ಬಾಲಿವುಡ್ ನಟ ವಿಕ್ಕಿ ಕೌಶಲ್ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ವಿಕ್ಕಿ ಅವರ ಹುಟ್ಟುಹಬ್ಬಕ್ಕೆ ನಟಿ ಕತ್ರಿನಾ ಖೈಫ್ ಎರಡು ಫೋಟೋಗಳನ್ನು ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿ ಶುಭಾಶಯ ತಿಳಿಸಿದ್ದಾರೆ. ಪತಿಯ 34ನೇ ವರ್ಷದ ಜನ್ಮದಿನಾಚರಣೆಯನ್ನು ಸಾಮಾಜಿಕ ಜಾಲತಾಣದಲ್ಲಿ ಕತ್ರಿನಾ ಹಂಚಿಕೊಂಡಿದ್ದಾರೆ. ವಿಕ್ಕಿ ಅವರ ಹುಟ್ಟುಹಬ್ಬವನ್ನು ನ್ಯೂಯಾರ್ಕ್ನಲ್ಲಿ ಆಚರಿಸಿದ್ದಾರೆ.
ಕತ್ರಿನಾ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ವಿಕ್ಕಿ ಅವರೊಂದಿಗಿನ ಎರಡು ಫೋಟೋಗಳನ್ನು ಹಂಚಿಕೊಂಡು ಜನ್ಮದಿನಕ್ಕೆ ಶುಭಾಶಯ ಕೋರಿದ್ದಾರೆ. ನ್ಯೂಯಾರ್ಕ ರಜೆಯಲ್ಲಿರುವ ದಂಪತಿ ಅಲ್ಲಿ ತೆಗೆದ ಎರಡು ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಚಿತ್ರಗಳನ್ನು ಹಂಚಿಕೊಳ್ಳುತ್ತಾ, 'ನ್ಯೂಯಾರ್ಕ್ ವಾಲಾ ಜನ್ಮದಿನ, ನಾನು ಸರಳವಾಗಿ ಹೇಳುವುದಾದರೆ.. ನೀನು ಎಲ್ಲವನ್ನೂ ಉತ್ತಮಗೊಳಿಸಿರುವೆ.' ಎಂದು ಬರೆದುಕೊಂಡಿದ್ದಾರೆ.
- " class="align-text-top noRightClick twitterSection" data="
">
ಕತ್ರಿನಾ ರಿಕ್ಕಿ ಜೋಡಿ ನ್ಯೂಯಾರ್ಕ್ನಲ್ಲಿ ರಜಾದಿನಗಳನ್ನು ಕಳೆಯುತ್ತಿದ್ದಾರೆ. ಕತ್ರಿನಾ ಸದ್ಯ ಚಿತ್ರೀಕರಣದಿಂದ ಬ್ರೇಕ್ ತೆಗೆದುಕೊಂಡಿದ್ದು, ಟೈಗರ್ 3ಯಲ್ಲಿ ಸಲ್ಮಾನ್ ಖಾನ್ ಜೊತೆ ತೆರೆ ಹಂಚಿಕೊಳ್ಳಲಿದ್ದಾರೆ. ಸಿದ್ಧಾಂತ್ ಚತುರ್ವೇದಿ ಮತ್ತು ಇಶಾನ್ ಖಟ್ಟರ್ ನಟನೆಯ ಕಾಮಿಡಿ- ಹಾರರ್ ಸಿನಿಮಾ ಫೋನ್ ಭೂತ್ ಸಿನಿಮಾವನ್ನು ಒಪ್ಪಿಕೊಂಡಿದ್ದಾರೆ. ಇದಲ್ಲದೆ, ಫರ್ಹಾನ್ ಅಖ್ತರ್ ಅವರ ಜೀ ಲೇ ಜರಾದಲ್ಲಿ ಪ್ರಿಯಾಂಕಾ ಚೋಪ್ರಾ ಮತ್ತು ಆಲಿಯಾ ಭಟ್ ಅವರೊಂದಿಗೆ ಸ್ಕ್ರೀನ್ ಹಂಚಿಕೊಂಡಿದ್ದಾರೆ.
ಇದನ್ನೂ ಓದಿ: ತಿರುಮಲ ವೆಂಕಟೇಶ್ವರನ ದರ್ಶನ ಪಡೆದ ಕಂಗನಾ