ETV Bharat / entertainment

Parimala Dsouza: ಯುವ ಪ್ರತಿಭೆ ವಿನೋದ್​ ನಿರ್ಮಾಣದ 'ಪರಿಮಳ ಡಿಸೋಜಾ' ಟ್ರೇಲರ್​ ಬಿಡುಗಡೆ

ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ 'ಪರಿಮಳ ಡಿಸೋಜಾ' ಚಿತ್ರದ ಟ್ರೇಲರ್​ ಬಿಡುಗಡೆಯಾಗಿದೆ.

Parimala Dsouza
ಪರಿಮಳ ಡಿಸೋಜಾ
author img

By

Published : Aug 14, 2023, 2:46 PM IST

ಕನ್ನಡ ಚಿತ್ರರಂಗದಲ್ಲಿ ಟೈಟಲ್​ನಿಂದಲೇ ಸಿನಿಮಾ ಪ್ರೇಕ್ಷಕರಲ್ಲಿ ಕುತೂಹಲ ಹುಟ್ಟಿಸಿರುವ ಚಿತ್ರ 'ಪರಿಮಳ ಡಿಸೋಜಾ'. ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಹಿರಿಯ ‌ನಟಿ ಭವ್ಯ ಸಾಥ್​ ನೀಡಿದ್ದಾರೆ. ಯುವ ಪ್ರತಿಭೆ ವಿನೋದ್ ಶೇಷಾದ್ರಿ ನಟಿಸಿ, ನಿರ್ಮಾಣ ಮಾಡಿರುವ 'ಪರಿಮಳ ಡಿಸೋಜಾ' ಚಿತ್ರದ ಟ್ರೈಲರ್ ಅನ್ನು ಅವರು ಬಿಡುಗಡೆಗೊಳಿಸಿದ್ದಾರೆ. ಜೊತೆಗೆ ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಯಶಸ್ಸು ಕಾಣಲಿ ಎಂದು ಶುಭಹಾರೈಸಿದ್ದಾರೆ. ಈ ವೇಳೆ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ. ಮಾ. ಹರೀಶ್, ನಿರ್ಮಾಪಕ ಎಂ.ಎನ್ ಸುರೇಶ್ ಉಪಸ್ಥಿತರಿದ್ದರು.

ಈ ವೇಳೆ ಮಾತನಾಡಿದ ನಿರ್ದೇಶಕ ಡಾ. ಗಿರಿಧರ್​ ಹೆಚ್​ ಟಿ, "ಇದೊಂದು ಸಾಂಸಾರಿಕ ಕಥೆ ಒಳಗೊಂಡ ಸಿನಿಮಾ. ಹಿಂದೂ ಕುಟುಂಬದ ಮನೆಗೆ ಕ್ರಿಶ್ಚಿಯನ್ ಹುಡುಗಿ ಸೊಸೆಯಾಗಿ ಬರುತ್ತಾರೆ. ಎಲ್ಲವೂ ಚೆನ್ನಾಗಿ ನಡೆಯುತ್ತಿರುವಾಗ ಒಂದು ಘಟನೆ ನಡೆಯುತ್ತದೆ. ಆ ಘಟನೆ ಏನು? ಅದರಿಂದ ಏನೆಲ್ಲಾ ಆಗುತ್ತದೆ ಎಂಬುದೇ ಈ ಚಿತ್ರದ ಕಥಾವಸ್ತು. ಇದರಲ್ಲಿ ಹೀರೋ ಅಂತ ಯಾರು ಇಲ್ಲ. ಕಥೆಯೇ ನಾಯಕ" ಎಂದು ತಿಳಿಸಿದರು.

