ETV Bharat / entertainment

ಪ್ರಶಾಂತ್ ನೀಲ್ ನಿರ್ದೇಶನದಲ್ಲಿ NTR 31: ಆರ್‌ಆರ್‌ಆರ್‌ ಸ್ಟಾರ್​ಗೆ ಜೋಡಿಯಾಗಲಿದ್ದಾರೆ ಪ್ರಿಯಾಂಕಾ ಚೋಪ್ರಾ

author img

By

Published : Jun 7, 2023, 11:36 AM IST

ಪ್ರಶಾಂತ್ ನೀಲ್ ನಿರ್ದೇಶನದ ಮುಂದಿನ ಚಿತ್ರದಲ್ಲಿ ಜೂ. ಎನ್‌ಟಿಆರ್‌ ಜೊತೆ ಬಾಲಿವುಡ್​, ಹಾಲಿವುಡ್​ ತಾರೆ ಪ್ರಿಯಾಂಕಾ ಚೋಪ್ರಾ ನಟಿಸಲಿದ್ದಾರೆ ಎಂಬ ವರದಿಗಳಿವೆ.

Priyanka chopra to Jr NTR movie
ಜೂ ಎನ್‌ಟಿಆರ್‌ ಜೋಡಿಯಾಗಲಿದ್ದಾರೆ ಪ್ರಿಯಾಂಕಾ ಚೋಪ್ರಾ

2022ರಲ್ಲಿ ಧೂಳೆಬ್ಬಿಸಿರುವ 'ಆರ್‌ಆರ್‌ಆರ್‌' ಚಿತ್ರದ ದೊಡ್ಡ ಯಶಸ್ಸಿನ ನಂತರ ಯಂಗ್‌ ಟೈಗರ್‌, ಜೂ. ಎನ್‌ಟಿಆರ್‌ ಅವರ ಸಿನಿಮಾ ಲಿಸ್ಟ್ ದೊಡ್ಡದಿದೆ. ಸದ್ಯ ಕೊರಟಾಲ ಶಿವ ನಿರ್ದೇಶನದಲ್ಲಿ 'ದೇವರ' ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರದ ಮೂಲಕ ಬಾಲಿವುಡ್ ಬೆಡಗಿ ಜಾನ್ವಿ ಕಪೂರ್ ಟಾಲಿವುಡ್​ಗೆ ಎಂಟ್ರಿ ಕೊಡುತ್ತಿದ್ದಾರೆ.

ಇದರ ನಂತರ ಅವರು 'KGF' ಖ್ಯಾತಿಯ ಪ್ರಶಾಂತ್ ನೀಲ್ (ಎನ್‌ಟಿಆರ್ 31 ಚಿತ್ರ) ಜೊತೆ ಬಿಗ್​​ ಬಜೆಟ್ ಸಿನಿಮಾ ಮಾಡುತ್ತಿದ್ದಾರೆ. ಈ ಬಗ್ಗೆ ಸಿನಿಪ್ರೇಮಿಗಳಲ್ಲಿ ಭಾರೀ ನಿರೀಕ್ಷೆಗಳಿವೆ. ಆದರೆ, ಇದೀಗ ಅವರ ಮುಂದಿನ ಸಿನಿಮಾದ ಬಗ್ಗೆ ಇಂಟ್ರೆಸ್ಟಿಂಗ್ ವಿಚಾರವೊಂದು ವೈರಲ್ ಆಗಿದೆ.

ಪ್ರಿಯಾಂಕಾ ಚೋಪ್ರಾ ಎಂಟ್ರಿ: ಈ ಚಿತ್ರದಲ್ಲಿ ಜೂನಿಯರ್​ ಎನ್​​ಟಿಆರ್​​ ಜೋಡಿಯಾಗಿ ಗ್ಲೋಬಲ್​ ಐಕಾನ್​​ ಪ್ರಿಯಾಂಕಾ ಚೋಪ್ರಾ ನಟಿಸಲಿದ್ದಾರೆ ಎಂಬ ವರದಿಗಳಿವೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಹರಿದಾಡುತ್ತಿದೆ. ಆದರೆ, ಚಿತ್ರತಂಡದಿಂದ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಈ ಹಿಂದೆ ದೀಪಿಕಾ ಪಡುಕೋಣೆ ಹಾಗೂ ಮೃಣಾಲ್ ಠಾಕೂರ್ ಹೆಸರು ಕೂಡ ಕೇಳಿ ಬಂದಿತ್ತು. ಈಗ ಪ್ರಿಯಾಂಕಾ ಬಹುತೇಕ ಕನ್ಫರ್ಮ್ ಆಗಿದ್ದಾರೆ ಎನ್ನಲಾಗುತ್ತಿದೆ. ಈ ಚಿತ್ರವನ್ನು ಮೈತ್ರಿ ಮೂವಿ ಮೇಕರ್ಸ್ ಮತ್ತು ಎನ್‌ಟಿಆರ್ ಆರ್ಟ್ಸ್ ಜಂಟಿಯಾಗಿ ನಿರ್ಮಿಸಲಿದೆ.

