ನಟ ಡಾರ್ಲಿಂಗ್ ಕೃಷ್ಣ, ಸಂಗೀತ ಶೃಂಗೇರಿ ಹಾಗು ರೋಹಿಣಿ ಪ್ರಕಾಶ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಸಿನಿಮಾ ಲಕ್ಕಿಮ್ಯಾನ್. ಟೈಟಲ್ ನಿಂದಲೇ ಸ್ಯಾಂಡಲ್ ವುಡ್ ನಲ್ಲಿ ಸುದ್ದಿಯಾಗಿರುವ ಲಕ್ಕಿಮ್ಯಾನ್ ಸಿನೆಮಾದ ಟೀಸರ್ ಅನಾವರಣಗೊಂಡಿದೆ. ರಾಜರತ್ನ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾಗು ಇಂಡಿಯನ್ ಮೈಕಲ್ ಜಾಕ್ಸನ್ ಎಂದು ಕರೆಯಿಸಿಕೊಳ್ಳುವ ಪ್ರಭುದೇವ ಒಟ್ಟಿಗೆ ನೃತ್ಯ ಮಾಡಿರುವುದು ಈ ಚಿತ್ರದ ವಿಶೇಷತೆ. ಈ ಚಿತ್ರದಲ್ಲಿ ಪುನೀತ್ ರಾಜ್ ಕುಮಾರ್ ಅತಿಥಿ ಪಾತ್ರ ಮಾಡಿದ್ದು, ದೇವರ ರೂಪದಲ್ಲಿ ಕಾಣಿಸಿಕೊಂಡಿದ್ದಾರೆ. ಸದ್ಯ ಬಿಡುಗಡೆಯಾಗಿರುವ ಲಕ್ಕಿಮ್ಯಾನ್ ಟೀಸರ್ ನಲ್ಲಿ ಪುನೀತ್ ರಾಜ್ ಕುಮಾರ್ ದೇವಮಾನವರಂತೆ ಕಾಣುತ್ತಾರೆ.
ಈ ಚಿತ್ರವನ್ನು ಮೊದಲ ಬಾರಿಗೆ ಪ್ರಭುದೇವ ಅವರ ಸಹೋದರ ನಾಗೇಂದ್ರಪ್ರಸಾದ್ ಅವರು ನಿರ್ದೇಶನ ಮಾಡಿದ್ದಾರೆ. ತಮಿಳಿನ ಓ ಮೈ ಕಡವುಲೆ ಚಿತ್ರದ ಎಳೆಯನ್ನಿಟ್ಟುಕೊಂಡು ನಿರ್ದೇಶಕ ನಾಗೇಂದ್ರಪ್ರಸಾದ್ ಅವರು ಒಂದು ಅದ್ಭುತವಾದ ಫ್ಯಾಂಟಸಿ ಡ್ರಾಮಾ ಕಥಾಹಂದರವನ್ನು ಲಕ್ಕಿ ಮ್ಯಾನ್ ಚಿತ್ರದಲ್ಲಿ ನಿರೂಪಿಸಿದ್ದಾರೆ. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಡಾರ್ಲಿಂಗ್ ಕೃಷ್ಣ ಅವರ ಜೊತೆ ರೋಷನಿ ಪ್ರಕಾಶ್ ನಾಯಕಿಯಾಗಿ ನಟಿಸಿದ್ದಾರೆ. ಇದರ ಜೊತೆಗೆ ರೋಷನಿ ಪ್ರಕಾಶ್, ಆರ್ಯ, ರಂಗಾಯಣ ರಘು, ಸಾಧುಕೋಕಿಲ, ನಾಗಭೂಷಣ್, ಸುಂದರ್ ರಾಜ್, ಸುಧಾ ಬೆಳವಾಡಿ, ಮಾಳವಿಕಾ ಮುಂತಾದ ಕಲಾವಿದರು ಚಿತ್ರದಲ್ಲಿದ್ದಾರೆ.
- " class="align-text-top noRightClick twitterSection" data="">
ಜೀವ ಶಂಕರ್ ಅವರ ಛಾಯಾಗ್ರಹಣ ಹಾಗೂ ವಿಜಯ್ ಹಾಗು ವಿಕ್ಕಿ ಅವರ ಸಂಗೀತ ಈ ಚಿತ್ರಕ್ಕಿದೆ. ತಮಿಳು ನಿರ್ಮಾಪಕರಾದ ಮೀನಾಕ್ಷಿ ಸುಂದರಂ ಹಾಗು ಆರ್ ಸುಂದರಮ್ ಕಾಮರಾಜ್ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಈಗಾಗಲೇ ತನ್ನ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಮುಗಿಸಿಕೊಂಡು ಬಿಡುಗಡೆಗೆ ಸಿದ್ಧವಾಗಿರುವ ಲಕ್ಕಿಮ್ಯಾನ್ ಚಿತ್ರ, ಬರುವ ಆಗಸ್ಟ್ ತಿಂಗಳಲ್ಲಿ ತೆರೆಗೆ ತರಲು ಸಿದ್ಧತೆ ನಡೆಸುತ್ತಿದೆ.