ಟೀಸರ್ ನಿಂದಲೇ ಕನ್ನಡ ಚಿತ್ರರಂಗ ಅಲ್ಲದೇ ಭಾರತೀಯ ಸಿನಿಮಾರಂಗದಲ್ಲಿ ಸಂಚಲನ ಸೃಷ್ಟಿಸಿರೋ ಚಿತ್ರ ಕಬ್ಜ. ನಿರ್ದೇಶಕ ಆರ್.ಚಂದ್ರು ನಿರ್ದೇಶನದ ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಪ್ರಮುಖ ಪಾತ್ರದಲ್ಲಿ ಕಿಚ್ಚ ಸುದೀಪ್ ಅಭಿನಯಿಸಿರುವ ಕಬ್ಜ ಚಿತ್ರ ದಕ್ಷಿಣ ಭಾರತದಲ್ಲಿ ಹಲವಾರು ಹೈಲೆಟ್ಸ್ ಗಳಿಂದ ಸದ್ದು ಮಾಡುತ್ತಿದೆ.
ಹೌದು ಭಾರತ ಮಾತ್ರವಲ್ಲದೇ ವಿವಿಧ ದೇಶಗಳಲ್ಲಿಯೂ ಕಬ್ಜ ಚಿತ್ರದ ಬಿಡುಗಡೆಗಾಗಿ ಕುತೂಹಲದಿಂದ ಕಾಯುತ್ತಿದ್ದಾರೆ. ಅಲ್ಲದೇ ಮೊನ್ನೆ ನಡೆದ ಐಎಂಡಿಬಿ 2023ರ ನಿರೀಕ್ಷಿತ ಸಿನಿಮಾಗಳ ಸರ್ವೆ ಪಟ್ಟಿಯಲ್ಲಿ ಕಬ್ಜ ಸಿನಿಮಾ ಸ್ಥಾನ ಪಡೆದಿರುವುದು ಕನ್ನಡಿಗರಿಗೆ ಹೆಮ್ಮೆಯ ವಿಷಯ. ಕಳೆದ ಮೂರ್ನಾಲ್ಕು ವರ್ಷಗಳಿಂದ ಸಾಲು ಸಾಲು ಯಶಸ್ವಿ ಸಿನಿಮಾಗಳ ಮೂಲಕ ಸ್ಯಾಂಡಲ್ ವುಡ್ ಮತ್ತಷ್ಟು ಎತ್ತರಕ್ಕೆ ಹೋಗಿದೆ.
ಕೆಜಿಎಫ್, ವಿಕ್ರಾಂತ್ ರೋಣ, 777 ಚಾರ್ಲಿ ಹಾಗೂ ಕಾಂತಾರ ಯಶಸ್ಸಿನ ಬಳಿಕ ಕನ್ನಡದ ಕೀರ್ತಿ ಪತಾಕೆಯನ್ನು ಹಾರಿಸಲು ಈ ವರ್ಷ ಕಬ್ಜ ಸಜ್ಜಾಗಿದೆ. ಕಬ್ಜ ಚಿತ್ರ ಬಿಡುಗಡೆ ಯಾವಾಗ ಎಂಬುದು ರಿಯಲ್ ಸ್ಟಾರ್ ಅಭಿಮಾನಿಗಳು ಅಲ್ಲದೇ ಸೌತ್ ಚಿತ್ರರಂಗ ಎದುರು ನೋಡುತ್ತಿದೆ. ಈ ನಿಟ್ಟಿನಲ್ಲಿ ನಿರ್ದೇಶಕ ಆರ್ ಚಂದ್ರು ಇದೇ ಜನವರಿ 24ರಂದು ದೊಡ್ದದೊಂದು ವಿಷಯವನ್ನು ಹಂಚಿಕೊಳ್ಳಲಿದ್ದಾರೆ.
ಇನ್ನು ಕಬ್ಜ ಚಿತ್ರ ಅದ್ದೂರಿ ಮೇಕಿಂಗ್, 1960 ಹಾಗು 80ರಲ್ಲಿ ನಡೆಯುವ ಕಥೆಯಾದ್ದರಿಂದ ಈ ಚಿತ್ರದಲ್ಲಿ ಬಹು ದೊಡ್ಡ ಸ್ಟಾರ್ ಕಾಸ್ಟ್ ಹೊಂದಿದೆ. ತೆಲುಗಿನ ಖ್ಯಾತ ನಟರಾರ ಪೊಸನಿ ಕೃಷ್ಣ ಮುರಳಿ ಮತ್ತು ಮುರಳಿ ಶರ್ಮಾ, ಐ ಮೂವಿ ಖ್ಯಾತಿ ಕಾಮರಾಜನ್, ನವಾಬ್ ಷಾ, ಹಜಗಪತಿ ಬಾಬು, ರಾಹುಲ್ ಜಗತಪ್,ಅನೂಪ್ ರೇವಣ್ಣ, ಜಾನ್ ಕೊಕ್ಕಿನ್, ರಾಹುಲ್ ದೇವ್, ನವೀನ್, ಕೋಟ ಶ್ರೀನಿವಾಸ್, ಜಯಪ್ರಕಾಶ್, ಕಾಟ್ ರಾಜು, ಸುಬ್ಬರಾಜು ಹೀಗೆ ದೊಡ್ಡ ಕಲಾವಿದರ ದಂಡು ಇದೆ.
