ETV Bharat / entertainment

ಅಶ್ವಿನಿ ನಕ್ಷತ್ರ ಜೆ.ಕೆ ಅಭಿನಯದ 'ಐರಾವನ್' ಬಿಡುಗಡೆಗೆ ಮುಹೂರ್ತ ಫಿಕ್ಸ್​​ - Karthik Jayaram

ಕಾರ್ತಿಕ್​​​ ಜಯರಾಮ್ ಮತ್ತು ಅದ್ವಿತಿ ಶೆಟ್ಟಿ ಜೋಡಿಯಾಗಿ ನಟಿಸಿರುವ 'ಐರಾವನ್' ಬಿಡುಗಡೆ ದಿನಾಂಕ ಘೋಷಣೆ ಆಗಿದೆ.

Airavan release date announced
ಐರಾವನ್ ಬಿಡುಗಡೆ ದಿನಾಂಕ
author img

By

Published : Jun 3, 2023, 12:31 PM IST

ಕಿರುತೆರೆ ಹಾಗೂ ಹಿರಿತೆರೆಯಲ್ಲಿ ತಮ್ಮದೇ ಛಾಪು ಮೂಡಿಸಿರುವ ನಟ ಜೆ‌.ಕೆ / ಕಾರ್ತಿಕ್​​​ ಜಯರಾಮ್. ಫಿಟ್ನೆಸ್ ಬಗ್ಗೆ ಆಗಾಗ ಸೋಷಿಯಲ್ ಮೀಡಿಯಾದಲ್ಲಿ ಗಮನ ಸೆಳೆಯುವ ಜೆ.ಕೆ‌ ಸಿನಿಮಾವೊಂದರಲ್ಲಿ ಬ್ಯುಸಿಯಾಗಿರುವುದು ನಿಮಗೆ ತಿಳಿದೇ ಇದೆ. ಕಾರ್ತಿಕ್​​​ ಜಯರಾಮ್ ಅಭಿನಯದ ಮುಂದಿನ ಬಹುನಿರೀಕ್ಷಿತ ಚಿತ್ರ 'ಐರಾವನ್‌'. ಸಿನಿಮಾ ಬಿಡುಗಡೆಗೆ ಮುಹೂರ್ತ ಕೂಡ ಫಿಕ್ಸ್ ಆಗಿದೆ. ಸದ್ಯ ಟ್ರೇಲರ್​​ ಹಾಗೂ ಹಾಡುಗಳಿಂದಲೇ ಸ್ಯಾಂಡಲ್​​ವುಡ್​​ನಲ್ಲಿ ಸದ್ದು ಮಾಡುತ್ತಿರುವ 'ಐರಾವನ್' ಚಿತ್ರದ ಬಗ್ಗೆ ನಟ ಕಾರ್ತಿಕ್​​ ಜಯರಾಮ್, ನಟಿ‌ ಅದ್ವಿತಿ ಶೆಟ್ಟಿ ಹಾಗೂ ನಿರ್ದೇಶಕ ರಾಮ್ಸ್ ರಂಗ ಮಾಹಿತಿ ಹಂಚಿಕೊಂಡಿದ್ದಾರೆ.

Airavan release date announced
ಜೆ.ಕೆ ಜೊತೆ ಅದ್ವಿತಿ ಶೆಟ್ಟಿ

ನಟ‌ ಕಾರ್ತಿಕ್​​​ ಜಯರಾಮ್‌ ಮಾತನಾಡಿ, ಐರಾವನ್ ಚಿತ್ರದ ಟೀಸರ್​ಗೆ ನಿಮ್ಮಿಂದ ಸಿಕ್ಕಿರುವ ಪ್ರೋತ್ಸಾಹಕ್ಕೆ ನಾನು ಚಿರಋಣಿ. ಕೆಲವರಿಗೆ ಈ ಚಿತ್ರದ ಬಗ್ಗೆ ಗೊಂದಲವಿತ್ತು. ಇದು ಹಿಂದಿ ಚಿತ್ರದ ಡಬ್ ಇರಬಹುದು ಎಂದು ಹಲವರು ಊಹಿಸಿದ್ದರು. ಆದರೆ ಇದು ಪಕ್ಕಾ ಕನ್ನಡ ಚಿತ್ರ. ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಸ್ಯಾಂಡಲ್​ವುಡ್​ ಸಿನಿಮಾ ಇದು. ಎರಡು ಶೇಡ್​ಗಳಲ್ಲಿ ನನ್ನ ಪಾತ್ರವಿರುತ್ತದೆ. ನಿರ್ದೇಶಕರು ಒಳ್ಳೆಯ ಕಥೆ ಮಾಡಿದ್ದಾರೆ. ಹಾಡುಗಳು ಬಹಳ ಚೆನ್ನಾಗಿದೆ. ನಿರ್ಮಾಪಕ ಡಾ. ನಿರಂತರ ಗಣೇಶ್ ಯಾವುದೇ ಕೊರತೆ ಬಾರದಂತೆ ಚಿತ್ರ ನಿರ್ಮಾಣ ಮಾಡಿದ್ದಾರೆ. ಜೂನ್ 16ರಂದು ನಮ್ಮ ಈ ಚಿತ್ರ ತೆರೆ ಕಾಣಲಿದೆ ಎಂದು ಮಾಹಿತಿ ನೀಡಿದರು.

