ETV Bharat / entertainment

ಉಪ್ಪಿಯ ಬಹು ನಿರೀಕ್ಷಿತ ಕಬ್ಜ ಚಿತ್ರಕ್ಕೆ ಏಳು ಭಾಷೆಗಳಲ್ಲಿ ಡಬ್ಬಿಂಗ್ ಕೆಲಸಗಳು ಶುರು!

ಕ್ನನಡ ಸಿನಿಮಾಗಳ ಬಹು ನಿರೀಕ್ಷಿತ ಸಿನಿಮಾಗಳ ಸಾಲಿನಲ್ಲಿರುವ ಉಪೇಂದ್ರ ನಟನೆಯ ಕಬ್ಜ ಚಿತ್ರದ ಕನ್ನಡ ಸೇರಿದಂತೆ ಇತರ ಭಾಷೆಯ ಡಬ್ಬಿಂಗ್​ ಆರಂಭವಾಗಿದೆ.

author img

By

Published : Jun 7, 2022, 9:59 PM IST

kabza film  all language dubbing start
kabza film all language dubbing start

ಕಬ್ಜ ಕನ್ನಡ ಚಿತ್ರರಂಗ ಅಲ್ಲದೇ ಸೌತ್ ಸಿನಿಮಾ ಇಂಡಸ್ಟ್ರಿಯಲ್ಲಿ ಟಾಕ್ ಆಗುತ್ತಿರುವ ಸಿನಿಮಾ. ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಹಾಗೂ ನಿರ್ದೇಶಕ ಆರ್ ಚಂದ್ರು ನಿರ್ದೇಶನದ ಕಬ್ಜ ಸಿನಿಮಾ ಒಂದಲ್ಲ ಒಂದು ವಿಷ್ಯಕ್ಕೆ ಸೌಂಡ್ ಮಾಡುತ್ತಿದೆ. ಬಹುತೇಕ ಚಿತ್ರೀಕರಣ ಮುಗಿಸಿರೋ ಕಬ್ಜ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗುತ್ತಿದೆ. ಸದ್ಯ ಕನ್ನಡ ಸೇರಿದಂತೆ ಏಕಕಾಲದಲ್ಲಿ ಏಳುಭಾಷೆಗಳಲ್ಲೂ ಡಬ್ಬಿಂಗ್ ಕೆಲಸಗಳು ಆರಂಭವಾಗಿದೆ ಎಂದು ನಿರ್ದೇಶಕ ಆರ್ ಚಂದ್ರು ತಿಳಿಸಿದ್ದಾರೆ.

kabza film  all language dubbing start
ಉಪ್ಪಿಯ ಬಹು ನಿರೀಕ್ಷಿತ ಕಬ್ಜ ಚಿತ್ರಕ್ಕೆ ಏಳು ಭಾಷೆಗಳಲ್ಲಿ ಡಬ್ಬಿಂಗ್ ಕೆಲಸಗಳು ಶುರು!

ಪೋಸ್ಟರ್ ಹಾಗೂ ಸ್ಟಾರ್ ಕಾಸ್ಟ್​ನಿಂದ ಸಿನಿಮಾಗೆ ಹೈಪ್​ ಸಿಕ್ಕಿತ್ತು. ಕಬ್ಜ ಸಿನಿಮಾದಲ್ಲಿ ಉಪೇಂದ್ರ ಜೊತೆ ಕಿಚ್ಚ ಸುದೀಪ್ ಕೂಡ ಸೂಪರ್ ಕಾಪ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. 80ರ ದಶಕದ ಅಂಡರ್ ವರ್ಲ್ಡ್ ಕಥೆ ಆಧರಿಸಿರುವ ಕಬ್ಜ ಚಿತ್ರ ಅದ್ಧೂರಿ ಮೇಕಿಂಗ್ ನೊಂದಿಗೆ ಗಮನ ಸೆಳೆಯುತ್ತಿದೆ.

