ಬಿಚ್ಚುಗತ್ತಿ ಸಿನಿಮಾ ಮೂಲಕ ಕನ್ನಡ ಚಿತ್ರರಂಗದಲ್ಲಿ ಭರವಸೆ ಹುಟ್ಟಿಸಿರೋ ನಟ ರಾಜವರ್ಧನ್. ಈ ಚಿತ್ರದ ಬಳಿಕ ರಾಜವರ್ಧನ್ ಅಭಿನಯದ ಬಹುನಿರೀಕ್ಷಿತ ಹಿರಣ್ಯ ಸಿನಿಮಾದ ಶೂಟಿಂಗ್ ಕಂಪ್ಲೀಟ್ ಆಗಿದೆ. ಬೆಂಗಳೂರು ಸುತ್ತಮುತ್ತ ಇಡೀ ಚಿತ್ರದ ಚಿತ್ರೀಕರಣ ನಡೆಸಲಾಗಿದ್ದು, ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗುತ್ತಿವೆ.
ರಾಜವರ್ಧನ್ಗೆ ಜೋಡಿಯಾಗಿ ಮಾಡೆಲ್ ರಿಹಾನಾ ನಟಿಸಿದ್ದು, ಈ ಚಿತ್ರದ ಮೂಲಕ ರಿಹಾನಾ ಚಂದನವನ ಪ್ರವೇಶಿಸಿದ್ದಾರೆ. ಕಂಪ್ಲೀಟ್ ಆ್ಯಕ್ಷನ್ ಥ್ರಿಲ್ಲರ್ ಜೊತೆಗೆ ತಾಯಿ ಸೆಂಟಿಮೆಂಟ್ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಬಿಗ್ ಬಾಸ್ ಖ್ಯಾತಿಯ ದಿವ್ಯಾ ಸುರೇಶ್ ಸ್ಪೆಷಲ್ ರೋಲ್ ನಲ್ಲಿ ಕಾಣಿಸಿಕೊಂಡಿದ್ದು, ಹುಲಿ ಕಾರ್ತಿಕ್, ಅರವಿಂದ್ ರಾವ್, ದಿಲೀಪ್ ಶೆಟ್ಟಿ ಮುಂತಾದವರು ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ.
![Rajavardhan starrer Hiranya Shooting Completed](https://etvbharatimages.akamaized.net/etvbharat/prod-images/kn-bng-05-rajavardhan-hiranya-movie-shooting-completed-7204735_15052023184703_1505f_1684156623_1065.jpeg)
ಹಿರಣ್ಯ ಸಿನಿಮಾಗೆ ಪ್ರವೀಣ್ ಅವ್ಯುಕ್ತ್ ಆ್ಯಕ್ಷನ್ ಕಟ್ ಹೇಳಿದ್ದಾರೆ. ಈಗಾಗಲೇ ಹಲವು ಶಾರ್ಟ್ ಮೂವಿಗಳನ್ನು ಮಾಡಿದ ಅನುಭವ ಇರುವ ಪ್ರವೀಣ್ ಅವ್ಯುಕ್ತ್ ಈ ಚಿತ್ರದ ಮೂಲಕ ಪೂರ್ಣ ಪ್ರಮಾಣದಲ್ಲಿ ನಿರ್ದೇಶಕನಾಗಿ ಸ್ಯಾಂಡಲ್ವುಡ್ಗೆ ಪರಿಚಯವಾಗುತ್ತಿದ್ದಾರೆ.
![Rajavardhan starrer Hiranya Shooting Completed](https://etvbharatimages.akamaized.net/etvbharat/prod-images/kn-bng-05-rajavardhan-hiranya-movie-shooting-completed-7204735_15052023184703_1505f_1684156623_336.jpeg)
ವೇದಾಸ್ ಇನ್ಫಿನಿಟಿ ಪಿಕ್ಚರ್ ಬ್ಯಾನರ್‌ನಡಿ ವಿಘ್ನೇಶ್ವರ. ಯು ಹಾಗೂ ವಿಜಯ್ ಕುಮಾರ್ ಬಿ.ವಿ ಹಿರಣ್ಯ ಸಿನಿಮಾಗೆ ಬಂಡವಾಳ ಹೂಡಿ ನಿರ್ಮಿಸುತ್ತಿದ್ದು, ಚಿತ್ರಕ್ಕೆ ಯೋಗೇಶ್ವರನ್ ಆರ್ ಛಾಯಾಗ್ರಹಣವಿದೆ. ಚಿತ್ರದ ಹಾಡುಗಳಿಗೆ ಜ್ಯೂಡಾ ಸ್ಯಾಂಡಿ ಸಂಗೀತ ಸಂಯೋಜನೆಯಿದೆ. ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿ ಇರುವ ಚಿತ್ರತಂಡ ಆದಷ್ಟು ಬೇಗ ಸಿನಿಮಾವನ್ನು ತೆರೆಗೆ ತರುವ ಪ್ರಯತ್ನ ನಡೆಸುತ್ತಿದೆ.
ಇದನ್ನೂ ಓದಿ: ಓಂ, ಎ, ಹಾಗೂ ರಣಧೀರ ಚಿತ್ರಗಳನ್ನ ನೆನಪಿಸಿದ ಬೆಂಗಳೂರು ಬಾಯ್ಸ್ ಚಿತ್ರ