ETV Bharat / entertainment

ರಾಜಮೌಳಿ ಶಿಷ್ಯ ಅಶ್ವಿನ್ ಗಂಗರಾಜು ನಿರ್ದೇಶನದಲ್ಲಿ 1770 ಸಿನಿಮಾ - etv bharata kannada

ಅಶ್ವಿನ್ ಗಂಗರಾಜು ನಿರ್ದೇಶನದಲ್ಲಿ 1770 ಸಿನಿಮಾ ಶೂಟಿಂಗ್​ ದಸರಾ ಹೊತ್ತಿಗೆ ಪ್ರಾರಂಭವಾಗುವ ಸಾಧ್ಯತೆಯಿದೆ.

ರಾಜಮೌಳಿ ಶಿಶ್ಯ ಅಶ್ವಿನ್ ಗಂಗರಾಜು ನಿರ್ದೇಶನದಲ್ಲಿ 1770 ಸಿನಿಮಾ
preparation for shooting of director Ashwin Gangaraju movie 1770
author img

By

Published : Aug 17, 2022, 3:30 PM IST

ರಾಜಮೌಳಿ ನಿರ್ದೇಶನದ ಈಗ ಮತ್ತು ಬಾಹುಬಲಿ ಚಿತ್ರಗಳಿಗೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿರುವ ಅಶ್ವಿನ್ ಗಂಗರಾಜು ಇದೀಗ 1770 ಎಂಬ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ.

1770 ಸಿನಿಮಾ ಬಗ್ಗೆ ಆಫೀಶಿಯಲ್ ಆಗಿ ಅನೌನ್ಸ್​ ಆಗಿದೆ. ಬಂಕಿಮ ಚಂದ್ರ ಚಟರ್ಜಿ ಅವರ ಆನಂದಮಠ ಕಾದಂಬರಿ ಆಧರಿಸಿದ ಬಹುಭಾಷಾ ಚಿತ್ರವನ್ನು ಎಸ್ಎಸ್1 ಎಂಟರ್​ಟೈನ್​ಮೆಂಟ್ ಮತ್ತು ಪಿಕೆ ಎಂಟರ್​ಟೈನ್​ಮೆಂಟ್ ಸಂಸ್ಥೆಗಳಡಿ ಶೈಲೇಂದ್ರ ಕುಮಾರ್, ಸುಜಯ್ ಕುಟ್ಟಿ, ಕೃಷ್ಣಕುಮಾರ್ ಬಿ ಮತ್ತು ಸೂರಜ್ ಶರ್ಮಾ ನಿರ್ಮಿಸುತ್ತಿದ್ದಾರೆ. ಖ್ಯಾತ ಲೇಖಕ ಮತ್ತು ಚಿತ್ರನಿರ್ದೇಶಕ ರಾಮ್ ಕಮಲ್ ಮುಖರ್ಜಿ ಈ ಚಿತ್ರದ ಮಾರ್ಗದರ್ಶಕರಾಗಿ ಕೆಲಸ ಮಾಡುತ್ತಿದ್ದಾರೆ. 1770 ಮೋಷನ್ ಪೋಸ್ಟರ್ ಸಹ ಬಿಡುಗಡೆ ಮಾಡಲಾಗಿದೆ.

ಈ ಹಿಂದೆ ಆಕಾಶವಾಣಿ ಎಂಬ ಚಿತ್ರ ನಿರ್ದೇಶಿಸಿದ್ದ ಅಶ್ವಿನ್ ಗಂಗರಾಜು ಅವರಿಗೆ ಇದು ನಿರ್ದೇಶಕರಾಗಿ ಎರಡನೇಯ ಚಿತ್ರ. ಈ ಕುರಿತು ಮಾತನಾಡಿದ ಅವರು, ಇಂಥದ್ದೊಂದು ಅದ್ಭುತ ದೃಶ್ಯಕಾವ್ಯವನ್ನು ತೆರೆಗೆ ತರುವುದು ದೊಡ್ಡ ಸವಾಲು. ಆದರೆ ರಾಜಮೌಳಿ ಅವರ ತಂದೆ ವಿ. ವಿಜಯೇಂದ್ರ ಪ್ರಸಾದ್ ಅವರು ಕಥೆ, ಚಿತ್ರಕಥೆ ರಚಿಸುತ್ತಿರುವುದರಿಂದ ಚಿತ್ರ ಅದ್ಭುತವಾಗಿ ಮೂಡಿಬರುತ್ತದೆ ಎಂಬ ವಿಶ್ವಾಸವಿದೆ.

