ETV Bharat / entertainment

'ಮಾರ್ಗರೇಟ್ ಲವರ್ ಆಫ್ ರಾಮಾಚಾರಿ'ಯಾಗಿ ಅಭಿಲಾಷ್​; ಸಾಥ್​ ಕೊಟ್ಟ ಡಾಲಿ ಧನಂಜಯ್​

ಯುವ ನಟ ಅಭಿಲಾಷ್​ 'ಮಾರ್ಗರೇಟ್ ಲವರ್ ಆಫ್ ರಾಮಾಚಾರಿ'ಯಾಗಿ ತೆರೆ ಮೇಲೆ ಬರಲಿದ್ದಾರೆ. ಮೇ 15ರಿಂದ ಚಿತ್ರದ ಶೂಟಿಂಗ್​​ ಪ್ರಾರಂಭಗೊಳ್ಳಲಿದೆ.

Margaret lover of Ramachari
author img

By

Published : Apr 24, 2023, 3:28 PM IST

ಕನ್ನಡ ಚಿತ್ರರಂಗದಲ್ಲಿ ಹೊಸ ಮೈಲಿಗಲ್ಲು ಸೃಷ್ಟಿಸಿದ ಸಿನಿಮಾ 'ನಾಗರಹಾವು'. ಈ ಚಿತ್ರದ ರಾಮಾಚಾರಿ ಹಾಗೂ ಮಾರ್ಗರೇಟ್​ ಪಾತ್ರಗಳು ಇಂದಿಗೂ ಪ್ರೇಕ್ಷಕರ ಅಚ್ಚುಮೆಚ್ಚು. ಇದೇ ಚಿತ್ರದ ಪಾತ್ರಗಳನ್ನು ಇಟ್ಟುಕೊಂಡು ಬಂದ ರಾಮಾಚಾರಿ ಮತ್ತು ಮಿಸ್ಟರ್ ಅಂಡ್ ಮಿಸೆಸ್ ರಾಮಾಚಾರಿ ಸಿನಿಮಾ ಸೂಪರ್ ಸಕ್ಸಸ್ ಕಂಡಿದೆ. ಇದೀಗ ನಾಗರಹಾವು ಸಿನಿಮಾದ ಪಾತ್ರಗಳಿಂದ ಸ್ಫೂರ್ತಿ ಪಡೆದು ಹೊಸ ಸಿನಿಮಾವೊಂದು ತೆರೆ ಮೇಲೆ ಬರಲು ಸಜ್ಜಾಗಿದೆ. ಈ ಚಿತ್ರಕ್ಕೆ 'ಮಾರ್ಗರೇಟ್ ಲವರ್ ಆಫ್ ರಾಮಾಚಾರಿ' ಎಂದು ಟೈಟಲ್ ಇಡಲಾಗಿದೆ.

ಯುವ ಪ್ರತಿಭೆ ಅಭಿಲಾಷ್​ ನಾಯಕನಾಗಿ ಹಾಗೂ ಸೋನಲ್ ಮೊಂಥೆರೋ ನಾಯಕಿಯಾಗಿ ನಟಿಸುತ್ತಿರುವ ಈ ಚಿತ್ರದ ಮುಹೂರ್ತ ಕಾರ್ಯಕ್ರಮ ಇತ್ತೀಚೆಗೆ ಬೆಂಗಳೂರಿನ ಬಂಡೇ ಮಹಾಕಾಳಿ‌ ಸನ್ನಿಧಿಯಲ್ಲಿ ನೆರವೇರಿತು. ನಟ ರಾಕ್ಷಸ ಡಾಲಿ ಧನಂಜಯ್ ಚಿತ್ರತಂಡಕ್ಕೆ ಸಾಥ್ ಕೊಟ್ಟರು. ಈ ವೇಳೆ ಮಾತನಾಡಿದ ಡಾಲಿ, "ಅಭಿ ಬಡವ ರಾಸ್ಕಲ್, ಹೊಯ್ಸಳದಲ್ಲಿ ಸಣ್ಣ ಪಾತ್ರ ಮಾಡಿದ್ದಾನೆ. ಆತ ಅಭಿಮಾನಿಯಾಗಿ ಪರಿಚಯ, ಈಗ ಹೀರೋ ಆಗುತ್ತಿದ್ದಾನೆ. ಸುಮಾರು ವರ್ಷಗಳ ಪ್ರಯತ್ನವಿದು. ಇಡೀ ತಂಡಕ್ಕೆ ಒಳ್ಳೆಯದಾಗಲಿ" ಎಂದು ಶುಭಹಾರೈಸಿದರು.

