ಕನ್ನಡ ಚಿತ್ರರಂಗ ಅಲ್ಲದೇ ಭಾರತೀಯ ಸಿನಿಮಾ ರಂಗದಲ್ಲಿ ಕಬಂದಬಾಹು ಚಾಚುತ್ತಿರುವ ಸಿನಿಮಾ ನಿರ್ಮಾಣ ಸಂಸ್ಥೆ ಅಂದ್ರೆ ಹೊಂಬಾಳೆ ಫಿಲಂಸ್. ಈ ಬ್ಯಾನರ್ ಅಡಿ ನಿರ್ಮಾಪಕ ವಿಜಯ್ ಕುಮಾರ್ ಕಿರಗಂದೂರು ನಿರ್ಮಾಣ ಮಾಡಿರುವ ಕಾಂತಾರ ಸಿನಿಮಾ ಮತ್ತೊಂದು ಮೈಲಿಗಲ್ಲು ಸಾಧಿಸಿದೆ. ಹೌದು, ರಿಷಭ್ ಶೆಟ್ಟಿ ಅಭಿನಯಿಸಿ, ನಿರ್ದೇಶಿಸಿರುವ ‘ಕಾಂತಾರ’ ಚಿತ್ರವು ಯಶಸ್ವಿಯಾಗಿ 50 ದಿನಗಳನ್ನು ಪೂರೈಸಿದೆ.
ಸೆಪ್ಟೆಂಬರ್ 30ರಂದು ಬಿಡುಗಡೆಯಾದ ಚಿತ್ರವು ರಾಜ್ಯದ 300ಕ್ಕೂ ಹೆಚ್ಚು ಚಿತ್ರ ಮಂದಿರಗಳಲ್ಲದೇ ವಿದೇಶಗಳಲ್ಲೂ ಹಲವು ಸಿನಿಮಾ ಥಿಯೇಟರ್ಗಳಲ್ಲಿ ಬಿಡುಗಡೆ ಕಂಡು 50 ದಿನಗಳನ್ನು ಪೂರೈಸಿದೆ. 50 ದಿನಗಳು ಕಳೆದರೂ ಕಾಂತಾರ ಕ್ರೇಜ್ ಕಡಿಮೆ ಆಗಿಲ್ಲ. ಕನ್ನಡವಷ್ಟೇ ಅಲ್ಲ, ತೆಲುಗು, ತಮಿಳು, ಹಿಂದಿ ಮತ್ತು ಮಲಯಾಳಂಗೆ ಡಬ್ ಆಗಿರುವ ‘ಕಾಂತರ’ ಅಲ್ಲೂ ಯಶಸ್ವಿಯಾಗಿ ಪ್ರದರ್ಶನಗೊಳ್ಳುತ್ತಿದ್ದು, ಸದ್ಯದಲ್ಲೇ ಆ ಭಾಷೆಯಲ್ಲೂ 50 ದಿನಗಳನ್ನು ಪೂರೈಸಲಿದೆ.
-
A moment of divine celebration for us. Thanks to everyone across the globe. It was accepted, owned & lived by each one of us🫶
— Rishab Shetty (@shetty_rishab) November 18, 2022 " class="align-text-top noRightClick twitterSection" data="
We were truly blessed by the Panjurli & Guliga Daiva. The fury remains undefeated.
Wooaaah🔥 #Kantara #50DaysOfKantara@shetty_rishab @hombalefilms pic.twitter.com/tb4z8BM9Hb
">A moment of divine celebration for us. Thanks to everyone across the globe. It was accepted, owned & lived by each one of us🫶
— Rishab Shetty (@shetty_rishab) November 18, 2022
We were truly blessed by the Panjurli & Guliga Daiva. The fury remains undefeated.
Wooaaah🔥 #Kantara #50DaysOfKantara@shetty_rishab @hombalefilms pic.twitter.com/tb4z8BM9HbA moment of divine celebration for us. Thanks to everyone across the globe. It was accepted, owned & lived by each one of us🫶
— Rishab Shetty (@shetty_rishab) November 18, 2022
We were truly blessed by the Panjurli & Guliga Daiva. The fury remains undefeated.
