ETV Bharat / entertainment

ರಾಣ ಸಿನಿಮಾ ಸಾಂಗ್ ರಿಲೀಸ್: ಗಲ್ಲಿ ಬಾಯ್​ ಹಾಡಿಗೆ ಜೋಗಿ ಪ್ರೇಮ್ ಮೆಚ್ಚುಗೆ

ರಾಣ ಚಿತ್ರದ ಮೂರನೇ ಸಾಂಗ್​ ಗಲ್ಲಿ ಬಾಯ್ ಹಾಡನ್ನು ಜೋಗಿ ಪ್ರೇಮ್ ಬಿಡುಗಡೆ ಮಾಡಿದರು.

raana movie song galli boy released today
ರಾಣ ಸಿನಿಮಾ ಸಾಂಗ್ ರಿಲೀಸ್
author img

By

Published : Sep 21, 2022, 3:07 PM IST

ಪಡ್ಡೆ ಹುಲಿ ಸಿನಿಮಾ ಮೂಲಕ ಕನ್ನಡ ಚಿತ್ರರಂಗದಲ್ಲಿ ಭರವಸೆ ಹುಟ್ಟಿಸಿರೋ ಯುವ ನ‌ಟ ಶ್ರೇಯಸ್ ಮಂಜು. ನಿರ್ಮಾಪಕ ಕೆ.ಮಂಜು ಪುತ್ರನಾಗಿರೋ ಶ್ರೇಯಸ್ ಅಭಿನಯದ ಎರಡನೇ ಸಿನಿಮಾ 'ರಾಣ'. ಮಾಸ್ ಟೈಟಲ್​​ನಿಂದಲೇ ಗಾಂಧಿನಗರದಲ್ಲಿ ಸೌಂಡ್ ಮಾಡುತ್ತಿದೆ. ಈ ನಡುವೆ ರಾಣ ಚಿತ್ರದ ಮೂರನೇ ಹಾಡನ್ನು ನಿರ್ದೇಶಕ ಜೋಗಿ ಪ್ರೇಮ್ ಬಿಡುಗಡೆ ಮಾಡಿ‌ ಮೆಚ್ಚುಗೆ ವ್ಯಕ್ತಪಡಿಸಿದರು.

ನಂದಕಿಶೋರ್ ನಿರ್ದೇಶನದ ಗಲ್ಲಿ ಬಾಯ್ ಹಾಡನ್ನು ಜೋಗಿ ಪ್ರೇಮ್ ಬಿಡುಗಡೆ ಮಾಡಿದರು. ಚಂದನ್ ಶೆಟ್ಟಿ ಬರೆದು ಸಂಗೀತ ನೀಡಿರುವ ಈ ಹಾಡನ್ನು ಅನಿರುದ್ಧ್ ಶಾಸ್ತ್ರಿ ಹಾಗೂ ಅದಿತಿ ಸಾಗರ್ ಹಾಡಿದ್ದಾರೆ. ಆನಂದ್ ಆಡಿಯೋ ಮೂಲಕ ಈ ಹಾಡು ಬಿಡುಗಡೆಯಾಗಿದೆ.

  • " class="align-text-top noRightClick twitterSection" data="">

ನಿರ್ದೇಶಕ ಜೋಗಿ ಪ್ರೇಮ್ ಮಾತನಾಡಿ, ಈ ಹಾಡು ತುಂಬಾ ಚೆನ್ನಾಗಿ ಮೂಡಿ ಬಂದಿದೆ. ಶ್ರೇಯಸ್ ಹಾಗೂ ರೀಷ್ಮಾ ನಾಣಯ್ಯ ಇಬ್ಬರೂ ಚೆನ್ನಾಗಿ ನೃತ್ಯ ಮಾಡಿದ್ದಾರೆ. ಚಂದನ್ ಶೆಟ್ಟಿ ಸಂಗೀತ ಸುಂದರವಾಗಿದೆ. ಅನಿರುದ್ಧ್ ಶಾಸ್ತ್ರಿ ಹಾಗೂ ಅದಿತಿ ಸಾಗರ್ ಗಾಯನ ಸುಮಧುರವಾಗಿದೆ. ನಂದ ಕಿಶೋರ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಚಿತ್ರ ಭರ್ಜರಿ ಯಶಸ್ಸು ಕಾಣಲಿ ಎಂದು ಹಾರೈಸಿದರು‌.