ಇನ್ನು, ಯುವ ನಟ ಅಭಿಲಾಷ್ ಮಾತನಾಡಿ, "ಇವತ್ತು ನನಗೆ ತುಂಬಾ ಎಮೋಷನಲ್ ಮೂಮೆಂಟ್. ನಾನಿಂದು ಕಷ್ಟಪಟ್ಟು ಇಲ್ಲಿ ಕೂತಿದ್ದೇನೆ. ಇದಕ್ಕೆ ಮೂಲ ಕಾರಣ ನಿರ್ಮಾಪಕರು. ನನ್ನ ಒದ್ದಾಟಗಳನ್ನು ಬಹಳ ಹತ್ತಿರದಿಂದ ನೋಡಿದ್ದಾರೆ. ಇವರೇ ನನ್ನ ಅನ್ನದಾತರು. ಧನಂಜಯ್ ಅಣ್ಣ ಹೇಳಿಕೊಟ್ಟ ಮಾರ್ಗದರ್ಶನಲ್ಲಿ ನಾನು ನಡೆಯುತ್ತಿದ್ದೇನೆ. ಈಗ ಅವರು ನನ್ನ ಚಿತ್ರಕ್ಕೆ ಹಾರೈಸಿರುವುದು ಖುಷಿಕೊಟ್ಟಿದೆ" ಎಂದರು.

Margaret lover of Ramachari
ಚಿತ್ರತಂಡದ ಜೊತೆ ಡಾಲಿ ಧನಂಜಯ್​

‌ನಿರ್ದೇಶಕ ಗಿರಿಧರ್ ಕುಂಬಾರ್ ಮಾತನಾಡಿ, "ಈ ಚಿತ್ರದ ಮೂಲಕ ಇವತ್ತಿನ ಸಮಾಜಕ್ಕೆ ಬೇಕಿರುವ ಸಂದೇಶ ಕೊಡುತ್ತೇವೆ. ನಾಗರಹಾವು ಸಿನಿಮಾದ ಪಾತ್ರಗಳು ಲೆಜೆಂಡ್ ಪಾತ್ರಗಳು. ಅವುಗಳನ್ನು ನಾವು ಮುಟ್ಟಲಾಗುವುದಿಲ್ಲ. ಒಬ್ಬ ಸಾಮಾನ್ಯ ಹುಡುಗನಿಗೆ ಶ್ರೀಮಂತ ಹುಡುಗಿ ಸಿಕ್ಕಾಗ ಏನಾಗುತ್ತದೆ ಅನ್ನೋದೆ ಕಥೆ" ಎಂದು ತಿಳಿಸಿದರು. ಇನ್ನು ನಿರ್ಮಾಪಕರಾದ ಹರೀಶ್ ಮಾತಾನಾಡಿ, "ಬಹಳ ಸಂತೋಷ ಆಗಿದೆ. ಧನಂಜಯ್ ಅಣ್ಣ ಬಂದಿರುವುದು ಖುಷಿಕೊಟ್ಟಿದೆ. ಅವರು ಯುವಕರಿಗೆ ಎಷ್ಟು ಪ್ರೇರಣೆ ಕೊಡುತ್ತಾರೆ ಎಂಬುದು ಗೊತ್ತಿದೆ. ಎಲ್ಲವೂ ಹೊಸಮುಖ. ಧನಂಜಯ್ ಅಣ್ಣ, ಸುರೇಶ್ ಅಣ್ಣ, ಅಜಯ್ ಅಣ್ಣ ಮಾರ್ಗದರ್ಶನದಲ್ಲಿ ಹೋಗುತ್ತೇವೆ" ಎಂದು ಹೇಳಿದರು.

