ಎರಡು ತಿಂಗಳ ಹಿಂದೆಯಷ್ಟೇ ಬಾಲಿವುಡ್ ನಟ ಸಿದ್ಧಾರ್ಥ್ ಮಲ್ಹೋತ್ರಾ ಜೊತೆ ಸಪ್ತಪದಿ ತುಳಿದಿದ್ದ ನಟಿ ಕಿಯಾರಾ ಅಡ್ವಾಣಿ ಇದೀಗ ತಮ್ಮ ಮುಂದಿನ ಚಿತ್ರದ ಶೂಟಿಂಗ್ನಲ್ಲಿ ಬ್ಯುಸಿಯಾಗಿದ್ದಾರೆ. ಭೂಲ್ ಭುಲೈಯಾ 2 ಚಿತ್ರದ ನಟ ಕಾರ್ತಿಕ್ ಆರ್ಯನ್ ಜೊತೆ ಅಭಿನಯಿಸುತ್ತಿರುವ ಹೊಸ ಚಿತ್ರದ ಶೂಟಿಂಗ್ ನಡೆಯುತ್ತಿರುವ ಸ್ಥಳದ ವಿಡಿಯೋವೊಂದನ್ನು ನಟಿ ಕಿಯಾರಾ ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ಕಿಯಾರಾ ಮತ್ತೆ ಶೂಟಿಂಗ್ನಲ್ಲಿ ಬ್ಯುಸಿಯಾಗಿರುವುದನ್ನು ನೋಡಿದ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ.
ಸತ್ಯಪ್ರೇಮ್ ಕಿ ಕಥಾ ಸಿನಿಮಾದಲ್ಲಿ ಕಿಯಾರಾ ಅಡ್ವಾಣಿ ಹಾಗೂ ಕಾರ್ತಿಕ್ ಆರ್ಯನ್ ಜೊತೆಯಾಗಿ ಅಭಿನಯಿಸುತ್ತಿದ್ದಾರೆ. ಈ ಚಿತ್ರದ ಶೂಟಿಂಗ್ ತಂಡ ಕಾಶ್ಮೀರಕ್ಕೆ ತೆರಳಿದ್ದು, 3 ಡಿಗ್ರಿ ಸೆಲ್ಸಿಯಸ್ನ ಹವಾಮಾನದಲ್ಲಿ ಸತ್ಯಪ್ರೇಮ್ ಕಿ ಕಥಾ ಸಿನಿಮಾ ಚಿತ್ರೀಕರಣದಲ್ಲಿ ನಟಿ ಕಿಯಾರಾ ಭಾಗವಹಿಸುತ್ತಿದ್ದಾರೆ. ಚಿತ್ರೀಕರಣ ನಡೆಯುತ್ತಿರುವ ಸ್ಥಳ ಹಿಮದಿಂದ ಆವೃತವಾಗಿದ್ದು, ಆ ನಡುಗುವ ಚಳಿ ಮಧ್ಯದಲ್ಲೂ ನಟಿ ಶೂಟಿಂಗ್ನಲ್ಲಿ ಭಾಗವಹಿಸಿದ್ದಾರೆ. ಇನ್‌ಸ್ಟಾಗ್ರಾಮ್ ಸ್ಟೋರೀಸ್‌ನಲ್ಲಿ ವಿಡಿಯೋವನ್ನು ಹಂಚಿಕೊಂಡಿರುವ ನಟಿ ಕಿಯಾರಾ, ಚಿತ್ರೀಕರಣ ಎಲ್ಲವೂ ಸಿದ್ಧವಾಗಿದೆ ಎಂದು ಬರೆದುಕೊಂಡಿದ್ದಾರೆ.
