ಯುಶಸ್ಸಿನ ಹಾದಿಯಲ್ಲಿರುವ ಸ್ಯಾಂಡಲ್ವುಡ್ಗೆ ಮತ್ತೊಂದು ಭರ್ಜರಿ ಯಶಸ್ಸು ತಂದುಕೊಡಲು ಸಜ್ಜಾಗಿರುವ ಬಹುನಿರೀಕ್ಷಿತ ಸಿನಿಮಾ 'ಕಬ್ಜ'. ಬಿಡುಗಡೆಗೂ ಮುನ್ನವೇ ಟೀಸರ್, ಹಾಡು, ಮೇಕಿಂಗ್, ಬಿಗ್ ಸ್ಟಾರ್ ಕಾಸ್ಟ್ ಮೂಲಕ ಗಮನ ಸೆಳೆಯುತ್ತಿರುವ ಚಿತ್ರ. ಆರ್ ಚಂದ್ರು ನಿರ್ದೇಶನದಲ್ಲಿ ರೆಡಿಯಾಗುತ್ತಿರುವ ಈ ಸಿನಿಮಾದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ನಾಯಕನ ಪಾತ್ರದಲ್ಲಿ, ಅಭಿನಯ ಚಕ್ರವರ್ತಿ ಸುದೀಪ್ ವಿಶೇಷ ಪಾತ್ರದಲ್ಲಿ ಅಭಿನಯಿಸಿದ್ದಾರೆ.
ಮಹಾಶಿವರಾತ್ರಿ ಹಿನ್ನೆಲೆ ನಿನ್ನೆ ಮಹಾಶಿವನನ್ನು (ನಟರಾಜ) ಪೂಜಿಸುವ "ನಮಾಮಿ ನಮಾಮಿ" ಎಂಬ ಸುಮಧುರ ಗೀತೆ ಬಿಡುಗಡೆ ಆಗಿದೆ. ಕಿನಾಲ್ ರಾಜ್ ಬರೆದಿರುವ ಈ ಹಾಡನ್ನು ಖ್ಯಾತ ಗಾಯಕಿ ಐಶ್ವರ್ಯ ರಂಗರಾಜನ್ ಸುಶ್ರಾವ್ಯವಾಗಿ ಹಾಡಿದ್ದಾರೆ. ಸೌತ್ ಬ್ಯೂಟಿ ಶ್ರೀಯಾ ಶರಣ್ ಈ ಹಾಡಿನಲ್ಲಿ ಸಂಪೂರ್ಣ ಸಂಪ್ರದಾಯ ಲುಕ್ನಲ್ಲಿ ಕಾಣಿಸಿಕೊಂಡಿದ್ದು, ಹಾಡನ್ನು ಮಿಲಿಯನ್ ಜನರು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
- " class="align-text-top noRightClick twitterSection" data="">
ಈ ಹಾಡಿನ ಬಿಡುಗಡೆ ಸಮಾರಂಭ ಇತ್ತೀಚೆಗೆ ಚೆನ್ನೈನಲ್ಲಿ ಅದ್ಧೂರಿಯಾಗಿ ನಡೆಯಿತು. ನಿರ್ದೇಶಕ ಆರ್ ಚಂದ್ರು, ನಟಿ ಶ್ರೀಯಾ ಶರಣ್, ಐ ಸಿನಿಮಾ ಖ್ಯಾತಿಯ ಕಾಮರಾಜನ್ ಸೇರಿದಂತೆ ಸಾಕಷ್ಟು ಗಣ್ಯರ ಸಮ್ಮುಖದಲ್ಲಿ ಈ ಹಾಡನ್ನು ಬಿಡುಗಡೆ ಮಾಡಲಾಯಿತು. ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿರುವ ನಟಿ ಶ್ರೀಯಾ ಶರಣ್ ಮಾತನಾಡಿ, ಕಬ್ಜ ಚಿತ್ರದಲ್ಲಿ ನಟಿಸಿರುವುದು ಖುಷಿ ಕೊಟ್ಟಿದೆ. ಶಿವನನ್ನು ಆರಾಧಿಸುವ ಈ ಹಾಡು ಬಹಳ ಮಧುರವಾಗಿದೆ. ನನ್ನ ಪಾತ್ರ ಕೂಡ ಚೆನ್ನಾಗಿದೆ. ಸದ್ಯದಲ್ಲೇ ಚಿತ್ರ ಬಿಡುಗಡೆ ಆಗಲಿದೆ. ಎಲ್ಲರೂ ಪ್ರೋತ್ಸಾಹ ನೀಡಿ ಎಂದು ಕೇಳಿಕೊಂಡರು.
ನಿರ್ದೇಶಕ ಆರ್ ಚಂದ್ರು ಮಾತನಾಡಿ ಕಬ್ಜ ಚಿತ್ರ ಸಾಗಿ ಬಂದ ಬಗ್ಗೆ ಹಾಗೂ ಹಾಡಿನ ಕುರಿತು ಕೆಲ ವಿಚಾರಗಳನ್ನು ಹಂಚಿಕೊಂಡರು. ಹಾಡುಗಳನ್ನು ಹೈದರಾಬಾದ್, ಚೆನ್ನೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಬಿಡುಗಡೆ ಮಾಡುತ್ತಿದ್ದೇವೆ. ಹೋದ ಕಡೆಯೆಲ್ಲಾ ಚಿತ್ರದ ಕುರಿತು ಪ್ರಶಂಸನೀಯ ಮಾತುಗಳು ಕೇಳಿ ಬರುತ್ತಿವೆ. ಇದು ನಮ್ಮ ಚಿತ್ರತಂಡದ ವಿಶ್ವಾಸವನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ತಿಳಿಸಿದರು.
