ETV Bharat / entertainment

ರಾಜ್ಯೋತ್ಸವ ದಿ ಆ್ಯಂಥಮ್ ಆಲ್ಬಂನಲ್ಲಿ ರಾಗಿಣಿ ದ್ವಿವೇದಿ ಕನ್ನಡ ಪ್ರೇಮ

author img

By ETV Bharat Karnataka Team

Published : Dec 2, 2023, 7:20 AM IST

Rajyotsava The Anthem album release: ರಾಜ್ಯೋತ್ಸವ ದಿ ಆ್ಯಂಥಮ್ ಎಂಬ ವಿಡಿಯೋ ಸಾಂಗ್​ ಅನ್ನು ನಟ ಶ್ರೀ ಮುರಳಿ ಬಿಡುಗಡೆ ಮಾಡಿದರು.

Rajyotsava The Anthem album release in Bengaluru
ರಾಜ್ಯೋತ್ಸವ ದಿ ಆ್ಯಂಥಮ್ ಆಲ್ಬಂ ಬಿಡುಗಡೆ

ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವದ ದಿನವಾದರೂ, ಇಡೀ ನವೆಂಬರ್ ತಿಂಗಳಲ್ಲಿ ರಾಜ್ಯೋತ್ಸವ ಆಚರಿಸುವ ವಾಡಿಕೆ ಇದೆ. ಈವರೆಗೆ ಕನ್ನಡದ ರಾಜ್ಯೊತ್ಸವದ ಮೇಲೆ ಹಲವಾರು ಹಾಡುಗಳು ಬಂದಿವೆ. ಆದರೀಗ ತನ್ನ ಬೋಲ್ಡ್ ನಟನೆಯಿಂದ ಕನ್ನಡಿಗರ ಮನಗೆದ್ದಿರುವ ರಾಗಿಣಿ ದ್ವಿವೇದಿ ಅಭಿನಯದ ರಾಜ್ಯೋತ್ಸವ ದಿ ಆ್ಯಂಥಮ್ ಎಂಬ ವಿಡಿಯೋ ಸಾಂಗ್ ಐಪ್ಲೆಕ್ಸ್ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿದೆ.

ಪುನೀತ್ ರಾಜ್‍ಕುಮಾರ್ ಅಭಿನಯದ ವಂಶಿ ಸೇರಿದಂತೆ ಅನೇಕ ಚಿತ್ರಗಳಲ್ಲಿ ನಟಿಸಿರುವ ವಿಜಯ್ ಕೌಂಡಿನ್ಯ ಅವರ ಸಹೋದರ ವಿಕ್ರಮ್ ಶೀನಿವಾಸ್ ಈ ವಿಡಿಯೋ ಸಾಂಗ್ ನಿರ್ಮಾಣ‌ ಮಾಡಿದ್ದಾರೆ. ವಿಕ್ರಮ್ ಅವರ ತಂದೆ ಶ್ರೀನಿವಾಸ್ ಅವರು ಕೂಡ ಡಾ. ರಾಜಕುಮಾರ್ ಅವರ ಜೊತೆ ಅನೇಕ ಚಿತ್ರಗಳಲ್ಲಿ ನಟಿಸಿದ್ದರು. ಈಗ ವಿಕ್ರಮ್ ಶ್ರೀನಿವಾಸ್ ಅವರು 12 ಎಂಟರ್​ಟೈನ್ಮೆಂಟ್ ಎಂಬ ಸಂಸ್ಥೆ ಆರಂಭಿಸಿದ್ದಾರೆ. ಆ ಸಂಸ್ಥೆ ಮೂಲಕ ಮೊದಲ ಪ್ರಯತ್ನವಾಗಿ "ರಾಜ್ಯೋತ್ಸವ" ಹಾಡನ್ನು ನಿರ್ಮಾಣ ಮಾಡಿದ್ದಾರೆ. ಇತ್ತೀಚಿಗೆ ಈ ಹಾಡನ್ನು ನಟ ಶ್ರೀಮುರಳಿ ಬಿಡುಗಡೆ ಮಾಡಿ ಇಡೀ ಹಾಡನ್ನು ಮೆಚ್ಚಿಕೊಂಡಿದ್ದಾರೆ.

