ಭಾರತೀಯ ಕ್ರಿಕೆಟ್ ತಂಡದ ಶ್ರೇಷ್ಠ ಆಟಗಾರ, ಚೆನ್ನೈ ಸೂಪರ್ ಕಿಂಗ್ಸ್ ಟೀಂ ಲೀಡರ್ ಎಂ.ಎಸ್ ಧೋನಿ ಅವರು ತಮ್ಮದೇ 'ಧೋನಿ ಎಂಟರ್ಟೈನ್ಮೆಂಟ್' ಎಂಬ ಚಲನಚಿತ್ರ ನಿರ್ಮಾಣ ಸಂಸ್ಥೆಯನ್ನು ಹುಟ್ಟು ಹಾಕಿರೋದು ನಿಮಗೆಲ್ಲರಿಗೂ ತಿಳಿದಿರುವ ವಿಚಾರ. ಕ್ರೀಡಾಲೋಕದಲ್ಲಿ ಸಾಧನೆ ಮಾಡಿದ ಅತ್ಯುತ್ತಮ ಆಟಗಾರನ ಹೊಸ ಪ್ರಯತ್ನ ಇದು. 'ಲೆಟ್ಸ್ ಗೆಟ್ ಮ್ಯಾರೀಡ್' ಎಂಬ ಸಿನಿಮಾ ಮೂಲಕ ಇಂಡಿಯನ್ ಕ್ರಿಕೆಟ್ ಟೀಂ ಪ್ಲೇಯರ್ ಹೊಸದೊಂದು ಪ್ರಯತ್ನಕ್ಕೆ ಕೈ ಹಾಕಿದ್ದಾರೆ. ತಮಿಳಿನ 'ಎಲ್ಜಿಎಂ' ಚಿತ್ರಕ್ಕೆ ಬಂಡವಾಳ ಹೂಡುವ ಮೂಲಕ ಮನರಂಜನಾ ಲೋಕಕ್ಕೂ ಎಂಟ್ರಿ ಕೊಡಲು ಸಜ್ಜಾಗಿದ್ದಾರೆ.
- " class="align-text-top noRightClick twitterSection" data="">
ಪತ್ನಿ ಸಾಕ್ಷಿ ಸಾಥ್: ಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಅವರಿಗೆ ಪತ್ನಿ ಸಾಕ್ಷಿ ಸಾಥ್ ನೀಡಿದ್ದಾರೆ. ಸಾಕ್ಷಿ ಜೊತೆಗೂಡಿ ಈ 'ಧೋನಿ ಎಂಟರ್ಟೈನ್ಮೆಂಟ್' ಎಂಬ ಸಿನಿಮಾ ನಿರ್ಮಾಣ ಸಂಸ್ಥೆಯನ್ನು ಸೃಷ್ಟಿಸಿದ್ದಾರೆ. ಈ ಸಿನಿಮಾ ನಿರ್ಮಾಣ ಸಂಸ್ಥೆಯಡಿ ಲೆಟ್ಸ್ ಗೆಟ್ ಮ್ಯಾರೀಡ್ ಎಂಬ ತಮಿಳು ಸಿನಿಮಾ ನಿರ್ಮಾಣ ಮಾಡಿದ್ದು, ಈಗಾಗಲೇ ಟೀಸರ್ ಮೂಲಕ ಪ್ರೇಕ್ಷಕರಿಗೆ ನಗುವಿನ ಕಿಕ್ ಕೊಟ್ಟಿದೆ. 'LGM' ಧೋನಿ ನಿರ್ಮಾಣದ ಚೊಚ್ಚಲ ಚಿತ್ರ.
- " class="align-text-top noRightClick twitterSection" data="">
ಕರ್ನಾಟದಲ್ಲೂ ತೆರೆಕಾಣಲಿದೆ ಎಲ್ಜಿಎಂ: ಲೆಟ್ಸ್ ಗೆಟ್ ಮ್ಯಾರೀಡ್ ಚಿತ್ರವನ್ನು ನಮ್ಮ ರಾಜ್ಯದಲ್ಲಿಯೂ ಬಿಡುಗಡೆ ಮಾಡಲು ಚಿತ್ರತಂಡ ಪ್ಲ್ಯಾನ್ ಹಾಕಿಕೊಂಡಿದೆ. ಇತ್ತೀಚಿಗೆ ಪರಭಾಷೆ ಸಿನಿಮಾಗಳಿಗೆ ಕರುನಾಡಿನಲ್ಲಿ ಭರಪೂರ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಹೀಗಾಗಿ ಲೆಟ್ಸ್ ಗೆಟ್ ಮ್ಯಾರೀಡ್ ಸಿನಿಮಾ ಕರ್ನಾಟಕದಲ್ಲಿ ಕೂಡ ತೆರೆಕಾಣಲಿದೆ ಎಂದು ಚಿತ್ರತಂಡ ತಿಳಿಸಿದೆ.
