ETV Bharat / entertainment

'ಹಂಟರ್​' ಆಗಿ ನಿರಂಜನ್ ಸುಧೀಂದ್ರ: ಪ್ಯಾನ್ ಇಂಡಿಯಾ ಚಿತ್ರದಲ್ಲಿ ಉಪ್ಪಿ ಸಂಬಂಧಿ - hunter movie hooting

'ಹಂಟರ್​' ಸಿನಿಮಾ ಶೂಟಿಂಗ್​ ಭರದಿಂದ ಸಾಗುತ್ತಿದೆ.

hunter movie team
'ಹಂಟರ್​' ಚಿತ್ರತಂಡ
author img

By

Published : Apr 15, 2023, 4:34 PM IST

ಕಬ್ಜ ಮೂಲಕ ಸದ್ದು ಮಾಡುತ್ತಿರುವ ರಿಯಲ್ ಸ್ಟಾರ್ ಉಪೇಂದ್ರ ಅವರ ಅಣ್ಣನ‌ ಮಗ ನಿರಂಜನ್ ಸುಧೀಂದ್ರ ನಾಯಕನಾಗಿ ನಟಿಸುತ್ತಿರುವ ಚಿತ್ರ 'ಹಂಟರ್'. ಸ್ಯಾಂಡಲ್​ವುಡ್​ನಲ್ಲಿ ಗಮನ‌ ಸೆಳೆಯುತ್ತಿರುವ ಹಂಟರ್ ಸಿನಿಮಾದ ಚಿತ್ರೀಕರಣ ಮೋಹನ್ ಬಿ ಕೆರೆ ಸ್ಟುಡಿಯೋದಲ್ಲಿ ಭರದಿಂದ ಸಾಗುತ್ತಿದೆ. ಶೂಟಿಂಗ್​ನಲ್ಲಿ ಹಿರಿಯ ನಟರಾದ ಶರತ್ ಕುಮಾರ್, ಸಮನ್, ಸಾಧುಕೋಕಿಲ, ನಿರಂಜನ್, ಸೌಮ್ಯ ಮೆನನ್ ಭಾಗವಹಿಸಿದರು.

ಮೊದಲು ಮಾತನಾಡಿದ ನಟ ಶರತ್ ಕುಮಾರ್, ನಿರ್ದೇಶಕರು ಹೇಳಿದ ಕಥೆ ಇಷ್ಟವಾಯಿತು. ನನ್ನ ಪಾತ್ರ ಚೆನ್ನಾಗಿದೆ. ಈ ತಂಡದ ಜೊತೆ ಕೆಲಸ ಮಾಡಿದ್ದು ಖುಷಿಯಾಗಿದೆ ಎಂದರು. ನಂತರ ಮಾತನಾಡಿದ ಬಹುಭಾಷೆ ನಟ ಸುಮನ್, ನಾನು ಹೆಡ್ ಕಾನ್ಸ್‌ಟೇಬಲ್ ಪಾತ್ರ ನಿರ್ವಹಿಸುತ್ತಿದ್ದೇನೆ. ನಾನು ಹಾಗೂ ಶರತ್ ಕುಮಾರ್ ಬಹಳ ದಿನಗಳ ನಂತರ ಒಟ್ಟಾಗಿ ಅಭಿನಯಿಸುತ್ತಿದ್ದೇವೆ ಎಂದು ತಿಳಿಸಿದರು.

hunter movie team
'ಹಂಟರ್​' ಚಿತ್ರತಂಡ

ನಟ ನಿರಂಜನ್ ಸುಧೀಂದ್ರ ಮಾತನಾಡಿ, ಈ ಸಿನಿಮಾ ಫೈಟ್​ನೊಂದಿಗೆ ಶುರುವಾಗಿ ಫೈಟ್​ನಲ್ಲೇ ಮುಕ್ತಾಯವಾಗುತ್ತದೆ. ಆ್ಯಕ್ಷನ್ ಥ್ರಿಲ್ಲರ್ ಚಿತ್ರವಾಗಿರುವುದರಿಂದ ನಾನು ಸಾಕಷ್ಟು ಅಭ್ಯಾಸ ಮಾಡಿದ್ದೇನೆ. ನನ್ನ ಸಿನಿಮಾ ವೃತ್ತಿ ಜೀವನದಲ್ಲೇ ಅದ್ಧೂರಿ ಸಿನಿಮಾ ಇದು ಎಂದರೆ ತಪ್ಪಾಗಲಾರದು. ಉತ್ತರ ಹಾಗೂ ದಕ್ಷಿಣ ಭಾರತದ ದಿಗ್ಗಜ ನಟರೊಂದಿಗೆ ನಟಿಸುವ ಅವಕಾಶ ನನಗೆ ಈ ಚಿತ್ರದಲ್ಲಿ ಸಿಕ್ಕಿದೆ. ಎರಡು ಶೇಡ್​ಗಳಲ್ಲಿ ನನ್ನ ಪಾತ್ರವಿರುತ್ತದೆ ಎಂದರು. ಬಳಿಕ ನಟಿ ಸೌಮ್ಯ ಮೆನನ್ ಮಾತನಾಡಿ, ನಾನು ಮೂಲತಃ ಕೇರಳದವಳು. ಕನ್ನಡದಲ್ಲಿ ಮೊದಲ ಚಿತ್ರ ಇದು ಎಂದು ತಿಳಿಸಿದರು.

