬಂಡೆಗಳ ಮೇಲೆ ಕೊಡಲಿ ಹಿಡಿದು ನಿಂತು ತೀಕ್ಷ್ಣವಾಗಿ ನೋಡುತ್ತಿದ್ದಾರೆ. ಕೆಳೆಗೆ ಹೆಣಗಳ ರಾಶಿ ಇದೆ. ಪಕ್ಕದಲ್ಲಿ ಮುರಿದು ಬಿದ್ದ ದೋಣಿಯೊಂದನ್ನೂ ಕಾಣಬಹುದು.
ಇದನ್ನೂ ಓದಿ: 'ಈಗ ಕತ್ರಿನಾ ನಿಮ್ಮವಳಾಗಿದ್ದರೂ, ಮುಂದಿನ ಏಳು ಜನ್ಮದಲ್ಲಿ ನೀವು ನನ್ನವರು': ವಿಕ್ಕಿ ಕೌಶಲ್ ಮೇಲೆ ಅಭಿಮಾನಿ ಪ್ರೀತಿ
ಮಾಸ್ ಲುಕ್ ಬಗ್ಗೆ ಮೆಚ್ಚುಗೆ: ಈ ಪೋಸ್ಟರ್ ಈಗಾಗಲೇ ಜ್ಯೂನಿಯರ್ ಎನ್.ಟಿ. ಆರ್ ಅವರ ಅಭಿಮಾನಿಗಳಲ್ಲಿ ಚಿತ್ರದ ಬಗ್ಗೆ ತೀವ್ರ ಕುತೂಹಲ ಮೂಡಿಸಿದ್ದು, ಅವರ ಮಾಸ್ ಲುಕ್ ಬಗ್ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ದೇವರ ಚಿತ್ರದ ಮೂಲಕ ಶ್ರೀದೇವಿ ಮಗಳು ಜಾಹ್ನವಿ ಕಪೂರ್ ಇದೇ ಮೊದಲ ಬಾರಿಗೆ ತೆಲುಗು ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಜೊತೆಗೆ ಬಾಲಿವುಡ್ನ ಖ್ಯಾತ ನಟ ಸೈಫ್ ಅಲಿ ಖಾನ್ ಸಹ ಖಳನಟನಾಗಿ ಈ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದಲ್ಲದೆ ಪ್ರಕಾಶ್ ರೈ, ಶ್ರೀಕಾಂತ್ ಮುಂತಾದ ಪ್ರತಿಭಾವಂತ ಕಲಾವಿದರ ದಂಡೇ ಈ ಚಿತ್ರದಲ್ಲಿದೆ.
ಇದನ್ನೂ ಓದಿ: ವಿಕ್ಟರಿ ವೆಂಕಟೇಶ್ಗೆ ಟಕ್ಕರ್ ಕೊಡಲು ಬಂದ ಬಾಲಿವುಡ್ ಸ್ಟಾರ್ ಲುಕ್ ರಿವೀಲ್
2024ರ ಏಪ್ರಿಲ್ 6ಕ್ಕೆ ಐದು ಭಾಷೆಗಳಲ್ಲಿ ಬಿಡುಗಡೆ: ಯುವಸುಧಾ ಆರ್ಟ್ಸ್ ಮತ್ತು ಎನ್ಟಿಆರ್ ಆರ್ಟ್ಸ್ನಡಿ ಮಿಕ್ಕಿಲಿನೇನಿ ಸುಧಾಕರ್ ಮತ್ತು ಹರಿಕೃಷ್ಣ ನಿರ್ಮಿಸುತ್ತಿರುವ ಈ ಚಿತ್ರವನ್ನು ಖ್ಯಾತ ನಟ ನಂದಮೂರಿ ಕಲ್ಯಾಣರಾಮ್ ನಿರ್ಮಿಸುತ್ತಿದ್ದಾರೆ. 2024ರ ಏಪ್ರಿಲ್ 6ಕ್ಕೆ ಐದು ಭಾಷೆಗಳಲ್ಲಿ ಪ್ಯಾನ್ ಇಂಡಿಯಾ ಚಿತ್ರವಾಗಿ ಬಿಡುಗಡೆಯಾಗಲಿರುವ ಈ ಚಿತ್ರಕ್ಕೆ ಅನಿರುದ್ಧ್ ಸಂಗೀತ, ರತ್ನವೇಲು ಛಾಯಾಗ್ರಹಣ ಮತ್ತು ಶ್ರೀಕರ್ ಪ್ರಸಾದ್ ಅವರ ಸಂಕಲನವಿದೆ.
ಇದನ್ನೂ ಓದಿ: ಶೂಟಿಂಗ್ ಸೆಟ್ನಲ್ಲಿ ದಿಗ್ಗಜರ ಸಮಾಗಮ: ಕಪಿಲ್ ದೇವ್ ಭೇಟಿ ಬಗ್ಗೆ ರಜನಿಕಾಂತ್ ಏನಂದ್ರು ಗೊತ್ತಾ?
ಇದನ್ನೂ ಓದಿ: ಕಾನ್ ಚಲನಚಿತ್ರೋತ್ಸವದಲ್ಲಿ ಭಾಗಿಯಾದ ಐಶ್ವರ್ಯಾ ರೈ: ವಸ್ತ್ರ ವಿನ್ಯಾಸಕ್ಕೆ ನೆಟ್ಟಿಗರಿಂದ ವಿಭಿನ್ನ ಟ್ರೋಲ್