ಎಂ.ಟಿ.ಬಿ ನಾಗರಾಜ್ ಅರ್ಪಿಸುವ, ಶ್ರೀ ಸಿದ್ದೇಶ್ವರ ಎಂಟರ್ ಪ್ರೈಸಸ್ ಲಾಂಛನದಲ್ಲಿ ಆರ್ ಚಂದ್ರು ಅವರೇ ನಿರ್ಮಿಸುತ್ತಿರುವ ಕಬ್ಜ ಚಿತ್ರಕ್ಕೆ ಕೆ.ಜಿ.ಎಫ್ ಖ್ಯಾತಿಯ ರವಿ ಬಸ್ರೂರು ಸಂಗೀತ ನಿರ್ದೇಶನವಿದೆ. ಕಾರ್ಯಕಾರಿ ನಿರ್ಮಾಪಕರಾಗಿ ಮುನೀಂದ್ರ ಹಾಗೂ ಲೈನ್ ಪ್ರೊಡ್ಯೂಸರ್ ಆಗಿ ರಾಜಶೇಖರ್ ಕಾರ್ಯನಿರ್ವಹಿಸುತ್ತಿದ್ದಾರೆ. ಎ.ಜೆ.ಶೆಟ್ಟಿ ಛಾಯಾಗ್ರಹಣ, ಮಹೇಶ್ ಸಂಕಲನ, ರಾಜು ಸುಂದರಂ, ಗಣೇಶ್, ಶೇಖರ್ ನೃತ್ಯ ನಿರ್ದೇಶನ ಹಾಗೂ ರವಿವರ್ಮ, ವಿಕ್ರಂಮೋರ್, ವಿಜಯ್ ಸಾಹಸ ನಿರ್ದೇಶನವಿದೆ. ಕರ್ನಾಟಕದಲ್ಲಷ್ಟೇ ಸದ್ದು ಮಾಡುತ್ತಿರುವ ಕಬ್ಜ ಸಿನಿಮಾದ ಬಿಡುಗಡೆ ದಿನಾಂಕವನ್ನು ಅನೌನ್ಸ್ ಮಾಡಲು ನಿರ್ದೇಶಕ ಆರ್ ಚಂದ್ರು ಪ್ಲಾನ್ ಮಾಡಿಕೊಂಡಿದ್ದಾರೆ.
ಇಂಥದ್ದೊಂದು ಕನ್ನಡ ಸಿನಿಮಾ ಬೃಹತ್ ಮಟ್ಟದಲ್ಲಿ ಮೂಡಿ ಬರುತ್ತಿರುವುದು ಸ್ಯಾಂಡಲ್ ವುಡ್ಗೆ ದೊಡ್ಡ ಗೌರವ. ಇಂಥ ಪ್ರಯತ್ನಗಳಿಗೆ ಕನ್ನಡಿಗರು ಯಾವಾಗಲು ಪ್ರಶಂಶಿಸುತ್ತಾರೆ. ಈಗ ಕಬ್ಜ ರಿಲೀಸ್ ಡೇಟ್ ಅನೌನ್ಸ್ ಮಾಡಿದರೆ ಕನ್ನಡಿಗರು ಮಾತ್ರವಲ್ಲದೇ. ಭಾರತೀಯ ಚಿತ್ರರಂಗವೇ ಸಂತೋಷ ಪಡುತ್ತದೆ ಎಂಬುದರಲ್ಲಿ ಸಂಶಯವಿಲ್ಲ. ಕಾತುರತೆಗೆ ಬೇಗ ಚಂದ್ರು & ಟೀಂ ಡೇಟ್ ತಿಳಿಸಲಿ ಹಾಗೂ ಕಬ್ಜ ಚಿತ್ರವು ಮತ್ತೊಮ್ಮೆ ಗೆದ್ದು ಕನ್ನಡ ಕೀರ್ತಿ ಪತಾಕೆಯನ್ನು ವಿಶ್ವದಾದ್ಯಂತ ಹಾರಿಸಲಿ ಎಂಬುದು ಪ್ರತಿಯೊಬ್ಬ ಕನ್ನಡಿಗರ ಆಶಯ.
ಇದನ್ನೂ ಓದಿ: 'ಲವ್ ಬರ್ಡ್ಸ್' ಲಾಯರ್ ಆದ ಸಂಯುಕ್ತ ಹೊರನಾಡು.. ಫಸ್ಟ್ ಲುಕ್ ರಿಲೀಸ್!