ಬಳ್ಳಾರಿ: ಈ ವರ್ಷದ ಬಹು ನಿರೀಕ್ಷಿತ ಸಿನಿಮಾಗಳ ಪೈಕಿ ಸ್ಮೈಲ್ ಶ್ರೀನು ನಿರ್ದೇಶನದ 'ಓ ಮೈ ಲವ್' ಚಿತ್ರವು ಮುಂಚೂಣಿಯಲ್ಲಿದೆ. ಇಗಾಗಲೇ ಹಾಡು, ಟೀಸರ್, ಹಾಗೂ ಟ್ರೇಲರ್ ಮೂಲಕ ಸದ್ದು ಮಾಡುತ್ತಿರುವ ಈ ಸಿನಿಮಾಕ್ಕೆ ನಿರೀಕ್ಷೆ ಹೆಚ್ಚುತ್ತಲೇ ಇದೆ ಎಂದು ಸುದ್ದಿಗೋಷ್ಠಿಯಲ್ಲಿ ಚಿತ್ರತಂಡ ತಿಳಿಸಿದೆ.
ಅಕ್ಷಿತ್ ಶಶಿಕುಮಾರ್ (ಸುಪ್ರೀಂ ಹೀರೋ ಶಶಿಕುಮಾರ್ ಇವರ ಪುತ್ರ) ಹಾಗೂ ಕೀರ್ತಿಕಲ್ಕೆರಿ ಪ್ರಮುಖ ಭೂಮಿಕೆಯಲ್ಲಿರುವ ಈ ಸಿನಿಮಾ ಜುಲೈ 15ರಂದು ರಾಜ್ಯಾದ್ಯಂತ ದೊಡ್ಡ ಮಟ್ಟದಲ್ಲಿ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ತಿಳಿಸಿದೆ.
ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್, ರಿಯಲ್ ಸ್ಟಾರ್ ಉಪೇಂದ್ರ, ತೆಲುಗು ಚಿತ್ರರಂಗದ ಸಿನಿಮಾಬ್ರಹ್ಮ ಕೆ.ರಾಘವೇಂದ್ರರಾವ್, ಮಾಜಿ ಪೊಲೀಸ್ ಆಯುಕ್ತ, ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಸಚಿವ ಬಿ. ಶ್ರೀರಾಮುಲು ಚಿತ್ರದ ಹಾಡು ಹಾಗೂ ಟೀಸರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡಕ್ಕೆ ಸಾಥ್ ನೀಡಿದ್ದಾರೆ.
ಜಿ.ಸಿ.ಬಿ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾದ ಈ ಚಿತ್ರಕ್ಕೆ ಜಿ.ರಾಮಾಂಜಿನಿ ಅವರು ಕಥೆ ಬರೆದಿದ್ದಾರೆ. ಸ್ಮೈಲ್ ಶ್ರೀನು ಚಿತ್ರದ ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ಚಿತ್ರದ ಎಲ್ಲಾ ಹಾಡುಗಳಿಗೆ ಡಾ.ವಿ.ನಾಗೇಂದ್ರ ಪ್ರಸಾದ್ ಸಾಹಿತ್ಯ ರಚಿಸಿದ್ದು ಚರಣ್ ಅರ್ಜುನ್ ಸಂಗೀತ ಸಂಯೋಜಿಸಿದ್ದಾರೆ. ಮುರಳಿ ನೃತ್ಯ ನಿರ್ದೇಶನ ಮಾಡಿದ್ದಾರೆ.
ಎಸ್.ನಾರಾಯಣ್, ಸಾಧುಕೋಕಿಲ, ದೇವಗಿಲ್, ಟೆನ್ನಿಸ್ ಕೃಷ್ಣ, ಪವಿತ್ರಾ ಲೋಕೇಶ್ ಹಾಗೂ ಸಂಗೀತಾ, ದೀಪಿಕಾ ಆರಾಧ್ಯ, ಪೃಥ್ವಿರಾಜ್ , ಆನಂದ್, ಶಿಲ್ಪಾ ರವಿ, ಭಾಗ್ಯಶ್ರೀ, ರಾಮ್ ಕುಮಾರ್ ಸೇರಿದಂತೆ ಮೊದಲಾದವರು ಚಿತ್ರದ ತಾರಾಗಣದಲ್ಲಿದ್ದಾರೆ. ಎ2 ಮ್ಯೂಸಿಕ್ ಯೂಟ್ಯೂಬ್ ಚಾನಲ್'ನಲ್ಲಿ ಈ ಚಿತ್ರದ ಹಾಡುಗಳು ಹಾಗೂ ಟ್ರೇಲರ್ ಬಿಡುಗಡೆಯಾಗಿದೆ.
ಇದನ್ನೂ ಓದಿ: ಜುಲೈ 15ರಂದು ರಾಜ್ಯಾದ್ಯಂತ 'ಬೆಂಕಿ' ಬಿಡುಗಡೆ