ಶೀರ್ಷಿಕೆಯಿಂದಲೇ ಕನ್ನಡ ಚಿತ್ರರಂಗದಲ್ಲಿ ಟಾಕ್ ಆಗುತ್ತಿರುವ ಚಿತ್ರ 'ಮಾಫಿಯಾ'. ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಟನೆಯ 35ನೇ ಸಿನಿಮಾವಿದು. ಈಗಾಗಲೇ ಚಿತ್ರೀಕರಣ ಮುಗಿಸಿರುವ 'ಮಾಫಿಯಾ' ಇದೀಗ ಡಬ್ಬಿಂಗ್ ಕೆಲಸವನ್ನೂ ಪೂರ್ಣಗೊಳಿಸಿದೆ. ನಟ ಪ್ರಜ್ವಲ್ ದೇವರಾಜ್ ಅವರಿಗೆ ಜೋಡಿಯಾಗಿ ಅದಿತಿ ಪ್ರಭುದೇವ ಅಭಿನಯಿಸಿದ್ದಾರೆ. ದೇವಕಿ ಸಿನಿಮಾ ಖ್ಯಾತಿಯ ಲೋಹಿತ್ ಹೆಚ್ ನಿರ್ದೇಶನದ "ಮಾಫಿಯಾ" ಚಿತ್ರದ ಡಬ್ಬಿಂಗ್ ಕೆಲಸ ಸಾಧುಕೋಕಿಲ ಅವರ ಲೂಪ್ ಸ್ಟುಡಿಯೋದಲ್ಲಿ ಮುಕ್ತಾಯವಾಗಿದೆ.
ಈ ಚಿತ್ರದಲ್ಲಿ ಪ್ರಜ್ವಲ್ ದೇವರಾಜ್, ಅದಿತಿ ಪ್ರಭುದೇವ ಅಲ್ಲದೇ ದೇವರಾಜ್, ಸಾಧುಕೋಕಿಲ, ಶೈನ್ ಶೆಟ್ಟಿ, ವಿಜಯ್ ಚೆಂಡೂರ್, ವಾಸುಕಿ ವೈಭವ್ ಸೇರಿದಂತೆ ಸಾಕಷ್ಟು ಕಲಾವಿದರು ಅಭಿನಯಿಸಿದ್ದಾರೆ. ಆ್ಯಕ್ಷನ್ ಜಾನರ್ ಕಥಾಹಂದರ ಹೊಂದಿರುವ ಈ ಚಿತ್ರದ ಶೂಟಿಂಗ್ ಬೆಂಗಳೂರು, ಮೈಸೂರು ಹಾಗೂ ಹೈದರಾಬಾದ್ನಲ್ಲಿ ನಡೆದಿದೆ. ಅಪಾರ ವೆಚ್ಚದಲ್ಲಿ ಅದ್ಧೂರಿಯಾಗಿ ನಿರ್ಮಾಣ ಆಗುತ್ತಿರುವ ಈ ಚಿತ್ರದಲ್ಲಿ ಮೈನವಿರೇಳಿಸುವ ಐದು ಸಾಹಸ ಸನ್ನಿವೇಶಗಳಿವೆ.
ಈ ಚಿತ್ರಕ್ಕಾಗಿ ಪ್ರಜ್ವಲ್ ಅವರು ಸಾಕಷ್ಟು ಶ್ರಮ ವಹಿಸಿದ್ದಾರೆ. ಸಿನಿಮಾದಲ್ಲಿ ನಾಲ್ಕು ಹಾಡುಗಳಿವೆ. ಅನೂಪ್ ಸೀಳಿನ್ ಸಂಗೀತ ನೀಡಿದ್ದಾರೆ. ಎಸ್ ಪಾಂಡಿಕುಮಾರ್ ಅವರ ಛಾಯಾಗ್ರಹಣವಿದೆ. ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಅಕ್ಟೋಬರ್ನಲ್ಲಿ ಟೀಸರ್ ಬರಲಿದ್ದು, ನವೆಂಬರ್ ಅಂತ್ಯದ ವೇಳೆಗೆ ಮಾಫಿಯಾ ಚಿತ್ರ ತೆರೆಗಪ್ಪಳಿಸಲಿದೆ.