1770 ಚಿತ್ರದ ಮೋಷನ್ ಪೋಸ್ಟರ್

ಒಬ್ಬ ನಿರ್ದೇಶಕನಾಗಿ ಬೇರೆ ಕಾಲಘಟ್ಟದ, ಎಮೋಷನ್​ಗಳನ್ನು ಹೆಚ್ಚಿಸುವಂತಹ ಮತ್ತು ಆ್ಯಕ್ಷನ್ ದೃಶ್ಯಗಳಿಗೆ ಹೆಚ್ಚು ಮಹತ್ವ ಇರುವಂತಹ ಚಿತ್ರಗಳನ್ನು ನಿರ್ದೇಶಿಸಬೇಕು ಎನ್ನುವುದು ನನ್ನ ವೈಯಕ್ತಿಕ ಆಸೆ. ಅದಕ್ಕೆ ಅನುಗುಣವಾಗಿ ಈ ಕಥೆಯಲ್ಲಿ ಎಲ್ಲವೂ ಇದೆ. ಈ ಚಿತ್ರವನ್ನು ದೊಡ್ಡ ಮಟ್ಟದಲ್ಲಿ ತೆರೆಗೆ ತರಬೇಕೆನ್ನುವುದು ನಿರ್ಮಾಪಕರ ಕನಸಾಗಿದ್ದು, ಆ ಕನಸನ್ನು ನನಸು ಮಾಡುವ ಜವಾಬ್ದಾರಿ ನನ್ನ ಮೇಲಿದೆ. ಅದನ್ನು ಪರಿಪೂರ್ಣವಾಗಿ ನಿಭಾಯಿಸುತ್ತೇನೆ ಎಂಬ ನಂಬಿಕೆ ನನಗಿದೆ ಎಂದು ತಿಳಿಸಿದರು.

ಈಗಾಗಲೇ ಅವರು ತಮ್ಮ ತಂಡದೊಂದಿಗೆ ಈ ಚಿತ್ರದ ಕುರಿತು ಸಾಕಷ್ಟು ರಿಸರ್ಚ್ ಮಾಡಿ, ಚಿತ್ರೀಕರಣಕ್ಕೆ ಬೇಕಾದ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಬಂಕಿಮ್ ಚಂದ್ರ ಚಟರ್ಜಿ ಅವರ ಆನಂದಮಠ ಕಾದಂಬರಿಯಲ್ಲಿ ಮೊದಲ ಬಾರಿಗೆ ವಂದೇ ಮಾತರಂ ಕವನವು ಪ್ರಕಟವಾಗಿತ್ತು. ಈ ಕವನವು ಬ್ರಿಟಿಷ್ ಸಾಮ್ರಾಜ್ಯವನ್ನು ಅಕ್ಷರಶಃ ನಡುಗಿಸಿತ್ತು. ವಂದೇ ಮಾತರಂ ಎನ್ನುವುದು ಬಂಕಿಮ ಚಂದ್ರರು ದೇಶವನ್ನು ಒಗ್ಗೂಡಿಸಲು ಉಚ್ಛರಿಸಿದ ಒಂದು ಮಂತ್ರ ಎನ್ನುತ್ತಾರೆ ಚಿತ್ರಕ್ಕೆ ಕಥೆ ಮತ್ತು ಚಿತ್ರಕಥೆ ಬರೆದಿರುವ ವಿಜಯೇಂದ್ರ ಪ್ರಸಾದ್.

ಈ ದೇಶವು ಬ್ರಿಟಿಷರಿಂದ ಅನುಭವಿಸುತ್ತಿದ್ದ ದಾಸ್ಯ ಮತ್ತು ಅನ್ಯಾಯದ ವಿರುದ್ಧ ಭಾರತೀಯರನ್ನು ಒಗ್ಗೂಡಿಸಲು ಬಳಸಿದ ಒಂದು ಮಂತ್ರವಾಗಿತ್ತು. ಈ ಚಿತ್ರದಲ್ಲಿ ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗವಹಿಸಿದ ಅದೆಷ್ಟೋ ಅಜ್ನಾತ ವೀರ ಯೋಧರ ಕಥೆಯನ್ನು ಹೇಳಲು ಹೊರಟಿದ್ದೇವೆ ಎಂದು ತಿಳಿಸಿದರು.