- " class="align-text-top noRightClick twitterSection" data="
">
ವರದಿಗಳ ಪ್ರಕಾರ, ಕಾರ್ತಿಕ್ ಆರ್ಯನ್ ಹಾಗೂ ಕಿಯಾರಾ ಅಡ್ವಾಣಿ ಕೆಲವು ದಿನಗಳ ಹಿಂದೆ ಸತ್ಯಪ್ರೇಮ್ ಕಿ ಕಥಾ ಚಿತ್ರದ ಅಂತಿಮ ಹಂತದ ಚಿತ್ರೀಕರಣಕ್ಕಾಗಿ ಕಾಶ್ಮೀರದ ಕಣಿವೆಗೆ ಆಗಮಿಸಿದ್ದಾರೆ. ಇದರಲ್ಲಿ ಒಂದು ವಾರದ ರೊಮ್ಯಾಂಟಿಕ್ ಹಾಡಿನ ಚಿತ್ರೀಕರಣ ನಡೆಯಲಿದೆ. ಈ ಸಿನಿಮಾದ ಜೊತೆಗೆ ಕಿಯಾರಾ ಅಡ್ವಾಣಿ ಟಾಲಿವುಡ್ ನಟ ರಾಮ್ ಚರಣ್ ಅಭಿನಯದ ಗೇಮ್ ಚೇಂಜರ್ ಸಿನಿಮಾದಲ್ಲಿಯೂ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಈ ಚಿತ್ರ RC 15 ಎಂದು ಅನೌನ್ಸ್ ಆಗಿತ್ತು. ಆದರೆ ಇತ್ತೀಚೆಗೆ ರಾಮ್ ಚರಣ್ ಹುಟ್ಟುಹಬ್ಬಕ್ಕೆ ನಿರ್ದೇಶಕ ಶಂಕರ್ ಅವರು ಗೇಮ್ ಚೇಂಜರ್ ಎನ್ನುವ ಟೈಟಲ್ ಕೂಡ ರಿವೀಲ್ ಮಾಡಿದ್ದರು.
ಆರ್ಆರ್ಆರ್ ಸಿನಿಮಾದ ನಾಟು ನಾಟು ಹಾಡಿಗೆ ಆಸ್ಕರ್ ಪ್ರಶಸ್ತಿ ಸ್ವೀಕರಿಸಿ ಅಮೇರಿಕಾದಿಂದ ರಾಮ್ ಚರಣ್ ಹಿಂತಿರುಗಿದ ಬನಂತರ ಇತ್ತೀಚೆಗೆ ಚಿತ್ರತಂಡ ಹೈದರಾಬಾದ್ನಲ್ಲಿ ಗೇಮ್ ಚೇಂಜರ್ ಚಿತ್ರದ ಹಾಡಿನ ಚಿತ್ರೀಕರಣವನ್ನು ಮುಗಿಸಿದೆ. ಪ್ರಸ್ತುತ ದಿನದ ರಾಜಕೀಯದ ಜೊತೆಗೆ ಆ್ಯಕ್ಷನ್ ಡ್ರಾಮಾ ಎಂದು ಹೇಳಲಾಗುತ್ತಿರುವ ಗೇಮ್ ಚೇಂಜರ್ ಚಿತ್ರದಲ್ಲಿ ಕಿಯಾರಾ ಅಡ್ವಾಣಿ ನಾಯಕಿಯಾಗಿ ನಟಿಸಿದ್ದಾರೆ. ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ದಿಲ್ ರಾಜು ಮತ್ತು ಶಿರೀಶ್ ಗಾರು ಈ ಚಿತ್ರವನ್ನು ಪ್ಯಾನ್ ಇಂಡಿಯಾ ಲೆವೆಲ್ನಲ್ಲಿ ನಿರ್ಮಾಣ ಮಾಡುತ್ತಿದ್ದಾರೆ.
ಗೇಮ್ ಚೇಂಜರ್ ಸಿನಿಮಾ ತೆಲುಗು, ತಮಿಳು ಮತ್ತು ಹಿಂದಿ ಭಾಷೆಗಳಲ್ಲಿ ತೆರೆಗೆ ಬರಲಿದೆ. ಚಿತ್ರದಲ್ಲಿ ರಾಮ್ ಚರಣ್ ಮತ್ತು ಕಿಯಾರಾ ಅಡ್ವಾಣಿ ಜೊತೆಗೆ ಎಸ್‌ಜೆ ಸೂರ್ಯ, ಜಯರಾಮ್, ಅಂಜಲಿ ಮತ್ತು ಶ್ರೀಕಾಂತ್ ಕೂಡ ನಟಿಸಿದ್ದಾರೆ.
ಇದನ್ನೂ ಓದಿ: ಹ್ಯಾಪಿ ಬರ್ತ್ ಡೇ ಶ್ರೀವಲ್ಲಿ: ರಶ್ಮಿಕಾ ಮಂದಣ್ಣ ಫಸ್ಟ್ ಲುಕ್, ಪುಷ್ಪಾ 2 ಟೀಸರ್ ತುಣುಕು ರಿಲೀಸ್