'ಅಲೆಕ್ಸಾ'....ಕ್ಯಾಚೀ ಟೈಟಲ್ನಿಂದಲೇ ಕನ್ನಡ ಚಿತ್ರರಂಗದಲ್ಲಿ ಸಖತ್ ಸೌಂಡ್ ಮಾಡುತ್ತಿರುವ ಸಿನಿಮಾ. ಪವನ್ ತೇಜ್ ಹಾಗೂ ಅದಿತಿ ಪ್ರಭುದೇವ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ಅಲೆಕ್ಸಾ ಸಿನಿಮಾ ಸೈಲೆಂಟ್ ಆಗಿ ಶೂಟಿಂಗ್ ಮುಗಿಸಿ ಬಿಡುಗಡೆ ಸಜ್ಜಾಗಿದೆ. ಜೀವ ಆ್ಯಕ್ಷನ್ ಕಟ್ ಹೇಳಿರುವ ಈ ಚಿತ್ರದ ಟೀಸರ್ ರಿದಂ ಮ್ಯೂಸಿಕ್ ಯೂಟ್ಯೂಬ್ ಚಾನಲ್ ಮೂಲಕ ಇತ್ತೀಚೆಗೆ ಬಿಡುಗಡೆಯಾಗಿ ಮೆಚ್ಚುಗೆ ಸ್ವೀಕರಿಸುತ್ತಿದೆ.
ಅಲೆಕ್ಸಾ ಸೀಕ್ವೆಲ್ ತರುವ ಯೋಚನೆ: ನಿರ್ದೇಶಕ ಜೀವ ಮಾತನಾಡಿ, ಇದೊಂದು ಮರ್ಡರ್ ಮಿಸ್ಟರಿ ಚಿತ್ರ. ಕಥೆ ಕೇಳಿದ ತಕ್ಷಣ ನಿರ್ಮಾಪಕರು ಇಷ್ಟಪಟ್ಟರು. ಇನ್ವೆಸ್ಟಿಗೇಶನ್ ಆಫೀಸರ್ ಆಗಿ ಅದಿತಿ ಪ್ರಭುದೇವ ನಟಿಸಿದ್ದಾರೆ. ಪವನ್ ತೇಜ್ ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಫಾರ್ಮಾಸಿಟಿಕಲ್ ಮಾಫಿಯಾ ಬಗ್ಗೆ ಕೂಡ ಕ್ಲೈಮ್ಯಾಕ್ಸ್ನಲ್ಲಿ ತೋರಿಸಿದ್ದೇವೆ. ಈ ಚಿತ್ರದ ಎರಡನೇ ಭಾಗವನ್ನು ತೆರೆಗೆ ತರುವ ಆಲೋಚನೆ ಇದೆ. ಮೈಸೂರು, ಮಡಿಕೇರಿ ಮುಂತಾದ ಕಡೆಗಳಲ್ಲಿ ಚಿತ್ರೀಕರಣ ಮಾಡಿದ್ದೇವೆ. ಮೂರು ಹಾಡುಗಳು ಹಾಗೂ ನಾಲ್ಕು ಸಾಹಸ ಸನ್ನಿವೇಶಗಳು ಚಿತ್ರದಲ್ಲಿದೆ. ಸಿನಿಮಾ ಕೂಡ ಬಹಳ ಚೆನ್ನಾಗಿ ಮೂಡಿ ಬಂದಿದೆ ಎಂದು ತಿಳಿಸಿದರು.