ಇದನ್ನೂ ಓದಿ: ಧರ್ಮ ಕೀರ್ತಿರಾಜ್ ಮುಂದಿನ ಸಿನಿಮಾ 'ಅಮರಾವತಿ ಪೊಲೀಸ್ ಸ್ಟೇಷನ್'
ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅವರು ಕನ್ನಡ ಚಿತ್ರರಂಗದಲ್ಲಿ ಬಹು ಸಮಯದಿಂದ ಗುರುತಿಸಿಕೊಂಡಿದ್ದಾರೆ. 30ಕ್ಕೂ ಅಧಿಕ ಚಿತ್ರಗಲ್ಲಿ ನಾಯಕ ನಟನಾಗಿ ಅಭಿನಯಿಸಿದ್ದಾರೆ. ಈಗಾಗಲೇ ಹಲವು ಅವತಾರಗಳಲ್ಲಿ ಪ್ರೇಕ್ಷಕರಿಗೆ ದರ್ಶನ ಕೊಟ್ಟಿದ್ದಾರೆ. ಆದರೆ ಹಿಂದಿನ ಚಿತ್ರಗಳಿಗೆ ಹೋಲಿಸಿದರೆ ಮಾಫಿಯಾ ಸಿನಿಮಾದಲ್ಲಿ ವಿಭಿನ್ನ ಗೆಟಪ್ನಲ್ಲಿ ಪ್ರಜ್ವಲ್ ಕಾಣಿಸಿಕೊಳ್ಳಲಿದ್ದಾರೆ ಎಂದು ಚಿತ್ರತಂಡ ತಿಳಿಸಿದೆ. ಪ್ರಜ್ವಲ್ ಈ ಚಿತ್ರಕ್ಕಾಗಿ ಸಾಕಷ್ಟು ತಯಾರಿ ಕೂಡ ಮಾಡಿಕೊಂಡಿದ್ದರು.
ಈಗಾಗಲೇ ಚಿತ್ರ ಚಿತ್ರೀಕರಣ ಪೂರ್ಣಗೊಳಿಸಿದ್ದು, ಇದೀಗ ಡಬ್ಬಿಂಗ್ ಕೆಲಸವನ್ನೂ ಮುಕ್ತಾಯಗೊಳಿಸಿದೆ. ಬೆಂಗಳೂರು, ಮೈಸೂರು ಅಲ್ಲದೇ ಮಾಫಿಯಾಗಾಗಿ ಹೈದರಾಬಾದ್ ರಾಮೋಜಿ ಫಿಲ್ಮ್ ಸಿಟಿಯಲ್ಲೂ ಅದ್ಧೂರಿ ಸೆಟ್ ಸಹ ನಿರ್ಮಾಣ ಮಾಡಲಾಗಿತ್ತು. ಇನ್ನೂ ನಟಿ ಅತಿದಿ ಪ್ರಭುದೇವ ಈಗಾಗಲೇ ಹಲವು ಸಿನಿಮಾಗಳಲ್ಲಿ ನಟಿಸಿ ಕರುನಾಡಿನ ಮನೆ ಮಾತಾಗಿದ್ದಾರೆ. ಇವರಿಬ್ಬರ ಕಾಂಬೋದಲ್ಲಿ ಬರುತ್ತಿರುವ ಈ ಚಿತ್ರ ಹೇಗಿರಲಿದೆ ಎಂದು ಅಭಿಮಾನಿಗಳು ಕುತೂಹಲ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: 'ಯುವ' ಬಿಡುಗಡೆಯಾಗಬೇಕಿದ್ದ ದಿನ 'ಸಲಾರ್' ರಿಲೀಸ್... ಹೊಂಬಾಳೆ ಫಿಲ್ಮ್ಸ್ ವಿರುದ್ಧ ಬೇಸರಿಸಿಕೊಂಡರಾ ಸಿನಿಪ್ರಿಯರು?