ಸ್ಯಾಂಡಲ್ವುಡ್ನ ಅಭಿನಯ ಚಕ್ರವರ್ತಿ ಸುದೀಪ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರ ಪ್ರಚಾರ ಮಾಡುತ್ತೇನೆಂದು ಸ್ಪಷ್ಟಪಡಿಸಿದ್ದಾರೆ. ಈ ಹೇಳಿಕೆ ಬೆನ್ನಲ್ಲೇ ನಟ ಪ್ರಕಾಶ್ ರಾಜ್ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸುತ್ತಿದ್ದಾರೆ. "ಚುನಾವಣೆ ಸೋಲುವ ಭಯದಲ್ಲಿ ಬಿಜೆಪಿ ಪಕ್ಷವು ಸುದೀಪ್ ಹೆಸರನ್ನು ಉಲ್ಲೇಖಿಸುತ್ತಿದೆ. ನಮ್ಮ ಕಿಚ್ಚ ಮಾರಿಕೊಳ್ಳುವವರಲ್ಲ" ಎಂದು ಈ ಹಿಂದೆ ಪ್ರಕಾಶ್ ರಾಜ್ ಟ್ವೀಟ್ ಮಾಡಿದ್ದರು.
-
ಸುದೀಪ್.. ಒಬ್ಬ ಮೇರು ಕಲಾವಿದನಾಗಿ ಸಮಾಜದ ಎಲ್ಲ ವರ್ಗದ ಪ್ರೀತಿಯಿಂದ ಬೆಳೆದ ನೀವು ,ಜನ ಸಾಮಾನ್ಯನ ದನಿಯಾಗುವಿರಿ ಎಂದು ಆಶಿಸಿದ್ದೆ.ಆದರೆ ತಾವು ಒಂದು ರಾಜಕೀಯ ಪಕ್ಷದ ಬಣ್ಣ ಬಳಿದುಕೊಳ್ಳುತ್ತೀರಿ ಎಂದು ನಿರೀಕ್ಷಿಸಿರಲ್ಲ ..ಇನ್ನು ಮುಂದೆ ನಿಮ್ಮನ್ನೂ .. ನಿಮ್ ಪಕ್ಷವನ್ನು ಪ್ರಶ್ನಿಸುವ ಜನ ದನಿಗೆ ತಯಾರಾಗಿರಿ ..@KicchaSudeep #justasking
— Prakash Raj (@prakashraaj) April 6, 2023 " class="align-text-top noRightClick twitterSection" data="
">ಸುದೀಪ್.. ಒಬ್ಬ ಮೇರು ಕಲಾವಿದನಾಗಿ ಸಮಾಜದ ಎಲ್ಲ ವರ್ಗದ ಪ್ರೀತಿಯಿಂದ ಬೆಳೆದ ನೀವು ,ಜನ ಸಾಮಾನ್ಯನ ದನಿಯಾಗುವಿರಿ ಎಂದು ಆಶಿಸಿದ್ದೆ.ಆದರೆ ತಾವು ಒಂದು ರಾಜಕೀಯ ಪಕ್ಷದ ಬಣ್ಣ ಬಳಿದುಕೊಳ್ಳುತ್ತೀರಿ ಎಂದು ನಿರೀಕ್ಷಿಸಿರಲ್ಲ ..ಇನ್ನು ಮುಂದೆ ನಿಮ್ಮನ್ನೂ .. ನಿಮ್ ಪಕ್ಷವನ್ನು ಪ್ರಶ್ನಿಸುವ ಜನ ದನಿಗೆ ತಯಾರಾಗಿರಿ ..@KicchaSudeep #justasking