ಪೊಲೀಸ್ ಅಧಿಕಾರಿಯಾಗಬೇಕೆಂಬ ಕನಸು.. ವಿಭಿನ್ನ ಪಾತ್ರಗಳಿಂದ ಕನ್ನಡಿಗರ ಮನಗೆದ್ದಿರುವ ನಟಿ ಅದಿತಿ ಪ್ರಭುದೇವ ಮಾತನಾಡಿ, ನನಗೆ ನಿಜಜೀವನದಲ್ಲಿ ಪೊಲೀಸ್ ಅಧಿಕಾರಿಯಾಗಬೇಕೆಂಬ ಕನಸ್ಸಿತ್ತು. ಅದು ಆಗಲಿಲ್ಲ. ನಿರ್ದೇಶಕರು ಈ ಚಿತ್ರದಲ್ಲಿ ನಿಮ್ಮದು ಇನ್ವೆಸ್ಟಿಗೇಶನ್ ಆಫೀಸರ್ ಪಾತ್ರ ಅಂದ ತಕ್ಷಣ ಒಪ್ಪಿಕೊಂಡೆ. ಸಾಹಸ ದೃಶ್ಯಗಳಲ್ಲೂ ಕಾಣಿಸಿಕೊಳ್ಳುವ ಕನಸ್ಸಿತ್ತು. ಅದು ಈ ಚಿತ್ರದಲ್ಲಿ ನನಸಾಗಿದೆ. ಸಾಹಸ ನಿರ್ದೇಶಕ ರವಿವರ್ಮ ಹಾಗೂ ಮಾಸ್ ಮಾದ ಅವರು ಸಾಹಸ ಸಂಯೋಜನೆಯಲ್ಲಿ ನಾನು ಅಭಿನಯಿಸಿರುವ ಸಾಹಸ ಸನ್ನಿವೇಶಗಳು ಚೆನ್ನಾಗಿ ಮೂಡಿ ಬಂದಿವೆ ಎಂದರು.
ಇದನ್ನೂ ಓದಿ: ಸೀರೆಯುಟ್ಟು ಬಾತ್ ಟಬ್ನಲ್ಲಿ ಕುಳಿತ ಚಾರ್ಲಿ ಚೆಲುವೆ: ಮನಮೋಹಕ ನೋಟ ಬೀರಿದ ಸಂಗೀತಾ ಶೃಂಗೇರಿ
ಕೊಲೆ ತನಿಖೆ ಕಥೆ: ನಾಯಕ ಪವನ್ ತೇಜ್ ಮಾತನಾಡಿ, ಈ ಚಿತ್ರದಲ್ಲಿ ಗಂಡ - ಹೆಂಡತಿ ಕೊಲೆ ಆಗಿರುತ್ತದೆ. ಆ ಕೊಲೆಯ ತನಿಖೆಯ ಸುತ್ತ ಕಥೆ ಸಾಗುತ್ತೆ. ಅದಿತಿ ಪ್ರಭುದೇವ ಅವರ ಜೊತೆ ನಟಿಸುವ ಹಂಬಲವಿತ್ತು. ಈ ಚಿತ್ರದ ಮೂಲಕ ಅವರೊಂದಿಗೆ ಸ್ಕ್ರೀನ್ ಹಂಚಿಕೊಳ್ಳುವ ಅವಕಾಶ ಸಿಕ್ಕಿದೆ ಎಂದು ತಿಳಿಸಿದರು.
ಇದನ್ನೂ ಓದಿ: ವಿನೋದ್ ಪ್ರಭಾಕರ್ 'ಫೈಟರ್' ಸಿನಿಮಾಗೆ ಕನ್ನಡಪರ ಹೋರಾಟಗಾರರ ಸಾಥ್: ರಿಲೀಸ್ ಡೇಟ್ ಅನೌನ್ಸ್
ಚಿತ್ರತಂಡ ಕುರಿತು.. ಈ ಸಿನಿಮಾದ ನಿರ್ಮಾಪಕ ವಿ.ಚಂದ್ರು ಮಾತನಾಡಿ, ನಿರ್ದೇಶಕರು ಹೇಳಿದ ಕಥೆ ಇಷ್ಟವಾಯಿತು. ಅದಕ್ಕಾಗಿ ನಿರ್ಮಾಣಕ್ಕೆ ಮುಂದಾದೆ ಎಂದು ತಿಳಿಸಿದರು. ಪವನ್ ತೇಜ್, ಅದಿತಿ ಪ್ರಭುದೇವ ಅಲ್ಲದೇ , ನಾಗಾರ್ಜುನ್, ಮೇಘಶ್ರೀ, ಮಿಮಿಕ್ರಿ ಗೋಪಿ, ಚಂದ್ರಕಲಾ ಮೋಹನ್ ಸೇರಿದಂತೆ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಹಾಡುಗಳು ಸುಂದರವಾಗಿವೆ. ಸತೀಶ್ ಬಿ ಅವರ ಛಾಯಾಗ್ರಹಣ ಹಾಗೂ ಉಮೇಶ್ ಆರ್ ಬಿ ಸಂಕಲನ ಈ ಚಿತ್ರಕ್ಕಿದೆ. ಚಿತ್ರ ನವೆಂಬರ್ನಲ್ಲಿ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗುತ್ತಿದೆ.