ರಂಗಭೂಮಿ ಹಿನ್ನೆಲೆ ಹೊಂದಿರುವ ನಟ ಅಭಿಲಾಶ್​ ‘ಮಾರ್ಗರೇಟ್​ ಲವರ್​ ಆಫ್​​ ರಾಮಾಚಾರಿ’ ಸಿನಿಮಾ ಮೂಲಕ ಹೀರೋ ಆಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ‘ಕೆಜಿಎಫ್​’, ‘ಲವ್​ ಮಾಕ್ಟೇಲ್​’, ‘ಬಡವ ರಾಸ್ಕಲ್​’, ‘ಗುರುದೇವ್​ ಹೊಯ್ಸಳ’ ಮುಂತಾದ ಸಿನಿಮಾಗಳಲ್ಲಿ ಅಭಿಲಾಶ್​ ನಟಿಸಿದ್ದಾರೆ. ನಾಗರಹಾವು ಸಿನಿಮಾದಲ್ಲಿನ ಪಾತ್ರಗಳನ್ನು ಹೋಲುವ ರೀತಿಯ ಹೆಸರುಗಳನ್ನೇ ‘ಮಾರ್ಗರೇಟ್​ ಲವರ್​ ಆಫ್​ ರಾಮಾಚಾರಿ’ ಸಿನಿಮಾದಲ್ಲಿಯೂ ಇಡಲಾಗಿದೆ.

ಅಭಿಲಾಶ್​ ​ರಾಮಾಚಾರಿ ಅಲಿಯಾಸ್​ ರಾಮು ಎಂಬ ಪಾತ್ರ ಮಾಡಲಿದ್ದಾರೆ. ನಟಿ ಸೋನಲ್​ ಮೊಂಥೆರೋ ಮೀರಾ ರಾಘವ್​ ರಾಮ್​ ಅಲಿಯಾಸ್​ ಮ್ಯಾಗಿ ಎಂಬ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಯಶ್​ ಶೆಟ್ಟಿ ಜಯಂತ್​ ಅಲಿಯಾಸ್​ ಜಲೀಲಾಗಿ ಕಾಣಿಸಿಕೊಳ್ಳಲಿದ್ದಾರೆ. ಅನುಭವಿ ನಟರಾದ ಅವಿನಾಶ್​ ಮತ್ತು ರವಿಶಂಕರ್​ ಮುಂತಾದವರು ಕೂಡ ಚಿತ್ರದಲ್ಲಿ ಇದ್ದಾರೆ. ವನಿತಾ ಎಚ್​​.ಎನ್​ ಅವರ ‘ನಿಹಾಂತ್​ ಪ್ರೊಡಕ್ಷನ್ಸ್​’ ಮೂಲಕ ‘ಮಾರ್ಗರೇಟ್​ ಲವರ್​ ಆಫ್​ ರಾಮಾಚಾರಿ’ ಸಿನಿಮಾ ನಿರ್ಮಾಣ ಮಾಡಲಾಗುತ್ತಿದೆ. ಈ ಚಿತ್ರಕ್ಕೆ ವಾಸುಕಿ ವೈಭವ್​ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಮೇ 15 ರಂದು ಚಿತ್ರದುರ್ಗದಲ್ಲಿ ಶೂಟಿಂಗ್ ಶುರುವಾಗಲಿದೆ.

ಇದನ್ನೂ ಓದಿ: ಅಣ್ಣಾವ್ರ 94ನೇ ಜನ್ಮದಿನ: ದೊಡ್ಮನೆ ವಂಶವೃಕ್ಷದ ಹಿಂದಿರುವ 'ರಾಜಕುಮಾರ'

ETV Bharat Logo

Copyright © 2024 Ushodaya Enterprises Pvt. Ltd., All Rights Reserved.