kabza film  all language dubbing start
'ಕಬ್ಜ' ಸಿನಿಮಾ ಮೂಲಕ ಮತ್ತೆ ಸ್ಯಾಂಡಲ್​ವುಡ್​ಗೆ ಎಂಟ್ರಿ ಕೊಟ್ಟ ಶ್ರೀಯಾ

ಉಪೇಂದ್ರ, ಸುದೀಪ್ ಅಲ್ಲದೇ ಶ್ರೇಯಾ ಶರಣ್, ಜಗಪತಿ ಬಾಬು, ರಾಹುಲ್ ಜಗತಪ್, ಅನೂಪ್ ರೇವಣ್ಣ, ಜಾನ್ ಕೊಕೇನ್, ರಾಹುಲ್ ದೇವ್, ನವೀನ್, ಕೋಟ ಶ್ರೀನಿವಾಸ್ ರಾವ್, ಜಯಪ್ರಕಾಶ್, ಕಾಟ್ ರಾಜು, ಸುಬ್ಬರಾಜು ಹೀಗೆ ದೊಡ್ಡ ತಾರಾಗಣ ಈ ಚಿತ್ರದಲ್ಲಿದ್ದಾರೆ‌.

kabza film  all language dubbing start
ರಿಯಲ್ ಸ್ಟಾರ್ ಕಬ್ಜ ಸಿನಿಮಾದಲ್ಲಿ ಅಭಿನಯ ಚಕ್ರವರ್ತಿ ಫಸ್ಟ್ ಲುಕ್

ಕೆಜಿಎಫ್ ಖ್ಯಾತಿಯ ರವಿ ಬಸ್ರೂರು, ಕಬ್ಜ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಎ.ಜೆ ಶೆಟ್ಟಿ ಈ ಚಿತ್ರಕ್ಕೆ ಕ್ಯಾಮರ್ ವರ್ಕ್ ಮಾಡುತ್ತಿದ್ದಾರೆ. ಕೆಜಿಎಫ್ ಖ್ಯಾತಿಯ ಶಿವಕುಮಾರ್ ಅದ್ದೂರಿ ಸೆಟ್ಟುಗಳನ್ನ ಹಾಕಿದ್ದಾರೆ.

kabza film  all language dubbing start
ಕಬ್ಜ ಸಿನಿಮಾದಲ್ಲಿ ರಿಯಲ್ ಸ್ಟಾರ್

ಬೃಹತ್​ ವೆಚ್ಚದಲ್ಲಿ ನಿರ್ದೇಶಕ ಆರ್ ಚಂದ್ರು ನಿರ್ಮಾಣ ಮಾಡುವುದರ ಜೊತೆಗೆ ನಿರ್ದೇಶನ ಮಾಡುತ್ತಿದ್ದಾರೆ. ಕನ್ನಡ, ತೆಲುಗು, ತಮಿಳು, ಮಲೆಯಾಳಂ, ಹಿಂದಿ, ಮರಾಠಿ ಭಾಷೆಯಲ್ಲಿ ಡಬ್ಬಿಂಗ್ ಕೆಲಸಗಳು ಆರಂಭವಾಗಿದೆ. ಸದ್ಯ ವಿಶ್ವದಾದ್ಯಂತ ಬಿಡುಗಡೆಗೂ ಪೂರ್ವದಲ್ಲೇ ಸಾಕಷ್ಟು ಜನಪ್ರಿಯತೆ ಪಡೆದಿರುವ ಕಬ್ಜ ಸಿನಿಮಾವನ್ನು ತೆರೆಯಲ್ಲಿ ನೋಡಲು ಅಭಿಮಾನಿಗಳು ತುದಿಗಾಲಲ್ಲಿ ನಿಂತಿದ್ದಾರೆ.

ಇದನ್ನೂ ಓದಿ: ಧ್ರುವ ಸರ್ಜಾ ಫಾರಂಹೌಸ್​ನಲ್ಲಿ ಚಿರಂಜೀವಿ ಸರ್ಜಾ 2ನೇ ವರ್ಷದ ಪುಣ್ಯಸ್ಮರಣೆ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.