ನಿರ್ದೇಶಕ ವಿನಯ್ ಕೃಷ್ಣ ಮಾತನಾಡಿ, ಸೀಜರ್ ಚಿತ್ರದ ನಂತರ ನಾನು ನಿರ್ದೇಶಿಸುತ್ತಿರುವ ಎರಡನೇ ಚಿತ್ರ "ಹಂಟರ್". ಇದೊಂದು ಕಂಪ್ಲೀಟ್ ಆ್ಯಕ್ಷನ್ ಥ್ರಿಲ್ಲರ್. ಈ ಚಿತ್ರಕ್ಕಾಗಿ 75 ಕೆಜಿ ತೂಕವಿದ್ದ ನಿರಂಜನ್, ಮತ್ತಷ್ಟು ತೂಕ ಹೆಚ್ಚಿಸಿಕೊಂಡಿದ್ದಾರೆ. ಗಣೇಶ್ ಮಾಸ್ಟರ್ ಸಾಹಸ ಸಂಯೋಜನೆ ಮಾಡಿದ್ದಾರೆ. ಕಬೀರ್ ಬೇಡಿ, ಸುಮನ್, ಶರತ್ ಕುಮಾರ್ ಅವರಂತಹ ಕಲಾವಿದರೊಂದಿಗೆ ಕೆಲಸ ಮಾಡುತ್ತಿರುವುದು ಖುಷಿಯಾಗಿದೆ ಎಂದರು.

ಇದನ್ನೂ ಓದಿ: ಈ ಬಟ್ಟೆಗೆ 1.6 ಲಕ್ಷ ರೂ. ಕೊಟ್ರಾ ರಕ್ಕಮ್ಮ.. ಜಾಕ್ವೆಲಿನ್ ಸೌಂದರ್ಯಕ್ಕೆ ಮನಸೋತ ಫ್ಯಾನ್ಸ್​

ನಮ್ಮ ತ್ರಿವಿಕ್ರಮ್ ಸಿನಿಮಾಸ್ ಲಾಂಛನದಲ್ಲಿ "ಹಂಟರ್" ಸಿನಿಮಾ ನಿರ್ಮಾಣವಾಗುತ್ತಿದೆ. ನಿರಂಜನ್ ಸುಧೀಂದ್ರ ಈ ಚಿತ್ರದ ನಾಯಕ. ಸೌಮ್ಯ ಮೆನನ್ ನಾಯಕಿ. ಕಬೀರ್ ಬೇಡಿ, ಸಾಧುಕೋಕಿಲ ಸೇರಿ ಮುಂತಾದ ಹೆಸರಾಂತ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಶೇ. ಎಪ್ಪತ್ತರಷ್ಟು ಭಾಗದ ಚಿತ್ರೀಕರಣ ಮುಕ್ತಾಯ ಆಗಿದೆ. ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣ ಆಗುತ್ತಿದೆ. ನವೆಂಬರ್​ನಲ್ಲಿ ಚಿತ್ರ ಬಿಡುಗಡೆ ಮಾಡುತ್ತೇವೆ ಅಂತಾ ನಿರ್ಮಾಪಕ ತ್ರಿವಿಕ್ರಮ್ ಸಾಫಲ್ಯ ತಿಳಿಸಿದರು. ಈ ಚಿತ್ರಕ್ಕೆ ಜೈ ಆನಂದ್ ಛಾಯಾಗ್ರಹಣವಿದ್ದು, ಚಂದನ್ ಶೆಟ್ಟಿ "ಹಂಟರ್" ಹಾಡುಗಳಿಗೆ ಸಂಗೀತ ನೀಡಿದ್ದಾರೆ. ಜೂನ್ ವೇಳೆಗೆ ಚಿತ್ರೀಕರಣ ಮುಗಿಸಲು ಚಿತ್ರತಂಡ ಪ್ಲ್ಯಾನ್ ಮಾಡಿದೆ.

ಇದನ್ನೂ ಓದಿ: ಭಾರತೀಯ ತಾರೆ ಪ್ರಿಯಾಂಕಾ ಚೋಪ್ರಾಗೆ ಕ್ಲಾಸ್ ಕೊಟ್ಟ ಪಾಕಿಸ್ತಾನಿ ನಟ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.