ETV Bharat / entertainment

ತಮಿಳು ಸಿನಿಮಾಗೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ ಕನ್ನಡ ನಿರ್ದೇಶಕ ನಾಗಶೇಖರ್ - Nagasekhar directing Tamil movie

ಕನ್ನಡ ನಿರ್ದೇಶಕ ನಾಗಶೇಖರ್ ಅವರು ನವೆಂಬರ್ ಮಳೆಯಲ್ ನಾನುಂ ಅವಳುಂ ಎಂಬ ತಮಿಳು ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ. ಬೆಂಗಳೂರಿನ ಮಿನರ್ವ ಮಿಲ್​​ನಲ್ಲಿ ಶೂಟಿಂಗ್ ನಡೆಯಿತು.

Kannada director Nagasekhar directing Tamil movie
ತಮಿಳು ಸಿನಿಮಾಗೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ ಕನ್ನಡ ನಿರ್ದೇಶಕ ನಾಗಶೇಖರ್
author img

By

Published : Aug 18, 2022, 8:12 PM IST

ಕನ್ನಡ ಚಿತ್ರರಂಗದಲ್ಲಿ ಸಂಜು ವೆಡ್ಸ್ ಗೀತಾ, ಮೈನಾ ಹಾಗು ಅಮರ್‌ನಂತಹ ಸಿನಿಮಾಗಳನ್ನು ನಿರ್ದೇಶಿಸಿರುವವರು ನಾಗಶೇಖರ್. ಇದೀಗ ಇವರೇ ನಾಯಕನಾಗಿ ನಟಿಸಿ, ನಿರ್ದೇಶಿಸುತ್ತಿರುವ 'ನವೆಂಬರ್ ಮಳೆಯಲ್ ನಾನುಂ ಅವಳುಂ' ಎಂಬ ತಮಿಳು ಚಿತ್ರದ ಶೂಟಿಂಗ್ ಬೆಂಗಳೂರಿನ ಮಿನರ್ವ ಮಿಲ್​​ನಲ್ಲಿ ನಡೆಯಿತು.

ಮಿನರ್ವ ಮಿಲ್​ನಲ್ಲಿ ಮಳೆಯ ದೃಶ್ಯವೊಂದಕ್ಕೆ ನಾಗಶೇಖರ್ ಆ್ಯಕ್ಷನ್ ಕಟ್ ಹೇಳಿದ್ದಾರೆ. ಡೆಲ್ಲಿ ಗಣೇಶ್, ಅರ್ಜುನ್, ರಾಜಶೇಖರ್, ರಾಜಶೇಖರ ರೆಡ್ಡಿ, ಪೊಲೀಸ್ ಕಮೀಷನರ್‌ ಪಾತ್ರ ಮಾಡುತ್ತಿರುವ ಸುಮನ್ ರಂಗನಾಥ್ ನಡುವಿನ ಸನ್ನಿವೇಶಗಳನ್ನು ಛಾಯಾಗ್ರಾಹಕ ಸತ್ಯ ಹೆಗ್ಡೆ ಚಿತ್ರೀಕರಣ ಮಾಡಿದ್ದಾರೆ.

ತಮಿಳು ಸಿನಿಮಾಗೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ ಕನ್ನಡ ನಿರ್ದೇಶಕ ನಾಗಶೇಖರ್

