ಪಡ್ಡೆ ಹುಲಿ ಸಿನಿಮಾ ಮೂಲಕ ಸ್ಯಾಂಡಲ್ವುಡ್ನ ಭರವಸೆ ಮೂಡಿಸಿದ ನಟ ಶ್ರೇಯಸ್ ಕೆ ಮಂಜು. ನಿರ್ಮಾಪಕ ಕೆ ಮಂಜು ಅವರ ಮಗ ಈಗಾಗಲೇ ರಾಣಾ, ವಿಷ್ಣು ಪ್ರಿಯ ಸಿನಿಮಾಗಳ ಮೂಲಕ ಜನಮನ್ನಾಣೆ ಗಳಿಸಿದ್ದಾರೆ. ಇದೀಗ ಮತ್ತೊಂದು ಹೊಸ ಸಿನಿಮಾಗೆ ಶ್ರೇಯಸ್ ಸಹಿ ಹಾಕಿದ್ದಾರೆ. ಇದು ಇವರ ನಾಲ್ಕನೇ ಸಿನಿಮಾವಾಗಿದೆ. ಮಧು ಗೌಡ ಗಂಗೂರು ಈ ಚಿತ್ರ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದಲ್ಲಿ ಶ್ರೇಯಸ್ಗೆ ಪ್ರಿಯಾಂಕಾ ಕುಮಾರ್ ನಾಯಕಿಯಾಗಿ ಬಣ್ಣ ಹಚ್ಚಲಿದ್ದಾರೆ.
ಮಧು ಗೌಡ ಗಂಗೂರು ಈ ಹಿಂದೆ ದುರ್ಗ, ನೀಲಿ ಸೀರಿಯಲ್ ಸೇರಿದಂತೆ ಒಂದಷ್ಟು ಸಿನಿಮಾಗಳಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದು, ಇದೀಗ ಪೂರ್ಣ ಪ್ರಮಾಣದ ನಿರ್ದೇಶನ ಮಾಡುತ್ತಿದ್ದಾರೆ. ಅಭಿಷೇಕ್ ಅಂಬರೀಶ್ ನಟನೆಯ ಬ್ಯಾಡ್ ಮ್ಯಾನರ್ಸ್ ಹಾಗೂ ಎಪಿ ಅರ್ಜುನ್ ಹಾಗೂ ವಿರಾಟ್ ನಟನೆಯ ಅದ್ಧೂರಿ ಲವರ್ ಸಿನಿಮಾದಲ್ಲಿ ನಾಯಕಿಯಾಗಿ ಬಣ್ಣ ಹಚ್ಚಿರುವ ಪ್ರಿಯಾಂಕಾಗೆ ಇದು ಮೂರನೇ ಚಿತ್ರ. ಏಷ್ಯಾನೆಟ್ ಮೂವೀ ಬ್ಯಾನರ್ ನಟಿ ಆರ್ ಸಂತೋಷ್ ಕುಮಾರ್(ಎಸ್ ವಿಟಿ) ಚಿತ್ರ ನಿರ್ಮಾಣ ಮಾಡಿದ್ದು, ಅರ್ಜುನ್ ಜನ್ಯ ಸಂಗೀತ, ಗಗನ್ ಗೌಡ ಛಾಯಾಗ್ರಹಣ, ರವಿವರ್ಮಾ ಸಾಹಸ, ರಾಜೇಶ್ ಸಾಲುಂಡಿ ಸಂಭಾಷಣೆ ಚಿತ್ರಕ್ಕಿದೆ.
ಮಾಸ್ ಎಂಟರ್ ಟೈನರ್ ಹಾಗೂ ಕಾಲೇಜ್ ಲವ್ ಸ್ಟೋರಿಯಾಗಿದ್ದು, ಕಾಲೇಜು ವಿದ್ಯಾರ್ಥಿಗಳ ಪಾತ್ರದಲ್ಲಿ ಶ್ರೇಯಸ್ ನಟಿಸುತ್ತಿದ್ದಾರೆ. ಪ್ರಿಯಾಂಕಾ ಅವರು ಬಬ್ಲಿ ಪಾತ್ರದಲ್ಲಿ ನಟಿಸಿದ್ದು, ಇಬ್ಬರ ನಡುವಿನ ಸ್ನೇಹ, ಪ್ರೀತಿಯ ಕಥೆಯನ್ನು ಈ ಚಿತ್ರ ಹೊಂದಿದೆ. ಜೊತೆಗೆ ಒಂದೆರಡು ಆ್ಯಕ್ಷನ್ ಸೀನ್ಗಳು ಕೂಡ ಇದ್ದು, ಇದೊಂದು ಸಂಪೂರ್ಣ ಮನರಂಜನೆಯ ಚಿತ್ರವಾಗಿದೆ ಎಂದು ನಿರ್ದೇಶಕ ಮಧು ಗೌಡ ಗಂಗೂರು ತಿಳಿಸಿದ್ದಾರೆ.
