ಕನ್ನಡ ಚಿತ್ರರಂಗದಲ್ಲಿ ಈ ವರ್ಷ ಹ್ಯಾಟ್ರಿಕ್ ಹೀರೋ ಶಿವ ರಾಜ್ಕುಮಾರ್ ಅವರ 'ಘೋಸ್ಟ್' ಸಿನಿಮಾ ಬಿಡುಗಡೆ ಆಗಿದ್ದು ಬಿಟ್ಟರೆ, ಮತ್ಯಾವ ಸೂಪರ್ ಸ್ಟಾರ್ಗಳ ಸಿನಿಮಾ ಬಿಡುಗಡೆ ಆಗಿಲ್ಲ. ಇದೀಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ 'ಕಾಟೇರ' ಚಿತ್ರತಂಡ ಶುಭ ಸುದ್ದಿ ಹಂಚಿಕೊಂಡಿದೆ. ಶೀಘ್ರದಲ್ಲೇ ಕಾಟೇರ ಚಿತ್ರಮಂದಿರ ಪ್ರವೇಶಿಸಲಿದ್ದು, ಅಭಿಮಾನಿ ಬಗಳಗದಲ್ಲಿ ಸಂತಸದ ವಾತಾವರಣ ನಿರ್ಮಾಣ ಆಗಿದೆ.
- " class="align-text-top noRightClick twitterSection" data="">
ಹೌದು, ಕ್ರಾಂತಿ ಸಿನಿಮಾ ಆದ ಬಳಿಕ ದರ್ಶನ್ ಅವರ ಯಾವ ಸಿನಿಮಾ ಬಿಡುಗಡೆ ಆಗಲಿದೆ ಎಂದು ಎದುರು ನೋಡುತ್ತಿದ್ದ ಅಭಿಮಾನಿಗಳಿಗೆ ಬಿಗ್ ಅಪ್ಡೇಟ್ ಸಿಕ್ಕಿದೆ. ಚಾಲೆಂಜಿಂಗ್ ಸ್ಟಾರ್ ಪಕ್ಕಾ ಮಾಸ್ ಲುಕ್ನಲ್ಲಿ ಕಾಣಿಸಿಕೊಂಡಿರುವ ಕಾಟೇರ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಈ ಚಿತ್ರದ ಅನೌನ್ಸ್ಮೆಂಟ್ ವಿಡಿಯೋ ಅನಾವರಣಗೊಂಡಿದೆ. ನಟ ದರ್ಶನ್ ಲುಕ್ನ ಸಣ್ಣ ಝಲಕ್ ಅನ್ನು ಚಿತ್ರತಂಡ ರಿವೀಲ್ ಮಾಡಿದೆ. ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಬಿಡುಗಡೆ ದಿನಾಂಕವನ್ನು ಘೋಷಿಸಿದ್ದಾರೆ. ಡಿಸೆಂಬರ್ 29 ರಂದು ಸಿನಿಮಾ ರಿಲೀಸ್ ಆಗಲಿದೆ.
'ಕಾಟೇರ' 70ರ ದಶಕದ ನೈಜ ಘಟನೆಯೊಂದನ್ನು ಆಧರಿಸಿ ನಿರ್ಮಾಣವಾಗಿರುವ ಸಿನಿಮಾ. ಈ ಚಿತ್ರ 1970ರ ಕಾಲಘಟ್ಟದಲ್ಲಿ ನಡೆಯುವ ಕಥೆಯನ್ನು ಹೊಂದಿದೆ ಎಂದು ಈ ಹಿಂದೆ ಚಿತ್ರತಂಡ ಮಾಹಿತಿ ನೀಡಿತ್ತು. ಸದ್ಯ ರಿವೀಲ್ ಆಗಿರುವ ಮೇಕಿಂಗ್ ವಿಡಿಯೋದಲ್ಲಿ ದರ್ಶನ್ ಬೆಂಕಿಕಟ್ಟಿ ಮೂಲಕ ಬೀಡಿ ಹಚ್ಚಿಕೊಳ್ಳುವ ದೃಶ್ಯದ ಮೂಲಕ ನಾನು ಪಕ್ಕಾ ಮಾಸ್ ಅಂದಿದ್ದಾರೆ.
ಇದನ್ನೂ ಓದಿ: ಲಾರೆನ್ಸ್ ಬಿಷ್ಣೋಯ್ ಬೆದರಿಕೆ: ಸಲ್ಮಾನ್ ಖಾನ್ ಭದ್ರತೆ ಪರಿಶೀಲಿಸಿದ ಪೊಲೀಸರು!
ಚಿತ್ರದಲ್ಲಿ ಮಾಲಾಶ್ರೀ ಅವರ ಮಗಳು ರಾಧನಾ ರಾಮ್ ಅವರು ದರ್ಶನ್ ಜೊತೆ ನಾಯಕಿಯಾಗಿ ನಟಿಸಿದ್ದಾರೆ. ಜೊತೆಗೆ ಹಿರಿಯ ನಟರಾದ ಬಿರಾದಾರ್, ಮಾಸ್ಟರ್ ರೋಹಿತ್ ಮತ್ತು ಡ್ಯಾನಿಶ್ ಅಖ್ತರ್, ಸೈಫಿ ಜಗಪತಿ ಬಾಬು ಮತ್ತು ಕುಮಾರ್ ಗೋವಿಂದ್, ಶೃತಿ, ಅವಿನಾಶ್ ಸೇರಿದಂತೆ ದೊಡ್ಡ ತಾರಾಗಣ ಈ ಚಿತ್ರದಲ್ಲಿದೆ.
ಇದನ್ನೂ ಓದಿ: ರಶ್ಮಿಕಾ ರಣ್ಬೀರ್ ಸಿನಿಮಾದ ರೊಮ್ಯಾಂಟಿಕ್ ಸೀನ್ಸ್ ಕಟ್: 'ಅನಿಮಲ್'ಗೆ A ಸರ್ಟಿಫಿಕೇಟ್!
ರಾಬರ್ಟ್ ಚಿತ್ರದ ಬಳಿಕ ನಿರ್ದೇಶಕ ತರುಣ್ ಸುಧೀರ್ ಮತ್ತೆ ದರ್ಶನ್ ಅವರಿಗೆ ಆ್ಯಕ್ಷನ್ ಕಟ್ ಹೇಳಿರುವ ಎರಡನೇ ಸಿನಿಮಾ. ಮಾಸ್ತಿ ಸಂಭಾಷಣೆ ಬರೆದಿದ್ದು, ವಿ. ಹರಿಕೃಷ್ಣ ಸಂಗೀತ ಸಂಯೋಜನೆ ಮಾಡಿದ್ದಾರೆ. ಸುಧಾಕರ್ ಎಸ್ ರಾಜ್ ಅವರ ಛಾಯಾಗ್ರಹಣ ಚಿತ್ರಕ್ಕಿದೆ. ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಅವರು ತಮ್ಮ ಬ್ಯಾನರ್ ಅಡಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಕರ್ನಾಟಕದ ಹಳ್ಳಿಯೊಂದರಲ್ಲಿ ನಡೆದ ನೈಜ ಘಟನೆಯಿಂದ ಸ್ಫೂರ್ತಿ ಪಡೆದಿರೋ ಕಾಟೇರ ಸಿನಿಮಾ ಇದೇ ವರ್ಷ ಡಿಸೆಂಬರ್ 29ರಂದು ಅದ್ಧೂರಿಯಾಗಿ ಬಿಡುಗಡೆಯಾಗಲಿದೆ.