ಸ್ಯಾಂಡಲ್ವುಡ್ನಲ್ಲೀಗ ಕಾಂತಾರ ಸಿನಿಮಾ ಸದ್ದು ಜೋರಾಗಿದೆ. ನಿರೀಕ್ಷೆಗೂ ಮೀರಿ ಯಶಸ್ಸು ಕಾಣುತ್ತಿರುವ ಕಾಂತಾರ ಸಿನಿಮಾ ಹಿಂದಿ, ತೆಲುಗು, ತಮಿಳು ಹಾಗು ಮಲಯಾಳಂ ಭಾಷೆಗೆ ಡಬ್ಬಿಂಗ್ ಆಗಿ ಬಿಡುಗಡೆಗೆ ಸಜ್ಜಾಗಿದೆ. ನಟ ರಿಷಬ್ ಶೆಟ್ಟಿ ಅಭಿನಯಿಸಿ ನಿರ್ದೇಶನ ಮಾಡಿರುವ ಕಾಂತಾರ ಸಿನಿಮಾ ದಕ್ಷಿಣ ಭಾರತದಲ್ಲಿ ಸಖತ್ ಸೌಂಡ್ ಮಾಡುತ್ತಿದ್ದು, ಇನ್ನೆರಡು ದಿನಗಳಲ್ಲಿ ಬಾಲಿವುಡ್ನಲ್ಲಿ ಧೂಳೆಬ್ಬಿಸಲಿದೆ.
ಉತ್ತಮ ಕಥಾವಸ್ತುವುಳ್ಳ ಚಿತ್ರವನ್ನು ಸಿನಿರಸಿಕರು ಮೆಚ್ಚಿಕೊಳ್ಳುತ್ತಾರೆ ಎನ್ನುವುದಕ್ಕೆ "ಕಾಂತಾರ" ಚಿತ್ರದ ಯಶಸ್ಸೇ ಸಾಕ್ಷಿ. ನಮ್ಮ ನಾಡಿನ ಸಾಂಸ್ಕೃತಿಕ ಪರಂಪರೆಯನ್ನು ಮನ ಮುಟ್ಟುವಂತೆ ಈ ಚಿತ್ರದಲ್ಲಿ ತೋರಿಸಲಾಗಿದೆ. ಇಂತಹ ಉತ್ತಮ ಚಿತ್ರವನ್ನು ನಿರ್ಮಾಣ ಮಾಡಿರುವ ಹೊಂಬಾಳೆ ಫಿಲ್ಮ್ಸ್ನ ವಿಜಯ್ ಕಿರಗಂದೂರು ಅವರಿಗೆ ಅಭಿನಂದನೆ ಸಲ್ಲಬೇಕು. ಅಕ್ಟೋಬರ್ 14ರಿಂದ ಹಿಂದಿ ಭಾಷೆಯಲ್ಲೂ ಕಾಂತಾರ ಚಿತ್ರ ತೆರೆ ಕಾಣಲಿದೆ. ಮುಂಬೈ ಸೇರಿದಂತೆ ವಿವಿಧೆಡೆ ಸುಮಾರು 2,500ಕ್ಕೂ ಅಧಿಕ ಸ್ಕ್ರೀನ್ಗಳಲ್ಲಿ ಕಾಂತಾರ ಸಿನಿಮಾ ಪ್ರದರ್ಶನ ಆಗುತ್ತಿರೋದು ಖುಷಿಯ ವಿಚಾರ.
ಇದನ್ನೂ ಓದಿ: ಪವರ್ ಸ್ಟಾರ್ ತೆಗೆದುಬಿಡಿ ಎಂದಿದ್ರು ಪುನೀತ್: ಗಂಧದಗುಡಿ ನಿರ್ಮಾಣದ ಕಥೆ ತೆರೆದಿಟ್ಟ ನಿರ್ದೇಶಕ ಅಮೋಘವರ್ಷ
ಇನ್ನು, ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ "ಕೆ.ಜಿ.ಎಫ್ 2" ಬಾಲಿವುಡ್ನಲ್ಲಿ ದಾಖಲೆ ಮಟ್ಟದ ಯಶಸ್ಸು ಗಳಿಸಿದ್ದು ಗಮನಾರ್ಹ. ಈಗ "ಕಾಂತಾರ" ಚಿತ್ರವನ್ನು ಅಧಿಕ ಸಂಖ್ಯೆಯ ಚಿತ್ರಮಂದಿಗಳಲ್ಲಿ ಬಿಡುಗಡೆ ಮಾಡುವ ಮೂಲಕ ಇಡೀ ದೇಶವೇ ಕನ್ನಡ ಚಿತ್ರರಂಗದತ್ತ ತಿರುಗಿ ನೋಡು ಹಾಗೆ ಮಾಡುತ್ತಿದ್ದಾರೆ ಕನ್ನಡದ ಹೆಮ್ಮೆಯ ನಿರ್ಮಾಪಕ ವಿಜಯ್ ಕಿರಗಂದೂರು.