ETV Bharat / entertainment

ಡಿಸೆಂಬರ್​ 6ಕ್ಕೆ 'ನಂದಿ ಫಿಲ್ಮ್ ಅವಾರ್ಡ್'​: ಏನಿದರ ಉದ್ದೇಶ? ಯಾರ ಮುಡಿಗೇರಲಿದೆ ಪ್ರಶಸ್ತಿ? - ಈಟಿವಿ ಭಾರತ ಕನ್ನಡ

ಡಿಸೆಂಬರ್​ 6ರಂದು 'ನಂದಿ ಫಿಲ್ಮ್ ಅವಾರ್ಡ್' ಸಮಾರಂಭ ನಡೆಯಲಿದ್ದು, ಯಾರಿಗೆ ಈ ಪ್ರಶಸ್ತಿ ಸಿಗಲಿದೆ ಎಂಬುದರ ಬಗ್ಗೆ ಮಾಹಿತಿ ಇಲ್ಲಿದೆ..

Nandi Film Award will be held on December 6
ಡಿಸೆಂಬರ್​ 6ಕ್ಕೆ 'ನಂದಿ ಫಿಲ್ಮ್ ಅವಾರ್ಡ್'​; ಏನಿದರ ಉದ್ದೇಶ? ಯಾರ ಮುಡಿಗೇರಲಿದೆ ಪ್ರಶಸ್ತಿ?
author img

By ETV Bharat Karnataka Team

Published : Oct 27, 2023, 2:42 PM IST

ಕನ್ನಡದಲ್ಲಿ ಮೊಟ್ಟಮೊದಲ ಬಾರಿಗೆ ನಂದಿ ಪ್ರಶಸ್ತಿ ಆರಂಭವಾಗಿದ್ದು, ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇತ್ತೀಚೆಗೆ ಅನಾವರಣಗೊಳಿಸಿದ್ದರು. ನೆರೆಯ ತೆಲುಗು ರಾಜ್ಯಗಳಲ್ಲಿ ಮನರಂಜನಾ ಕ್ಷೇತ್ರದ ಸಾಧಕರಿಗೆ ಕೊಡಮಾಡುವ ರಾಜ್ಯ ಪ್ರಶಸ್ತಿಗೂ ನಂದಿ ಅವಾರ್ಡ್ಸ್​ ಎಂದೇ ಕರೆಯಲಾಗುತ್ತದೆ. ಹೀಗಾಗಿ ನಮ್ಮ ರಾಜ್ಯದ ಈ ಹೊಸ ಪ್ರಶಸ್ತಿಗೆ ಅದೇ ಹೆಸರಿಟ್ಟಿರೋದನ್ನು ನೋಡಿ ಇದಕ್ಕೂ ಆಂಧ್ರದ ಅವಾರ್ಡ್​ಗೂ ಸಂಬಂಧ ಇದೆ ಎಂದುಕೊಳ್ಳಬೇಡಿ. ಇವೆರಡೂ ಸಂಪೂರ್ಣವಾಗಿ ಬೇರೆಯೇ ಆಗಿವೆ.

'ನಂದಿ' ಎನ್ನುವುದು ಕನ್ನಡದ ಪಾಲಿಗೂ ಒಂದು ಪವರ್‌ಫುಲ್ ಇಮೇಜ್ ಎನಿಸುವ ಲಾಂಛನ. ಆ ಕಾರಣದಿಂದಲೇ ಅದೇ ಪದವನ್ನು ಇಲ್ಲಿ ಆಯ್ಕೆ ಮಾಡಲಾಗಿದೆ. ಇನ್ನು ನಂದಿ ಅವಾರ್ಡ್ ಅನೌನ್ಸ್ ಆಗುತ್ತಿದ್ದಂತೆ ಈ ಪ್ರಶಸ್ತಿಯನ್ನು ಕನ್ನಡದ ಯಾವೆಲ್ಲಾ ಕಲಾವಿದರು, ತಂತ್ರಜ್ಞರು ಪಡೆಯಬಹುದು. ಯಾವಾಗ ನಡೆಯಲಿದೆ ಈ ಸಮಾರಂಭ? ಎಷ್ಟು ವಿಭಾಗ? ಎಷ್ಟು ಪ್ರಶಸ್ತಿ? ಎನ್ನುವ ವಿವರಗಳನ್ನು 'ನಂದಿ ಫಿಲ್ಮ್ ಅವಾರ್ಡ್'​ ಸಂಸ್ಥಾಪಕ ತಂಡ ಮಾಹಿತಿ ನೀಡಿದೆ.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನಿಕಟ ಪೂರ್ವಾಧ್ಯಕ್ಷ ಭಾ.ಮಾ.ಹರೀಶ್, ನಿರ್ಮಾಪಕ ನಿತ್ಯಾನಂದ ಪ್ರಭು, ಪದ್ಮಾವತಿ ಚಂದ್ರಶೇಖರ್ ಹಾಗೂ ಅನಿತಾ ರೆಡ್ಡಿ ಈ ಪ್ರಶಸ್ತಿಯ ಸಂಸ್ಥಾಪಕರಾಗಿದ್ದು, ಭಾ.ಮಾ.ಗಿರೀಶ್, ಹರ್ಷಿತಾ, ನಂದಿತಾ ಹಾಗೂ ಆಶೋಕ್ ಡೈರೆಕ್ಟರ್ಸ್‌ಗಳಾಗಿದ್ದಾರೆ.

