ETV Bharat / entertainment

ಕನ್ನಡ ರಾಜ್ಯೋತ್ಸವದಂದು ನೆರವೇರಿತು ಪ್ರಜ್ವಲ್ ದೇವರಾಜ್ ನಟನೆಯ 'ಚೀತಾ'ದ ಮುಹೂರ್ತ - Prajwal Devaraj upcoming movie

Cheetah launch event: ಪ್ರಜ್ವಲ್ ದೇವರಾಜ್ ಮುಖ್ಯಭೂಮಿಕೆಯ 39ನೇ ಸಿನಿಮಾ 'ಚೀತಾ'ದ ಮುಹೂರ್ತ ಸಮಾರಂಭ ಇಂದು ನೆರವೇರಿತು.

Cheetah launch event
ಪ್ರಜ್ವಲ್ ದೇವರಾಜ್ ಸಿನಿಮಾ ಚೀತಾ
author img

By ETV Bharat Karnataka Team

Published : Nov 1, 2023, 7:46 PM IST

ಕನ್ನಡ ಚಿತ್ರರಂಗದಲ್ಲಿ ನೃತ್ಯ ನಿರ್ದೇಶಕರು ಡೈರೆಕ್ಟರ್ ಆಗೋದು ಹೊಸತೇನಲ್ಲ. ಇದೀಗ ಸ್ಯಾಂಡಲ್​​ವುಡ್​ನ ಬಹುತೇಕ ಸ್ಟಾರ್ ನಟರ ಚಿತ್ರಗಳಿಗೆ ನೃತ್ಯ ಸಂಯೋಜನೆ ಮಾಡಿರುವ ನೃತ್ಯ ನಿರ್ದೇಶಕ ರಾಜ ಕಲೈ ಕುಮಾರ್ ಅವರು ಪ್ರಜ್ವಲ್ ದೇವರಾಜ್ ಮುಖ್ಯಭೂಮಿಕೆಯ "ಚೀತಾ" ಸಿನಿಮಾಗೆ ಆ್ಯಕ್ಷನ್ ಕಟ್ ಹೇಳುವ ಮೂಲಕ ನಿರ್ದೇಶಕರಾಗುತ್ತಿದ್ದಾರೆ‌. ಕನ್ನಡ ರಾಜ್ಯೋತ್ಸವದ ಶುಭ ದಿನದಂದು ಹೆಚ್ ಎಂ ಟಿ ಶಾಲೆ ಆಟದ ಮೈದಾನದಲ್ಲಿ ಚೀತಾ ಚಿತ್ರದ ಮುಹೂರ್ತ ಸಮಾರಂಭ ನೆರವೇರಿದೆ. ನಟ ಪ್ರಜ್ವಲ್ ದೇವರಾಜ್ ಕನ್ನಡ ಬಾವುಟ ಹಾರಿಸೋ ಮೂಲಕ ತಮ್ಮ ಚಿತ್ರಕ್ಕೆ ಚಾಲನೆ ನೀಡಿದರು.

ಕಳೆದ 23 ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಡ್ಯಾನ್ಸರ್ ಆಗಿ, ಡ್ಯಾನ್ಸ್ ಮಾಸ್ಟರ್ ಆಗಿ ಕಾರ್ಯ ನಿರ್ವಹಿಸಿದ್ದೇನೆ ಎಂದು ಮಾತು ಶುರು ಮಾಡಿದ ರಾಜ ಕಲೈ ಕುಮಾರ್ ಅವರು, ಇದು ನನ್ನ ನಿರ್ದೇಶನದ ಚೊಚ್ಚಲ ಚಿತ್ರ. ಪ್ರಜ್ವಲ್ ಅವರ 39ನೇ ಚಿತ್ರವನ್ನು ನಾನು ನಿರ್ದೇಶಿಸುತ್ತಿದ್ದೇನೆ‌. ಈ ಚಿತ್ರದ ಕುರಿತು ಹೇಳುವುದಾದರೆ, ಇದೊಂದು ಮಾರ್ಕೆಟ್​ನಲ್ಲಿ ನಡೆಯುವ ಕಥೆ. ಮಾರ್ಕೆಟ್​​ನಲ್ಲಿನ ವ್ಯಾಪಾರ, ವಹಿವಾಟು ಹಾಗೂ ಅಲ್ಲಿ ಕೆಲಸ ಮಾಡುವವರು ಎಲ್ಲಾ ಸೂಪರ್ ಫಾಸ್ಟ್. ನಮ್ಮ ಚಿತ್ರದ ನಾಯಕ ಕೂಡ ಚಿರತೆಯಷ್ಟೇ ವೇಗದವನು. ಹಾಗಾಗಿ ನಮ್ಮ ಚಿತ್ರಕ್ಕೆ "ಚೀತಾ" ಎಂದು ಹೆಸರಿಟ್ಟಿದ್ದೇವೆ. ಕಲಾ ನಿರ್ದೇಶಕ ಶಿವು ಅವರು ಅದ್ಧೂರಿ ಮಾರ್ಕೆಟ್ ಸೆಟ್ ನಿರ್ಮಾಣ ಮಾಡುತ್ತಿದ್ದಾರೆ. ಆ ಸೆಟ್​ನಲ್ಲೇ ಚಿತ್ರದ ಬಹುತೇಕ ಚಿತ್ರೀಕರಣ ನಡೆಯಲಿದೆ. ಶೃತಿ ಹರಿಹರನ್, ಗುರುರಾಜ್ ಜಗ್ಗೇಶ್, ಶಿವರಾಜ ಕೆ ಆರ್ ಪೇಟೆ, ತೆಲುಗು ನಟ ಸುನೀಲ್, ಗೋವಿಂದೇ ಗೌಡ, ಅಭಯ್ ಪುನೀತ್ ಸೇರಿದಂತೆ ಮುಂತಾದವರು ನಮ್ಮ ಚಿತ್ರದಲ್ಲಿ ನಟಿಸಲಿದ್ದಾರೆ ಎಂದು ಮಾಹಿತಿ ಹಂಚಿಕೊಂಡರು.