ನಿರ್ದೇಶಕ ನಾಗಶೇಖರ್ ಮಾತನಾಡಿ, ಇದು ಮಳೆಗಾಲದಲ್ಲಿ ನಡೆಯೋ ಪ್ರೇಮಕಥೆ. ತಮಿಳುನಾಡಲ್ಲಿ ನವೆಂಬರ್​ನಲ್ಲಿ ಭಾರಿ ಮಳೆಯಾಗುತ್ತದೆ. ಹಾಗಾಗಿ ಈ ಚಿತ್ರಕ್ಕೆ ನವೆಂಬರ್ ಮಳೆಯಲ್ ನಾನುಂ ಅವಳುಂ ಶೀರ್ಷಿಕೆ ಇಟ್ಟಿದ್ದೇನೆ. ಮೊದಲು ಈ ಕಥೆಯನ್ನು ಬೇರೆ ಹೀರೋಗಾಗಿ ಮಾಡಿದ್ದೆ. ಇಲ್ಲಿ ನಾಯಕನಿಗೆ ಸೀಳು ತುಟಿಯಿರುತ್ತದೆ. ಆತನಿಗೆ ತಾನೊಬ್ಬ ದೊಡ್ಡ ಸಿಂಗರ್ ಆಗಬೇಕೆಂಬ ಕನಸು. ಆತನ ಜೀವನದಲ್ಲೊಂದು ಲವ್ ಸ್ಟೋರಿ. ಇದು ಚಿತ್ರದ ಕಂಟೆಂಟ್. ನಾವು ಆರಿಸಿದ ನಾಯಕ ಈ ಕಥೆ ಮಾಡಿದರೆ ಸೆನ್ಸಾರ್​ನಿಂದ ಪ್ರಾಬ್ಲಂ ಆಗಬಹುದು ಎಂದಾಗ ನಾನು ಸ್ನೇಹಿತ ಸೆನ್ಸಾರ್ ಶಿವು ಬಳಿ ಚರ್ಚಿಸಿದೆ. ಈ ಕಥೆ ಕೇಳಿದ ಶಿವು ಇದರಲ್ಲಿ ನೀನೇ ಹೀರೋ ಆದ್ರೆ ಚೆನ್ನಾಗಿರುತ್ತದೆ ಎಂದರು. ನನ್ನ ಮೇಲೆ ಯಾರಪ್ಪ ಬಂಡವಾಳ ಹಾಕ್ತಾರೆ ಎಂದಾಗ, ಬೇರೆ ಯಾಕೆ ನಾನೇ ಹಾಕ್ತೇನೆ ಎಂದು ಹೇಳಿ ಚಿತ್ರವನ್ನು ಪ್ರೊಡ್ಯೂಸ್ ಮಾಡುತ್ತಿದ್ದಾರೆ. ನಾಗೇಂದ್ರ ಶೆಟ್ಟರೂ ಜೊತೆಗೆ ಕೈಜೋಡಿಸಿದ್ದಾರೆ ಎಂದು ಹೇಳಿದರು.

ತಮಿಳಿನಲ್ಲಿ ಈ ರೀತಿಯ ಕಥೆಯನ್ನು ಹೆಚ್ಚು ಇಷ್ಟಪಡುತ್ತಾರೆ ಎಂಬ ಕಾರಣಕ್ಕೆ ಮೊದಲು ತಮಿಳಿನಲ್ಲಿ ಮಾಡುತ್ತಿದ್ದೇನೆ. ಮಲಯಾಳಂನ ಅನು ಸಿತಾರಾ ನಾಯಕಿ ಪಾತ್ರ ಮಾಡಿದ್ದು, ಏಳು ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿರುವ ಡೆಲ್ಲಿ ಗಣೇಶ್, ದತ್ತಣ್ಣ, ರಂಗಾಯಣ ರಘು ಕೂಡ ಅಭಿನಯಿಸಿದ್ದಾರೆ. ಐಡಿಯಲ್ ಹೋಮ್ಸ್​ನ ರಾಜಶೇಖರ್ ಅವರು ಸಿಎಂ ಪಾತ್ರ ಮಾಡಿದ್ದಾರೆ. ಶಬ್ಬೀರ್ ಚಿತ್ರಕ್ಕೆ ಮ್ಯೂಸಿಕ್ ಮಾಡಿದ್ದು, ಮದನ್ ಕಾರ್ಕಿ ಸಾಹಿತ್ಯ ಬರೆದಿದ್ದಾರೆ. ವೇಣು ವೇಲ್ ಮುರುಗನ್ ಕೋಪ್ರೊಡ್ಯೂಸರ್ ಆಗಿದ್ದಾರೆ.