ಪ್ರಶಸ್ತಿ ಸಮಾರಂಭದ ಬಗ್ಗೆ ಮಾಹಿತಿ ನೀಡಿದ ನಿರ್ಮಾಪಕ ನಿತ್ಯಾನಂದ ಪ್ರಭು, "ಕರ್ನಾಟಕ ನಂದಿ ಫಿಲ್ಮ್​ ಅವಾರ್ಡ್ 2023 ಅಂತ ನಾವು ಏನು ಹಮ್ಮಿಕೊಂಡಿದ್ದೇವೋ ಅದು 2022ನೇ ಸಾಲಿನ ಸಿನಿಮಾಗಳಿಗೆ ಅನ್ವಯಿಸುತ್ತದೆ. ಸೌತ್ ಇಂಡಿಯಾದಲ್ಲಿ ನಂದಿ ಅವಾರ್ಡ್ ಅಂತ ನಡೆಯುತ್ತಿತ್ತು. 2016ರಲ್ಲಿ ನಿಲ್ಲಿಸಲಾಗಿದೆ. ತೆಲುಗಿನಲ್ಲಿ ನಂದಿ ಫಿಲ್ಮ್​ ಅವಾರ್ಡ್ ನಡೆಯುತ್ತಿದೆ. ಕನ್ನಡ ಇಂಡಸ್ಟ್ರಿಗೆ ಪ್ರತ್ಯಕ್ಷವಾಗಿ ನಂದಿ ಅವಾರ್ಡ್ಸ್ ನೀಡಲಾಗುವುದು. ಕನ್ನಡ ಸಿನಿಮಾಗಳು, ಪ್ರಾದೇಶಿಕ ಭಾಷೆಗಳಾದ ತುಳು, ಕೊಡವ, ಕೊಂಕಣಿ, ಬ್ಯಾರಿ ಹಾಗೂ ಭಂಜಾರ ಈ ಭಾಷೆಗಳಿಗೆ ಪ್ರಾಮುಖ್ಯತೆ ಕೊಡಲಾಗುತ್ತದೆ. ಸಾಹಿತ್ಯ, ಮುದ್ರಣ ಹಾಗೂ ದೃಶ್ಯ ಮಾಧ್ಯಮಗಳಿಗೂ ಪ್ರಶಸ್ತಿ ನೀಡಲಾಗುತ್ತದೆ. 50ಕ್ಕೂ ಹೆಚ್ಚು ವಿಭಾಗದ ಪ್ರತಿಭೆ ಗುರುತಿಸಿ ಪ್ರಶಸ್ತಿ ನೀಡಲಾಗುತ್ತದೆ" ಎಂದು ತಿಳಿಸಿದರು.

ಕನ್ನಡದ್ದೇ ಆದ ಸ್ವಂತ ಪ್ರಶಸ್ತಿ ನೀಡುವ ವೇದಿಕೆ, ಆ ಮೂಲಕ ನಮ್ಮ ಪ್ರತಿಭೆಗಳನ್ನು ನಾವೇ ಗುರುತಿಸಿ ಬೆನ್ನು ತಟ್ಟುವ ಪ್ರಯತ್ನ ಮಾಡಬೇಕಿದೆ. ಇದನ್ನೆಲ್ಲಾ ಮನಗಂಡು, ಚರ್ಚಿಸಿ ಮಂಡಳಿ ನಂದಿ ಅವಾರ್ಡ್ ಕೊಡುವ ನಿರ್ಧಾರ ಮಾಡಿದೆ. ಬೆಂಗಳೂರಿನ ಒರಿಯನ್ ಮಾಲ್​ನಲ್ಲಿ ಡಿಸೆಂಬರ್ ತಿಂಗಳ 6ರಂದು ಸಮಾರಂಭ ನಡೆಯಲಿದ್ದು, 50 ವಿಭಾಗಗಳಿಗೆ ಪ್ರಶಸ್ತಿ ನೀಡಲಾಗುತ್ತದೆ.

ಇದನ್ನೂ ಓದಿ: 'ನಂದಿ ಫಿಲ್ಮ್​ ಅವಾರ್ಡ್'​ ಲೋಗೋ ಲಾಂಚ್​ ಮಾಡಿದ ಸಿಎಂ ಸಿದ್ದರಾಮಯ್ಯ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.