ನಿರ್ದೇಶಕ ರಾಮ್ಸ್ ರಂಗ ಮಾತನಾಡಿ, 'ಐರಾವನ್' ಎಂದರೆ ಮಹಾಭಾರತದಲ್ಲಿ ಬರುವ ಪಾತ್ರವೊಂದರ ಹೆಸರು. ಐರಾವನ್​ ಹೆಸರಿನ ನಮ್ಮ ಚಿತ್ರ ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿದೆ‌. ಬೆಂಗಳೂರು, ಮಂಗಳೂರು ಮುಂತಾದ ಕಡೆ ಚಿತ್ರೀಕರಣ ಮಾಡಿದ್ದೇವೆ. ಸಮುದ್ರದ ಬಳಿ ಹೆಚ್ಚಿನ ಚಿತ್ರೀಕರಣ ಮಾಡಿರುವುದು ಚಿತ್ರದ ವಿಶೇಷ ಎಂದರು.

ನಾನು ಮೂಲತಃ ವೈದ್ಯ. ಕೋವಿಡ್ ಸಮಯದಲ್ಲಿ ನಿರ್ದೇಶಕ ರಾಮ್ಸ್ ರಂಗ ಈ ಚಿತ್ರದ ಕಥೆ ಹೇಳಿದರು. ಕಥೆ ಇಷ್ಟವಾಯಿತು. ಆ ಸಮಯದಲ್ಲಿ ಚಿತ್ರರಂಗದ ಬಹುತೇಕರು ಸಂಕಷ್ಟದಲ್ಲಿದ್ದರು. ಈ ಸಂದರ್ಭದಲ್ಲಿ ನಾನು ಸಿನಿಮಾ ನಿರ್ಮಾಣ ಮಾಡಿದರೆ ಅನೇಕ ಜನರಿಗೆ ಅನುಕೂಲವಾಗುತ್ತದೆ ಎಂಬ ಉದ್ದೇಶ ನನ್ನದಾಗಿತ್ತು. ಈಗ ಚಿತ್ರತಂಡದ ಸಹಕಾರದಿಂದ ಚಿತ್ರ ಚೆನ್ನಾಗಿ ಮೂಡಿಬಂದಿದೆ ಎಂದು ನಿರ್ಮಾಪಕ ಡಾ. ನಿರಂತರ ಗಣೇಶ್ ತಿಳಿಸಿದರು.

ಇದನ್ನೂ ಓದಿ: ಭೂಮಿ ಮೇಲಿನ ಸ್ವರ್ಗ 'ಮಾಲ್ಡೀವ್ಸ್​​' ಕಡಲ ತೀರದಲ್ಲಿ ರಾಕುಲ್ ಪ್ರೀತ್ ಸಿಂಗ್ : ಬಿಕಿನಿ ತೊಟ್ಟು ಬಿಸಿಯೇರಿಸಿದ ನಟಿ

ಜೆ.ಕೆ ಜೊತೆ ಅದ್ವಿತಿ ಶೆಟ್ಟಿ ಜೋಡಿಯಾಗಿದ್ದಾರೆ. ‌ಇವರ ಜೊತೆಗೆ ನವನಟ ವಿವೇಕ್ ಕೂಡ ವಿಶೇಷ ಪಾತ್ರದಲ್ಲಿ ‌ಕಾಣಿಸಿಕೊಂಡಿದ್ದಾರೆ. ಈ ಚಿತ್ರಕ್ಕೆ ಪ್ರದೀಪ್ ವರ್ಮ ಸಂಗೀತ ನೀಡಿದ್ದು, ದೇವೇಂದ್ರ ಅವರ ಛಾಯಾಗ್ರಹಣವಿದೆ. ಥ್ರಿಲ್ಲರ್ ಕಥೆ ಆಧರಿಸಿರೋ ಐರಾವನ್ ಸಿನಿಮಾ‌ ಇದೇ ಜೂನ್ 16ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಇದನ್ನೂ ಓದಿ: ದೇಶವನ್ನೇ ಬೆಚ್ಚಿಬೀಳಿಸಿದ ಒಡಿಶಾ ರೈಲು ದುರಂತ: ಭೀಕರ ಸನ್ನಿವೇಶ ಫೋಟೋಗಳಲ್ಲಿ ಕಂಡಿದ್ದು ಹೀಗೆ!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.