ETV Bharat / entertainment

ಕಲಾಕರ್​ ಹರೀಶ್​ ರಾಜ್​ 'ಪ್ರೇತ' ಸಿನಿಮಾಗೆ ಸಚಿವ ಭೈರತಿ ಸುರೇಶ್​ ಸಾಥ್​ - etv bharat kannada

Pretha movie song released: 'ಪ್ರೇತ' ಸಿನಿಮಾದ 'ದೂರದ ಊರಿಗೆ..' ಎಂಬ ಹಾಡು HRP ಆಡಿಯೋ ಯೂಟ್ಯೂಬ್​ನಲ್ಲಿ ಬಿಡುಗಡೆಯಾಗಿದೆ.

Pretha movie doorada urige song
ಕಲಾಕರ್​ ಹರೀಶ್​ ರಾಜ್​ 'ಪ್ರೇತ' ಸಿನಿಮಾಗೆ ಸಚಿವ ಭೈರತಿ ಸುರೇಶ್​ ಸಾಥ್​
author img

By ETV Bharat Karnataka Team

Published : Nov 2, 2023, 7:42 PM IST

ಕನ್ನಡ ಚಿತ್ರರಂಗದಲ್ಲಿ ಬಹು ಸಮಯದಿಂದ ಉತ್ತಮ ಅಭಿನಯದ ಮೂಲಕ ಸಿನಿಪ್ರಿಯರನ್ನು ರಂಜಿಸುತ್ತಾ ಬಂದಿರುವ ನಟ ಹರೀಶ್ ರಾಜ್. ಕೆಲವು ತಿಂಗಳ ಹಿಂದೆ ಅವರ ಸಿನಿ ಬದುಕಿಗೆ 25 ವರ್ಷ ತುಂಬಿದೆ. ಬೆಳ್ಳಿ ಸಂಭ್ರಮದ ಖುಷಿಯಲ್ಲಿರುವ ಹರೀಶ್​ ರಾಜ್​, ಮತ್ತೆ ನಿರ್ದೇಶನದತ್ತ ಮುಖ ಮಾಡಿದ್ದಾರೆ. ತಮ್ಮದೇ ಹರೀಶ್ ರಾಜ್ ಪ್ರೊಡಕ್ಷನ್ಸ್​ನಡಿ 'ಪ್ರೇತ' ಎಂಬ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಈ ಚಿತ್ರಕ್ಕೆ ಸ್ವತಃ ಹರೀಶ್ ರಾಜ್ ಆ್ಯಕ್ಷನ್​ ಕಟ್​ ಹೇಳಿದ್ದಾರೆ. ಜೊತೆಗೆ ಬಣ್ಣ ಕೂಡ ಹಚ್ಚಿದ್ದಾರೆ.

ಫಸ್ಟ್​ ಲುಕ್​ ಮೂಲಕ ನಿರೀಕ್ಷೆ ಮೂಡಿಸಿದ್ದ 'ಪ್ರೇತ' ಸಿನಿಮಾದ ಆಡಿಯೋ ಲಾಂಚ್​ ಇತ್ತೀಚೆಗೆ ಅದ್ಧೂರಿಯಾಗಿ ನಡೆಯಿತು. ಬೆಂಗಳೂರಿನ ಜೆಸಿ ನಗರದಲ್ಲಿ ನಡೆದ ದಸರಾ ಸಂಭ್ರಮದಲ್ಲಿ ಸಚಿವ ಬೈರತಿ ಸುರೇಶ್​ ಚಿತ್ರದ ಹಾಡನ್ನು ಬಿಡುಗಡೆಗೊಳಿಸಿ ಸಿನಿಮಾ ತಂಡಕ್ಕೆ ಶುಭಹಾರೈಸಿದರು. ಈ ವೇಳೆ 'ಕಾಂತಾರ' ಖ್ಯಾತಿಯ ಸಪ್ತಮಿ ಗೌಡ ವಿಶೇಷ ಅತಿಥಿಯಾಗಿ ಭಾಗವಹಿಸಿ ಕಾರ್ಯಕ್ರಮದ ಮೆರುಗನ್ನು ಮತ್ತಷ್ಟು ಹೆಚ್ಚಿಸಿದರು.

'ಪ್ರೇತ' ಸಿನಿಮಾದ 'ದೂರದ ಊರಿಗೆ..' ಎಂಬ ಹಾಡು HRP ಆಡಿಯೋ ಯೂಟ್ಯೂಬ್​ನಲ್ಲಿ ಬಿಡುಗಡೆಯಾಗಿದೆ. ಪ್ರಮೋದ್ ಮರವಂತೆ ಸಾಹಿತ್ಯ ಬರೆದಿರುವ ಭಾವುಕ ಗೀತೆಗೆ ನವೀನ್ ಸಜ್ಜು ಧ್ವನಿಯಾಗಿದ್ದಾರೆ. ಪ್ರವೀಣ್ ಶ್ರೀನಿವಾಸ್ ಮೂರ್ತಿ ಟ್ಯೂನ್ ಹಾಕಿದ್ದಾರೆ. ಹರೀಶ್ ರಾಜ್ ಹಾಗೂ ಅಹಿರಾ ಶೆಟ್ಟಿ ಹಾಡಿನಲ್ಲಿ ಕಾಣಿಸಿಕೊಂಡಿದ್ದು, ಈಗಾಗಲೇ ಈ ಗಾನಬಜಾನ ಕೇಳುಗರ ಗಮನ ಸೆಳೆಯುತ್ತಿದೆ.

