ETV Bharat / entertainment

ಮಾಫಿಯಾ: ಪ್ರಜ್ವಲ್ ದೇವರಾಜ್-ಅದಿತಿ ಪ್ರಭುದೇವ ಜೋಡಿಯ ಸಾಂಗ್​ ರಿಲೀಸ್ - ಮಾಫಿಯಾ ಸಿನಿಮಾ ಸಾಂಗ್​

Mafia: ಪ್ರಜ್ವಲ್ ದೇವರಾಜ್​​ ಮತ್ತು ಅದಿತಿ ಪ್ರಭುದೇವ ನಟನೆಯ 'ಮಾಫಿಯಾ' ಸಿನಿಮಾದ 'ತುಂಬನೇ ಕೇಳಲಾರೆ...' ಸಾಂಗ್​ ರಿಲೀಸ್​ ಆಗಿದೆ.

Mafia movie song
ಮಾಫಿಯಾ ಸಿನಿಮಾ ಸಾಂಗ್​ ರಿಲೀಸ್
author img

By ETV Bharat Karnataka Team

Published : Jan 4, 2024, 7:33 PM IST

'ಮಾಫಿಯಾ'.. ಕನ್ನಡ ಚಿತ್ರರಂಗದಲ್ಲಿ ಟೈಟಲ್ ಹಾಗೂ ಪೋಸ್ಟರ್​ನಿಂದಲೇ ಕ್ರೇಜ್ ಹುಟ್ಟಿಸಿರೋ ಸಿನಿಮಾ. ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಖಾಕಿ ತೊಟ್ಟು ನಟಿಸಿರುವ 'ಮಾಫಿಯಾ' ಚಿತ್ರ ಬಹುತೇಕ ಶೂಟಿಂಗ್ ಮುಗಿಸಿ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ. ಈ ಮಧ್ಯೆ ಚಿತ್ರದ ಹಾಡೊಂದನ್ನು ಚಿತ್ರತಂಡ ಅನಾವರಣಗೊಳಿಸಿದೆ. 'ತುಂಬನೇ ಕೇಳಲಾರೆ..' ಹಾಡು ಉತ್ತಮ ವೀಕ್ಷಣೆ ಪಡೆದುಕೊಳ್ಳುತ್ತಿದೆ.

ಈಗಾಗಲೇ ಟೀಸರ್ ಮೂಲಕ ಗಮನ ಸೆಳೆದಿದ್ದ ನಟ ಪ್ರಜ್ವಲ್ ದೇವರಾಜ್​​ ಅವರೀಗ ರೊಮ್ಯಾಂಟಿಕ್ ಸಾಂಗ್​​ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದಾರೆ. ಈ ಚಿತ್ರದಲ್ಲಿ ಪ್ರಜ್ವಲ್‌ಗೆ ಜೋಡಿಯಾಗಿ ಅದಿತಿ ಪ್ರಭುದೇವ ಬಣ್ಣ ಹಚ್ಚಿದ್ದಾರೆ. ಇತ್ತೀಚಿಗಷ್ಟೇ ತಾಯಿಯಾಗುತ್ತಿರುವ ಸಂಭ್ರಮ ಹಂಚಿಕೊಂಡಿದ್ದ ಅದಿತಿ ಪ್ರಭುದೇವ ಅವರ ಮುಂದಿನ ಬಹುನಿರೀಕ್ಷಿತ ಸಿನಿಮಾವಿದು.

Mafia movie
ಪ್ರಜ್ವಲ್ ದೇವರಾಜ್-ಅದಿತಿ ಪ್ರಭುದೇವ

'ಮಾಫಿಯಾ' ಚಿತ್ರ ಮಮ್ಮಿ ಖ್ಯಾತಿಯ ನಿರ್ದೇಶಕ ಲೋಹಿತ್ ಸಾರಥ್ಯದಲ್ಲಿ ಮೂಡಿ ಬರುತ್ತಿದೆ. ಲೋಹಿತ್ ಮತ್ತು ಪ್ರಜ್ವಲ್ ದೇವರಾಜ್​ ಕಾಂಬಿನೇಷನ್​ನ ಮೊದಲ ಚಿತ್ರ ಇದಾಗಿದೆ. ಹಾಗಾಗಿ ಸಿನಿಮಾ ಮೇಲಿನ ನಿರೀಕ್ಷೆ ಕೊಂಚ ಹೆಚ್ಚೇ ಇದೆ. ಸದ್ಯ ರಿಲೀಸ್ ಆಗಿರುವ 'ತುಂಬನೇ ಕೇಳಲಾರೆ..' ಸಾಲುಗಳಿಂದ ಪ್ರಾರಂಭವಾಗುವ ಈ ರೊಮ್ಯಾಂಟಿಕ್ ಹಾಡು ಹರಿಚರಣ್ ಧ್ವನಿಯಲ್ಲಿ ಮೂಡಿ ಬಂದಿದೆ. ಚಿತ್ರಕ್ಕೆ ಅನೂಪ್ ಸೀಳಿನ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಪ್ರಮೋದ್ ಮರವಂತೆ ಅವರ ಸಾಹಿತ್ಯ ಈ ಹಾಡಿಗಿದೆ. ಪ್ರಜ್ವಲ್ ಮತ್ತು ಅದಿತಿ ಅವರನ್ನು ಈ ರೊಮ್ಯಾಂಟಿಕ್ ಹಾಡಿನಲ್ಲಿ ನೋಡಿದ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ.

