ಕನ್ನಡ ಚಿತ್ರರಂಗದಿಂದ ಅತ್ಯುತ್ತಮ ಸಿನಿಮಾಗಳು ನಿರ್ಮಾಣ ಆಗುತ್ತಿವೆ. ಉತ್ತುಮ ಕಥಾಹಂದರ, ಅದ್ಧೂರಿ ಮೇಕಿಂಗ್, ಕಥೆ ಹೇಳುವ ಶೈಲಿ ಮಾತ್ರವಲ್ಲದೇ ಹೊಸ ಬಗೆಯ ಶೀರ್ಷಿಕೆಗಳು ಸಹ ಬಹಳಷ್ಟು ಸದ್ದು ಮಾಡುತ್ತಿವೆ. ಈ ಪಟ್ಟಿಗೀಗ 'ಕ್ಲಾಂತ' ಹೊಸ ಸೇರ್ಪಡೆ. ಈ ಹಿಂದೆ ರಂಗನ್ ಸ್ಟೈಲ್, ದಗಲು ಬಾಜಿಲು ಸೇರಿದಂತೆ ಕೆಲ ಸಿನಿಮಾಗಳನ್ನು ನಿರ್ದೇಶಿರುವ ವೈಭವ್ ಪ್ರಶಾಂತ್ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಈ ಚಿತ್ರದ ಟೈಟಲ್ ಹಾಗೂ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ನೆರವೇರಿದೆ. ಸಿನಿಮಾ ಬಗ್ಗೆ ಚಿತ್ರತಂಡ ಕೆಲ ವಿಚಾರಗಳನ್ನು ಹಂಚಿಕೊಂಡಿದೆ.
- " class="align-text-top noRightClick twitterSection" data="
">
ನಟಿ ಸಂಗೀತಾ ಭಟ್ ಮಾತನಾಡಿ, ನನಗೆ ಈ ಸಿನಿಮಾ ತುಂಬಾನೇ ವಿಶೇಷ. ಕೆಲ ವರ್ಷಗಳಿಂದ ಸಿನಿಮಾದಿಂದ ದೂರ ಉಳಿದಿದ್ದೆ. ನಾನು ಕಂಬ್ಯಾಕ್ ಮಾಡಿದಾಗ ಸೈನ್ ಮಾಡಿದ ಮೊದಲ ಚಿತ್ರವಿದು. ಟೀನೇಜ್ ದಾಟಿ ಈಗ ತಾನೇ ಕೆಲಸ ಮಾಡುವ ಪಾತ್ರ ನನ್ನದು. ಹೆಚ್ಚಾಗಿ ಕಾಡಿನಲ್ಲಿ ಶೂಟ್ ಮಾಡಲಾಗಿದ್ದು, ಒಂದೊಳ್ಳೆ ಅನುಭವ. ಇಲ್ಲಿ ನನ್ನ ಪಾತ್ರಕ್ಕೆ ಬೇಕಾದ ಫಿಟ್ನೆಸ್, ಭಾವನೆಗಳನ್ನು ಬದಲಾಯಿಸಿದ್ದೇನೆ. ಫೈಟ್ ಸೀಕ್ವೆನ್ಸ್ ಮಾಡಿದ್ದು, ಖುಷಿ ಕೊಟ್ಟಿದೆ ಎಂದು ತಮ್ಮ ಅಭಿಪ್ರಾಯ ಹಂಚಿಕೊಂಡರು.
ನಾಯಕ ವಿಘ್ನೇಶ್ ಮಾತನಾಡಿ, ಈ ಚಿತ್ರದಲ್ಲಿ ನಟಿಸಿದ್ದು, ಬಹಳ ಖುಷಿ ಕೊಟ್ಟಿದೆ. ಕನ್ನಡದಲ್ಲಿ ಇದು ನನ್ನ ಮೊದಲ ಸಿನಿಮಾ. ತುಳುವಿನಲ್ಲಿ ಪ್ರಶಾಂತ್ ಸರ್ ಜೊತೆ ಸಿನಿಮಾ ಮಾಡಿದ್ದೇನೆ. ಆ ಚಿತ್ರಕ್ಕೆ ಒಳ್ಳೆ ರೆಸ್ಪಾನ್ಸ್ ಸಿಕ್ಕಿದೆ. ಈ ಚಿತ್ರಕ್ಕೂ ನಿಮ್ಮ ಬೆಂಬಲ ಇರಲಿ ಎಂದು ಕೇಳಿಕೊಂಡರು. ನಿರ್ದೇಶಕ ವೈಭವ್ ಪ್ರಶಾಂತ್ ಮಾತನಾಡಿ, ಇದು ನನ್ನ ನಾಲ್ಕನೇ ಸಿನಿಮಾ. ಯುವಜನತೆಗೆ ಒಳ್ಳೆ ಸಂದೇಶ ಕೊಡುವ ಚಿತ್ರವಿದು. ಅಪ್ಪ ಅಮ್ಮನಿಗೆ ಸುಳ್ಳು ಹೇಳಿ ತಪ್ಪು ದಾರಿ ಹಿಡಿಯದಿರಿ ಎಂಬ ಉದ್ದೇಶವನ್ನಿಟ್ಟುಕೊಂಡು ಸಿನಿಮಾ ಮಾಡಲಾಗಿದೆ. ಶೂಟಿಂಗ್ ಕಂಪ್ಲೀಟ್ ಆಗಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸ ಕೂಡ ಬಹುತೇಕ ಮುಗಿದಿದೆ ಎಂದು ತಿಳಿಸಿದರು.