ಇದರ ಜೊತೆಗೆ ಲವ್ ಮಾಕ್ಟೇಲ್​ನ ತೆಲುಗು ವರ್ಷನ್ ಕೂಡ ರೆಡಿಯಾಗಿದೆ. ಅದರಲ್ಲಿ ಸತ್ಯದೇವ್ ಹೀರೋ ಪಾತ್ರ ಮಾಡಿದ್ದು, ತಮನ್ನಾ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಭಾವನಾರವಿ ಪ್ರೊಡ್ಯೂಸ್‌ ಮಾಡಿದ್ದಾರೆ ಎಂದು ವಿವರಿಸಿದರು. ಎ2 ಮ್ಯೂಸಿಕ್‌ ನವರು ಹಾಡುಕೇಳಿ ಅರ್ಧಕೋಟಿಗೆ ಆಡಿಯೋ ರೈಟ್ಸ್ ತಗೊಂಡಿದ್ದಾರೆ. 3 ಕೋಟಿಗೆ ಹಿಂದಿ ರೈಟ್ಸ್ ಮಾರಾಟವಾಗಿದೆ ಎಂಬ ಮಾಹಿತಿಯನ್ನೂ ಅವರು ನೀಡಿದರು.

ಇದನ್ನೂ ಓದಿ: ಹೃತಿಕ್ ರೋಷನ್ ಅಭಿನಯದ ಬಹುನಿರೀಕ್ಷಿತ ಕ್ರಿಶ್ 4 ಚಿತ್ರದಲ್ಲಿ ಸೌತ್​ ನಟ

ಬಳಿಕ ನಟಿ ಸುಮನ್ ರಂಗನಾಥ್ ಮಾತನಾಡಿ, ನಾಗಶೇಖರ್ ಕಾಲ್ ಮಾಡಿ ಈ ಪೋಲಿಸ್ ಕಮೀಷನರ್ ಪಾತ್ರದ ಬಗ್ಗೆ ಹೇಳಿದರು. ಚಿಕ್ಕದಾದರೂ ಪ್ರಮುಖ ಪಾತ್ರವಿದು, ಯೂನಿಫಾರ್ಮ್ ಹಾಕಿದ ಕೂಡಲೇ ಅದೇನೋ ಪವರ್ ಬಂದು ಬಿಡುತ್ತೆ ಎಂದು ಹೇಳಿದರು. ಹಿರಿಯ ಕಲಾವಿದ ಡೆಲ್ಲಿ ಗಣೇಶ್ ಮಾತನಾಡಿ ಸೌತ್ ಇಂಡಿಯಾ ಸಿನಿಮಾಗಳು ಈಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡುತ್ತಿವೆ. 47ವರ್ಷಗಳಿಂದ ಬಣ್ಣ ಹಚ್ಚುತ್ತಿದ್ದೇನೆ. ಇದರಲ್ಲೊಂದು ಸಾಫ್ಟ್ ನೇಚರ್ ವ್ಯಕ್ತಿಯ ಪಾತ್ರ ಮಾಡಿದ್ದೇನೆ ಎಂದು ಹೇಳಿದರು. ನಟ ಅರ್ಜುನ್ ಮಾತನಾಡಿ ಚಿತ್ರದಲ್ಲಿ ಒಬ್ಬ ಇನ್ವೆಸ್ಟಿಗೇಶನ್ ಆಫೀಸರ್ ಪಾತ್ರ ಮಾಡಿದ್ದೇನೆ ಎಂದರು. ಒಟ್ಟಾರೆ ತಮಿಳು ಭಾಷೆಯಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರ ಕನ್ನಡ ಹಾಗೂ ತೆಲುಗಿಗೆ ಡಬ್ ಆಗಲಿದೆ. ನವೆಂಬರ್ 11ಕ್ಕೆ ಚಿತ್ರವನ್ನು ರಿಲೀಸ್ ಮಾಡಲು ನಿರ್ದೇಶಕ ನಾಗಶೇಖರ್ ಪ್ಲಾನ್ ಮಾಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.