ಎಸ್ಎಸ್1 ಎಂಟರ್​ಟೈನ್​ಮೆಂಟ್​ನ ಶೈಲೇಂದ್ರ ಕುಮಾರ್ ಮಾತನಾಡಿ, ದೊಡ್ಡ ಬಜೆಟ್​​ನ ಚಿತ್ರಗಳನ್ನು ಮಾಡುವುದಕ್ಕೆ ಇದು ಒಳ್ಳೆಯ ಸಮಯ. ಮೂಲತಃ ಜಾನ್ಸಿಯವರಾದ ನಾವು ವಂದೇ ಮಾತರಂ ಹಾಡುತ್ತಾ, ಕೇಳುತ್ತಾ ಬೆಳೆದವರು. ಆದರೆ ವಿಜಯೇಂದ್ರ ಪ್ರಸಾದ್ ಅವರು ಹೇಳಿದ ಕಥೆಯನ್ನು ಕೇಳಿ ನಿಜಕ್ಕೂ ದಂಗಾದೆವು. ಇಂಥದ್ದೊಂದು ಅಪರೂಪದ ಕಥೆಯನ್ನು ತೆರೆಯ ಮೇಲೆ ತರುವುದಕ್ಕೆ ಕೈ ಜೋಡಿಸಿರುವ ಸುಜಯ್ ಕುಟ್ಟಿ ಮತ್ತು ಕೃಷ್ಣಕುಮಾರ್ ಅವರಿಗೆ ನಾವು ಆಭಾರಿ. ಇದೊಂದು ಬರೀ ಚಿತ್ರವಲ್ಲ, ಬೆಳ್ಳಿಪರದೆಯ ಮೇಲೆ ಜನರನ್ನು ದೊಡ್ಡ ಮಟ್ಟದಲ್ಲಿ ಮನರಂಜಿಸಬೇಕು ಎಂಬ ದೊಡ್ಡ ಕನಸು ಎಂದು ತಿಳಿಸಿದರು.

ಸುಜಯ್ ಕುಟ್ಟಿ ಈ ಹಿಂದೆ ಜೀ ಸ್ಟುಡಿಯೋಸ್ ಸಂಸ್ಥೆಯಲ್ಲಿ ಹಲವು ಜವಾಬ್ದಾರಿಗಳನ್ನು ನಿರ್ವಹಿಸಿದವರು. ಮಣಿಕರ್ಣಿಕಾ ದಿ ಕ್ವೀನ್ ಆಫ್ ಜಾನ್ಸಿ ಸೇರಿ ಮುಂತಾದ ಚಿತ್ರದ ನಿರ್ಮಾಣದಲ್ಲಿ ಗುರುತಿಸಿಕೊಂಡಿದ್ದವರು. ತಮ್ಮ ಹಾಗೂ ವಿಜಯೇಂದ್ರ ಪ್ರಸಾದ್ ಅವರ ಸ್ನೇಹ ಚಿತ್ರಗಳನ್ನು ಮೀರಿದ್ದು ಎನ್ನುವ ಅವರು, ವಿಜಯೇಂದ್ರ ಪ್ರಸಾದ್ ಅವರು ನಮಗೆಲ್ಲರಿಗೂ ಸ್ಫೂರ್ತಿ. ನಾವು 1770 ಸಿನಿಮಾ ನಿರ್ಮಿಸಿದರೆ, ಅದನ್ನು ವಿಜಯೇಂದ್ರ ಪ್ರಸಾದ್ ಅವರೇ ಬರೆಯಬೇಕು ಎಂದು ಮೊದಲೇ ಹೇಳಿದ್ದೆ. ಇಲ್ಲವಾದರೆ ಈ ಚಿತ್ರ ಮಾಡುವುದಿಲ್ಲ ಎಂದಿದ್ದೆ. ಅದಕ್ಕೆ ಸರಿಯಾಗಿ ಅವರು ಒಪ್ಪಿ ನಮ್ಮ ಚಿತ್ರದ ಕಥೆ-ಚಿತ್ರಕಥೆಯನ್ನು ಪ್ರೀತಿಯಿಂದ ಬರೆದುಕೊಟ್ಟಿದ್ದಾರೆ ಎನ್ನುತ್ತಾರೆ ಸುಜಯ್ ಕುಟ್ಟಿ.

ಇದನ್ನೂ ಓದಿ: ಬಾಲಕನ ಫೋಟೋ ಶೇರ್ ಮಾಡಿದ ಆಲಿಯಾ ಭಟ್.. ರಣ್​ಬೀರ್ ಕಪೂರ್ ಕಾಪಿ ಎಂದ ಅಭಿಮಾನಿಗಳು

1770 ಸಿನಿಮಾ ಒಂದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ತೆಲುಗು, ತಮಿಳು, ಕನ್ನಡ, ಮಲಯಾಳಂ ಮತ್ತು ಹಿಂದಿಯಲ್ಲಿ ಏಕಕಾಲಕ್ಕೆ ತೆರೆಗೆ ಬರಲಿದೆ. ದಸರಾ ಹೊತ್ತಿಗೆ ಚಿತ್ರದ ಕಲಾವಿದರು ಮತ್ತು ತಂತ್ರಜ್ಞನರ ಆಯ್ಕೆ ಮಾಡಿ ಚಿತ್ರೀಕರಣ ಮಾಡಲು ಚಿತ್ರತಂಡ ಸಿದ್ಧತೆ ಮಾಡಿಕೊಂಡಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.