ETV Bharat / entertainment

5 ವರ್ಷದ ಪುಟಾಣಿಯಿಂದ ಅನಾವರಣಗೊಂಡಿತು 'ಮಾಯಾನಗರಿ'ಯ 'ಲಚ್ಚಿ ಲಚ್ಚಿ' ಹಾಡು - ಈಟಿವಿ ಭಾರತ ಕನ್ನಡ

Mayanagari song released: ಅನೀಶ್ ತೇಜೇಶ್ವರ್ ನಟನೆಯ 'ಮಾಯಾನಗರಿ' ಚಿತ್ರದ 'ಲಚ್ಚಿ ಲಚ್ಚಿ' ಹಾಡು ಬಿಡುಗಡೆಯಾಗಿದೆ.

mayanagari movie lacchi lacchi song released
ಅನೀಶ್ ತೇಜೇಶ್ವರ್ ನಟನೆಯ 'ಮಾಯಾನಗರಿ' ಚಿತ್ರ
author img

By ETV Bharat Karnataka Team

Published : Nov 20, 2023, 1:24 PM IST

ವಿಭಿನ್ನ ಶೈಲಿಯ ಹಾರರ್, ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರ 'ಮಾಯಾನಗರಿ'. ಆಲ್ ಮೋಸ್ಟ್ ಚಿತ್ರೀಕರಣ ಮುಗಿಸಿ ಬಿಡುಗಡೆ ಸಜ್ಜಾಗಿರುವ ಈ ಸಿನಿಮಾದ 'ಲಚ್ಚಿ ಲಚ್ಚಿ' ಹಾಡು ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಸೋಷಿಯಲ್​ ಮೀಡಿಯಾ ಸ್ಟಾರ್, ರೀಲ್ಸ್​ ಮೂಲಕ ಗಮನ ಸೆಳೆಯುವ ಲಕ್ಷಾಂತರ ಫಾಲೋವರ್ಸ್ ಸಂಪಾದಿಸಿರುವ 5 ವರ್ಷದ ಮಗು ನಿಶಿತಾ ಕೈಲಿ ಈ ಹಾಡನ್ನು ಬಿಡುಗಡೆಗೊಳಿಸಲಾಯಿತು.

ಅನೀಶ್ ತೇಜೇಶ್ವರ್, ತೇಜು ಹಾಗೂ ಶ್ರಾವ್ಯ ರಾವ್ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಚಿತ್ರಕ್ಕೆ ಶಂಕರ್ ಆರಾಧ್ಯ ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್ ಕಟ್ ಹೇಳಿದ್ದಾರೆ. ಚಿತ್ರರಂಗದಲ್ಲಿ ನಡೆಯುವ ಒಂದಷ್ಟು ಸತ್ಯ ಘಟನೆಗಳನ್ನು ಇಟ್ಟುಕೊಂಡು ಶಂಕರ್ ಆರಾಧ್ಯ ಈ ಚಿತ್ರವನ್ನು ನಿರೂಪಿಸಿದ್ದಾರೆ. 'ಮಾಯಾನಗರಿ' ಇದೀಗ ಬಿಡುಗಡೆಗೆ ಸಿದ್ಧವಾಗಿದ್ದು, ಇತ್ತೀಚೆಗಷ್ಟೇ ಬಿಡುಗಡೆಯಾದ ಹಾಡು ವೈರಲ್ ಆಗುತ್ತಿದೆ.

mayanagari movie lacchi lacchi song released
ಅನೀಶ್ ತೇಜೇಶ್ವರ್ ನಟನೆಯ 'ಮಾಯಾನಗರಿ' ಚಿತ್ರ

ಈ ಬಗ್ಗೆ ಮಾತನಾಡಿದ ನಿರ್ದೇಶಕ ಶಂಕರ್​ ಆರಾಧ್ಯ, "ಈ ಹಾಡು ನಮ್ಮ ಚಿತ್ರಕ್ಕೆ ಟ್ರಂಪ್ ಕಾರ್ಡ್ ಆಗುತ್ತೆ ಎಂದೇ ಕಲರ್​ಫುಲ್​ ಆಗಿಯೇ ಶೂಟ್​ ಮಾಡಿದ್ದೇವೆ. ಕಂಠೀರವ ಸ್ಟುಡಿಯೋ ಮತ್ತು ಇನ್ನೋವೇಟಿವ್​ ಫಿಲ್ಮ್​ ಸಿಟಿಯಲ್ಲಿ 6 ದಿನ ಹಾಡನ್ನು ಚಿತ್ರೀಕರಣ ಮಾಡಿದ್ದೇವೆ. ಹಾರರ್, ಆ್ಯಕ್ಷನ್, ಫ್ಯಾಮಿಲಿ ಸೆಂಟಿಮೆಂಟ್ ಕಥೆ ಇದಾಗಿದೆ. ಚಿತ್ರದಲ್ಲಿ ನಾಯಕ, ಶಂಕರ್​ ನಾಗ್​ ಅವರ ಅಭಿಮಾನಿಯಾಗಿದ್ದಾರೆ. ಚಿತ್ರರಂಗದಲ್ಲಿ ದೊಡ್ಡ ನಿರ್ದೇಶಕನಾಗಲು ಹೋರಾಟ ನಡೆಸುವ ಆತನಿಗೆ ಕೊನೆಗೂ ಒಂದು ಅವಕಾಶ ಸಿಕ್ಕಿ ಮಾಯಾನಗರಿ ಎಂಬ ಸ್ಥಳಕ್ಕೆ ಭೇಟಿ ನೀಡಬೇಕಾಗುತ್ತದೆ. ಅಲ್ಲಿ ಆತನ ಪಾತ್ರವೇ ಮುಖ್ಯವಾಗುವ ಸಂದರ್ಭ ಬರುತ್ತದೆ. ಹೀಗೆ ಕುತೂಹಲಕಾರಿಯಾಗಿ ಸಾಗುವ ಚಿತ್ರಕ್ಕೆ ಬೆಂಗಳೂರು, ಶಿವಮೊಗ್ಗ, ಸಾಗರ, ಚಿಕ್ಕಮಗಳೂರು, ಭದ್ರಾವತಿ ಸುತ್ತಮುತ್ತ ಸುಮಾರು 65 ದಿನಗಳ ಕಾಲ ಚಿತ್ರೀಕರಣ ಮಾಡಿದ್ದೇವೆ. ವಿಶೇಷವಾಗಿ ಹಿರಿಯ ನಟ ದ್ವಾರಕೀಶ್​ ಅವರು ರಿಯಲ್​ ಲೈಫ್​ ಪಾತ್ರವನ್ನೇ ಮಾಡಿದ್ದಾರೆ" ಎಂದು ತಿಳಿಸಿದರು.

