ETV Bharat / entertainment

ದಾಖಲೆ ಬರೆದ ಕಾಂತಾರ: ಬಾಕ್ಸ್ ಆಫೀಸ್‌ನಲ್ಲಿ ಒಂದೇ ದಿನ 15 ಕೋಟಿ ರೂಪಾಯಿ ಗಳಿಕೆ

author img

By

Published : Oct 17, 2022, 1:12 PM IST

ಕನ್ನಡದಲ್ಲಿ ಕಾಂತಾರ ಸೆಪ್ಟೆಂಬರ್ 30ರಂದು ಬಿಡುಗಡೆ ಆಗಿತ್ತು. ಅಕ್ಟೋಬರ್ 14ರಂದು ಬೇರೆ ಬೇರೆ ಭಾಷೆಗಳಿಗೂ ಚಿತ್ರ ಡಬ್ ಆಗಿತ್ತು. ಇದೀಗ ಬಿಡುಗಡೆಯಾದ 16ನೇ ದಿನಕ್ಕೆ 15 ಕೋಟಿ ರೂಪಾಯಿ ಕಲೆಕ್ಷನ್ ಮಾಡುವ ಮೂಲಕ ಅತೀ ಹೆಚ್ಚು ಗಳಿಕೆ ಮಾಡಿದೆ.

Kantara Movie
ದಾಖಲೆ ಬರೆದ 'ಕಾಂತಾರ'

ಕನ್ನಡ ಚಿತ್ರರಂಗ ಅಲ್ಲದೇ ಭಾರತೀಯ ಸಿನಿಮಾ ಇಂಡಸ್ಟ್ರಿಯಲ್ಲಿ ಹೈ ಬಜೆಟ್ ಸಿನಿಮಾಗಳ ನಿರ್ಮಾಣ ಸಂಸ್ಥೆಯಾಗಿ ಹೊಂಬಾಳೆ ಫಿಲ್ಮ್ ಸಂಸ್ಥೆ ಹೊರಹೊಮ್ಮಿದೆ. ಸದ್ಯ ಹೊಂಬಾಳೆ ಫಿಲ್ಮ್​​ ಅಡಿ ನಿರ್ಮಾಣವಾಗಿ, ಬಿಡುಗಡೆ ಬಳಿಕ ದೊಡ್ಡ ಮಟ್ಟದಲ್ಲಿ ಕ್ರೇಜ್ ಹುಟ್ಟಿಸಿರುವ ಸಿನಿಮಾ 'ಕಾಂತಾರ'. ಈ ಚಿತ್ರದ ಹವಾ ಕನ್ನಡ ಚಿತ್ರರಂಗ ಮಾತ್ರವಲ್ಲದೇ, ಬೇರೆ ಭಾಷೆಯಲ್ಲೂ‌ ಜೋರಾಗಿದೆ. ಅ.15 ರಂದು ಈ ಸಿನಿಮಾ ಹೊಸ ದಾಖಲೆ ಸೃಷ್ಟಿ ಮಾಡಿದ್ದು, ಬಿಡುಗಡೆಯಾದ 16ನೇ ದಿನಕ್ಕೆ 15 ಕೋಟಿ ರೂಪಾಯಿ ಕಲೆಕ್ಷನ್ ಮಾಡುವ ಮೂಲಕ ಅತೀ ಹೆಚ್ಚು ಗಳಿಕೆ ಮಾಡಿದೆ.

ಬೇರೆ ಭಾಷೆಗಳಲ್ಲಿಯೂ ಬಿಡುಗಡೆ: ಇಡೀ ಜಗತ್ತೇ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತೆ ಮಾಡಿದ ‘ಕೆಜಿಎಫ್’ ನಿರ್ಮಾಪಕರಾದ ವಿಜಯ್ ಕುಮಾರ್ ಕಿರಗಂದೂರು ನಿರ್ಮಾಣದ ‘ಕಾಂತಾರ’ ಚಿತ್ರದ ಕನ್ನಡ ಅವತರಣಿಕೆಯು ಸೆಪ್ಟೆಂಬರ್ 30ರಂದು ಕರ್ನಾಟಕ ಸೇರಿದಂತೆ ಬೇರೆ ರಾಜ್ಯಗಳಲ್ಲೂ ಬಿಡುಗಡೆಯಾಯಿತು. ಚಿತ್ರಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾದ ಹಿನ್ನೆಲೆ ಅಕ್ಟೋಬರ್ 14,15 ಮತ್ತು 16ರಂದು ಕ್ರಮವಾಗಿ ತೆಲುಗು, ಹಿಂದಿ ಮತ್ತು ತಮಿಳಿನಲ್ಲಿ ಬಿಡುಗಡೆ ಮಾಡಲಾಯಿತು.

