ETV Bharat / entertainment

Karnataka Budget: ಕನ್ನಡ ಚಿತ್ರರಂಗದ ಪರ ನಿಂತ ಸಿಎಂ ಸಿದ್ದರಾಮಯ್ಯ; ಹಲವು ವರ್ಷಗಳ ಬೇಡಿಕೆಗೆ ಅಸ್ತು

ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದಾಖಲೆಯ ಬಜೆಟ್​ ಮಂಡಿಸಿದ್ದು, ಕನ್ನಡ ಚಿತ್ರರಂಗಕ್ಕೆ ದಕ್ಕಿದ್ದೇನು ಗೊತ್ತಾ? ಇಲ್ಲಿದೆ ಸಂಪೂರ್ಣ ಮಾಹಿತಿ..

Karnataka budget 2023
ಕನ್ನಡ ಚಿತ್ರರಂಗದ ಪರ ನಿಂತ ಸಿಎಂ ಸಿದ್ದರಾಮಯ್ಯ
author img

By

Published : Jul 7, 2023, 5:04 PM IST

ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ 14ನೇ ದಾಖಲೆಯ ಬಜೆಟ್ ಮಂಡಿಸಿದ್ದು, ಜನಪರ ಕಾಳಜಿ ಜೊತೆಗೆ ಕನ್ನಡ ಚಿತ್ರರಂಗಕ್ಕೂ ಭರ್ಜರಿ ಕೊಡುಗೆಗಳನ್ನು ನೀಡಿದ್ದಾರೆ. ಈ ಮೂಲಕ ಸಿಎಂ ಸಿನಿಮಾ ರಂಗದ ಪರವಾಗಿ ನಿಂತುಕೊಂಡಿದ್ದಾರೆ. ಸ್ಯಾಂಡಲ್​ವುಡ್​ನಲ್ಲಿ ಸಾಕಷ್ಟು ಬೇಡಿಕೆಗಳ ಜೊತೆಗೆ ಸಮಸ್ಯೆಗಳಿದ್ದರೂ ಕೂಡ ಕಳೆದ ಬಾರಿಯ ಬಜೆಟ್​ಗೆ ಹೋಲಿಸಿದರೆ, ಈ ಬಾರಿ ಚಿತ್ರರಂಗಕ್ಕೆ ಹೆಚ್ಚೇ ಮಹತ್ವ ನೀಡಿದ್ದಾರೆ ಎನ್ನಲಾಗಿದೆ.

ಮೈಸೂರಿನಲ್ಲಿ ಫಿಲ್ಮ್​ ಸಿಟಿ: ಚಿತ್ರರಂಗದ ಬೇಡಿಕೆಯಂತೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫಿಲ್ಮ್​ ಸಿಟಿಯನ್ನು ಮೈಸೂರಿನಲ್ಲೇ ಸ್ಥಾಪಿಸುವುದಾಗಿ ಬಜೆಟ್​ನಲ್ಲಿ ಘೋಷಣೆ ಮಾಡಿದ್ದಾರೆ. ಡಾ.ರಾಜ್​ಕುಮಾರ್​ ಕಾಲದಿಂದಲೂ ಕನ್ನಡ ಚಿತ್ರರಂಗಕ್ಕೆ ಫಿಲ್ಮ್​ ಸಿಟಿ ಬೇಕು ಅನ್ನೋ ಮಾತು ಕೇಳಿಬರುತ್ತಿತ್ತು. ಪ್ರತಿ ಬಾರಿಯೂ ಬಜೆಟ್​ನಲ್ಲಿ ಈ ಬಗ್ಗೆ ಘೋಷಣೆ ಮಾಡುತ್ತಾರೆ. ಆದರೆ ಮತ್ತೊಂದು ಸರ್ಕಾರ ಅಧಿಕಾರಕ್ಕೆ ಬಂದರೆ, ಫಿಲ್ಮ್​ ಸಿಟಿ ಕೇವಲ ಘೋಷಣೆಯಾಗಿಯೇ ಉಳಿದುಬಿಡುತ್ತದೆ.

2015-16ನೇ ಸಾಲಿನಲ್ಲಿ ಮೈಸೂರು ಜಿಲ್ಲೆಯಲ್ಲಿ ಜಾಗತಿಕ ಮಟ್ಟದ ಚಿತ್ರನಗರಿ ಸ್ಥಾಪಿಸಲು ಘೋಷಿಸಲಾಗಿತ್ತು. ನಂತರದ ಸರ್ಕಾರವು ಫಿಲ್ಮ್ ಸಿಟಿಯನ್ನು ಬೆಂಗಳೂರಿಗೆ ಸ್ಥಳಾಂತರಗೊಳಿಸಲು ಉದ್ದೇಶಿಸಿತ್ತು. ಆದರೆ, ಇಲ್ಲಿವರೆಗೂ ಅನುಷ್ಠಾನಗೊಂಡಿಲ್ಲ. ಈ ಬಾರಿ ಮೈಸೂರು ಜಿಲ್ಲೆಯಲ್ಲೇ ಚಿತ್ರನಗರಿ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಹಲವು ವರ್ಷಗಳ ಬೇಡಿಕೆಯನ್ನು ಈಡೇರಿಸಿದ್ದಾರೆ.