ಬಳಿಕ ನಾಯಕ ನಟ ಅನೀಶ್ ತೇಜೇಶ್ವರ್ ಮಾತನಾಡಿ, "ನಾನು ತುಂಬಾ ಇಷ್ಟಪಟ್ಟು ಮಾಡಿದಂತಹ ಪಾತ್ರವಿದು. ದ್ವಾರಕೀಶ್ ಅವರಂತ ನಟರ ಜೊತೆ ಸ್ಕ್ರೀನ್ ಶೇರ್ ಮಾಡಿದ್ದು ನನ್ನ ಅದೃಷ್ಟ. ಡೈರೆಕ್ಟರ್ ಆಗಬೇಕೆಂದು ಕನಸು ಕಾಣೋ ಹುಡುಗನ ಪಾತ್ರ ಮಾಡಿದ್ದೇನೆ" ಎಂದರು. "ಚಿತ್ರದಲ್ಲಿ ನಾನು ಮಲ್ಲಿಕಾ ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ನನ್ನ‌ ಕೆರಿಯರ್​ನಲ್ಲೇ ಒಂದು ಬೆಸ್ಟ್ ಪಾತ್ರ. ತುಂಬಾ ಶೇಡ್ಸ್ ಇದೆ" ಎಂದು ನಟಿ ಶ್ರಾವ್ಯ ರಾವ್ ಹೇಳಿದರು.

ಇನ್ನು ಮಾಯಾನಗರಿ ಚಿತ್ರದಲ್ಲಿ ಶರತ್ ಲೋಹಿತಾಶ್ವ, ಅವಿನಾಶ್, ಸುಚೇಂದ್ರ ಪ್ರಸಾದ್, ಎಡಕಲ್ಲು ಗುಡ್ಡದ ಚಂದ್ರಶೇಖರ್, ಚಿಕ್ಕಣ್ಣ, ಗಿರಿ ದಿನೇಶ್ ಹಾಗೂ ನಿಹಾರಿಕಾ ನಟಿಸಿದ್ದಾರೆ. ಈ ಸಿನಿಮಾದಲ್ಲಿ ಹಲವಾರು ವಿಶೇಷತೆಗಳಿದ್ದು, ಅವುಗಳನ್ನು ಹಂತ ಹಂತವಾಗಿ ಪರಿಚಯಿಸುವ ಆಲೋಚನೆ ಶಂಕರ್​ ಅವರಿಗಿದೆ. ಸ್ಯಾಂಡಲ್​ವುಡ್ ಪಿಕ್ಚರ್ಸ್​ ಬ್ಯಾನರ್​ ಅಡಿ ನಿರ್ಮಾಣವಾಗಿರುವ ಈ ಚಿತ್ರಕ್ಕೆ ಶ್ವೇತಾ ಶಂಕರ್​ ಸಹ ನಿರ್ಮಾಣವಿದೆ. ತಾಂತ್ರಿಕವಾಗಿ ಅದ್ಧೂರಿಯಾಗಿ ಮೂಡಿ ಬಂದಿರುವ ಈ ಸಿನಿಮಾಗೆ ಅರ್ಜುನ್​ ಜನ್ಯ ಸಂಗೀತ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ವಿಕ್ರಮ್ ಮೋರ್ ಫೈಟ್ ಕಂಪೋಸ್, ಮದನ್​, ಹರಿಣಿ ಮತ್ತು ಮುರಳಿ ನೃತ್ಯ ನಿರ್ದೇಶನ, ವಿಜಯ್​ ಎಂ ಸಂಕಲನ, ಶ್ರೀನಿವಾಸ್​ ಕ್ಯಾಮರಾ ವರ್ಕ್​ ಇದೆ.

ಇದನ್ನೂ ಓದಿ: ಅನೀಶ್ ತೇಜೇಶ್ವರ್ ನಟನೆಯ 'ಮಾಯಾನಗರಿ' ಚಿತ್ರದ ಟ್ರೇಲರ್​ ಬಿಡುಗಡೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.