Kantara Movie
ಹಿಂದಿಯಲ್ಲಿ ಕಾಂತಾರ ಬಿಡುಗಡೆ

ಈ ಪೈಕಿ ಶನಿವಾರದಂದು ಚಿತ್ರದ ಹಿಂದಿ ಅವತರಣಿಕೆಯು ಉತ್ತರ ಭಾರತದಲ್ಲಿ 2.75 ಕೋಟಿ ರೂ. ಸಂಗ್ರಹಿಸಿದೆ. ಹಿಂದಿ ಅವತರಣಿಕೆಯು ಅಕ್ಟೋಬರ್ 14 ರಂದು ಬಿಡುಗಡೆಯಾಗಿತ್ತು. ಮೊದಲ ದಿನದ ಕಲೆಕ್ಷನ್​ಗೆ ಹೋಲಿಸಿದರೆ, ಎರಡನೇ ದಿನ ದ್ವಿಗುಣ ಕಲೆಕ್ಷನ್ ಆಗಿರುವುದು ವಿಶೇಷ. ಇನ್ನು, ಕನ್ನಡ, ತೆಲುಗು ಮತ್ತು ತಮಿಳು ಅವತರಣಿಕೆಯಿಂದ 12 ಕೋಟಿ ರೂ. ಗಳಿಕೆ ಆಗಿದೆ.

Kantara Movie
ತಮಿಳಿನಲ್ಲಿ ಕಾಂತಾರಾ ಸಿನಿಮಾ

ಹೊಸ ದಾಖಲೆ ನಿರ್ಮಾಣ: ಒಟ್ಟಾರೆ ಶನಿವಾರವೊಂದೆ ದಿನ ‘ಕಾಂತಾರ‘ ಚಿತ್ರವು ನಾಲ್ಕು ಭಾಷೆಗಳಿಂದ ಸೇರಿ 15 ಕೋಟಿ ರೂ. ಗಳಿಕೆ ಕಂಡಿದೆ. ‘ಕಾಂತಾರ’ ಚಿತ್ರದ ಕನ್ನಡ ಅವತರಿಣಿಕೆಯು ಸೆಪ್ಟೆಂಬರ್ 30ರಂದು ಬಿಡುಗಡೆಯಾಗಿದ್ದು, ಶನಿವಾರಕ್ಕೆ 16 ದಿನಗಳಾಗಿವೆ. 16ನೇ ದಿನ ನಾಲ್ಕು ಭಾಷೆಗಳಿಂದ 15 ಕೋಟಿ ರೂ. ಗಳಿಕೆ ಮಾಡಿ ಹೊಸ ದಾಖಲೆ ಮಾಡಿದೆ.

ಇದನ್ನೂ ಓದಿ: 'ಕಾಂತಾರ' ಅನುಭವವನ್ನು ಮಿಸ್ ಮಾಡ್ಕೊಬೇಡಿ: ದೇವಸೇನ ಅನುಷ್ಕಾ ಶೆಟ್ಟಿ

ರಿಷಬ್ ಶೆಟ್ಟಿ ಅಭಿನಯಿಸಿ ನಿರ್ದೇಶನ ಮಾಡಿರುವ, ಕಾಂತಾರ’, ಮನುಷ್ಯ ಮತ್ತು ಪ್ರಕೃತಿಯ ನಡುವಿನ ಸಂಘರ್ಷದ ಕಥೆಯಾಗಿದೆ‌. ಈ ಚಿತ್ರದಲ್ಲಿ ರಿಷಬ್ ಶೆಟ್ಟಿ ಜೊತೆಗೆ ಸಪ್ತಮಿ ಗೌಡ, ಕಿಶೋರ್, ಅಚ್ಯುತ್ ಕುಮಾರ್, ಪ್ರಮೋದ್ ಶೆಟ್ಟಿ ಸೇರಿದಂತೆ ಹಲವು ಪ್ರತಿಭಾವಂತ ಕಲಾವಿದರ ದಂಡೇ ಇದೆ. ಚಿತ್ರಕ್ಕೆ ಅಜನೀಶ್ ಲೋಕನಾಥ್ ಅವರ ಸಂಗೀತ ಮತ್ತು ಅರವಿಂದ್ ಕಶ್ಯಪ್ ಛಾಯಾಗ್ರಹಣವಿದೆ. ಇಷ್ಟೆಲ್ಲಾ ದಾಖಲೆ ಬರೆಯುತ್ತಿರುವ ಕಾಂತಾರ ಸಿನಿಮಾ ಒಂದೇ ದಿನಕ್ಕೆ‌ 15 ಕೋಟಿ ಕಲೆಕ್ಷನ್ ಮಾಡಿ ಹೊಸ ದಾಖಲೆ ಬರೆದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.