ಶ್ರೀ ಸಿದ್ದೇಶ್ವರ ಎಂಟರ್ಪ್ರೈಸಸ್ ಮೂಲಕ ನಿರ್ಮಾಣವಾಗಿರುವ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ "ಕಬ್ಜ" ಚಿತ್ರದ ಟೀಸರ್ ಹಾಗೂ ಹಾಡುಗಳ ಬಗ್ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಫೆಬ್ರವರಿ 26ರಂದು ಶಿಡ್ಲಘಟ್ಟದಲ್ಲಿ ಲಕ್ಷಾಂತರ ಜನರ ಸಮ್ಮುಖದಲ್ಲಿ ನಡೆಯುವ ಅದ್ಧೂರಿ ಸಮಾರಂಭದಲ್ಲಿ ಕಮರ್ಷಿಯಲ್ ಹಾಡೊಂದು ಲೋಕಾರ್ಪಣೆ ಆಗಲಿದೆ.
ಇದನ್ನೂ ಓದಿ: ಕಿಚ್ಚ ಸುದೀಪ್ ಫಿಟ್ನೆಸ್ ಸೀಕ್ರೆಟ್: ಅವರೇ ಹೇಳಿದ್ದು ಹೀಗೆ..!
1960-80ರಲ್ಲಿ ನಡೆಯುವ ಕಥೆ. ರಿಯಲ್ ಸ್ಟಾರ್ ಒಬ್ಬ ಗ್ಯಾಂಗ್ಸ್ಟಾರ್ ಪಾತ್ರ ನಿರ್ವಹಿಸಿದ್ದು, ಕಿಚ್ಚ ಸುದೀಪ್ ಖಡಕ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ಉಪ್ಪಿ ಜೋಡಿಯಾಗಿ ಶ್ರೀಯಾ ಶರಣ್ ನಟಿಸಿದ್ದಾರೆ. ತೆಲುಗಿನ ಖ್ಯಾತ ನಟರಾದ ಪೊಸನಿ ಕೃಷ್ಣ ಮುರಳಿ ಮತ್ತು ಮುರಳಿ ಶರ್ಮಾ, ಐ ಮೂವಿ ಖ್ಯಾತಿಯ ಕಾಮರಾಜನ್, ನವಾಬ್ ಷಾ, ಜಗಪತಿ ಬಾಬು, ರಾಹುಲ್ ಜಗತಪ್, ಅನೂಪ್ ರೇವಣ್ಣ, ಜಾನ್ ಕೊಕ್ಕಿನ್, ರಾಹುಲ್ ದೇವ್, ನವೀನ್, ಕೋಟ ಶ್ರೀನಿವಾಸ್, ಜಯಪ್ರಕಾಶ್, ಕಾಟ್ ರಾಜು, ಸುಬ್ಬರಾಜು ಹೀಗೆ ದೊಡ್ಡ ಕಲಾವಿರ ದಂಡು ಇದೆ.
ಇದನ್ನೂ ಓದಿ: 'ನಮಾಮಿ' ಹಾಡಿನಲ್ಲಿ ಶ್ರೀಯಾ ಶರಣ್ ಮಿಂಚು: ಸ್ಯಾಂಡಲ್ವುಡ್ನಲ್ಲಿ ಮತ್ತೊಂದು ಗೆಲುವಿನ ಮುನ್ನುಡಿ
ಎಂ.ಟಿ.ಬಿ ನಾಗರಾಜ್ ಅರ್ಪಿಸುವ ಈ ಚಿತ್ರವನ್ನು ಆರ್ ಚಂದ್ರು ಅವರೇ ನಿರ್ಮಾಣ ಮಾಡಿದ್ದಾರೆ. ಕೆ.ಜಿ.ಎಫ್ ಖ್ಯಾತಿಯ ರವಿ ಬಸ್ರೂರು ಸಂಗೀತ ನಿರ್ದೇಶನವಿದೆ. ಎ.ಜೆ ಶೆಟ್ಟಿ ಛಾಯಾಗ್ರಹಣ, ಮಹೇಶ್ ಸಂಕಲನ, ರಾಜು ಸುಂದರಂ, ಗಣೇಶ್, ಶೇಖರ್ ನೃತ್ಯ ನಿರ್ದೇಶನ ಹಾಗೂ ರವಿವರ್ಮ, ವಿಕ್ರಂಮೋರ್, ವಿಜಯ್ ಸಾಹಸ ನಿರ್ದೇಶನ ಇದೆ. ರಿಯಲ್ ಸ್ಟಾರ್ ಉಪೇಂದ್ರ ರೆಟ್ರೋ ಲುಕ್ಗೆ ಅವರ ಕೋಟ್ಯತರ ಅಭಿಮಾನಿಗಳು ಬೋಲ್ಡ್ ಆಗಿದ್ದು, ಸಿನಿಮಾದ ಮೇಲೆ ದಿನೇ ದಿನೆ ಕ್ರೇಜ್ ಹೆಚ್ಚಾಗುತ್ತಿರೋದು ಕನ್ನಡ ಚಿತ್ರರಂಗದ ಗೆಲುವಿನ ಪ್ರತೀಕವಾಗಿದೆ.