Wooaaah🔥 #Kantara #50DaysOfKantara@shetty_rishab @hombalefilms pic.twitter.com/tb4z8BM9Hb
ಕೆಜಿಎಫ್ 1 ಮತ್ತು ಕೆಜಿಎಫ್ 2 ಚಿತ್ರಗಳ ಮೂಲಕ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೊಂಬಾಳೆ ಫಿಲಂಸ್ ಸುದ್ದಿ ಮಾಡಿತು. ಈಗ ಅದೇ ಸಂಸ್ಥೆಯಿಂದ ನಿರ್ಮಾಣವಾಗಿರುವ ಕಾಂತಾರ ಚಿತ್ರವನ್ನು ಮನೆ ಮಂದಿಯೆಲ್ಲಾ ನೋಡಿ ಇಷ್ಟಪಟ್ಟಿದ್ದಾರೆ. ಹಿರಿಯರಿಂದ ಕಿರಿಯರವರೆಗೂ ಮೆಚ್ಚಿಕೊಂಡಿದ್ದಾರೆ.
ಈ ಚಿತ್ರ ಎಲ್ಲರಿಗೂ ಇಷ್ಟವಾಗುವುದಕ್ಕೆ ಕಾರಣ ಚಿತ್ರದ ಕಥೆ ಮತ್ತು ಮೇಕಿಂಗ್. ಹೊಂಬಾಳೆ ಫಿಲಂಸ್ ಮೊದಲಿನಿಂದಲೂ ಕಥೆಗೆ ವಿಶೇಷವಾದ ಪ್ರಾಮುಖ್ಯತೆ ನೀಡುತ್ತಾ ಬಂದಿದ್ದು, ಈಗಾಗಲೇ ‘ರಾಜಕುಮಾರ’, ‘ಯುವರತ್ನ’, ‘ಕೆಜಿಎಫ್’ ಸೇರಿ ಮುಂತಾದ ಚಿತ್ರಗಳು ಈ ವಿಷಯವನ್ನು ನಿರೂಪಿಸಿದೆ. ‘ಕಾಂತಾರ’ ಸಹ ಇದೇ ನಿಟ್ಟಿನಲ್ಲಿ ಸಾಗಿರುವುದಷ್ಟೇ ಅಲ್ಲ, ‘ಕೆಜಿಎಫ್’ ಸರಣಿಯ ನಂತರ ಒಂದೇ ಸಂಸ್ಥೆಯ ಇನ್ನೊಂದು ಚಿತ್ರ ಸಹ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆಯುತ್ತಿರುವುದು ವಿಶೇಷ.
ಕನ್ನಡವಷ್ಟೇ ಅಲ್ಲ, ಮುಂದಿನ ದಿನಗಳಲ್ಲಿ ಒಟ್ಟು ಐದು ಭಾಷೆಗಳಲ್ಲಿ ಏಕಕಾಲಕ್ಕೆ ಹೊಂಬಾಳೆ ಫಿಲಂಸ್ ಸಂಸ್ಥೆಯು ಹಲವು ಚಿತ್ರಗಳನ್ನು ನಿರ್ಮಿಸಲಿದೆ. ಒಂದೇ ಸಂಸ್ಥೆಯಿಂದ ಐದು ಭಾಷೆಗಳಲ್ಲಿ ಏಕಕಾಲಕ್ಕೆ ಚಿತ್ರ ನಿರ್ಮಾಣ ಮಾಡುತ್ತಿರುವುದು ಕನ್ನಡಿಗರಿಗೆ ಹೆಮ್ಮೆಯ ವಿಷಯವಷ್ಟೇ ಅಲ್ಲ, ಭಾರತೀಯ ಚಿತ್ರರಂಗದಲ್ಲೇ ಹೊಸ ದಾಖಲೆ.
