ETV Bharat / entertainment

ಹೊಸಬರ 'ಮಾಜರ್' ಸಿನಿಮಾಗೆ ಶ್ರೀನಗರ ಕಿಟ್ಟಿ, ಸಚಿವ ಗೋಪಾಲಯ್ಯ ಸಾಥ್​

author img

By

Published : Apr 4, 2023, 11:04 AM IST

ಹೊಸಬರ 'ಮಾಜರ್'​ ಸಿನಿಮಾದ ಹಾಡನ್ನು ನಟ ಶ್ರೀನಗರ ಕಿಟ್ಟಿ ಮತ್ತು ಸಚಿವ ಗೋಪಾಲಯ್ಯ ಬಿಡುಗಡೆಗೊಳಿಸಿ, ಚಿತ್ರತಂಡಕ್ಕೆ ಸಾಥ್​ ನೀಡಿದ್ದಾರೆ.

maajar
ಮಾಜರ್

ಇತ್ತೀಚೆಗೆ ಕನ್ನಡ ಚಿತ್ರರಂಗದಲ್ಲಿ ಹೊಸಬರ ಸಿನಿಮಾಗಳು ಹೆಚ್ಚಾಗಿ ತೆರೆ ಮೇಲೆ ಬರುತ್ತಿದೆ. ಸ್ಯಾಂಡಲ್​ವುಡ್​ನಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡವರು ನಿರ್ದೇಶಕರಾಗುತ್ತಿದ್ದಾರೆ. ಈ ಸಾಲಿನಲ್ಲಿ ಗೀತೆ ರಚನೆಕಾರ ಲೋಕೇಶ್​ ಲೋಕಿ ಕೂಡ ಒಬ್ಬರು. ಸಾಕಷ್ಟು ಜನಪ್ರಿಯ ಚಿತ್ರ ಗೀತೆಗಳನ್ನು ಬರೆದಿರುವ ಲೋಕಿ ಇದೀಗ ನಿರ್ದೇಶನಕ್ಕೆ ಇಳಿದಿದ್ದಾರೆ.

maajar
'ಮಾಜರ್​' ಚಿತ್ರತಂಡ

ಹೊಸ ಕಲಾವಿದರ ಜೊತೆಗೆ 'ಮಾಜರ್' ಎಂಬ ಚಿತ್ರವನ್ನು ಮಾಡಿದ್ದಾರೆ. ಈಗಾಗಲೇ ಮುಕ್ಕಾಲು ಭಾಗದಷ್ಟು ಚಿತ್ರೀಕರಣ ಮುಗಿಸಿರುವ ಮಾಜರ್​ ಚಿತ್ರದ ಹಾಡು ಇತ್ತೀಚೆಗಷ್ಟೇ ಅನಾವರಣಗೊಂಡಿದೆ. ಈ ಹೊಸಬರ ಸಿನಿಮಾದ ಹಾಡನ್ನು ಸಚಿವ ಕೆ ಗೋಪಾಲಯ್ಯ ಮತ್ತು ನಟ ಶ್ರೀನಗರ ಕಿಟ್ಟಿ ಬಿಡುಗಡೆ ಮಾಡುವ ಮೂಲಕ ಚಿತ್ರತಂಡಕ್ಕೆ ಸಾಥ್​ ನೀಡಿದ್ದಾರೆ. ​

ಇವರ ಜೊತೆಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ ಹರೀಶ್​, ರಾಜಕೀಯ ಮುಖಂಡ ಜಯರಾಮ್​ ಸೇರಿದಂತೆ ಮುಂತಾದ ಗಣ್ಯರು ಸಮಾರಂಭಕ್ಕೆ ಆಗಮಿಸಿದ್ದರು. ತಮ್ಮ ಪ್ರೋತ್ಸಾಹಭರಿತ ಮಾತುಗಳ ಮೂಲಕ ಚಿತ್ರತಂಡಕ್ಕೆ ಶುಭಹಾರೈಸಿದ್ದಾರೆ.