ಈಗಾಗಲೇ ಚಿತ್ರದ ಪ್ರಿ ಪ್ರೊಡಕ್ಷನ್ ಆರಂಭವಾಗಿದ್ದು, ಈ ಚಿತ್ರದ ಮುಹೂರ್ತ ಇದೇ 31ಕ್ಕೆ ನೆರವೇರಲಿದೆ. ಏಪ್ರಿಲ್ ತಿಂಗಳಿಂದ ಶೂಟಿಂಗ್ ಆರಂಭವಾಗಲಿದೆ. ಬೆಂಗಳೂರು ಸೆಂಟ್ರಲ್ ಕಾಲೇಜಿನಲ್ಲಿ, ಕೊಡಗು, ಚಿಕ್ಕಮಗಳೂರು, ಕೇರಳದಲ್ಲಿ ಶೂಟಿಂಗ್ ನಡೆಸಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.
ಪೋಸ್ಟರ್ ಬಿಡುಗಡೆ ಮಾಡಿದ ಫುಲ್ ಮೀಲ್ಸ್: 'ಫ್ಯಾಮಿಲಿ ಪ್ಯಾಕ್' ಸಿನಿಮಾಗಳ ಮೂಲಕ ಮನರಂಜಿಸಿರುವ ಲಿಖಿತ್ ಶೆಟ್ಟಿ ಹೊಸ ಸಿನಿಮಾ ನಿರ್ಮಿಸುತ್ತಿದ್ದಾರೆ. ಈ ಚಿತ್ರಕ್ಕೆ 'ಫುಲ್ ಮೀಲ್ಸ್' ಎಂಬ ಟೈಟಲ್ ನೀಡಲಾಗಿದ್ದು, ಸ್ವತಃ ಅವರೇ ನಾಯಕನಾಗಿ ನಟಿಸುತ್ತಿದ್ದಾರೆ. ಸಿನಿಮಾದ ನೂತನ ಪೋಸ್ಟರ್ ಬಿಡುಗಡೆಗೊಂಡಿದ್ದು, ಮೆಚ್ಚುಗೆ ವ್ಯಕ್ತವಾಗುತ್ತಿದೆ. ಹೀಗಾಗಿ ಸಿನಿಮಾ ಕೂಡಾ ನಿರೀಕ್ಷೆ ಹೆಚ್ಚಿಸಿದೆ. ದಿಯಾ ಸಿನಿಮಾ ಖ್ಯಾತಿಯ ಖುಷಿ ರವಿ, ತೇಜಸ್ವಿನಿ ಶರ್ಮಾ ನಾಯಕಿಯಾಗಿ ನಟಿಸುತ್ತಿದ್ದಾರೆ. ರಂಗಾಯಣ ರಘು, ಸಾಧುಕೋಕಿಲ, ವಿಜಯ್ ಚೆಂಡೂರ್, ರಾಜೇಶ್ ನಟರಂಗ, ರಮೇಶ್ ಪಂಡಿತ್, ಹೊನ್ನವಳ್ಳಿ ಕೃಷ್ಣ ಸೇರಿದಂತೆ ಹಲವು ತಾರಾ ಬಳಗ ಈ ಚಿತ್ರದಲ್ಲಿದೆ. ಈಗಾಗಲೇ ಚಿತ್ರತಂಡ ಶೇ 50ರಷ್ಟು ಶೂಟಿಂಗ್ ಮುಗಿಸಿದೆ.
ಇದನ್ನೂ ಓದಿ: ಸ್ಯಾಂಡಲ್ವುಡ್ಗೆ ಮತ್ತೊಬ್ಬ ಪ್ರತಿಭಾನ್ವಿತ ಖಳನಟ; ನೆಗೆಟಿವ್ ಪಾತ್ರದಲ್ಲಿ ಸುಬ್ಬರಾವ್