ಶ್ರೇಯಸ್ ಮಾತನಾಡಿ, ಮೊದಲು ನಾನು ನನಗೆ ಸ್ಫೂರ್ತಿಯಾದ ವಿಷ್ಣುವರ್ಧನ್ ಹಾಗೂ ಅಪ್ಪು ಅವರನ್ನು ನೆನಪಿಸಿಕೊಳ್ಳುತ್ತೇನೆ. ಚಂದನ್ ಶೆಟ್ಟಿ ಎಲ್ಲರ ಮನಸ್ಸಿಗೆ ಹತ್ತಿರವಾಗುವಂತಹ ಸಾಹಿತ್ಯ ಬರೆದಿದ್ದಾರೆ. ಅಷ್ಟೇ ಚೆನ್ನಾಗಿ ಸಂಗೀತ ನೀಡಿದ್ದಾರೆ. ಅನಿರುದ್ಧ್ ಶಾಸ್ತ್ರಿ ಹಾಗೂ ಅದಿತಿ ಸಾಗರ್ ಅವರ ಅದ್ಭುತ ಧ್ವನಿ ಹಾಡಿನ ಅಂದವನ್ನು ಮತ್ತಷ್ಟು ಹೆಚ್ಚಿಸಿದೆ. ರೀಷ್ಮಾ ನಾಣಯ್ಯ ಒಳ್ಳೆಯ ನೃತ್ಯಗಾರ್ತಿ. ನೃತ್ಯ ನಿರ್ದೇಶಕ ಇಮ್ರಾನ್ ಮಾಸ್ಟರ್ ಹಾಗೂ ಛಾಯಾಗ್ರಾಹಕ ಶೇಖರ್ ಚಂದ್ರ ಅವರ ಕಾರ್ಯವೈಖರಿ ಚೆನ್ನಾಗಿದೆ. ನಾನು ಈ ಚಿತ್ರಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡು ಅಭಿನಯಿಸಿದ್ದೇನೆ ಎಂದರು.

raana movie song galli boy released today
ರಾಣ ಚಿತ್ರತಂಡ.. ನವೆಂಬರ್11 ರಂದು ಸಿನಿಮಾ ಬಿಡುಗಡೆ

ನಟಿ ರೀಷ್ಮಾ ನಾಣಯ್ಯ ಮಾತನಾಡಿ, ಚಿತ್ರ ಚೆನ್ನಾಗಿ ಮೂಡಿ ಬಂದಿದೆ. ಈ ಹಾಡಂತೂ ತುಂಬಾ ಚೆನ್ನಾಗಿದೆ. ಚಂದನ್ ಶೆಟ್ಟಿ ಅವರು ಬರೆದಿರುವ ಈ ಹಾಡು ಎಲ್ಲರ ಗಮನ ಸೆಳೆಯುತ್ತಿದೆ ಎಂದರು. ನಿರ್ದೇಶಕ ನಂದ ಕಿಶೋರ್ ಮಾತನಾಡಿ, ಹಾಡು ಬಿಡುಗಡೆ ಮಾಡಿದ ಪ್ರೇಮ್ ಸರ್​ಗೆ ಧನ್ಯವಾದ. ತಂಡದವರೆಲ್ಲಾ ಸೇರಿ ಉತ್ತಮ ಚಿತ್ರ ಮಾಡಿದ್ದೇವೆ ಎಂದರು.