ಇದನ್ನೂ ಓದಿ: ನಟಿ ಆಲಿಯಾ ಭಟ್​ ಕಂಡು ಕುಣಿದು ಕುಪ್ಪಳಿಸಿದ ಶಾಲಾ ಮಕ್ಕಳು: ವಿಡಿಯೋ ವೈರಲ್​

ಈ ವೇಳೆ ಮಾತನಾಡಿದ ಗೀತೆರಚನೆಕಾರ ಮತ್ತು ನಿರ್ದೇಶಕ ಲೋಕೇಶ್ ಲೋಕಿ, "ನಾನು ಸಾಕಷ್ಟು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಗೀತೆರಚನೆಕಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಈಗ ಮೊದಲ ಬಾರಿಗೆ 'ಮಾಜರ್' ಎಂಬ ಚಿತ್ರವನ್ನು ನಿರ್ದೇಶಿಸಿದ್ದೇನೆ. ಈ ಚಿತ್ರದಲ್ಲಿ ಮೂರು ಹಾಡುಗಳು ಹಾಗೂ ಮೂರು ಬಿಟ್ ಗಳಿದೆ. ಎಲ್ಲ ಹಾಡುಗಳನ್ನು ನಾನೇ ಬರೆದಿದ್ದೇನೆ. ಹುಚ್ಚ ವೆಂಕಟ್, ಸಂತೋಷ್ ವೆಂಕಿ, ಶಶಾಂಕ್ ಶೇಷಗಿರಿ ಹಾಡಿದ್ದಾರೆ. ಎ.ಟಿ ರವೀಶ್ ಸಂಗೀತ ನೀಡಿದ್ದು, ಹಿನ್ನೆಲೆ ಸಂಗೀತವನ್ನು ರಾಜೇಶ್ ರಾಮನಾಥ್ ನೀಡಿದ್ದಾರೆ" ಎಂದು ಹೇಳಿದರು.

ಇದನ್ನೂ ಓದಿ: ಇನ್‌ಸ್ಟಾಗ್ರಾಮ್‌ಗೆ ಎಂಟ್ರಿ ಕೊಟ್ಟ ದಳಪತಿ ವಿಜಯ್: ಒಂದೇ ದಿನ 4 ಮಿಲಿಯನ್​ಗೂ ಹೆಚ್ಚು ಫಾಲೋವರ್ಸ್‌!

ಮುಂದುವರೆದು, "ಇನ್ನು ಚಿತ್ರದ ಬಗ್ಗೆ ಹೇಳುವುದಾದರೆ, ದೇಶದಲ್ಲಿ ಅನಾದಿ ಕಾಲದಿಂದಲೂ ಹೆಣ್ಣಿನ ಶೋಷಣೆ ನಡೆಯುತ್ತಲೇ ಇದೆ. ಆದರೆ, ತಪ್ಪಿತಸ್ಥರಿಗೆ ನೀಡುವ ಶಿಕ್ಷೆ ಬಹಳ ಕಡಿಮೆ. ಹೆಣ್ಣನ್ನು ಶೋಷಣೆ ಮಾಡಿದವರಿಗೆ ಯಾವ ರೀತಿ ಶಿಕ್ಷೆ ನೀಡಬೇಕು ಎಂಬುದನ್ನು ಈ ಚಿತ್ರದಲ್ಲಿ ತೋರಿಸಿದ್ದೇವೆ. ಬರೀ ಇಷ್ಟೇ ಅಲ್ಲ. ಲವ್ ಸ್ಟೋರಿ ಕೂಡ ನಮ್ಮ ಚಿತ್ರದಲ್ಲಿದೆ" ಎಂದು ತಿಳಿಸಿದರು. ಬಳಿಕ "ಕನ್ನಡದಲ್ಲಿ ಚಿತ್ರವೊಂದನ್ನು ನಿರ್ಮಿಸುವ ಆಸೆಯಿತ್ತು. ಲೋಕಿ ಅವರು ಹೇಳಿದ ಕಥೆ ಇಷ್ಟವಾಗಿ, ನಿರ್ಮಾಣ ಮಾಡಿದ್ದೇನೆ" ಎಂದು ನಿರ್ಮಾಪಕ ಮುರುಗನಂಥನ್ ನುಡಿದರು.

ಇನ್ನೂ ಈ ಚಿತ್ರದಲ್ಲಿ ಉಗ್ರಂ ರವಿ, ಅರ್ಜುನ್ ರಂಜಿತ್,‌ ಪ್ರಿನ್ಸ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಸೈ ಗೀತಾ, ವಾಸ್ತು ನಾಗ ಚಿತ್ರಕ್ಕೆ‌‌ ನೃತ್ಯ ಸಂಯೋಜನೆ ಮಾಡಿದ್ದಾರೆ. ಬಹುತೇಕ ಚಿತ್ರೀಕರಣ ಮುಗಿಸಿರೋ 'ಮಾಜರ್' ಸಿನಿಮಾ ಸದ್ಯದಲ್ಲೇ ಪ್ರೇಕ್ಷಕರ ಮುಂದೆ ಬರಲಿದೆ.

ಇದನ್ನೂ ಓದಿ: ವಿಶ್ವಾದ್ಯಂತ ತೆರೆ ಕಾಣಲಿದೆ ಅರುಣ್ ವಿಜಯ್ ಅಭಿನಯದ ಬಹು ನಿರೀಕ್ಷಿತ ಮಿಷನ್ ಚಾಪ್ಟರ್ 1 ಸಿನಿಮಾ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.