ETV Bharat / entertainment

'ಎಡಗೈಯೇ ಅಪಘಾತಕ್ಕೆ ಕಾರಣ'.. ದಿಗಂತ್ ಜೊತೆ ನಿರೂಪ್ ಭಂಡಾರಿ ಸ್ಕ್ರೀನ್​ ಶೇರ್ - Edagaiye Apaghatakke Karana movie

ಎಡಗೈಯೇ ಅಪಘಾತಕ್ಕೆ ಕಾರಣ ಚಿತ್ರತಂಡಕ್ಕೆ ನಟ ನಿರೂಪ್ ಭಂಡಾರಿ ಹೊಸ ಸೇರ್ಪಡೆ.

Nirup Bhandari joins Edagaiye Apaghatakke Karana movie team
ಎಡಗೈಯೇ ಅಪಘಾತಕ್ಕೆ ಕಾರಣ ಸಿನಿಮಾ
author img

By ETV Bharat Karnataka Team

Published : Sep 27, 2023, 6:30 PM IST

ಶೀರ್ಷಿಕೆಯಿಂದಲೇ ಕನ್ನಡ ಚಿತ್ರರಂಗದಲ್ಲಿ ಟಾಕ್ ಆಗುತ್ತಿರುವ ಸಿನಿಮಾ 'ಎಡಗೈಯೇ ಅಪಘಾತಕ್ಕೆ ಕಾರಣ'. ದೂದ್ ಪೇಡಾ ದಿಗಂತ್ ಮುಖ್ಯ ಭೂಮಿಕೆಯಲ್ಲಿರೋ 'ಎಡಗೈಯೇ ಅಪಘಾತಕ್ಕೆ ಕಾರಣ' ಸಿನಿಮಾ ವಿಭಿನ್ನ ಕಾನ್ಸೆಪ್ಟ್​ ಮೂಲಕ ಅಭಿಮಾನಿಗಳ ಗಮನ ಸೆಳೆಯುತ್ತಿದೆ.

ಆಗಸ್ಟ್​ 13ರಂದು 'ವಿಶ್ವ ಎಡಗೈ ದಿನ'ದ ಅಂಗವಾಗಿ ಎಗಡೈ ಬಳಸುವವರಿಗೆ ಅನುಕೂಲ ಆಗುವ ರೀತಿಯಲ್ಲಿ ಹೊಸ ಬಗೆಯ ಹೆಲ್ಮೆಟ್​ ಕೂಡ ಲಾಂಚ್​ ಮಾಡಲಾಗಿದೆ. ಹೀಗೆ ವಿನೂತನ ಸಬ್ಜೆಕ್ಟ್ ಮೂಲಕ ಪ್ರೇಕ್ಷಕರನ್ನು ತನ್ನತ್ತ ಸೆಳೆಯುತ್ತಿರುವ ತಂಡಕ್ಕೆ ಮತ್ತೋರ್ವ ಖ್ಯಾತ ನಟ ಎಂಟ್ರಿ ಕೊಟ್ಟಿದ್ದಾರೆ. ಅದು ಮತ್ಯಾರು ಅಲ್ಲ, 'ರಂಗಿತರಂಗ' ಖ್ಯಾತಿಯ ನಟ ನಿರೂಪ್ ಭಂಡಾರಿ. ಮೊದಲ ಬಾರಿಗೆ ನಿರೂಪ್ ಹಾಗೂ ದಿಗಂತ್ ಸ್ಕ್ರೀನ್​ ಶೇರ್ ಮಾಡುತ್ತಿದ್ದಾರೆ.

Nirup Bhandari joins Edagaiye Apaghatakke Karana movie team
ಎಗಡೈ ಬಳಸುವವರಿಗೆ ಅನುಕೂಲ ಆಗುವ ರೀತಿಯಲ್ಲಿ ಹೊಸ ಬಗೆಯ ಹೆಲ್ಮೆಟ್​ ಕೂಡ ಲಾಂಚ್​ ಆಗಿದೆ

ಇತ್ತೀಚಿನ ದಿನಗಳಲ್ಲಿ ಸ್ಟಾರ್ ಕಲಾವಿದರು ಒಟ್ಟಿಗೆ ಸಿನಿಮಾ ಮಾಡುವುದು ತೀರಾ ಅಪರೂಪವಾಗಿದೆ. ಖ್ಯಾತ ಕಲಾವಿದರನ್ನು ಸೇರಿಸಿ ಸಿನಿಮಾ ಮಾಡುವುದು ನಿರ್ಮಾಪಕರಿಗೂ ಸಹ ದೊಡ್ಡ ಸವಾಲಾಗಿದೆ. ಹೀಗಿರುವಾಗ ದಿಗಂತ್ ಸಿನಿಮಾದಲ್ಲಿ ನಿರೂಪ್ ಭಂಡಾರಿ ಕಾಣಿಸಿಕೊಳ್ಳುತ್ತಿರುವುದು ವಿಶೇಷ. ಈ ಸಿನಿಮಾದಲ್ಲಿ ನಿರೂಪ್ ಭಂಡಾರಿ ಅತಿಥಿ ಪಾತ್ರದಲ್ಲಿ ಮಿಂಚಲಿದ್ದಾರೆ. ಅಷ್ಟಕ್ಕೂ ಹೀರೋ ಆಗಿ ಅಬ್ಬರಿಸುತ್ತಿದ್ದ ನಿರೂಪ್ ಭಂಡಾರಿ, ದಿಗಂತ್ ನಟನೆಯ ಈ ಚಿತ್ರದಲ್ಲಿ ವಿಶೇಷ ಪಾತ್ರ ಮಾಡಲು ಕಾರಣ ಸಿನಿಮಾದ ಕಾನ್ಸೆಪ್ಟ್.