ಚಿತ್ರಕ್ಕೆ ಬಂಡವಾಳ ಹಾಕಿರುವ ನಿರ್ಮಾಪಕ ಗುಜ್ಜಲ್ ಪುರುಷೋತ್ತಮ್ ಮಾತನಾಡಿ, ಕೆ.ಮಂಜು ಅವರ ಸಹಕಾರದಿಂದ ಈ ಚಿತ್ರ ನಿರ್ಮಾಣ ಮಾಡಿದ್ದೇನೆ. ಈ ಸಿನಿಮಾ ಎಲ್ಲರಿಗೂ ಇಷ್ಟ ಆಗುತ್ತೆ ಅಂದರು ನಿರ್ಮಾಪಕ ಗುಜ್ಜಲ್ ಪುರುಷೋತ್ತಮ್.

ಈ ಚಿತ್ರದ ಭಾಗವಾಗಿರೋ ನಿರ್ಮಾಪಕ ಕೆ ಮಂಜು ಮಾತನಾಡಿ‌, ರಾಣ ಒಂದೊಳ್ಳೆಯ ಕೌಟುಂಬಿಕ ಚಿತ್ರ. ಹಳ್ಳಿಯಿಂದ ನಗರಕ್ಕೆ ಬಂದು ನೆಲೆಸಿರುವವರ ಕುರಿತಾದ ಕಥೆಯಿದೆ. ನಂದಕಿಶೋರ್ ನಿರ್ದೇಶನ, ಚಂದನ್ ಶೆಟ್ಟಿ ಸಂಗೀತ ನಿರ್ದೇಶನ ಸೇರಿದಂತೆ ಎಲ್ಲರ ಕೆಲಸ ಚೆನ್ನಾಗಿದೆ. ಹಾಡು ಬಿಡುಗಡೆ ಮಾಡಲು ದೂರದ ಮುಂಬೈನಿಂದ ಬಂದ ಪ್ರೇಮ್ ಅವರಿಗೆ ಧನ್ಯವಾದ ಎಂದು ತಿಳಿಸಿದರು.

ಇದನ್ನೂ ಓದಿ: ಗಂಗಾವತಿ: ಮೋರೇರ್ ಬೆಟ್ಟದ ಬಗ್ಗೆ ಸಂಗೀತ ಸಂಯೋಜಿಸಿ ಹಾಡಿದ ಗಾಳಿ ದುರುಗಪ್ಪ

ಈ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿರೋ ಚಂದನ್ ಶೆಟ್ಟಿ ಮಾತನಾಡಿ, ನಂದಕಿಶೋರ್ ನಿರ್ದೇಶನದಲ್ಲಿ ಚಿತ್ರ ಚೆನ್ನಾಗಿ ಬಂದಿದೆ. ಹಾಡುಗಳು ಸುಂದರವಾಗಿದೆ. ಇದೇ ಮೊದಲ ಬಾರಿಗೆ ನಾನು ಹಿನ್ನೆಲೆ ಸಂಗೀತ ಕೂಡ ನೀಡಿದ್ದೇನೆ ಎಂದು ಸಂಗೀತದ ಬಗ್ಗೆ ಚಂದನ್ ಶೆಟ್ಟಿ ಮಾಹಿತಿ ನೀಡಿದರು.

ಶ್ರೇಯಸ್, ರೀಷ್ಮಾ ನಾಣಯ್ಯ ಅಲ್ಲದೇ ಈ ಚಿತ್ರದಲ್ಲಿ ಕೋಟೆ ಪ್ರಭಾಕರ್, ಅಶೋಕ್ , ರಘು ಸೇರಿದಂತೆ ಸಾಕಷ್ಟು ಕಲಾವಿದರು ಅಭಿನಯಿಸಿದ್ದಾರೆ. ಸದ್ಯ ಹಾಡುಗಳಿಂದ ಸದ್ದು ಮಾಡುತ್ತಿರೋ ರಾಣ ಸಿನಿಮಾ‌ ನವೆಂಬರ್11 ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.