ETV Bharat / entertainment

50ಕ್ಕೂ ಹೆಚ್ಚು ಸೆಲೆಬ್ರಿಟಿಗಳಿಂದ ಬಿಡುಗಡೆಯಾಯ್ತು ಹುಲಿಯಾ ಸಿನಿಮಾ ಪೋಸ್ಟರ್ - ತೂತುಮಡಿಕೆ ಸಿನಿಮಾ

ಮೊದಲ ಪ್ರಯತ್ನದಲ್ಲೇ ಭರವಸೆ ಮೂಡಿಸಿದ್ದ ನಿರ್ದೇಶಕ ಚಂದ್ರಕೀರ್ತಿ ಅವರ ಎರಡನೇ ಚಿತ್ರ ಇದು.

Huliya movie poster
ಹುಲಿಯಾ ಸಿನಿಮಾ ಪೋಸ್ಟರ್
author img

By

Published : Apr 29, 2023, 8:05 PM IST

Huliya movie poster
ಹುಲಿಯಾ ಸಿನಿಮಾ ಪೋಸ್ಟರ್

ಸ್ಯಾಂಡಲ್​ವುಡ್​ನಲ್ಲಿ ಸೂಪರ್ ಹಿಟ್ ಸಿನಿಮಾಗಳ ಟೈಟಲ್ ಮರುಬಳಕೆ ಆಗುವುದು ಹೊಸತೇನಲ್ಲ. ಈಗ ಡೈನಾಮಿಕ್ ಸ್ಟಾರ್ ದೇವರಾಜ್ ನಟನೆಯ "ಹುಲಿಯಾ" ಶೀರ್ಷಿಕೆ ಮರುಬಳಕೆ ಮಾಡಿಕೊಂಡು ಹೊಸ ಚಿತ್ರವೊಂದು ತಯಾರಾಗುತ್ತಿದೆ. ತೂತು ಮಡಿಕೆ ಸಿನಿಮಾ ಮೂಲಕ ಭರವಸೆ ಮೂಡಿಸಿದ್ದ ಯುವ ನಿರ್ದೇಶಕ ಕಂ ನಟ ಚಂದ್ರಕೀರ್ತಿ ಎರಡನೇ ಹೆಜ್ಜೆಗೆ "ಹುಲಿಯಾ" ಎಂಬ ಟೈಟಲ್ ಇಡಲಾಗಿದೆ. ದೇವರಾಜ್ ಅವರ ಆಶೀರ್ವಾದೊಂದಿಗೆ ಶುರುವಾಗುತ್ತಿರುವ ಈ ಸಿನಿಮಾದ ಫಸ್ಟ್ ಲುಕ್ ಹಾಗೂ ಟೈಟಲ್ ಪೋಸ್ಟರ್ ಕನ್ನಡದ 50ಕ್ಕೂ ಹೆಚ್ಚು ಸೆಲೆಬ್ರಿಟಿಗಳಿಂದ ಏಕಕಾಲಕ್ಕೆ ಬಿಡುಗಡೆಯಾಗಿದೆ.

ಸಿಲಿಕಾನ್ ಸಿಟಿ, ಕಿಸ್, ಮೂಕವಿಸ್ಮಿತ, ಬೆಂಕಿ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿರುವ ಚಂದ್ರಕೀರ್ತಿ ತೂತುಮಡಿಕೆ ಸಿನಿಮಾ ಮೂಲಕ ನಿರ್ದೇಶಕರಾಗಿ ಬಡ್ತಿ ಪಡೆದಿದ್ದರು. ಮೊದಲ ಚಿತ್ರದಲ್ಲಿಯೇ ಗಮನ ಸೆಳೆದಿದ್ದ ಅವರು ಹುಲಿಯಾ ಮೂಲಕ ಲವ್ ಹಾಗೂ ಆ್ಯಕ್ಷನ್ ಕಥೆಯನ್ನು ಆಯ್ಕೆ ಮಾಡಿಕೊಂಡು ಪ್ರೇಕ್ಷಕರನ್ನು ರಂಜಿಸಲು ಅಣಿಯಾಗುತ್ತಿದ್ದಾರೆ. ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುವುದರ ಜೊತೆಗೆ ಚಂದ್ರಕೀರ್ತಿ ನಾಯಕನಾಗಿಯೂ ನಟಿಸುತ್ತಿದ್ದಾರೆ.

ಹುಲಿಯಾ ಪೋಸ್ಟರ್​ನಲ್ಲಿ ಅವರು ಸಖತ್ ರಗಡ್ ಆಗಿ ಕಾಣಿಸಿಕೊಂಡಿದ್ದಾರೆ. ತೂತುಮಡಿಕೆ ಸಿನಿಮಾ ನಿರ್ಮಾಣ ಮಾಡಿದ್ದ ಸರ್ವತಾ ಸಿನಿ ಗ್ಯಾರೇಜ್, ಮಧು ರಾವ್ ಹಾಗೂ ವಸಂತ್ ವಲ್ಲಭ್ ಈ ಚಿತ್ರಕ್ಕೆ ಹಣ ಹಾಕುತ್ತಿದ್ದಾರೆ. ಸ್ವಾಮಿನಾಥನ್ ಆರ್ ಕೆ ಸಂಗೀತ, ಭಜರಂಗಿ, ವೇದ ಹಾಗೂ ಬೆಲ್ ಬಾಟಂ ಸಂಭಾಷಣೆಗಾರ ರಘು ನಿಡುವಳ್ಳಿ ಮಾತು ಚಿತ್ರಕ್ಕಿದೆ. ಟೈಟಲ್ ಹಾಗೂ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಮಾಡಿರುವ ಹುಲಿಯಾ ಚಿತ್ರತಂಡ ಶೀಘ್ರದಲ್ಲಿ ಉಳಿದ ತಾಂತ್ರಿಕ ಹಾಗೂ ತಾರಾಬಳಗ ಬಗ್ಗೆ ಮಾಹಿತಿ ನೀಡಲಿದೆ.

ಇದನ್ನೂ ಓದಿ: 'ಸೀತಾ'ನವಮಿಯಂದು 'ಆದಿಪುರುಷ್'​ ಚಿತ್ರದ ಪೋಸ್ಟರ್​ ರಿಲೀಸ್​

ETV Bharat Logo

Copyright © 2025 Ushodaya Enterprises Pvt. Ltd., All Rights Reserved.