ETV Bharat / entertainment

'ಅಬ ಜಬ ದಬ' ಅಂತಿದ್ದಾರೆ ದಿಯಾ ಖ್ಯಾತಿಯ ಪೃಥ್ವಿ ಅಂಬರ್ - aba jaba daba movie details

ಅಬ ಜಬ ದಬ ಅಂತಾ ಕ್ಯಾಚೀ ಟೈಟಲ್ ಹೊಂದಿರುವ ಸಿನಿಮಾದಲ್ಲಿ ದಿಯಾ ಖ್ಯಾತಿಯ ಪೃಥ್ವಿ ಅಂಬರ್ ಅಭಿನಯಿಸುತ್ತಿದ್ದಾರೆ.

aba jaba daba team
ಅಬ ಜಬ ದಬ ಚಿತ್ರತಂಡ
author img

By

Published : Oct 14, 2022, 6:48 PM IST

ದಿಯಾ ಸಿನಿಮಾ ಯಶಸ್ಸಿನ ಬಳಿಕ ನಟ ಪೃಥ್ವಿ ಅಂಬರ್ ಸ್ಯಾಂಡಲ್​ವುಡ್​ನಲ್ಲಿ ತನ್ನದೇ ಬೇಡಿಕೆಯನ್ನು ಹೊಂದಿದ್ದಾರೆ. ಇದೀಗ ಅಬ ಜಬ ದಬ ಅಂತಾ ಕ್ಯಾಚೀ ಟೈಟಲ್ ಹೊಂದಿರುವ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ. ಕನ್ನಡ್ ಗೊತ್ತಿಲ್ಲ ಎಂಬ ಚಿತ್ರವನ್ನು ನಿರ್ದೇಶನ ಮಾಡಿ ಗಮನ ಸೆಳೆದಿದ್ದ ನಿರ್ದೇಶಕ ಮಯೂರ ರಾಘವೇಂದ್ರ ಅಬ ಜಬ ದಬ ಚಿತ್ರದ ಸೂತ್ರಧಾರ.

ಈ ಚಿತ್ರದ ಬಗ್ಗೆ ನಿರ್ದೇಶಕ ಮಯೂರ ರಾಘವೇಂದ್ರ, ನಟ ಪೃಥ್ವಿ ಅಂಬರ್, ನಾಯಕಿ ಅಂಕಿತ ಅಮರ್ ಹಾಗೂ ನಿರ್ಮಾಪಕ ಅನಂತ ಕೃಷ್ಣ, ಛಾಯಾಗ್ರಾಹಕ ಗಿರಿಧರ್ ಸೇರಿದಂತೆ ಇಡೀ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.

aba jaba daba team
ಅಬ ಜಬ ದಬ ಚಿತ್ರತಂಡ

ಮೊದಲು ಮಾತು ಶುರು ಮಾಡಿದ ನಿರ್ದೇಶಕ ಮಯೂರ ರಾಘವೇಂದ್ರ, ಕನ್ನಡ್ ಗೊತ್ತಿಲ್ಲ ಚಿತ್ರದ ನಂತರ ನಾನು ರಚಿತಾ ರಾಮ್ ಅವರಿಗೊಂದು ಸಿನಿಮಾ ಮಾಡಬೇಕಿತ್ತು. ಅದು ದೊಡ್ಡ ಬಜೆಟ್​ನ ಚಿತ್ರವಾಗಿರುವುದರಿಂದ ಸ್ವಲ್ಪ ತಡವಾಯಿತು. ಅಷ್ಟರಲ್ಲಿ ಈ ಔಟ್ ಅಂಡ್ ಔಟ್ ಕಾಮಿಡಿಯಿರುವ ಚಿತ್ರದ ಕಥೆ ಸಿದ್ಧವಾಯಿತು. ಕಥೆಗೆ ಒಳ್ಳೆಯ ಟೈಟಲ್ ಬೇಕಿತ್ತು. ಮನೆಯಲ್ಲಿ ನನ್ನ ಅಣ್ಣ, ಅವಳ ಮಗಳಿಗೆ ಅದೇನು ಹೇಳುತ್ತಾಳೋ, ಗೊತ್ತೆ ಆಗಲ್ಲ "ಅಬ ಜಬ ದಬ" ಅಂತಾಳೆ ಎಂದ. ನಾನು ತಕ್ಷಣ ಈ ಶೀರ್ಷಿಕೆ ಚೆನ್ನಾಗಿದೆ ಅಂತ ಅದನ್ನೇ ಇಟ್ಟಿದ್ದೇನೆ.