— Prakash Raj (@prakashraaj) April 6, 2023ಸುದೀಪ್.. ಒಬ್ಬ ಮೇರು ಕಲಾವಿದನಾಗಿ ಸಮಾಜದ ಎಲ್ಲ ವರ್ಗದ ಪ್ರೀತಿಯಿಂದ ಬೆಳೆದ ನೀವು ,ಜನ ಸಾಮಾನ್ಯನ ದನಿಯಾಗುವಿರಿ ಎಂದು ಆಶಿಸಿದ್ದೆ.ಆದರೆ ತಾವು ಒಂದು ರಾಜಕೀಯ ಪಕ್ಷದ ಬಣ್ಣ ಬಳಿದುಕೊಳ್ಳುತ್ತೀರಿ ಎಂದು ನಿರೀಕ್ಷಿಸಿರಲ್ಲ ..ಇನ್ನು ಮುಂದೆ ನಿಮ್ಮನ್ನೂ .. ನಿಮ್ ಪಕ್ಷವನ್ನು ಪ್ರಶ್ನಿಸುವ ಜನ ದನಿಗೆ ತಯಾರಾಗಿರಿ ..@KicchaSudeep #justasking
— Prakash Raj (@prakashraaj) April 6, 2023
ಆದರೆ, ಈ ಮಾತಿಗೆ ತದ್ವಿರುದ್ಧವಾಗಿ ನಟ ಸುದೀಪ್ ಬಿಜೆಪಿ ಪಕ್ಷದ ಪರವಾಗಿ ನಿಂತಿದ್ದಾರೆ. ಹೀಗಾಗಿ ನಟ ಪ್ರಕಾಶ್ "ಕಿಚ್ಚನ ಹೇಳಿಕೆಯಿಂದ ನನಗೆ ಆಘಾತ ಮತ್ತು ನೋವಾಗಿದೆ" ಎಂದು ನಿನ್ನೆಯಷ್ಟೇ ಹೇಳಿದ್ದರು. ಇದೀಗ ಮತ್ತೊಂದಿಷ್ಟು ಟ್ವೀಟ್ ಮಾಡಿರುವ ಪ್ರಕಾಶ್ ರಾಜ್, ಸುದೀಪ್ ಮೇಲಿನ ಅಸಮಾಧಾನವನ್ನು ಈ ಮೂಲಕ ಹೊರಹಾಕಿದ್ದಾರೆ.
ನಿಮ್ ಮಾವನೊ, ಅತ್ತೆನೊ.. "ನೋಡ್ರಪ್ಪ, ನಿಮ್ ಮಾಮನೊ, ನಿಮ್ ಅತ್ತೇನೊ.. ನಿಮ್ ಕಷ್ಟಕಾಲದಲ್ಲಿ ಸಹಾಯ ಮಾಡಿದ್ರೆ, ನೀವು ದುಡಿದಿದ್ರಲ್ಲಿ 10%, 20% ಇಲ್ಲ 30 % ಕೊಡಿ. ಅದು ನಿಮ್ಮಿಷ್ಟ. ಆದರೆ, ಪ್ರಜೆಗಳ 30% ಕೊಳ್ಳೆ ಹೊಡೆಯೊಕ್ ಬಿಡ್ಬೀಡಿ. ಅಷ್ಟೆ..ಅಷ್ಟೇ. ನೀವು ಈಗ ಹೊರಲೇಬೇಕಾದದ್ದು ಬೇರೆ ಬಣ್ಣದ ಲೋಕದ ಭಾರ" ಎಂದು ಹೇಳಿದ್ದಾರೆ.
