ಲವರ್ ಬಾಯ್ ಇಮೇಜ್ನಿಂದ ಕನ್ನಡ ಚಿತ್ರರಂಗದಲ್ಲಿ ತನ್ನದೇ ಐಡೆಂಟಿಟಿ ಕ್ರಿಯೇಟ್ ಮಾಡಿಕೊಂಡಿರುವ ನಟ ಅನಿರುದ್ಧ್ ಜತ್ಕರ್. ರಾಜಸಿಂಹ ಬಳಿಕ ಕಿರುತೆರೆಯಲ್ಲಿ ಜನಪ್ರಿಯರಾಗಿದ್ದರು. ಆದರೆ ಕೆಲ ಕಾರಣಗಳಿಂದ ಜೊತೆ ಜೊತೆಯಲಿ ಸೀರಿಯಲ್ನಿಂದ ಹೊರ ಬಂದರು. ಇದೀಗ ಬಿಗ್ ಸ್ಕ್ರೀನ್ಗೆ ರೀ ಎಂಟ್ರಿ ಕೊಡಲು ರೆಡಿಯಾಗಿದ್ದಾರೆ. ಹೌದು, ಹೆಸರಿಡದ ಹೊಸ ಚಿತ್ರದಲ್ಲಿ ಅಭಿನಯಿಸಲು ಅನಿರುದ್ಧ್ ಜತ್ಕರ್ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.
![Aniruddha Jatkar upcoming movie](https://etvbharatimages.akamaized.net/etvbharat/prod-images/21-07-2023/19058836_sdte4gsrhd.jpg)
ಈ ಚಿತ್ರದ ಸ್ಕ್ರಿಪ್ಟ್ ಪೂಜೆಯನ್ನು ಇತ್ತೀಚೆಗೆ ಮೈಸೂರಿನ ಡಾ. ವಿಷ್ಣುವರ್ಧನ್ ಸ್ಮಾರಕದಲ್ಲಿ ನೆರವೇರಿಸಲಾಯಿತು. ಭಾರತಿ ವಿಷ್ಣುವರ್ಧನ್ ಅವರು ಈ ಸಮಾರಂಭಕ್ಕೆ ಆಗಮಿಸಿ ಅಳಿಯ ಅನಿರುದ್ಧ್ ಚಿತ್ರಕ್ಕೆ ಕ್ಲಾಪ್ ಮಾಡಿ, ಇಡೀ ಚಿತ್ರ ತಂಡಕ್ಕೆ ಶುಭ ಹಾರೈಸಿದರು.
![Aniruddha Jatkar upcoming movie](https://etvbharatimages.akamaized.net/etvbharat/prod-images/21-07-2023/19058836_sdrhf3wegh.jpg)
ಇದೇ ವರ್ಷ ತೆರೆಕಂಡಿರುವ ವಿಜಯ ರಾಘವೇಂದ್ರ ಅಭಿನಯದ "ರಾಘು" ಚಿತ್ರವನ್ನು ನಿರ್ದೇಶಿಸಿದ್ದ ಆನಂದ್ ರಾಜ್ ಈ ಚಿತ್ರವನ್ನು ನಿರ್ದೇಶಿಸಲಿದ್ದಾರೆ. ನಿರ್ದೇಶಕರೇ ಕಥೆ ರಚಿಸಿದ್ದು, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ಗಣೇಶ್ ಪರಶುರಾಮ್ ಬರೆಯುತ್ತಿದ್ದಾರೆ. ಉಳಿದಂತೆ ಉದಯಲೀಲಾ ಛಾಯಾಗ್ರಹಣ, ವಿಜೇತ್ ಚಂದ್ರ ಅವರ ಸಂಕಲನ, ರಿತ್ವಿಕ್ ಮುರಳಿಧರ್ ಸಂಗೀತ ನಿರ್ದೇಶನ, ಆಶಿಕ್ ಕುಸುಗೊಳ್ಳಿ ಡಿ.ಐ (ವಿಕ್ರಾಂತ್ ರೋಣ ಖ್ಯಾತಿ), ನರಸಿಂಹಮೂರ್ತಿ ಸಾಹಸ ನಿರ್ದೇಶನ ಹಾಗೂ ಮಾಧುರಿ ಪರಶುರಾಮ್ ಅವರ ನೃತ್ಯ ನಿರ್ದೇಶ ಇರುವ ಈ ಚಿತ್ರದ ಸೌಂಡ್ ಡಿಸೈನರ್ ಆಗಿ ಬಿ.ಆರ್ ನವೀನ್ ಕುಮಾರ್ ಕಾರ್ಯ ನಿರ್ವಹಿಸುತ್ತಿದ್ದಾರೆ.