ಆನಂತರ ಸ್ನೇಹಿತ ಅನಂತ ಕೃಷ್ಣ ನಿರ್ಮಾಣಕ್ಕೆ ಮುಂದಾದರು. ಪೃಥ್ವಿ ಅಂಬರ್, ಅಂಕಿತ ಅಮರ್ ಅವರು ನಾಯಕ - ನಾಯಕಿಯಾಗಿ ನಿಗದಿಯಾದರು. ಅಚ್ಯುತಕುಮಾರ್ ಕುಮಾರ್, ಸುಧಾರಾಣಿ, ಹಿರಿಯ ನಟಿ ಊರ್ವಶಿ, ಬಾಬು ಹಿರಣ್ಣಯ್ಯ, ಸಂಗೀತಾ ಭಟ್ ನಮ್ಮ ಚಿತ್ರದಲ್ಲಿ ‌ಅಭಿನಯಿಸಲು ಒಪ್ಪಿದರು.‌ ಗಿರಿಧರ್ ದಿವಾನ್ ಛಾಯಾಗ್ರಹಣ ಮಾಡುತ್ತಿದ್ದಾರೆ. ಸಮೀರ್​ ಸಿಂಹ ಸಹ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.‌ ಎಲ್ಲರ ಸಹಕಾರದಿಂದ "ಅಬ ಜಬ ದಬ" ಒಳ್ಳೆಯ ಚಿತ್ರವಾಗಿ ಹೊರಹೊಮ್ಮಲಿದೆ ಎಂದು ತಿಳಿಸಿದರು.

ಬಳಿಕ ಮಾತನಾಡಿದ ನಟ ಪೃಥ್ವಿ ಅಂಬರ್​, ನನಗೆ ಮಯೂರ ರಾಘವೇಂದ್ರ ಅವರ ಕಥೆ ಇಷ್ಟವಾಯಿತು. ಇದು ಕೇವಲ ಕಾಮಿಡಿ ಸಿನಿಮಾ ಅಲ್ಲ. ಫ್ಯಾಂಟಸಿ ಕಾಮಿಡಿ ಸಿನಿಮಾ. ಚಿತ್ರದ ಹಾಡುಗಳು ಚೆನ್ನಾಗಿದೆ. ಊರ್ವಶಿ ಅವರಂತಹ ಹಿರಿಯ ನಟಿಯರೊಂದಿಗೆ ನಟಿಸಿದ್ದು ಸಂತೋಷವಾಗಿದೆ. ಚಿತ್ರದಲ್ಲಿ ನಟಿಸಿರುವ ಎಲ್ಲ ಕಲಾವಿದರ ಅಭಿನಯ ಚೆನ್ನಾಗಿದೆ ಎಂದರು.

ಇನ್ನು ಚಿತ್ರದ ನಾಯಕಿ ಅಂಕಿತ ಅಮರ್ ಮಾತನಾಡಿ, ಇದು ನಾನು ಬಣ್ಣ ಹಚ್ಚಿದ ಮೊದಲ ಚಿತ್ರ. ಪ್ರಿಯ ನನ್ನ ಪಾತ್ರದ ಹೆಸರು. ನಾನು ಈ ಚಿತ್ರದಲ್ಲಿ ಗಾಯಕಿ. ಎಸ್.ಪಿ.ಬಿ ಅವರ ಅಭಿಮಾನಿ ಎಂದು ತಮ್ಮ ಪಾತ್ರದ ಬಗ್ಗೆ ಮಾಹಿತಿ ನೀಡಿದರು. ಮೂರು ವರ್ಷಗಳ ನಂತರ ಈ ಚಿತ್ರದಲ್ಲಿ ನಟಿಸುತ್ತಿದ್ದೇನೆ. ಸುನಂದಾ ಕಾಂಬ್ರೇಕರ್ ನನ್ನ ಪಾತ್ರದ ಹೆಸರು. ವಿಶೇಷ ಪಾತ್ರ ಅಂತ ಹೇಳಬಹುದು ಎಂದರು ಮತ್ತೋರ್ವ ನಟ ನಟಿ ಸಂಗೀತಾ ಭಟ್.

ಇದನ್ನೂ ಓದಿ: ಕರಾವಳಿಯಲ್ಲೇ 6 ಕೋಟಿ ಕಲೆಕ್ಷನ್ ಮಾಡಿದ 10 ಕೋಟಿ ವೆಚ್ಚದ 'ಕಾಂತಾರ'

ಜೊತೆಗೆ ನಟ ಬಾಬು ಹಿರಣ್ಣಯ್ಯ ಕೂಡ ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಈ ಚಿತ್ರಕ್ಕೆ ಗಿರಿಧರ್ ದಿವಾನ್ ಛಾಯಾಗ್ರಾಹಣ, ಸತೀಶ್ ರಘುನಾಥನ್ ಸಂಗೀತ ನೀಡಿದ್ದು, ನಿರ್ಮಾಪಕ ಅನಂತ ಕೃಷ್ಣ ಈ ಸಿನಿಮಾಗೆ ಬಂಡವಾಳ ಹಾಕಿದ್ದಾರೆ. ಈ ಚಿತ್ರದ ಚಿತ್ರೀಕರಣ ಬೆಂಗಳೂರಿನಲ್ಲಿ ಬಿರುಸಿನಿಂದ ನಡೆಯುತ್ತಿದೆ. ಇನ್ನು ಹತ್ತು ದಿನಗಳ ಚಿತ್ರೀಕರಣವಾದರೆ ಚಿತ್ರೀಕರಣ ಮುಕ್ತಾಯವಾಗಲಿದೆ. ಅದಷ್ಟು ಬೇಗ ಚಿತ್ರೀಕರಣ ಮುಗಿಸಿ ಅಬ ಜಬ ದಬ ಚಿತ್ರತಂಡ ಸದ್ಯದಲ್ಲೇ ಟ್ರೈಲರ್ ಬಿಡುಗಡೆ ಮಾಡಲು ಪ್ಲಾನ್ ಮಾಡಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.