ಪ್ರಶ್ನಿಸುವ ಜನ ದನಿಗೆ ತಯಾರಾಗಿರಿ: "ಸುದೀಪ್, ಒಬ್ಬ ಮೇರು ಕಲಾವಿದನಾಗಿ ಸಮಾಜದ ಎಲ್ಲ ವರ್ಗದ ಪ್ರೀತಿಯಿಂದ ಬೆಳೆದ ನೀವು, ಜನ ಸಾಮಾನ್ಯನ ದನಿಯಾಗುವಿರಿ ಎಂದು ಆಶಿಸಿದ್ದೆ. ಆದರೆ ತಾವು ಒಂದು ರಾಜಕೀಯ ಪಕ್ಷದ ಬಣ್ಣ ಬಳಿದುಕೊಳ್ಳುತ್ತೀರಿ ಎಂದು ನಿರೀಕ್ಷಿಸಿರಲ್ಲ. ಇನ್ನು ಮುಂದೆ ನಿಮ್ಮನ್ನೂ, ನಿಮ್ ಪಕ್ಷವನ್ನು ಪ್ರಶ್ನಿಸುವ ಜನ ದನಿಗೆ ತಯಾರಾಗಿರಿ" ಎಂದು ಟ್ವೀಟ್ ಮಾಡಿದ್ದಾರೆ.
-
ನೋಡ್ರಪ್ಪ… ನಿಮ್ ಮಾಮನೊ.. ನಿಮ್ ಅತ್ತೇನೊ.. ನಿಮ್ ಕಷ್ಟಕಾಲದಲ್ಲಿ ಸಹಾಯ ಮಾಡಿದ್ರೆ.. ನೀವು ದುಡಿದಿದ್ರಲ್ಲಿ 10%..20% ಇಲ್ಲ 30 % ಕೊಡಿ….. ಅದು ನಿಮ್ಮಿಷ್ಟ .. ಆದ್ರೆ .. ಪ್ರಜೆಗಳ 30% ಕೊಳ್ಳೆ ಹೊಡೆಯೊಕ್ ಬಿಡ್ಬೀಡಿ .. ಅಷ್ಟೆ..ಅಷ್ಟೇ … #justasking
— Prakash Raj (@prakashraaj) April 6, 2023 " class="align-text-top noRightClick twitterSection" data="
">ನೋಡ್ರಪ್ಪ… ನಿಮ್ ಮಾಮನೊ.. ನಿಮ್ ಅತ್ತೇನೊ.. ನಿಮ್ ಕಷ್ಟಕಾಲದಲ್ಲಿ ಸಹಾಯ ಮಾಡಿದ್ರೆ.. ನೀವು ದುಡಿದಿದ್ರಲ್ಲಿ 10%..20% ಇಲ್ಲ 30 % ಕೊಡಿ….. ಅದು ನಿಮ್ಮಿಷ್ಟ .. ಆದ್ರೆ .. ಪ್ರಜೆಗಳ 30% ಕೊಳ್ಳೆ ಹೊಡೆಯೊಕ್ ಬಿಡ್ಬೀಡಿ .. ಅಷ್ಟೆ..ಅಷ್ಟೇ … #justasking
— Prakash Raj (@prakashraaj) April 6, 2023ನೋಡ್ರಪ್ಪ… ನಿಮ್ ಮಾಮನೊ.. ನಿಮ್ ಅತ್ತೇನೊ.. ನಿಮ್ ಕಷ್ಟಕಾಲದಲ್ಲಿ ಸಹಾಯ ಮಾಡಿದ್ರೆ.. ನೀವು ದುಡಿದಿದ್ರಲ್ಲಿ 10%..20% ಇಲ್ಲ 30 % ಕೊಡಿ….. ಅದು ನಿಮ್ಮಿಷ್ಟ .. ಆದ್ರೆ .. ಪ್ರಜೆಗಳ 30% ಕೊಳ್ಳೆ ಹೊಡೆಯೊಕ್ ಬಿಡ್ಬೀಡಿ .. ಅಷ್ಟೆ..ಅಷ್ಟೇ … #justasking
— Prakash Raj (@prakashraaj) April 6, 2023