ಕಮರ್ಷಿಯಲ್ ಸಿನಿಮಾಗಳ ಮಧ್ಯೆ ಇಂಥ ವಿಭಿನ್ನ ರೀತಿಯ ಕಾನ್ಸೆಪ್ಟ್ ಇರುವ ಚಿತ್ರದ ಕಥೆ ಕೇಳಿ ನಿರೂಪ್ ಇಂಪ್ರೆಸ್ ಆಗಿದ್ದಾರೆ. ಯಂಗ್ ಅಂಡ್ ಎನರ್ಜಿಟಿಕ್ ತಂಡ ನೋಡಿ ಈ ಸಿನಿಮಾದಲ್ಲಿ ತಾವು ಕೂಡ ಭಾಗಿ ಆದರೆ ಚೆನ್ನಾಗಿರುತ್ತದೆ ಎಂದು ಭಾವಿಸಿ ಈ ತಂಡ ಸೇರಿದ್ದಾರೆ.

ಇದನ್ನೂ ಓದಿ: ಹಾಲಿವುಡ್​ ಡೈರೆಕ್ಟರ್​ ಜೊತೆ ರಾಕಿಂಗ್​ ಸ್ಟಾರ್ ಯಶ್​​; ಡಿಸೆಂಬರ್​​ನಲ್ಲಿ ಶೂಟಿಂಗ್​ ಶುರು: ಸಿನಿಮಾ ವಿಶ್ಲೇಷಕರು ಹೇಳಿದ್ದಿಷ್ಟು

ಈ ಸಿನಿಮಾದಲ್ಲಿ ದಿಗಂತ್ ಮಂಚಾಲೆ ಅವರಿಗೆ ಜೋಡಿಯಾಗಿ ನಟಿ ಧನು ಹರ್ಷ ಅಭಿನಯಿಸಿದ್ದಾರೆ. ಇನ್ನೂ ಸಿನಿಮಾದಲ್ಲಿ ಖ್ಯಾತ ನಟಿಯರಾದ ರಾಧಿಕಾ ನಾರಾಯಣ್ ಮತ್ತು ನಿಧಿ ಸುಬ್ಬಯ್ಯ ಕೂಡ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಎಡಗೈಯೇ ಅಪಘಾತಕ್ಕೆ ಕಾರಣ ಚಿತ್ರಕ್ಕೆ ಸಮರ್ಥ್ ಬಿ. ಕಡಕೊಳ್ ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ. ಇದು ಅವರ ಮೊದಲ ನಿರ್ದೇಶನದ ಚಿತ್ರ.

ಶೀರ್ಷಿಕೆಯೇ ಹೇಳುವಂತೆ ಇದು ಎಡಗೈ ಬಳಸುವವರ ಸಮಸ್ಯೆಗಳ ಸುತ್ತ ಸುತ್ತುವ ಸಿನಿಮಾವಾಗಿದೆ. ಹೈಫನ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಅಂಬಿ ನಿಂಗ್ ವಯಸ್ಸಾಯ್ತೋ ಸಿನಿಮಾ ಖ್ಯಾತಿಯ ನಿರ್ದೇಶಕ ಗುರುದತ್ ಗಾಣಿಗ ಮತ್ತು ನಿರ್ದೇಶಕ ಸಮರ್ಥ್ ಬಿ ಕಡಕೊಳ್ ಜೊತೆಯಾಗಿ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಬಹುತೇಕ ಚಿತ್ರೀಕರಣ ಮುಗಿಸಿರೋ ಎಡಗೈಯೇ ಅಪಘಾತಕ್ಕೆ ಕಾರಣ ಸಿನಿಮಾ ಶೀಘ್ರದಲ್ಲೇ ತೆರೆಗೆ ಬರಲಿದೆ.

ಇದನ್ನೂ ಓದಿ: ಆಸ್ಕರ್ 2024: ನಾಮನಿರ್ದೇಶನ ಪ್ರಕ್ರಿಯೆಗೆ ಮಲಯಾಳಂನ '2018: ಎವ್ರಿಒನ್​​ ಈಸ್ ಎ ಹೀರೋ' ಎಂಟ್ರಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.