Prajwal Devaraj
ಪ್ರಜ್ವಲ್ ದೇವರಾಜ್

ನಟ ಪ್ರಜ್ವಲ್ ದೇವರಾಜ್ ಮಾತನಾಡಿ, ಕಲೈ‌ ಮಾಸ್ಟರ್ ನೃತ್ಯ ನಿರ್ದೇಶಕರಾದಾಗ ನೃತ್ಯ ಸಂಯೋಜಿಸಿದ ಮೊದಲ ಗೀತೆಗೂ ನಾನೇ ನಾಯಕನಾಗಿದ್ದೆ. ಈಗ ಅವರು ನಿರ್ದೇಶಿಸುತ್ತಿರುವ ಮೊದಲ ಚಿತ್ರಕ್ಕೂ ನಾನೇ ನಾಯಕ. ನಿರ್ದೇಶಕರು ಒಳ್ಳೆ ಕಥೆ ರೆಡಿ ಮಾಡಿಕೊಂಡಿದ್ದಾರೆ. ಮಾರ್ಕೆಟ್​​ನಲ್ಲೇ ಹುಟ್ಟಿ, ಅಲ್ಲೇ ಬೆಳೆಯುವ ಹುಡುಗನ ಪಾತ್ರ ನನ್ನದು, ತುಂಬಾ ಚೆನ್ನಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: '12th ಫೇಲ್​​' ಸಿನಿಮಾದಿಂದ ಸ್ಫೂರ್ತಿ ಪಡೆದ ರಿಷಬ್​ ಶೆಟ್ಟಿ: ತೇಜಸ್ ಕಲೆಕ್ಷನ್​ ಡೀಟೆಲ್ಸ್ ಇಲ್ಲಿದೆ!

ಪ್ರಜ್ವಲ್ ದೇವರಾಜ್ ಜೋಡಿಯಾಗಿ ಶೃತಿ ಹರಿಹರನ್ ನಟಿಸಲಿದ್ದಾರೆ. ಜೊತೆಗೆ ಗುರುರಾಜ್ ಜಗ್ಗೇಶ್ ಈ ಸಿನಿಮಾದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರದ ಮತ್ತೊಂದು ವಿಶೇಷತೆಯೆಂದರೆ, ಮೊದಲ ಬಾರಿಗೆ ಸಿನಿಮಾದ ತಂತ್ರಜ್ಞರ ಫೋಟೋಶೂಟ್ ಮಾಡಿಸುವುದರ ಮೂಲಕ ತೆರೆಹಿಂದೆ ದುಡಿಯುವ ತಂತ್ರಜ್ಞರಿಗೆ ವಿಶೇಷ ಗೌರವ ನೀಡಲಾಗಿದೆ. ರಾಜಲಕ್ಷ್ಮಿ ಎಂಟರ್​ಟೈನ್ಮೆಂಟ್ ಲಾಂಛನದಲ್ಲಿ ಪ್ರತಿಭಾ ನರೇಶ್ ಈ ಸಿನಿಮಾವನ್ನು ನಿರ್ಮಾಣ ಮಾಡಲಿದ್ದಾರೆ. ಇದೇ ತಿಂಗಳಿಂದ ಚೀತಾ ಸಿನಿಮಾದ ಚಿತ್ರೀಕರಣ ಆರಂಭವಾಗಲಿದೆ.

ಇದನ್ನೂ ಓದಿ: ಕರ್ನಾಟಕ ರಾಜ್ಯೋತ್ಸವ 2023: ಶಿವಣ್ಣ ಸೇರಿದಂತೆ ಕನ್ನಡ ಚಿತ್ರರಂಗದ ತಾರೆಯರಿಂದ​ ನಾಡಿನ ಜನತೆಗೆ ಶುಭಾಶಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.