ETV Bharat / entertainment

ಬಿಗ್ ಬಾಸ್ ಖ್ಯಾತಿಯ ರಾಜೀವ್ ಅಭಿನಯದ ಉಸಿರೇ ಉಸಿರೇ ಚಿತ್ರದ ಮೊದಲ ಹಾಡಿಗೆ ಫ್ಯಾನ್ಸ್ ಫಿದಾ - ಈಟಿವಿ ಭಾರತ್​ ಕನ್ನಡ ನ್ಯೂಸ್

ರಾಜೀವ್​ಗೆ ಜೋಡಿಯಾಗಿ ಶ್ರೀಜಿತ್​ ಅಭಿನಯಿಸಿರುವ ಉಸಿರೇ ಉಸಿರೇ ಚಿತ್ರದ ಬಿಡುಗಡೆ ಆಗಿರುವ ಮೊದಲ ಹಾಡಿಗೆ ವಿವೇಕ್ ಚಕ್ರವರ್ತಿ ಸಂಗೀತದ ಜೊತೆಗೆ ವಾಸುಕಿ ವೈಭವ್ ಧ್ವನಿಗೂಡಿಸಿದ್ದಾರೆ.

ನಟ ರಾಜೀವ್
ನಟ ರಾಜೀವ್
author img

By

Published : Aug 2, 2023, 6:20 AM IST

ಕನ್ನಡ ಬಿಗ್ ಬಾಸ್ ಖ್ಯಾತಿಯ ನಟ ರಾಜೀವ್ ನಾಯಕರಾಗಿ ನಟಿಸಿರುವ "ಉಸಿರೇ ಉಸಿರೇ" ಚಿತ್ರಕ್ಕಾಗಿ ಪ್ರೇಮಕವಿ ಕೆ.ಕಲ್ಯಾಣ್ ಬರೆದಿರುವ "ಉಸಿರೇ ನನ್ನ ಉಸಿರೇ" ಎಂಬ ಚಿತ್ರದ ಮೊದಲ ಹಾಡು ಇತ್ತೀಚೆಗೆ ಬಿಡುಗಡೆಯಾಯಿತು. ವಿವೇಕ್ ಚಕ್ರವರ್ತಿ ಸಂಗೀತ ನೀಡಿದ್ದು, ವಾಸುಕಿ ವೈಭವ್ ಹಾಡಿರುವ ಈ ಹಾಡು ಸಖತ್​ ಸೌಂಡ್​ ಮಾಡುತ್ತಿದೆ. ಖ್ಯಾತ ಸಂಗೀತ ನಿರ್ದೇಶಕ, ಗಾಯಕ ಗುರುಕಿರಣ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ ಹರೀಶ್ ಹಾಗೂ ಭೀಮ ಜ್ಯುಯಲರ್ಸ್​ನ ಮಾಲೀಕರಾದ ವಿಷ್ಣು ಭಟ್ ಹಾಡು ಬಿಡುಗಡೆ ಮಾಡಿದರು.

  • " class="align-text-top noRightClick twitterSection" data="">

ಇದೊಂದು ನವೀರಾದ ಪ್ರೇಮಕಥೆ. ಪ್ರೀತಿಗೆ ಜಾತಿಯಿಲ್ಲ ಎಂದು ಸಾರುವ ಕಥೆ ಎಂದು ಮಾತು ಪ್ರಾರಂಭಿಸಿದ ನಾಯಕ ರಾಜೀವ್, "ಉಸಿರೇ ಉಸಿರೇ" ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ‌. ಇತ್ತೀಚೆಗೆ ಬಳ್ಳಾರಿಯ ರೇಣುಕಾಂಬ ಜಾತ್ರೆಯಲ್ಲಿ ಹಾಗೂ ಮಂತ್ರಾಲಯದ ಗುರು ಸಾರ್ವಭೌಮರ ಸನ್ನಿಧಿಯಲ್ಲಿ ಚಿತ್ರದ ಟೀಸರ್ ಬಿಡುಗಡೆ‌ ಮಾಡಿದ್ದೆವು. ಇದೀಗ ಮೊದಲ ಹಾಡು ಬಿಡುಗಡೆಯಾಗಿದೆ.

ಎಲ್ಲರೂ ಸಾಮಾನ್ಯವಾಗಿ ಮೊದಲು ಚಿತ್ರದ ಡ್ಯುಯೆಟ್ ಸಾಂಗ್ ಬಿಡುಗಡೆ ಮಾಡುತ್ತಾರೆ. ಆದರೆ, ನಾವು ಪ್ಯಾತೋ ಸಾಂಗ್ ಬಿಡುಗಡೆ ಮಾಡಿದ್ದೇವೆ. ಈ ಹಾಡನ್ನು ಮೊದಲು ಬಿಡುಗಡೆ ಮಾಡಲು ಕಾರಣ ಎಂದರೆ, ಈ ಹಾಡಿನಲ್ಲಿ ಇಡೀ ಚಿತ್ರದ ಕಥೆಯಿದೆ. ಹಾಡನ್ನು ಗಮನವಿಟ್ಟು ಕೇಳಿದಾಗ ನಮ್ಮ ಚಿತ್ರದ ಕಥೆ ಅರ್ಥವಾಗುತ್ತದೆ. ಈ ಹಾಡನ್ನು ಬಿಡುಗಡೆ ಮಾಡಿಕೊಟ್ಟ ಗುರುಕಿರಣ್, ಭಾ.ಮ.ಹರೀಶ್ ಹಾಗೂ ವಿಷ್ಣು ಭಟ್ ಅವರಿಗೆ ಧನ್ಯವಾದ ತಿಳಿಸಿದರು.