ಅನಿರುದ್ಧ್ ಅವರಿಗೆ ನಾಯಕಿಯರಾಗಿ ನಿಧಿ ಸುಬ್ಬಯ್ಯ ಹಾಗೂ ಲವ್ ಮಾಕ್ಟೇಲ್ 2 ಚಿತ್ರದ ರೆಚೆಲ್ ಡೇವಿಡ್ ಅಭಿನಯಿಸಲಿದ್ದಾರೆ. ಇವರ ಜೊತೆಗೆ ಶರತ್ ಲೋಹಿತಾಶ್ವ, ಕೆ.ಎಸ್ ಶ್ರೀಧರ್, ಶಿವಮಣಿ ಸೇರಿದಂತೆ ಮುಂತಾದವರು ತಾರಾ ಬಳಗದಲ್ಲಿದ್ದಾರೆ.
ಕಾಮಿಡಿ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಶೀರ್ಷಿಕೆ ಶೀಘ್ರದಲ್ಲೇ ಅನಾವರಣಗೊಳ್ಳಲಿದೆ. ದಮ್ತಿ ಪಿಕ್ಚರ್ಸ್ ಲಾಂಛನದಲ್ಲಿ ರೂಪ ಡಿ.ಎನ್ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಇದು ಅವರ ನಿರ್ಮಾಣದ ಮೊದಲ ಚಿತ್ರ. ಆಗಸ್ಟ್ 10 ರಿಂದ ಚಿತ್ರೀಕರಣ ಆರಂಭವಾಗಲಿದೆ. ಬೆಂಗಳೂರು, ತುಮಕೂರು ಹಾಗೂ ಮಂಗಳೂರಿನಲ್ಲಿ ಚಿತ್ರೀಕರಣ ನಡೆಯಲಿದೆ.
ಇದನ್ನೂ ಓದಿ: ನರೇಂದ್ರ ಮೋದಿ ಬಯೋಪಿಕ್: ಮೋದಿ ಪಾತ್ರದಲ್ಲಿ ಅಮಿತಾಭ್ ಬಚ್ಚನ್ ಅಭಿನಯ?
ನಟ ಅನಿರುದ್ಧ್ ಜತ್ಕರ್ ಅವರು ಜನಪ್ರಿಯ ಧಾರಾವಾಹಿ 'ಜೊತೆ ಜೊತೆಯಲಿ'ಯಲ್ಲಿ ಕಾಣಿಸಿಕೊಂಡಿದ್ದರು. ಈ ಸೀರಿಯಲ್ ಮೂಲಕ ಅನಿರುದ್ಧ್ ಸಾಕಷ್ಟು ಜನಪ್ರಿಯತೆ ಸಂಪಾದಿಸಿದ್ದರು. ಆದರೆ ಕೆಲ ಮನಸ್ತಾಪ ವಿಚಾರವಾಗಿ ನಟನನ್ನು ಧಾರಾವಾಹಿಯಿಂದ ಕೈ ಬಿಡಲಾಯಿತು. ಈ ಹಿನ್ನೆಲೆ ಕೆಲ ಸಭೆ ನಡೆದು, ನಟ ಅನಿರುದ್ಧ್ ಜತ್ಕರ್ ಹಾಗೂ ಜೊತೆ ಜೊತೆಯಲಿ ಧಾರಾವಾಹಿ ನಿರ್ಮಾಪಕ ಆರೂರು ಜಗದೀಶ್ ಚರ್ಚೆ ಮಾಡಿ ಸಮಸ್ಯೆಯನ್ನು ಸರಿಪಡಿಸಿಕೊಂಡರು. ಇದೀಗ ಅನಿರುದ್ಧ್ ಜತ್ಕರ್ ಅಭಿನಯಕ್ಕೆ ಸಜ್ಜಾಗಿದ್ದಾರೆ.
ಇದನ್ನೂ ಓದಿ: ಕಮಲ್ ಕೊಂಡಾಡಿದ ಅಮಿತಾಭ್: ನಟ ಹಾಸನ್ ನೆಗೆಟಿವ್ ರೋಲ್ ಒಪ್ಪಿಕೊಳ್ಳಲು ಕಾರಣವೇನು ಗೊತ್ತಾ?