ಬಳಿಕ‌ ಚಿತ್ರದ ನಿರ್ಮಾಪಕ ಹಾಗೂ ನಟ ವಿನೋದ್ ಶೇಷಾದ್ರಿ ಮಾತನಾಡಿ, "ಈ ಚಿತ್ರ ನಿರ್ಮಾಣ ಮಾಡುವ ಜೊತೆಗೆ ಪೊಲೀಸ್ ಪಾತ್ರ ಕೂಡ ಮಾಡಿದ್ದೇನೆ. ಜೊತೆಗೆ ಚಿತ್ರದ ಒಂದು ಗೀತೆಗೆ ಸಾಹಿತ್ಯ ಕೂಡ ಬರೆದಿದ್ದೇನೆ. ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಕಥಾ ಹಂದರ ಒಳಗೊಂಡ ಆ್ಯಕ್ಷನ್, ಸೆಂಟಿಮೆಂಟ್, ಫ್ಯಾಮಿಲಿ ಮನರಂಜನೆ ಇರುವ ಕೌಟುಂಬಿಕ ಚಿತ್ರ. ಚಿತ್ರದಲ್ಲಿ ಒಟ್ಟು 107 ಕಲಾವಿದರು ನಟಿಸಿದ್ದಾರೆ" ಎಂದು ಹೇಳಿದರು.

ಇದೇ ವೇಳೆ ಕಲಾವಿದರಾದ ಕೋಮಲ ಬನವಾಸೆ, ಸುನೀಲ್ ಮೋಹಿತ್, ರೋಹಿಣಿ ಜಗನ್ನಾಥ, ಚಂದನಾ ಶ್ರೀನಿವಾಸ, ಶಿವಕುಮಾರ ಆರಾಧ್ಯ ಹಾಗೂ ಸಂಕಲನಕಾರ ಸಂಜೀವ ರೆಡ್ಡಿ, ಗಾಯಕಿ ಶೃತಿ ಉಪಸ್ಥಿತರಿದ್ದರು. ವಿಲೇಜ್ ರೋಡ್ ಫಿಲಂಸ್ ಬ್ಯಾನರ್‌ ಅಡಿಯಲ್ಲಿ ನಿರ್ಮಾಣ ಆಗಿರುವ ಈ ಸಿನಿಮಾ ಸೆಪ್ಟೆಂಬರ್ 15 ರಂದು ತೆರೆ ಕಾಣಲಿದೆ.

ಕನ್ನಡ ಚಿತ್ರರಂಗದಲ್ಲಿ ಹೊಸ ಹೊಸ ಸಿನಿಮಾಗಳು ಬರುತ್ತಲೇ ಇದೆ. ಆ್ಯಕ್ಷನ್, ಸೆಂಟಿಮೆಂಟ್, ಫ್ಯಾಮಿಲಿ ಮನರಂಜನೆ, ಥ್ರಿಲ್ಲರ್ ಹೀಗೆ ವಿವಿಧ ಪ್ರಕಾರದ ಚಿತ್ರಗಳು ತೆರೆ ಕಂಡಿವೆ. ಇನ್ನು ಕೆಲವು ಬಿಡುಗಡೆಗೆ ಸಿದ್ಧಗೊಂಡಿವೆ. ಮತ್ತೊಂದಿಷ್ಟು ಸೆಟ್ಟೇರಿದೆ. ಇದೀಗ ​'ಪರಿಮಳ ಡಿಸೋಜಾ' ಎಂಬ ವಿಭಿನ್ನ ಕಥಾಹಂದರ ಹೊಂದಿರುವ ಸಿನಿಮಾ ಇನ್ನೇನು ಕೆಲವೇ ದಿನಗಳಲ್ಲಿ ಬಿಡುಗಡೆಯಾಗಲಿದ್ದು, ಪ್ರೇಕ್ಷಕರು ಎಷ್ಟು ಮಾರ್ಕ್ಸ್​ ಕೊಡಲಿದ್ದಾರೆ ಅನ್ನೋದು ಕಾದು ನೋಡಬೇಕಿದೆ.

ಇದನ್ನೂ ಓದಿ: ದುಬೈನಲ್ಲಿ ನಡೆಯಲಿದೆ ಭಾರತೀಯ ಚಿತ್ರರಂಗದ ಪ್ರತಿಷ್ಠಿತ ಪ್ರಶಸ್ತಿ ಕಾರ್ಯಕ್ರಮ 'SIIMA 2023'

ETV Bharat Logo

Copyright © 2024 Ushodaya Enterprises Pvt. Ltd., All Rights Reserved.