2020ರಲ್ಲಿ ಸೂಪರ್ ಹಿಟ್ ಚಿತ್ರಗಳಾದ ದಿಯಾ ಹಾಗೂ ಲವ್ ಮಾಕ್ಟೆಲ್ ಚಿತ್ರಗಳ ಮೂಲಕ ಮನೆಮಾತಾಗಿರುವ, ಪೃಥ್ವಿ ಅಂಬರ್ ಹಾಗೂ ಮಿಲನ ನಾಗರಾಜ್ ಅಭಿನಯದಲ್ಲಿ ಮೂಡಿ ಬರುತ್ತಿರುವ ಸದಭಿರುಚಿಯ ಚಿತ್ರ 'ಫಾರ್ ರಿಜಿಸ್ಟ್ರೇಷನ್'. ಬಹುತೇಕ ಚಿತ್ರೀಕರಣ ಮುಗಿಸಿ ಬಿಡುಗಡೆಗೆ ಸಜ್ಜಾಗಿರೋ ಸಿನಿಮಾದ ಫಸ್ಟ್ ಲುಕ್ ಅನಾವರಣಗೊಂಡಿದೆ.
ಈ ಚಿತ್ರದಲ್ಲಿ ಪೃಥ್ವಿ ಆಶು ಪಾತ್ರದಲ್ಲಿ ಹಾಗೂ ಮಿಲನಾ ಅವರು ಅನ್ವಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದೊಂದು ಲವ್ ಸ್ಟೋರಿ ಜೊತೆಗೆ ಫ್ಯಾಮಿಲಿ ಸೆಂಟಿಮೆಂಟ್ಗಳನ್ನು ಹೊಂದಿರುವ ಸಿನಿಮಾ ಆಗಿದೆ. ದ್ವಾರಕನಾಥ್ ಕಥೆ, ಚಿತ್ರಕಥೆಯನ್ನು ಬರೆದು ನಿರ್ದೇಶನ ಮಾಡಿದ್ದಾರೆ.
ಬೆಂಗಳೂರು, ಮಂಗಳೂರು, ಉಡುಪಿಯ ಸುಂದರ ತಾಣಗಳಲ್ಲಿ ಸಿನಿಮಾವನ್ನು ಚಿತ್ರೀಕರಣ ಮಾಡಲಾಗಿದೆ. ಮಿಲನಾ ನಾಗರಾಜ್ ಹಾಗೂ ಪೃಥ್ವಿ ಅಂಬರ್ ಅಲ್ಲದೇ, ಸುಧಾರಾಣಿ, ಸುಂದರರಾಜ್, ಸಿಹಿಕಹಿ ಚಂದ್ರು, ಸುಧಾ ಬೆಳವಾಡಿ, ಬಾಬು ಹಿರಣಯ್ಯ, ತಬಲಾ ನಾಣಿ, ತ್ರಿವೇಣಿ ರಾವ್, ತುಳು ನಟ ಅರವಿಂದ್ ಬೋಳಾರ್ ಹೀಗೆ ಹಿರಿಯ ಕಲಾವಿದರ ಬಳಗವೇ ಈ ಚಿತ್ರದಲ್ಲಿದೆ.
ಆರ್ ಕೆ ಹರೀಶ್ ಸಂಗೀತ ನಿರ್ದೇಶನ, ಅಭಿಷೇಕ್ ಕಳತ್ತಿ ಛಾಯಾಗ್ರಹಣ ಹಾಗೂ ಮನು ಶೆಡ್ಗಾರ್ ಅವರ ಸಂಕಲನ ಚಿತ್ರಕ್ಕಿದೆ. ನಿಶ್ಚಲ್ ಫಿಲಂಸ್ ಮೂಲಕ ಎನ್. ನವೀನ್ ರಾವ್ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರಾಗಿ ನಿರಂಜನ್ ರಾಧಾಕೃಷ್ಣ ಇದ್ದಾರೆ. ಸದ್ಯ ಪೋಸ್ಟರ್ನಿಂದ ಗಮನ ಸೆಳೆಯುತ್ತಿರೋ ಫಾರ್ ರಿಜಿಸ್ಟರೇಷನ್ ಸಿನಿಮಾ ಸದ್ಯದಲ್ಲೇ ಟ್ರೈಲರ್ ಬಿಡುಗಡೆ ಮಾಡಿದ ಬಳಿಕ ಪ್ರೇಕ್ಷಕರ ಮುಂದೆ ಬರಲಿದೆ.
ಇದನ್ನೂ ಓದಿ: ಕೆಜಿಎಫ್ 2 ಅಬ್ಬರ.. ಬಿಡುಗಡೆಗೂ ಮುನ್ನವೇ ದಾಖಲೆ!