ಜೂ. ಎನ್​ಟಿಆರ್​ ಬಾಲಿವುಡ್​ ಚಿತ್ರ: ಆರ್​ಆರ್​ಆರ್​ ಮೂಲಕ ಜನಪ್ರಿಯತೆ ಹೆಚ್ಚಿಸಿಕೊಂಡಿರುವ ಜೂನಿಯರ್​ ಎನ್​​ಟಿಆರ್​ ಸದ್ಯದಲ್ಲೇ ಬಾಲಿವುಡ್‌ಗೆ ಎಂಟ್ರಿ ಕೊಡಲಿದ್ದಾರೆ. ಈಗಾಗಲೇ ಚಿತ್ರ ಅಂತಿಮಗೊಂಡಿದೆ. ಸ್ಟಾರ್ ಹೀರೋ ಹೃತಿಕ್ ರೋಷನ್ ಅಭಿನಯದ 'ವಾರ್ 2' ಚಿತ್ರದಲ್ಲಿ ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ನೆಗೆಟಿವ್ ಶೇಡ್ ಇರುವ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದನ್ನು ಹೃತಿಕ್ ಖಚಿತಪಡಿಸಿದ್ದಾರೆ. ಈ ಸಿನಿಮಾವನ್ನು ಅಯಾನ್ ಮುಖರ್ಜಿ ನಿರ್ದೇಶಿಸಲಿದ್ದಾರೆ.

ನಿರ್ಮಾಪಕರಾಗಲಿರುವ ಜೂ. ಎನ್​ಟಿಆರ್​: ಈಗಾಗಲೇ ಹಲವು ಸ್ಟಾರ್ ಹೀರೋಗಳು ಪ್ರೊಡಕ್ಷನ್ ಹೌಸ್​ಗಳನ್ನು ಹೊಂದಿರುವುದು ಗೊತ್ತೇ ಇದೆ. ಇತ್ತೀಚೆಗಷ್ಟೇ ಆರ್​ಆರ್​ಆರ್​ ಸಹನಟ ರಾಮ್ ಚರಣ್ ಕೂಡ ತಮ್ಮ ಬ್ಯಾನರ್ ಆರಂಭಿಸಿದ್ದಾರೆ. ಸದ್ಯ ಎನ್​ಟಿಆರ್ ಕೂಡ ನಿರ್ಮಾಣ ಕ್ಷೇತ್ರಕ್ಕೆ ಕಾಲಿಡುತ್ತಿರುವಂತಿದೆ. ಈ ಪ್ರೊಡಕ್ಷನ್ ಹೌಸ್ ಮೂಲಕ ಹೊಸ ಪ್ರತಿಭೆಗಳನ್ನು ಪ್ರೋತ್ಸಾಹಿಸಬೇಕೆಂಬ ಉದ್ದೇಶ ಹೊಂದಿದ್ದಾರೆ. ಸದ್ಯದಲ್ಲೇ ಈ ಬಗ್ಗೆಯೂ ಅಧಿಕೃತ ಘೋಷಣೆ ಬರಲಿದೆ. ನ್ಯಾಚುರಲ್ ಸ್ಟಾರ್ ನಾನಿ ಜೊತೆ ನಿರ್ಮಾಪಕರಾಗಿ ಮೊದಲ ಸಿನಿಮಾ ಮಾಡಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ.

ಇದನ್ನೂ ಓದಿ: ಮದುವೆ ಬಗ್ಗೆ ಬಹಿರಂಗಪಡಿಸಿದ ನಟ ಪ್ರಭಾಸ್: ಎಲ್ಲಿ, ಯಾವಾಗ, ವಧು ಯಾರು?

ಇನ್ನೂ 'ದೇವರ' ಸಿನಿಮಾ ಶೂಟಿಂಗ್​ ಶರವೇಗದಲ್ಲಿ ನಡೆಯುತ್ತಿದೆ. ಇದೊಂದು ಆ್ಯಕ್ಷನ್ ಚಿತ್ರವಾಗಿದ್ದು, ಶಕ್ತಿಶಾಲಿ ಪಾತ್ರದಲ್ಲಿ ಜೂ. ಎನ್‌ಟಿಆರ್ ಕಾಣಿಸಿಕೊಳ್ಳಲಿದ್ದಾರೆ. ಇದನ್ನು ಎನ್​ಟಿಆರ್​ ಆರ್ಟ್ಸ್ ಮತ್ತು ಯುವ ಸುಧಾ ಆರ್ಟ್ಸ್ ಜಂಟಿಯಾಗಿ ನಿರ್ಮಿಸುತ್ತಿದ್ದಾರೆ. ಜಾನ್ವಿ ಕಪೂರ್ ನಾಯಕ ನಟಿಯಾದರೆ, ಸೈಫ್ ಅಲಿ ಖಾನ್ ವಿಲನ್ ಆಗಿ ಅಭಿನಯಿಸುತ್ತಿದ್ದಾರೆ. ಈ ಪ್ಯಾನ್ ಇಂಡಿಯಾ ಚಿತ್ರ ಮುಂದಿನ ವರ್ಷ ಏಪ್ರಿಲ್ 5ರಂದು ಬಿಡುಗಡೆ ಆಗಲಿದೆ.

ಇದನ್ನೂ ಓದಿ: ಅದ್ಧೂರಿಯಾಗಿ ನಡೆಯಿತು ಆದಿಪುರುಷ್ ಪ್ರೀ ರಿಲೀಸ್​ ಈವೆಂಟ್.. ಫೋಟೋಗಳಲ್ಲಿ​​ ನೋಡಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.