ಇನ್ನು ಕನ್ನಡ ಚಿತ್ರರಂಗದ ಇತಿಹಾಸವನ್ನು ಸಾರುವಂತಹ ವಸ್ತು ಸಂಗ್ರಹಾಲಯ ಬೇಕು ಎನ್ನುವುದು ಸಿನಿಮಾ ಇತಿಹಾಸಕಾರರ ಒತ್ತಾಯ ಆಗಿತ್ತು. ಆದರೆ ಹಿಂದಿನ‌ ಸರ್ಕಾರಗಳು ಈ ಬಗ್ಗೆ ಚಿಂತನೆ ಮಾಡಿರಲಿಲ್ಲ. ಈಗ ಸಿಎಂ‌ ಸಿದ್ದರಾಮಯ್ಯ ಸರ್ಕಾರ ವಸ್ತು ಸಂಗ್ರಹಾಲಯ ಮಾಡುವುದಾಗಿ ಈ ಬಾರಿಯ ಬಜೆಟ್​ನಲ್ಲಿ ಹೇಳಿದ್ದಾರೆ.

ಕನ್ನಡ ಚಿತ್ರರಂಗದ ಇತಿಹಾಸ, ಅದು ಬೆಳೆದು ಬಂದ ಇತಿಹಾಸ ತಿಳಿಸುವ ಸಂಗ್ರಹಾಯಲವನ್ನು ಬೆಂಗಳೂರಿನ ಕಂಠೀರವದಲ್ಲಿರುವ ಡಾ ರಾಜ್​ ಕುಮಾರ್​ ಸ್ಮಾರಕದ ಬಳಿ ನಿರ್ಮಾಣ ಮಾಡುಲಾಗುವುದು. ಕಳೆದ ಮೂರು ವರ್ಷಗಳಿಂದ ಕನ್ನಡದ ಗುಣಾತ್ಮಕ ಚಿತ್ರಗಳಿಗೆ ಸಹಾಯಧನ ನೀಡುವ ಯೋಜನೆ ಸ್ಥಗಿತಗೊಂಡಿದೆ. ಈ ಹಿನ್ನೆಲೆ ಈ ಯೋಜನೆಗೆ ಆಯ್ಕೆ ಸಮಿತಿ ರಚಿಸಿ ಮತ್ತು ಸಹಾಯ ಧನ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ಇದರ ಜೊತೆಗೆ ಡಾ.ರಾಜ್​ಕುಮಾರ್ ಸ್ಮಾರಕದ ಬಳಿ ವಸ್ತು ಸಂಗ್ರಹಾಲಯದ ಜೊತೆಗೆ ಸುಸಜ್ಜಿತ ಥಿಯೇಟರ್ ನಿರ್ಮಾಣವಾಗಬೇಕು ಎನ್ನುವುದು ಹಲವರ ಕೋರಿಕೆಯಾಗಿತ್ತು. ಜೊತೆಗೆ ಡಾ.ರಾಜ್​ಕುಮಾರ್ ಅವರ ಕುರಿತಾಗಿಯೇ ವಸ್ತು ಸಂಗ್ರಹಾಲಯ ಇರಬೇಕು ಎಂದು ಮನವಿ ಸಲ್ಲಿಸಲಾಗಿತ್ತು. ಅದರಂತೆ ಸಮಗ್ರ ಚಿತ್ರರಂಗವನ್ನು ಒಳಗೊಳ್ಳುವಂತಹ ಸಂಗ್ರಹಾಲಯ ನಿರ್ಮಾಣ ಮಾಡಲು ಈ ಸರ್ಕಾರ ಮುಂದಾಗಿದೆ.

