ಕನ್ನಡ ಚಿತ್ರರಂಗದಲ್ಲಿ ಅಧ್ಯಕ್ಷ, ರನ್ನ, ಪೊಗರು ಎಂಬಂತಹ ಹಿಟ್ ಸಿನಿಮಾಗಳನ್ನು ನಿರ್ದೇಶಿಸಿರುವ ಹೆಸರಾಂತ ನಿರ್ದೇಶಕ ನಂದ ಕಿಶೋರ್. ಇವರು ಮಲಯಾಳಂ ಸ್ಟಾರ್ ನಟ ಮೋಹನ್ ಲಾಲ್ ಅಭಿನಯದ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಲು ರೆಡಿಯಾಗುವ ಮೂಲಕ ಮಾಲಿವುಡ್‌ಗೆ ಕಾಲಿಟ್ಟಿದ್ದಾರೆ. ಭಾರತದ ಬೃಹತ್ ಬಜೆಟ್ ಸಿನಿಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮೋಹನ್ ಲಾಲ್ ಅಭಿನಯದ 'ವೃಷಭ' ಎಂಬ ಸಿನಿಮಾಗೆ ಇತ್ತೀಚೆಗಷ್ಟೇ ಮುಹೂರ್ತ ಪೂಜೆ ನಡೆದಿದ್ದು, ಸಿನಿಮಾ ಕೆಲಸವೂ ಶುರುವಾಗಿದೆ.
'ವೃಷಭ'ದಲ್ಲಿ ರಾಗಿಣಿ ದ್ವಿವೇದಿ: 'ವೃಷಭ' ಚಿತ್ರದಲ್ಲಿ ಅತ್ಯಂತ ರೋಮಾಂಚಕ ಆ್ಯಕ್ಷನ್ ದೃಶ್ಯಗಳು ಇರಲಿವೆಯಂತೆ. ಮೋಹನ್ ಲಾಲ್ ಅವರೊಂದಿಗೆ ರೋಶನ್ ಮೇಕಾ, ಶನಾಯ ಕಪೂರ್, ಝಾರಾ ಖಾನ್, ಶ್ರೀಕಾಂತ್ ಮೇಕಾ ಸೇರಿದಂತೆ ಮುಂತಾದವರು ನಟಿಸುತ್ತಿದ್ದಾರೆ. ಸ್ಯಾಂಡಲ್ವುಡ್ ತುಪ್ಪದ ಬೆಡಗಿ ಖ್ಯಾತಿಯ ರಾಗಿಣಿ ದ್ವಿವೇದಿ ಸಹ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ವಿಶೇಷ.
ಎರಡನೇ ಬಾರಿ ಮೋಹನ್ ಲಾಲ್ ಜೊತೆ ನಟನೆ: 'ಕಂದಹಾರ್' ನಂತರ ಎರಡನೇ ಬಾರಿಗೆ ಮೋಹನ್ ಲಾಲ್ ಜೊತೆಗೆ ರಾಗಿಣಿ ನಟಿಸುತ್ತಿದ್ದಾರೆ. ಕನ್ನಡದಲ್ಲಿ ಸಾಕಷ್ಟು ಯಶಸ್ವಿ ಚಿತ್ರಗಳನ್ನು ನೀಡಿರುವ ನಂದಕಿಶೋರ್ ಚಿತ್ರ ನಿರ್ದೇಶಿಸುತ್ತಿದ್ದಾರೆ. ಸಿನಿಮಾ ಪ್ರಾರಂಭವಾಗಿರುವ ವಿಷಯವನ್ನು ಸೋಷಿಯಲ್ ಮೀಡಿಯಾ ಮೂಲಕ ಮೋಹನ್ ಲಾಲ್ ಹಂಚಿಕೊಂಡಿದ್ದಾರೆ. 'ವೃಷಭ' ಸಿನಿಮಾದ ಚಿತ್ರೀಕರಣ ಪ್ರಾರಂಭವಾಗಿದ್ದು, ನಿಮ್ಮೆಲ್ಲರ ಪ್ರೀತಿ ಮತ್ತು ಆಶೀರ್ವಾದದ ನಿರೀಕ್ಷೆಯಲ್ಲಿದ್ದೇವೆ ಎಂದು ಅವರು ಬರೆದುಕೊಂಡಿದ್ದಾರೆ.