ಈಗಾಗಲೇ ಕನ್ನಡದಲ್ಲಿ ಜಗ್ಗೇಶ್ ಅಭಿನಯದಲ್ಲಿ ಸಂತೋಷ್ ಆನಂದರಾಮ್ ನಿರ್ದೇಶಿಸುತ್ತಿರುವ ‘ರಾಘವೇಂದ್ರ ಸ್ಟೋರ್ಸ್’ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. ಶ್ರೀಮುರಳಿ ಅಭಿನಯದಲ್ಲಿ ಡಾ. ಸೂರಿ ನಿರ್ದೇಶಿಸುತ್ತಿರುವ ‘ಬಘೀರ’ ಚಿತ್ರವು ಚಿತ್ರೀಕರಣ ಹಂತದಲ್ಲಿದೆ. ರಕ್ಷಿತ್ ಅಭಿನಯದ ಮತ್ತು ನಿರ್ದೇಶನದ ‘ರಿಚರ್ಡ್ ಆಂಟೋನಿ’ ಮತ್ತು ಯುವ ರಾಜ್ಕುಮಾರ್ ಅವರಿಗಾಗಿ ಸಂತೋಷ್ ಆನಂದರಾಮ್ ನಿರ್ದೇಶಿಸಲಿರುವ ಹೊಸ ಚಿತ್ರಗಳು ಸದ್ಯದಲ್ಲೇ ಶುರುವಾಗಲಿವೆ.
ಬೇರೆ ಭಾಷೆಯ ಚಿತ್ರಗಳ ವಿಷಯಕ್ಕೆ ಬಂದರೆ, ತೆಲುಗಿನಲ್ಲಿ ಪ್ರಭಾಸ್ ಅಭಿನಯದ ‘ಸಲಾರ್’ ಚಿತ್ರದ ಚಿತ್ರೀಕರಣ ನಡೆಯುತ್ತಿದ್ದು, 2023ರ ಸೆಪ್ಟೆಂಬರ್ನಲ್ಲಿ ಚಿತ್ರ ಬಿಡುಗಡೆಯಾಗಲಿದೆ. ತಮಿಳಿನಲ್ಲಿ ಎರಡು ಚಿತ್ರಗಳನ್ನು ಹೊಂಬಾಳೆ ನಿರ್ಮಿಸುತ್ತಿದ್ದು, ಈ ಪೈಕಿ ಒಂದು ಚಿತ್ರವನ್ನು ‘ಸೂರರೈ ಪೊಟ್ರು’ ಖ್ಯಾತಿಯ ಸುಧಾ ಕೊಂಗರಾ ನಿರ್ದೇಶನ ಮಾಡಿದರೆ, ಇನ್ನೊಂದರ ಘೋಷಣೆ ಶೀಘ್ರದಲ್ಲೇ ಆಗಲಿದೆ.
ಇದನ್ನೂ ಓದಿ: ಕೆಜಿಎಫ್-ಕಾಂತಾರ ಅಷ್ಟೇ ಅಲ್ಲ.. ಹೊಂಬಾಳೆ ಫಿಲ್ಮ್ಸ್ ಬ್ಯಾನರ್ನಲ್ಲಿ ಮೂಡಿ ಬಂದ ಟಾಪ್ ಸಿನಿಮಾಗಳು ಇಲ್ಲಿವೆ ನೋಡಿ
ಮಲಯಾಳಂನಲ್ಲಿ ಹೊಂಬಾಳೆ ಫಿಲಂಸ್ ವತಿಯಿಂದ ಎರಡು ಚಿತ್ರ ನಿರ್ಮಾಣವಾಗುತ್ತಿವೆ. ಫಹಾದ್ ಫಾಸಿಲ್ ಅಭಿನಯದ ‘ಧೂಮಂ’ ಚಿತ್ರದ ಚಿತ್ರೀಕರಣ ಈಗಾಗಲೇ ಪ್ರಾರಂಭವಾಗಿದ್ದರೆ, ಪೃಥ್ವಿರಾಜ್ ಸುಕುಮಾರನ್ ನಟಿಸಿ - ನಿರ್ದೇಶಿಸಲಿರುವ ‘ಟೈಸನ್’ ಚಿತ್ರವು ಮುಂದಿನ ವರ್ಷ ಪ್ರಾರಂಭವಾಗಲಿದೆ. ಹಿಂದಿ ಚಿತ್ರದ ಪ್ರೀ-ಪ್ರೊಡಕ್ಷನ್ ಕೆಲಸಗಳು ನಡೆಯಲಿದ್ದು ಸದ್ಯದಲ್ಲೇ ಅಧಿಕೃತ ಘೋಷಣೆಯಾಗಲಿದೆ.