ಕನ್ನಡದ ಸಿನಿಮಾಗಳಿಗೆ ನೀಡುತ್ತಿದ್ದ ಸಹಾಯಧನವನ್ನು ಕಳೆದ ಮೂರು ವರ್ಷಗಳಿಂದ ನೀಡಿರಲಿಲ್ಲ. ನಾನಾ ರೀತಿಯ ಕಾರಣಗಳನ್ನು ಕೊಡುತ್ತಲೇ ಸಬ್ಸಿಡಿಯನ್ನು ಸ್ಥಗಿತಗೊಳಿಸಲಾಗಿತ್ತು. ಮತ್ತೆ ಸಹಾಯಧನವನ್ನು ನೀಡಲು ಕ್ರಮ ಕೈಗೊಳ್ಳುವುದಾಗಿ ಬಜೆಟ್​ನಲ್ಲಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಪುನೀತ್​ ಹೆಸರಲ್ಲಿ ಆರೋಗ್ಯ ಕ್ಷೇತ್ರಕ್ಕೆ ಅನುದಾನ: ಕನ್ನಡ ಚಿತ್ರರಂಗದ ರಾಜರತ್ನ ಪುನೀತ್ ರಾಜ್​ಕುಮಾರ್ ಅಕಾಲಿಕ ಮರಣ ಸಿನಿ ಇಂಡಸ್ಟ್ರಿಗೆ ತುಂಬಲಾರದ ನಷ್ಟ. ಹೃದಯಾಘಾತದಿಂದ ಅಪ್ಪು ನಿಧನರಾದಾಗ ಆ ಸಾವಿನ ಬಗ್ಗೆ ಹಲವು ರೀತಿಯಲ್ಲಿ ವಿಶ್ಲೇಷಣೆ ಮಾಡಲಾಗಿತ್ತು. ಪುನೀತ್ ಅವರಿಗೆ ಹಠಾತ್ ಎದೆ ನೋವು ಕಾಣಿಸಿಕೊಂಡಾಗ ಯಾವ ರೀತಿಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಬೇಕಿತ್ತು ಎಂದೆಲ್ಲಾ ಚರ್ಚೆಗಳು ನಡೆದಿದ್ದವು.

ಅದೆಲ್ಲವನ್ನೂ ಪರಿಗಣಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಾರಿಯ ಬಜೆಟ್​ನಲ್ಲಿ ಪುನೀತ್ ಹೆಸರಿನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಒಂದಷ್ಟು ಅನುದಾನ ನೀಡಿದ್ದಾರೆ. ಪುನೀತ್ ರಾಜ್​ಕುಮಾರ್‌ ಅವರ ಸ್ಮರಣಾರ್ಥವಾಗಿ ಹಠಾತ್ ಹೃದಯ ಸಂಬಂಧಿ ಸಾವುಗಳನ್ನು ತಡೆಗಟ್ಟಲು (AED) ಗಳನ್ನು ಜಿಲ್ಲಾ ಆಸ್ಪತ್ರೆ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಅಳವಡಿಸಲಾಗುವುದು. ಇದಕ್ಕಾಗಿ ಆರು ಕೋಟಿ ರೂ. ಅನುದಾನ ಒದಗಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಬಜೆಟ್​ನಲ್ಲಿ ಘೋಷಿಸಿದ್ದಾರೆ.

ಇದರ ಜೊತೆಗೆ ಕಳೆದ ಮೂರು ವರ್ಷಗಳಿಂದ ಕನ್ನಡದ ಗುಣಾತ್ಮಕ ಚಿತ್ರಗಳಿಗೆ ಸಹಾಯಧನ ನೀಡುವ ಯೋಜನೆ ಸ್ಥಗಿತಗೊಂಡಿತ್ತು. ಈ ಬಾರಿ ಆಯ್ಕೆ ಸಮಿತಿಗಳನ್ನು ರಚಿಸಿ, ಸಹಾಯಧನ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಈ ಮೂಲಕ ಗುಣಾತ್ಮಕ ಕನ್ನಡ ಚಿತ್ರಗಳ ನಿರ್ಮಾಪಕರ ಸಹಾಯಕ್ಕೆ ನಿಂತಿದ್ದಾರೆ. ಒಟ್ಟಾರೆ ಕಳೆದ ಸರ್ಕಾರದ ಬಜೆಟ್​ಗೆ ಹೋಲಿಸಿದರೆ ಈ ಬಾರಿಯ ಬಜೆಟ್‌ನಲ್ಲಿ ಚಿತ್ರರಂಗಕ್ಕೆ ಅನುಕೂಲವಾಗುವ ಯೋಜನೆಗಳು ಘೋಷಣೆಯಾಗಿದ್ದು, ಕನ್ನಡ ಚಿತ್ರರಂಗದ ಬೆಳವಣಿಗೆಗೆ ‌ಮತ್ತಷ್ಟು ಸಹಾಯಕ ಆಗಲಿದೆ.

ಇದನ್ನೂ ಓದಿ: Karnataka Budget: ಮೈಸೂರಿನಲ್ಲಿ ಫಿಲ್ಮ್​ ಸಿಟಿ; ಕಲಬುರಗಿಯಲ್ಲಿ ಜಾನಪದ ಲೋಕ ಸ್ಥಾಪನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.