ನಿರ್ದೇಶಕ ಸಿ.ಎಂ ವಿಜಯ್ ಮಾತನಾಡಿ ನಮ್ಮ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿ, ಪೋಸ್ಟ್ ಪ್ರೊಡಕ್ಷನ್ ವರ್ಕ್ ನಡೆಯುತ್ತಿದೆ. ಸೆಪ್ಟೆಂಬರ್​ನಲ್ಲಿ ತೆರೆಗೆ ತರುವ ಸಿದ್ದತೆ ನಡೆಯುತ್ತಿದೆ. ನಮ್ಮ ಚಿತ್ರದಲ್ಲಿ ಕಲಾವಿದರ ದಂಡೇ ಇದ್ದು, ರಾಜೀವ್ ಅವರಿಗೆ ನಾಯಕಿಯಾಗಿ ಶ್ರೀಜಿತ ನಟಿಸಿದ್ದಾರೆ. ಕಿಚ್ಚ ಸುದೀಪ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ತೆಲುಗಿನ ಖ್ಯಾತ ನಟರಾದ ಡಾ. ಆಲಿ ಹಾಗೂ ಪದ್ಮಭೂಷಣ ಪ್ರಶಸ್ತಿ ವಿಜೇತರು, ಅತೀ ಹೆಚ್ಚು ಸಿನಿಮಾಗಳಲ್ಲಿ ನಟಿಸಿ ಗಿನ್ನಿಸ್ ರೆಕಾರ್ಡ್ ಮಾಡಿರುವ ಬ್ರಹ್ಮಾನಂದಂ ಮೊದಲ ಬಾರಿಗೆ ನಮ್ಮ ಚಿತ್ರದಲ್ಲಿ ಒಟ್ಟಾಗಿ ನಟಿಸಿದ್ದಾರೆ.

ಜೊತೆಗೆ ಸ್ಯಾಂಡಲ್​ವುಡ್​ ಡೈನಾಮಿಕ್ ಸ್ಟಾರ್ ದೇವರಾಜ್, ಸಾಧುಕೋಕಿಲ, ಮಂಜು ಪಾವಗಡ, ತಾರಾ, ಸುಚೇಂದ್ರ ಪ್ರಸಾದ್, ರಾಜೇಶ್ ನಟರಂಗ, ಶೈನಿಂಗ್ ಸೀತಾರಾಮು, ಜಗಪ್ಪ, ಸುಶ್ಮಿತಾ ಇನ್ನೂ ಮುಂತಾದವರ ದೊಡ್ಡ ತಾರಾ ಬಳಗವಿದೆ. ಇದೀಗ ಮೊದಲ ಹಾಡು ಬಿಡುಗಡೆಯಾಗಿದೆ. ಮುಂದೆ ಉಳಿದ ಹಾಡುಗಳು ಹಾಗೂ ಟ್ರೇಲರ್ ಸಹ ಬಿಡುಗಡೆಯಾಗಲಿದೆ ಎಂದರು.

ನಿರ್ಮಾಪಕರು ಹೇಳಿದ್ದೇನು? : ಇದು ನನ್ನ ಮೊದಲ ನಿರ್ಮಾಣದ ಚಿತ್ರ.‌ ನಾನು ಚಿತ್ರ ನಿರ್ಮಾಣ ಮಾಡಲು ನಟ ಕಿಚ್ಚ ಸುದೀಪ್ ಅವರೆ ಸ್ಪೂರ್ತಿ. ಅವರು ನನ್ನ ಬೆನ್ನೆಲುಬಾಗಿ ನಿಂತರು ಹಾಗೂ ಪ್ರಮುಖ ಪಾತ್ರದಲ್ಲಿ ಅಭಿನಯ ಕೂಡ ಮಾಡಿದ್ದಾರೆ. ಕ್ಲೈಮ್ಯಾಕ್ಸ್​ನಲ್ಲಿ ಸುದೀಪ್ ಅವರ ಅಭಿನಯದ ಸನ್ನಿವೇಶಗಳು ಸುಮಾರು 18 ನಿಮಿಷಗಳು ಬರುತ್ತದೆ‌. ಸುದೀಪ್ ಅವರಿಗೆ ಮತ್ತು ನನ್ನ ಇಡೀ ಚಿತ್ರ ತಂಡಕ್ಕೆ ಧನ್ಯವಾದ ಎಂದು ನಿರ್ಮಾಪಕ ಪ್ರದೀಪ್ ಯಾದವ್ ಹೇಳಿದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.