ETV Bharat / entertainment

ಹಾಸ್ಯ ನಟ ಮನ್​ದೀಪ್ ರಾಯ್​ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು - ಈಟಿವಿ ಭಾರತ ಕನ್ನಡ

ಕನ್ನಡ ಚಿತ್ರರಂಗದಲ್ಲಿ ಹಲವು ದಶಕಗಳ ಕಾಲ ಸಿನಿರಸಿಕರನ್ನು ತಮ್ಮ ಹಾಸ್ಯದಿಂದ ರಂಜಿಸಿದ ಹಾಸ್ಯನಟ ಮನದೀಪ್​ರಾಯ್​ಗೆ ಹೃದಯಾಘಾತವಾಗಿದ್ದು, ಬೆಂಗಳೂರಿನ ಶೇಷಾದ್ರಿಪುರದಲ್ಲಿರುವ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಚೇತರಿಸಿಕೊಳ್ಳುತ್ತಿರುವುದಾಗಿ ತಿಳಿದು ಬಂದಿದೆ.

kannada-comedy-actor-mandeep-roy-got-heart-attack
ಹಾಸ್ಯ ನಟ ಮನ್​ದೀಪ್ ರಾಯ್​ಗೆ ಹೃದಯಾಘಾತ : ಆಸ್ಪತ್ರೆಗೆ ದಾಖಲು
author img

By

Published : Dec 5, 2022, 6:55 PM IST

ಡಾ. ರಾಜ್ ಕುಮಾರ್, ಶಂಕರ್ ನಾಗ್, ಅನಂತ್ ನಾಗ್​ರಂತಹ ಮೇರು ನಟರ ಜೊತೆ ಅಭಿನಯಿಸಿದ ಹಾಸ್ಯ ನಟ ಮನ್‌ದೀಪ್ ರಾಯ್ ಅವರಿಗೆ ಹೃದಯಾಘಾತವಾಗಿದೆ. ಮೂರು ದಿನಗಳ ಹಿಂದೆ ಮನ್ ದೀಪ್ ರಾಯ್ ಅವರಿಗೆ ಹೃದಯಾಘಾತ​ವಾಗಿದ್ದು, ಬೆಂಗಳೂರಿನ ಶೇಷಾದ್ರಿಪುರದಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ, ಮನ್ ದೀಪ್ ರಾಯ್ ಅವರಿಗೆ ಚಿಕಿತ್ಸೆಗೆ ಹಣಕಾಸಿನ ತೊಂದರೆ ಉಂಟಾಗಿರುವುದರಿಂದ ಆರ್ಥಿಕ ನೆರವಿನ ಅವಶ್ಯಕತೆ ಇದೆ ಎಂದು ಹೇಳಲಾಗುತ್ತಿದೆ.

ಇನ್ನು ಮನದೀಪ್ ರಾಯ್ ಹೃದಯಾಘಾತದಿಂದ ಆಸ್ಪತ್ರೆಗೆ ಸೇರಿರುವ ವಿಚಾರ ಚಿತ್ರೋದ್ಯಮಕ್ಕೆ ತಿಳಿಯುತ್ತಿದ್ದಂತೆಯೇ ಆದಷ್ಟು ಬೇಗ ಗುಣಮುಖರಾಗಲಿ ಎಂದು ಹಲವರು ಹಾರೈಸಿದ್ದಾರೆ. ಇನ್ನು ಕೆಲ ಆಪ್ತರು ಆಸ್ಪತ್ರೆಗೆ ಭೇಟಿ ನೀಡಿ, ಮನ್ ದೀಪ್ ರಾಯ್ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ. ಮನದೀಪ್ ರಾಯ್ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆದುಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

ಕನ್ನಡ ಚಿತ್ರರಂಗದಲ್ಲಿ ದಶಕಗಳಿಂದ ಹಾಸ್ಯ ಕಲಾವಿದರಾಗಿ ರಂಜಿಸಿರುವ ಮನದೀಪ್ ರಾಯ್, ಅನಂತ್ ನಾಗ್ ಹಾಗೂ ಶಂಕರ್ ನಾಗ್ ಜೊತೆ ಇಂಡಸ್ಟ್ರಿಗೆ ಕಾಲಿಟ್ಟವರು. ಮಿಂಚಿನ ಓಟ , ಬೆಂಕಿಯ ಬಲೆ, ಆಕಸ್ಮಿಕ, ಏಳು ಸುತ್ತಿನ ಕೋಟೆ, ಆಸೆಗೊಬ್ಬ ಮೀಸೆಗೊಬ್ಬ, ಆಪ್ತ ರಕ್ಷಕ , ಆಂಟಿ ಪ್ರೀತ್ಸೆ , ಪ್ರೀತ್ಸೋದ್ ತಪ್ಪಾ ಹೀಗೆ 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಇನ್ನು ಮನ್​ದೀಪ್​ ರಾಯ್​ ಅವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

ಇದನ್ನೂ ಓದಿ : ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರದ ನಾಯಕಿ ನಟಿ ಪರಿಚಯ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.