ಕ್ಲಾಂತ ಸಸ್ಪೆನ್ಸ್ ಥ್ರಿಲ್ಲರ್ ಜಾನರ್ ಚಿತ್ರವಾಗಿದ್ದು, ಈಗಾಗಲೇ ಶೂಟಿಂಗ್ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಎಂ ವಿಘ್ನೇಶ್ ನಾಯಕನಾಗಿ, ಸಂಗೀತ ಭಟ್ ನಾಯಕಿಯಾಗಿ ನಟಿಸುತ್ತಿದ್ದು, ಉಳಿದಂತೆ ಶೋಭ್ ರಾಜ್, ವೀಣಾ ಸಂಗೀತ , ಕಾಮಿಡಿ ಕಿಲಾಡಿಯ ದೀಪಿಕಾ, ಪ್ರವೀಣ್ ಜೈನ್, ಯುವ ಹಾಗೂ ಸ್ವಪ್ನ, ತಿಮ್ಮಪ್ಪ ಕುಲಾಲ್ ಅಭಿನಯಿಸಿದ್ದಾರೆ.
ಇದನ್ನೂ ಓದಿ: ಚುನಾವಣಾ ಅಖಾಡದಲ್ಲಿ ಆ್ಯಕ್ಷನ್ ಪ್ರಿನ್ಸ್: ನಿಖಿಲ್ ಕುಮಾರಸ್ವಾಮಿ ಪರ ಧ್ರುವ ಸರ್ಜಾ ಪ್ರಚಾರ
ಈ ಚಿತ್ರಕ್ಕೆ ಎಸ್.ಪಿ ಚಂದ್ರಕಾಂತ್ ಸಂಗೀತ, ಪಿಆರ್ ಸೌಂದರ್ ರಾಜ್ ಸಂಕಲನ, ಮೋಹನ್ ಲೋಕನಾಥ್ ಛಾಯಾಗ್ರಹಣ ಇದೆ. ಸಂತೋಷ್ ನಾಯ್ಕ್, ವರಾಹ ರೂಪಂ ಖ್ಯಾತಿಯ ಶಶಿರಾಜ್ ಕಾವೂರ್, ವೈಭವ್ ಪ್ರಶಾಂತ್ ಸಾಹಿತ್ಯದ ಹಾಡುಗಳಿಗಿದ್ದು, ವಿನೋದ್ ಸ್ಟಂಟ್, ಮಹೇಶ್ ದೇವ್ ಸಂಭಾಷಣೆ ಸಿನಿಮಾಕ್ಕಿದೆ. ಎರಡು ಹಾಡುಗಳಿಗೆ ರಘು ಅವರ ನೃತ್ಯ ಸಂಯೋಜನೆ ಇದೆ . ಅನುಗ್ರಹ ಪವರ್ ಮೀಡಿಯಾ ಬ್ಯಾನರ್ ಅಡಿ ಉದಯ್ ಅಮ್ಮಣ್ಣಾಯ ಬಂಡವಾಳ ಹೂಡಿದ್ದು, ಅರುಣ್ ಗೌಡ, ಪ್ರದೀಪ್ ಗೌಡ ಸಹ ನಿರ್ಮಾಪಕರಾಗಿ ಆಗಿ ಕೆಲಸ ನಿರ್ವಹಿಸಿದ್ದಾರೆ.
ಇದನ್ನೂ ಓದಿ: ವೀಕೆಂಡ್ ವಿತ್ ರಮೇಶ್: ಸಾಧಕರ ಸೀಟ್ನಲ್ಲಿ ಸಿಹಿಕಹಿ ಚಂದ್ರು, ಶಿಕ್ಷಣ ತಜ್ಞ ಗುರುರಾಜ ಕರಜಗಿ