ಮುಂದಿನ ವರ್ಷ ವೃಷಭ ಬಿಡುಗಡೆ: 'ವೃಷಭ' ಚಿತ್ರವನ್ನು ಬಾಲಿವುಡ್ನ ಜನಪ್ರಿಯ ನಿರ್ಮಾಣ ಸಂಸ್ಥೆಯಾದ ಬಾಲಾಜಿ ಟೆಲಿಫಿಲ್ಮ್ಸ್ ಮತ್ತು ಕನೆಕ್ಟ್ ಮೀಡಿಯಾ, ಎವಿಸ್ ಸ್ಟುಡಿಯೋದ ಸಹಯೋಗದೊಂದಿಗೆ ನಿರ್ಮಿಸುತ್ತಿದೆ. ಏಕ್ತಾ ಕಪೂರ್, ಶೋಭಾ ಕಪೂರ್, ಅಭಿಷೇಕ್ ವ್ಯಾಸ್, ವಿಶಾಲ್ ಗುರ್ನಾನಿ, ಜೂಹಿ ಪಾರೇಖ್ ಮೆಹ್ತಾ, ಶ್ಯಾಮಸುಂದರ್, ವರುಣ್ ಮಾಥುರ್ ಮತ್ತು ಸೌರಭ್ ಮಿಶ್ರಾ ಜೊತೆಯಾಗಿ ನಿರ್ಮಿಸುತ್ತಿದ್ದಾರೆ. ಕನ್ನಡ, ತೆಲುಗು, ತಮಿಳು ಹಾಗು ಮಲಯಾಳಂ ಭಾಷೆಯಲ್ಲಿ ಚಿತ್ರ ನಿರ್ಮಾಣವಾಗಲಿದೆ. ಬಹುನಿರೀಕ್ಷಿತ ಸಿನಿಮಾ ಮುಂದಿನ ವರ್ಷ ಜಗತ್ತಿನಾದ್ಯಂತ 4,500ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ತಿಳಿಸಿದೆ.
ಇದನ್ನೂ ಓದಿ: Dhoni wife Sakshi: 'ನಾನು ಅಲ್ಲು ಅರ್ಜುನ್ ಫ್ಯಾನ್, ಪ್ರಭಾಸ್ ಜೊತೆ ಸಿನಿಮಾ ಮಾಡುವ ಯೋಚನೆಯಿದೆ': ಧೋನಿ ಪತ್ನಿ ಸಾಕ್ಷಿ
ರಾಗಿಣಿ ದ್ವಿವೇದಿ ಮಲಯಾಳಂ ಸಿನಿಮಾಗಳಿವು..: ರಾಗಿಣಿ ದ್ವಿವೇದಿ ನಟನೆಯ ಮೊದಲ ಪ್ಯಾನ್ ಇಂಡಿಯಾ ಚಿತ್ರ 'ಶೀಲಾ'. ಕನ್ನಡ, ತಮಿಳು, ಹಿಂದಿ ಹಾಗೂ ಮಲಯಾಳಂ ಭಾಷೆಯ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿರುವ ರಾಗಿಣಿ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಇತ್ತೀಚೆಗಷ್ಟೇ ಚಿತ್ರದ ಪೋಸ್ಟರ್ ರಿಲೀಸ್ ಆಗಿ ಪ್ರೇಕ್ಷಕರಲ್ಲಿ ಕುತೂಹಲ ಮೂಡಿಸಿದೆ. ಕಂದಹಾರ್ ಮತ್ತು ಫೇಸ್ ಟು ಫೆಸ್ ಎಂಬ ಮಲಯಾಳಂ ಸಿನಿಮಾಗಳಲ್ಲಿ ನಟಿ ಅಭಿನಯಿಸಿದ್ದರು. ಶೀಲಾ 3ನೇ ಮತ್ತು ಸದ್ಯ ಸೆಟ್ಟೇರಿರುವ 'ವೃಷಭ' ಇವರ ನಾಲ್ಕನೇ ಮಲಯಾಳಂ ಸಿನಿಮಾ .
ಇದನ್ನೂ ಓದಿ: ಮಾಸ್ಟರ್ ಆನಂದ್ ಪುತ್ರಿ ವಂಶಿಕಾ ಹೆಸರಲ್ಲಿ ಮೋಸ: ₹40 ಲಕ್ಷ ವಂಚನೆ ಆರೋಪ ದಾಖಲು - ₹2 ಕೋಟಿಗೂ ಹೆಚ್ಚು ವಹಿವಾಟು!