ಪ್ರಭಾಸ್, ನಟಿ ಕೃತಿ ಸನೋನ್ ಅಭಿನಯದ, ಓಂ ರಾವತ್ ನಿರ್ದೇಶನದ ಬಹು ನಿರೀಕ್ಷಿತ ಆದಿಪುರುಷ್ ಸಿನಿಮಾದ ಟೀಸರ್ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ನವರಾತ್ರಿ ಹಬ್ಬದ ಸಮಯದಲ್ಲಿ ಅಯೋಧ್ಯೆಯಲ್ಲಿ ನಡೆಯಲಿರುವ ಅದ್ಧೂರಿ ಸಮಾರಂಭದಲ್ಲಿ ಆದಿ ಪುರುಷ್ ಟೀಸರ್ ಬಿಡುಗಡೆ ಮಾಡಲು ಚಿತ್ರ ತಯಾರಕರು ಸಜ್ಜಾಗಿದ್ದಾರೆ. ವರದಿಗಳ ಪ್ರಕಾರ, ಪ್ರಭಾಸ್, ಕೃತಿ ಸನೋನ್, ಸನ್ನಿ ಸಿಂಗ್ ಮತ್ತು ಓಂ ರಾವುತ್ ಗ್ರ್ಯಾಂಡ್ ಈವೆಂಟ್‌ನಲ್ಲಿ ಆದಿಪುರುಷ್ ಟೀಸರ್ ಅನ್ನು ಬಿಡುಗಡೆ ಮಾಡಲಿದ್ದಾರೆ.
- " class="align-text-top noRightClick twitterSection" data="
">
ಅಯೋಧ್ಯೆಯಲ್ಲಿ ನಡೆಯುವ ರಾವಣ ದಹನ ಕಾರ್ಯಕ್ರಮದಲ್ಲಿ ಪ್ರಭಾಸ್ ಭಾಗಿಯಾಗಿ, ಟೀಸರ್ ರಿಲೀಸ್ ಮಾಡಲಿದ್ದಾರೆ. ಶ್ರೀರಾಮ ಜನ್ಮಭೂಮಿ ಆಗಿರುವ ಅಯೋಧ್ಯೆಯ ಮೈದಾನವೊಂದರಲ್ಲಿ ನಡೆಯುವ ಅದ್ದೂರಿ ಕಾರ್ಯಕ್ರಮದಲ್ಲೇ ಆದಿಪುರುಷ್ ಟೀಸರ್ ಲಾಂಚ್ ಕಾರ್ಯಕ್ರಮ ನಡೆಯಲಿದೆ ಎಂಬ ಮಾಹಿತಿ ಸಿಕ್ಕಿದೆ.
ಇದು ಭಾರತೀಯ ಮಹಾಕಾವ್ಯದ ರೂಪಾಂತರವಾಗಿದೆ. ಇದು ಕೆಟ್ಟದ್ದರ ಮೇಲೆ ಒಳ್ಳೆಯದರ ವಿಜಯದ ಸುತ್ತ ಸುತ್ತುತ್ತದೆ. ರೆಟ್ರೋಫೈಲ್ಸ್‌ನ ಭೂಷಣ್ ಕುಮಾರ್, ಕ್ರಿಶನ್ ಕುಮಾರ್, ಓಂ ರಾವುತ್, ಪ್ರಸಾದ್ ಸುತಾರ್ ಹಾಗೂ ರಾಜೇಶ್ ನಾಯರ್ ಈ ಸಿನಿಮಾವನ್ನು 400 ಕೋಟಿ ಬಜೆಟ್ನಲ್ಲಿ ನಿರ್ಮಿಸುತ್ತಿದ್ದಾರೆ.
ಆದಿಪುರುಷ್‌ನಲ್ಲಿ ಗ್ರಾಫಿಕ್ಸ್ ಬಾಹುಬಲಿ ಸರಣಿಗಿಂತ ಮೂರು ಪಟ್ಟು ಹೆಚ್ಚು ಇರಲಿದೆ ಎಂದು ಹೇಳಲಾಗಿದೆ. ರಾಮಾಯಣ ಆಧಾರಿತ ಪೌರಾಣಿಕ ಚಲನಚಿತ್ರವನ್ನು ಹಿಂದಿ ಮತ್ತು ತೆಲುಗಿನಲ್ಲಿ ಏಕಕಾಲದಲ್ಲಿ ಚಿತ್ರೀಕರಿಸಲಾಗಿದೆ. ಚಿತ್ರವು ಅದರ ಡಬ್ಬಿಂಗ್ ಆವೃತ್ತಿಗಳೊಂದಿಗೆ ತಮಿಳು, ಮಲಯಾಳಂ ಮತ್ತು ಕನ್ನಡದಲ್ಲಿ 2023ರ ಜನವರಿ 12ರಂದು ವಿಶ್ವಾದ್ಯಂತ ತೆರೆಗೆ ಬರಲಿದೆ.
- " class="align-text-top noRightClick twitterSection" data="
">
ಇದನ್ನೂ ಓದಿ: ಪುಷ್ಪ ಸಿನಿಮಾದ ಸಾಮಿ ಸಾಮಿ ಹಾಡಿಗೆ ಡ್ಯಾನ್ಸ್.. ಈ ಬಾಲಕಿಯನ್ನು ಭೇಟಿಯಾಗಬೇಕೆಂದ ನಟಿ ರಶ್ಮಿಕಾ ಮಂದಣ್ಣ
ಬಹು ನಿರೀಕ್ಷಿತ ರಾಮಾಯಣ ರೂಪಾಂತರವು ಭಗವಾನ್ ರಾಮನ ವೈಭವವನ್ನು ತೋರಿಸುವ ಗುರಿ ಹೊಂದಿದೆ ಎಂದು ನಿರ್ದೇಶಕರು ಹೇಳಿದ್ದಾರೆ. 'ದಿ ಫಸ್ಟ್ ಮ್ಯಾನ್' ಎಂದು ಅನುವಾದಿಸುವ ಆದಿಪುರುಷ, ರಾಮಾಯಣ ಮಹಾಕಾವ್ಯವನ್ನು ಆಧರಿಸಿದ ಹಿಂದೂ ಐತಿಹಾಸಿಕ ಚಲನಚಿತ್ರವಾಗಲಿದೆ. ಇದರಲ್ಲಿ ರಾವಣನಾಗಿ ಸೈಫ್ ಅಲಿ ಖಾನ್ ನಟಿಸಿದ್ದಾರೆ.