ETV Bharat / entertainment

ಪ್ರಜಾರಾಜ್ಯ ಟೀಸರ್​ ರಿಲೀಸ್​​: ಶೀಘ್ರದಲ್ಲೇ ಸಿನಿಮಾ ಬಿಡುಗಡೆ

author img

By

Published : Dec 14, 2022, 3:52 PM IST

ಪ್ರಜಾ ರಾಜ್ಯ ಟೀಸರ್ ಇಂದು ಬಿಡುಗಡೆ ಆಗಿದೆ. ಶೀಘ್ರದಲ್ಲೇ ಸಿನಿಮಾ ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧತೆ ನಡೆಸುತ್ತಿದೆ.

Prajarajya movie teaser released
ಪ್ರಜಾರಾಜ್ಯ ಟೀಸರ್​ ರಿಲೀಸ್​​

ಚಿತ್ರೀಕರಣ ಮುಗಿಸಿ ಬಿಡುಗಡೆಗೆ ಸಜ್ಜಾಗಿರುವ ಪ್ರಜಾಪ್ರಭುತ್ವದ ಮಹತ್ವ ಸಾರಲಿರುವ " ಪ್ರಜಾರಾಜ್ಯ" ಚಿತ್ರದ ಟೀಸರ್ ಬಿಡುಗಡೆ ಆಗಿದೆ. ಇಂದು ಪ್ರಜಾರಾಜ್ಯ ಟೀಸರ್ ರಿಲೀಸ್​​ ಮಾಡಿದ ನಟ ದೇವರಾಜ್ ಈ ಚಿತ್ರದಲ್ಲಿ ಮುಖ್ಯ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ.

Prajarajya movie teaser released
ಪ್ರಜಾರಾಜ್ಯ ಟೀಸರ್​ ರಿಲೀಸ್​​

ಪ್ರಜಾರಾಜ್ಯ ಟೀಸರ್​ ಬಿಡುಗಡೆ ಬಳಿಕ ಮಾತನಾಡಿದ ಅವರು, ಈ ಚಿತ್ರದಲ್ಲಿ ರಾಜಕೀಯ ಮುಖಂಡನ ಪಾತ್ರ ಮಾಡಿದ್ದೇನೆ. ಈಗಿನ ರಾಜಕೀಯದ ಲೋಪ ದೋಷಗಳನ್ನು ತೋರಿಸಿ, ಅದಕ್ಕೆ ಪರಿಹಾರ ಹೇಳುವ ಪ್ರಯತ್ನವನ್ನು ಈ ಚಿತ್ರದಲ್ಲಿ ಮಾಡಲಾಗಿದೆ. ಟೀಸರ್ ಚೆನ್ನಾಗಿದೆ. ಈ ಚಿತ್ರದ ನಿರ್ಮಾಪಕರಾದ ವರದರಾಜು ಅವರು ವೈದ್ಯರಾಗಿದ್ದು, ಸಾಮಾಜಿಕ ಕಾಳಜಿಯಿರುವ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಚಿತ್ರ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.

ಇನ್ನು ಪ್ರಜಾರಾಜ್ಯ ಚಿತ್ರದಲ್ಲಿ ಅಭಿನಯಿಸುವುದರ ಜೊತೆಗೆ ನಿರ್ದೇಶನ ಮಾಡಿದ್ದಾರೆ ವಿಜಯ್ ಭಾರ್ಗವ. ರೈತನಾಗಿ ಕಾಣಿಸಿಕೊಂಡಿರುವ ವಿಜಯ್ ಭಾರ್ಗವ ಜೋಡಿಯಾಗಿ ದಿವ್ಯ ಅಭಿನಯಿಸಿದ್ದಾರೆ. ಇದರ ಜೊತೆಗೆ ಮೀಸೆ ಪ್ರಕಾಶ್, ಎಸ್ಕಾರ್ಟ್ ಶ್ರೀನಿವಾಸ್, ಚಿಕ್ಕ ಹೆಜ್ಜಾಜಿ‌ ಮಹದೇವ್, ಅಮೂಲ್ಯ ಸೇರಿದಂತೆ ಮುಂತಾದವರು ಕೂಡಾ ನಟಿಸಿದ್ದಾರೆ.