ಫ್ಯಾಮಿಲಿ ಎಂಟರ್ಟೈನರ್ ಕಥಾಹಂದರ ಹೊಂದಿರುವ ಈ ಸಿನಿಮಾವನ್ನು ರಮೇಶ್ ತಮಿಳ್ಮಣಿ ನಿರ್ದೇಶನ ಮಾಡಿದ್ದಾರೆ. ನಾಯಕ ಹರೀಶ್ ಕಲ್ಯಾಣ್, ನಾಯಕಿ ಇವಾನಾ. ಹಿರಿಯ ನಟಿ ನದಿಯಾ, ಯೋಗಿ ಬಾಬು ಮತ್ತು ಆರ್‌ಜೆ ವಿಜಯ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ಲೆಟ್ಸ್ ಗೆಟ್ ಮ್ಯಾರೀಡ್ ಸಿನಿಮಾವನ್ನು ಆದಷ್ಟು ಬೇಗ ತೆರೆಗೆ ತರಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.
ಇದನ್ನೂ ಓದಿ: Adipurush: ರಾಮಾಯಣ ಆಧಾರಿತ ಪೌರಾಣಿಕ ಚಿತ್ರದ ಟ್ವಿಟರ್ ವಿಮರ್ಶೆ.. ಹೇಗಿದೆಯಂತಾ ಗೊತ್ತಾ?
ರಮೇಶ್ ತಮಿಳ್ಮಣಿ ಸಿನಿಮಾಗೆ ಆ್ಯಕ್ಷನ್ ಕಟ್ ಹೇಳುವುದರ ಜೊತೆಗೆ ಸಂಗೀತ ನಿರ್ದೇಶನದ ಜವಾಬ್ದಾರಿ ಕೂಡ ನಿಭಾಯಿಸಿದ್ದಾರೆ. ಈಗಾಗಲೇ ರಿಲಿಸ್ ಆಗಿರುವ ಟೀಸರ್ಗೆ ಅದ್ಭುತ ರೆಸ್ಪಾನ್ಸ್ ಸಿಕ್ಕಿದ್ದು, ಶೀಘ್ರದಲ್ಲೇ ಆಡಿಯೋ ಹಾಗೂ ಟ್ರೇಲರ್ ಅನ್ನು ಚಿತ್ರತಂಡ ಬಿಡುಗಡೆ ಮಾಡಲಿದೆ. ಈ ಸಿನಿಮಾ ಬಗ್ಗೆ ಧೋನಿ ಅಭಿಮಾನಿಗಳೂ ಸೇರಿದಂತೆ ಸಿನಿಪ್ರಿಯರು ಸಾಕಷ್ಟು ಕುತೂಹಲ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: Pranitha Subhash: 'ಪೊರ್ಕಿ' ಹುಡುಗಿಯ ಅದ್ಭುತ ಸಾಂಪ್ರದಾಯಿಕ ನೋಟ
ಲೆಟ್ಸ್ ಗೆಟ್ ಮ್ಯಾರೀಡ್ ಸಿನಿಮಾಗೆ ಪ್ರದೀಪ್ ರಾಗವ್ ಸಂಕಲನವಿದೆ. ಈಗಾಗಲೇ ಅನಾವರಣಗೊಂಡಿರುವ ಈ ಚಿತ್ರದ ಟೀಸರ್ ಸುಮಾರು 49 ಸೆಕೆಂಡ್ಸ್ ಇದ್ದು, ಪ್ರಮುಖ ಪಾತ್ರಗಳನ್ನು ತೋರಿಸಲಾಗಿದೆ. ಇದೊಂದು ಕೌಟುಂಬಿಕ ಚಲನಚಿತ್ರವಾಗಿದ್ದು, ಪ್ರೇಕ್ಷಕರಿಗೆ ಭರ್ಜರಿ ಮನರಂಜನೆ ನೀಡಲಿದೆ ಎಂದು ಈಗಾಗಲೇ ಚಿತ್ರತಂಡ ಹೇಳಿಕೊಂಡಿದೆ.