Mafia movie
ಶೂಟಿಂಗ್​ ಸೆಟ್​ನಲ್ಲಿ ಪ್ರಜ್ವಲ್ ದೇವರಾಜ್...

'ಮಾಫಿಯಾ' ಈಗಾಗಲೇ ಚಿತ್ರೀಕಣ ಮುಗಿಸಿ ರಿಲೀಸ್‌ಗೆ ರೆಡಿಯಾಗಿರುವ ಸಿನಿಮಾ. ಟೀಸರ್ ಮತ್ತು ಹಾಡಿನ ಮೂಲಕ ಪ್ರೇಕ್ಷಕರ ಗಮನ ಸೆಳೆದಿರುವ ಈ ಸಿನಿಮಾ ಶೀಘ್ರದಲ್ಲೇ ಚಿತ್ರಮಂದಿರಕ್ಕೆ ಎಂಟ್ರಿ ಕೊಡಲಿದೆ. ಚಿತ್ರಕ್ಕೆ ಕುಮಾರ್ ಬಂಡವಾಳ ಹೂಡಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಸಿನಿಮಾ ಮುಂದಿನ ತಿಂಗಳು ತೆರೆಕಾಣುವ ಸಾಧ್ಯತೆ ಇದೆ.

  • " class="align-text-top noRightClick twitterSection" data="">

ಇದನ್ನೂ ಓದಿ: ಮಾಳವಿಕ ನಾಯರ್ ಜನ್ಮದಿನಕ್ಕೆ 'ಕೃಷ್ಣಂ ಪ್ರಣಯ ಸಖಿ' ಪೋಸ್ಟರ್ ಬಿಡುಗಡೆ

ಗ್ಲ್ಯಾಮರ್​ ಜೊತೆಗೆ ಉತ್ತಮ ಅಭಿನಯದಿಂದ ಗಮನ ಸೆಳೆದಿರುವ ನಟಿ ಅದಿತಿ ಪ್ರಭುದೇವ ಹೊಸ ವರ್ಷದಂದು ಸಿಹಿ ಸುದ್ದಿ ಹಂಚಿಕೊಂಡಿದ್ದರು. ಐದು ತಿಂಗಳ ಗರ್ಭಿಣಿ. ಈ ಸಾಲಿನಲ್ಲಿ ತಾಯಿ ಆಗುತ್ತಿದ್ದೇನೆಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು. ಪತಿ ಜೊತೆ ಕ್ಲಿಕ್ಕಿಸಿಕೊಂಡಿರುವ ಫೋಟೋಗಳನ್ನು ಹಂಚಿಕೊಂಡಿದ್ದರು.

ಇದನ್ನೂ ಓದಿ: 40 ರೂ.ಗೆ 'ಕಾಟೇರ' ಲಿಂಕ್​ ಶೇರ್: ಪೈರಸಿ ಆರೋಪಿ ಅರೆಸ್ಟ್

2022ರ ನವೆಂಬರ್​ ಕೊನೆಯಲ್ಲಿ ಉದ್ಯಮಿ ಯಶಸ್ ಜೊತೆ ದಾಂಪತ್ಯ ಜೀವನ ಆರಂಭಿಸಿದ್ದು, ಸದ್ಯ ಮಾದರಿ ದಂಪತಿಯಾಗಿ ಗುರುತಿಸಿಕೊಂಡಿದ್ದಾರೆ. ಕಿರುತೆರೆಯಿಂದ ವೃತ್ತಿಜೀವನ ಆರಂಭಿಸಿದ ಬೆಣ್ಣೆನಗರಿ ದಾವಣಗೆರೆಯ ಚೆಲುವೆ ಧೈರ್ಯಂ ಮೂಲಕ ಹಿರಿತೆರೆ ಪ್ರವೇಶಿಸಿದರು. ಬಳಿಕ ಹಲವು ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದಾರೆ. ಸದ್ಯ ಮಾಫಿಯಾ ಮೂಲಕ ಸದ್ದು ಮಾಡುತ್ತಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.