ನಿರ್ಮಾಪಕ ಡಾ. ವರದರಾಜು ಮಾತನಾಡಿ, ಭಾರತಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾಗಿದೆ. ನಮ್ಮ ಅಜ್ಜಂದಿರ ಕಾಲದಲ್ಲಿ ಸ್ವಾತಂತ್ರ್ಯ ಬಂದ ರಜತ ಮಹೋತ್ಸವ ಆಚರಿಸಿದರು. ನಮ್ಮ ತಂದೆಯ ಕಾಲದವರು ಸುವರ್ಣ ಮಹೋತ್ಸವ ಆಚರಣೆ ಮಾಡಿದರು. ನಾವು ಈಗ ‍ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಿಸುತ್ತಿದ್ದೇವೆ.

ಇಷ್ಟು ವರ್ಷವಾದರೂ ನಾವು ಯೋಚಿಸುವುದು ನಮಗೆ ಸ್ವಾತಂತ್ರ್ಯ ತಂದುಕೊಟ್ಟವರು ಯಾರು? ಎಂದು. ಆದರೆ, ನಮಗೆ ಬೇಕಾದ ಆರ್ಥಿಕ ಸ್ವಾತಂತ್ರ್ಯದ ಬಗ್ಗೆ ನಾವು ಯೋಚಿಸಿಯೇ ಇಲ್ಲ. ಅಂಬೇಡ್ಕರ್ ಅವರ ಸಂವಿಧಾನದಲ್ಲಿ ಹೇಳಿರುವುದು ಆರ್ಥಿಕ ಸ್ವಾತಂತ್ರ್ಯದ ಬಗ್ಗೆ ಯೋಚಿಸಿ ಎಂದು. ನಾವು ಅದರ ಬಗ್ಗೆ ಯೋಚಸುತ್ತಲೇ ಇಲ್ಲ ಎಂಬ ಪ್ರಧಾನ ಅಂಶದೊಂದಿಗೆ ಈ ಚಿತ್ರವನ್ನು ನಿರ್ಮಾಣ ಮಾಡಲಾಗಿದೆ. ಈ ಚಿತ್ರವನ್ನು ನೋಡಿ, ದೇಶದ ಪ್ರಜೆಗಳಾಗಿ ನಮ್ಮ ಕರ್ತವ್ಯ ಏನು ? ಎಂದು ಎಲ್ಲರೂ ತಿಳಿಯಬಹುದು ಎಂದರು.

ಚಿತ್ರದಲ್ಲಿ ಐದು ಹಾಡುಗಳಿವೆ. ಯೋಗರಾಜ್ ಭಟ್, ನಾಗೇಂದ್ರ ಪ್ರಸಾದ್, ವಿಜಯ್ ಭಾರ್ಗವ ಬರೆದಿರುವ ಹಾಡುಗಳನ್ನು ರಿಯಲ್ ಸ್ಟಾರ್ ಉಪೇಂದ್ರ, ವಿಜಯ್ ಪ್ರಕಾಶ್ ಸೇರಿ ಕೆಲ ಖ್ಯಾತ ಗಾಯಕರು ಹಾಡಿದ್ದಾರೆ ಎಂದು ಸಂಗೀತ ನಿರ್ದೇಶಕ ವಿಜೇತ್ ಮಂಜಯ್ಯ ತಿಳಿಸಿದರು.

ಇದನ್ನೂ ಓದಿ: ಸಾಯಿಧರಮ್ ತೇಜ್ 'ವಿರೂಪಾಕ್ಷ'​​​ ಸಿನಿಮಾದಲ್ಲಿ ಕನ್ನಡದ ಸಂಗೀತ ನಿರ್ದೇಶಕನ ಕಮಾಲ್

ನಿರ್ದೇಶಕ ಮಹೇಶ್ ಕುಮಾರ್, ಒಕ್ಕಲಿಗ ಸಂಘದ ನಿರ್ದೇಶಕರಾದ ಡಿ.ಕೆ.ರಮೇಶ್, ನಿರ್ಮಾಣ ನಿರ್ವಾಹಕ ರವಿಶಂಕರ್ ಸೇರಿದಂತೆ ಅನೇಕ ಗಣ್ಯರು ಸಮಾರಂಭಕ್ಕೆ ಆಗಮಿಸಿ, ಚಿತ್ರಕ್ಕೆ ಶುಭ ಕೋರಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.