  • " class="align-text-top noRightClick twitterSection" data="">

ಈ ಬಗ್ಗೆ ಮಾತನಾಡಿದ ನಟಿ ರಾಗಿಣಿ ದ್ವಿವೇದಿ, ಕನ್ನಡಿಗರಿಗೆ ಎಷ್ಟು ಧನ್ಯವಾದ ಹೇಳಿದರೂ ಕಡಿಮೆ. ಯಾಕೆಂದರೆ ನನ್ನನ್ನು ಎಲ್ಲರೂ ಗುರುತಿಸುತ್ತಿದ್ದಾರೆ ಎಂದರೆ ಅದು ಕನ್ನಡ ಚಿತ್ರಗಳಿಂದ. ನಾನು ಎಲ್ಲೇ ಹೋದರು ಕನ್ನಡತಿಯಾಗಿಯೇ ಗುರುತಿಸಿಕೊಳ್ಳುತ್ತೇನೆ‌. ವಿಕ್ರಮ್ ಶ್ರೀನಿವಾಸ್ ನಿರ್ಮಾಣ ಮಾಡಿರುವ ಈ ಹಾಡಿನಲ್ಲಿ ಅಭಿನಯಿಸಿದ್ದು ಖುಷಿಯಾಗಿದೆ. ಹಾಡು ಬಿಡುಗಡೆ ಮಾಡಿಕೊಟ್ಟ ಶ್ರೀಮುರಳಿ ಅವರಿಗೆ ಹಾಗೂ ಐಪ್ಲೆಕ್ಸ್ ಸಂಸ್ಥೆಗೆ ಧನ್ಯವಾದ ಎಂದರು.

ವಿಜಯ್ ಕೌಂಡಿನ್ಯ ಮಾತನಾಡಿ, ನನ್ನ ಸಹೋದರ ವಿಕ್ರಮ್ ಶ್ರೀನಿವಾಸ್ twelve 12 ಎಂಟರ್​ಟೈನ್ಮೆಂಟ್ ಎಂಬ ನೂತನ ಸಂಸ್ಥೆ ಆರಂಭಿಸಿದ್ದಾರೆ. ಮೊದಲ ಹೆಜ್ಜೆಯಾಗಿ ರಾಜ್ಯೋತ್ಸವ ಎಂಬ ವಿಡಿಯೋ ಸಾಂಗ್ ನಿರ್ಮಾಣ ಮಾಡಿದ್ದಾರೆ. ಹಾಡು ಬಿಡುಗಡೆ ಮಾಡಿಕೊಟ್ಟ ಶ್ರೀಮುರಳಿ ಅವರಿಗೆ ಧನ್ಯವಾದ. ಮುಂದೆ ಅನೇಕ ಗೀತೆಗಳನ್ನು ಹಾಗೂ ಚಿತ್ರಗಳನ್ನು ನಿರ್ಮಾಣ‌ ಮಾಡುವ ಇರಾದೆ ವಿಕ್ರಮ್ ಶ್ರೀನಿವಾಸ್ ಅವರಿಗಿದೆ ಎಂದು ತಿಳಿಸಿದರು.

ಐಪ್ಲೆಕ್ಸ್ ಸಂಸ್ಥೆಯ ಮುಖ್ಯಸ್ಥ ಗಿರೀಶ್ ಕುಮಾರ್ ಮಾತನಾಡಿ, ನಮ್ಮ ಐಪ್ಲೆಕ್ಸ್ ಸಂಸ್ಥೆ 20 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದೆ. ಈಗ ಮ್ಯೂಸಿಕ್ ಸಂಸ್ಥೆ ಕೂಡ ಆರಂಭಿಸಿದ್ದೇವೆ‌. ರಾಜ್ಯೋತ್ಸವದ ಹಾಡು ಚೆನ್ನಾಗಿದೆ ಎಂದರು. ಈ ಹಾಡಿಗೆ ಕಿಶನ್ ಮೂರ್ತಿ ಸಂಗೀತ ನೀಡಿದ್ದು, ಮಧು ಅವರು ಬರೆದಿರುವ ಹಾಡನ್ನು ಮೇಘನಾ ಭಟ್ ಹಾಡಿದ್ದಾರೆ. ಸದ್ಯ ರಾಗಿಣಿ ದ್ವಿವೇದಿಯ ಕನ್ನಡ ಪ್ರೇಮದ ರಾಜ್ಯೋತ್ಸವದ ಹಾಡು ಸದ್ದು ಮಾಡುತ್ತಿದೆ.

ಇದನ್ನೂ ಓದಿ: ರಣಬೀರ್​ ಕಪೂರ್​ 'ಅನಿಮಲ್​' ಚಿತ್ರದಲ್ಲಿ ರಶ್ಮಿಕಾ ಪಾತ್ರ ನಿರಾಕರಿಸಿದ್ದ ಪರಿಣಿತಿ ಚೋಪ್ರಾ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.