ಇದನ್ನೂ ಓದಿ: ಸುದೀಪ್ ಪಕ್ಷ ಸೇರ್ಪಡೆ ಬಗ್ಗೆ ಬಿಜೆಪಿ ಹರಡುತ್ತಿರುವುದು ಸುಳ್ಳು ಸುದ್ದಿ.. ಪ್ರಕಾಶ್ ರಾಜ್ ಟ್ವೀಟ್
ಸುದೀಪ್ ಮತ್ತು ಸಿಎಂ ಬೊಮ್ಮಾಯಿ ಅವರ ಮಾಧ್ಯಮಗೋಷ್ಠಿಗೂ ಮುನ್ನ ಪ್ರಕಾಶ್ ರಾಜ್ ಟ್ವೀಟ್ ಮಾಡಿದ್ದರು. ಸದ್ಯ ಪ್ರಕಾಶ್ ರಾಜ್ ಹೇಳಿಕೆಗಳು ಮಿಶ್ರ ಪ್ರತಿಕ್ರಿಯೆ ಪಡೆಯುತ್ತಿದೆ. ಪರ ವಿರೋಧ ಚರ್ಚೆಗಳು ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತವಾಗುತ್ತಿದೆ. ಅವರ ಆಯ್ಕೆಯನ್ನು ಪ್ರಶ್ನಿಸುವ ಹಕ್ಕು ಯಾರಿಗೂ ಇಲ್ಲ ಎಂದು ಕೆಲವು ನೆಟ್ಟಿಗರು ಕಮೆಂಟ್ ಮಾಡುತ್ತಿದ್ದಾರೆ.
ಇನ್ನು ಕೆಲವರು ಅವರು ಯಾವುದೇ ರಾಜಕೀಯ ಪಕ್ಷದ ಪರವಾಗಿ ನಿಲ್ಲಬಾರದಿತ್ತು ಎಂದು ಹೇಳುತ್ತಿದ್ದಾರೆ. ನಟ ಪ್ರಕಾಶ್ ರಾಜ್ ಬಿಜೆಪಿ ಸರ್ಕಾರವನ್ನು ಟೀಕಿಸುತ್ತಲೇ ಬಂದಿದ್ದಾರೆ. ಇದೀಗ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿರುವ ಕಿಚ್ಚ ಸುದೀಪ್ ಅವರು ಸಿಎಂ ಬೊಮ್ಮಾಯಿ ಪರ ನಿಂತಿರುವುದು ಸಹಜವಾಗಿಯೇ ಅವರ ಬೇಸರಕ್ಕೆ ಕಾರಣವಾಗಿದೆ.
ಇದನ್ನೂ ಓದಿ: ಬಿಜೆಪಿಗೆ ನಟ ಸುದೀಪ್ ಬೆಂಬಲ: ಕೇಸರಿ ಪಕ್ಷದ ಲೆಕ್ಕಾಚಾರವೇನು?
ನಟ ಸುದೀಪ್ಗೆ ಬೆದರಿಕೆ: ಇನ್ನು ಸುದೀಪ್ ಅವರಿಗೆ ಬೆದರಿಕೆ ಬಂದಿರುವ ಪ್ರಕರಣ ಸಹ ಸಾಕಷ್ಟು ಸದ್ದು ಮಾಡುತ್ತಿದೆ. ವಿಷಯ ತಿಳಿದ ಅಭಿಮಾನಿಗಳು ಆಘಾತಕ್ಕೊಳಗಾಗಿದ್ದಾರೆ. ಮಾರ್ಚ್ 10ರಂದು ಬೆದರಿಕೆ ಪತ್ರಗಳು ಬಂದಿದ್ದು, ನಟನ ಆಪ್ತ ಜಾಕ್ ಮಂಜು ದೂರಿನ ಮೇರೆಗೆ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಈ ಕೇಸ್ ಅನ್ನು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಸಿಸಿಬಿಗೆ ವರ್ಗಾಯಿಸಿ ಆದೇಶ ಹೊರಡಿಸಿದ್ದಾರೆ. ಈ ಸಂಬಂಧ ತನಿಖೆ ಚುರುಕುಗೊಂಡಿದೆ.