ಇದನ್ನೂ ಓದಿ: ಎಸ್ತರ್ ನರೋನ್ಹಾ ಚೊಚ್ಚಲ ನಿರ್ದೇಶನದ 'ದಿ ವೆಕೆಂಟ್ ಹೌಸ್' ಸಿನಿಮಾ ನವೆಂಬರ್​ 10ರಂದು ಬಿಡುಗಡೆ

ಅಭಿನಯದ ಜೊತೆಗೆ ಡೈರೆಕ್ಷನ್​ನಲ್ಲಿಯೂ ಅನುಭವ ಹೊಂದಿರುವ ಹರೀಶ್ ರಾಜ್ ಅವರ 'ಹರೀಶ್ ರಾಜ್ ಪ್ರೊಡಕ್ಷನ್’ನ ಐದನೇ ಸಿನಿಮಾವೇ 'ಪ್ರೇತ'. ಈ ಪ್ರೊಡಕ್ಷನ್ ಮೂಲಕ ಈಗಾಗಲೇ ‌ನಾಲ್ಕು ಸಿನಿಮಾಗಳು ನಿರ್ಮಾಣವಾಗಿದ್ದು, ಇದೀಗ ‘ಪ್ರೇತ’ ಸಿನಿಮಾವನ್ನು ಹರೀಶ್​ ರಾಜ್​ ಪ್ರೇಕ್ಷಕರ ಮಡಿಲಿಗೆ ಹಾಕುತ್ತಿದ್ದಾರೆ. ಅಲ್ಲದೇ ಅವರೇ ಮುಖ್ಯ ಭೂಮಿಕೆ ನಿಭಾಯಿಸುತ್ತಿದ್ದಾರೆ.

ಈವರೆಗೆ ‘ಕಲಾಕಾರ್’, ‘ಗನ್’, ‘ಶ್ರೀ ಸತ್ಯನಾರಾಯಣ’, ‘ಕಿಲಾಡಿ ಪೊಲೀಸ್’ ಮುಂತಾದ ಸಿನಿಮಾಗಳಿಗೆ ನಿರ್ದೇಶನ ಮಾಡಿರುವ ಹರೀಶ್ ರಾಜ್ ಅವರು 3 ವರ್ಷದ ಗ್ಯಾಪ್​ ಬಳಿಕ ಮತ್ತೆ ನಿರ್ದೇಶಕನ ಕ್ಯಾಪ್ ತೊಟ್ಟಿದ್ದಾರೆ. ಶೀರ್ಷಿಕೆಯೇ ಹೇಳುವಂತೆ ‘ಪ್ರೇತ’ ಒಂದು ಹಾರರ್​ ಕಥೆಯುಳ್ಳ ಸಿನಿಮಾ. ಹರೀಶ್ ರಾಜ್​ ಅವರೇ ಕಥೆ ಮತ್ತು ಚಿತ್ರಕಥೆ ಬರೆದಿದ್ದಾರೆ. ಹರೀಶ್ ರಾಜ್​ ಜೊತೆ ಅಮೂಲ್ಯ ಭಾರದ್ವಾಜ್, ಅಹಿರಾ ಶೆಟ್ಟಿ, ಬಿ.ಎಂ. ವೆಂಕಟೇಶ್, ಅಮಿತ್ ಅವರು ಪಾತ್ರವರ್ಗದಲ್ಲಿ ಇದ್ದಾರೆ.

ಚಿತ್ರಕ್ಕೆ ಕಿರಣ್ ಆರ್.ಹೆಮ್ಮಿಗೆ ಸಂಭಾಷಣೆ ಬರೆದಿದ್ದು, ಶಿವಶಂಕರ್ ಛಾಯಾಗ್ರಹಣ ಮಾಡಿದ್ದಾರೆ. ಪ್ರವೀಣ್ ಶ್ರೀನಿವಾಸ್ ಮೂರ್ತಿ ಸಂಗೀತ, ಜೀವನ್ ಪ್ರಕಾಶ್ ಸಂಕಲನ, ಮಂಜು ಕಲಾ ನಿರ್ದೇಶನವಿದೆ. ಈ ಸಿನಿಮಾದ ಗೀತೆಗಳಿಗೆ ಪ್ರಮೋದ್ ಮರವಂತೆ ಅವರು ಸಾಹಿತ್ಯ ಬರೆದಿದ್ದಾರೆ. ವಿರಾಜಪೇಟೆ ಮತ್ತು ಮಡಿಕೇರಿ ಸುತ್ತಮುತ್ತ ಈ ಸಿನಿಮಾದ ಚಿತ್ರೀಕರಣ ಮಾಡಲಾಗಿದೆ. ಪ್ರೇತ ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದು ಕನ್ನಡ, ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಯಲ್ಲಿ ಬಿಡುಗಡೆ ಆಗಲಿದೆ.

ಇದನ್ನೂ ಓದಿ: ಪ್ರೇಕ್ಷಕರು ಮೆಚ್ಚಿಕೊಂಡ 'ಅಭಿರಾಮಚಂದ್ರ'ನಿಗೆ 25 ದಿನದ ಸಂಭ್ರಮ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.