ETV Bharat / entertainment

Lal Salaam ಶೂಟಿಂಗ್​ ಮಧ್ಯೆ ಅಣ್ಣಾಮಲೈಯಾರ್ ದೇವಸ್ಥಾನಕ್ಕೆ ರಜನಿಕಾಂತ್​ ಭೇಟಿ: ಪೂಜೆ ಸಲ್ಲಿಕೆ - ಈಟಿವಿ ಭಾರತ ಕನ್ನಡ

'ಲಾಲ್​ ಸಲಾಂ' ಶೂಟಿಂಗ್​ ಮಧ್ಯೆ ವಿರಾಮ ತೆಗೆದುಕೊಂಡು ಸೂಪರ್​ ಸ್ಟಾರ್​ ರಜನಿಕಾಂತ್​ ಅಣ್ಣಾಮಲೈಯಾರ್ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.

Rajinikanth
ರಜನಿಕಾಂತ್​
author img

By

Published : Jul 1, 2023, 5:49 PM IST

ಕಾಲಿವುಡ್​ ಸೂಪರ್​ ಸ್ಟಾರ್​ ರಜನಿಕಾಂತ್​ ತಮಿಳುನಾಡಿನ ತಿರುವಣ್ಣಾಮಲೈನಲ್ಲಿರುವ ಪ್ರಸಿದ್ಧ ಅಣ್ಣಾಮಲೈಯಾರ್ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಅವರ ಮುಂಬರುವ ಚಿತ್ರ 'ಲಾಲ್​ ಸಲಾಂ' ಶೂಟಿಂಗ್​ನ ಬಿಡುವಿಲ್ಲದ ಸಮಯದಲ್ಲೂ ವಿರಾಮ ತೆಗೆದುಕೊಂಡು ದೇವಾಲಯಕ್ಕೆ ತೆರಳಿ ದೇವರ ಆಶೀರ್ವಾದ ಪಡೆದಿದ್ದಾರೆ. ಸೆಲೆಬ್ರಿಟಿಯಾಗಿದ್ದರೂ ಸಹ, ಸಾಮಾನ್ಯರಂತೆ ದೇವಸ್ಥಾನಕ್ಕೆ ತೆರಳಿ ದೇವರಿಗೆ ಪ್ರಾರ್ಥನೆ ಸಲ್ಲಿಸುವ ಮೂಲಕ ಮತ್ತೊಮ್ಮೆ ಸರಳತೆ ಮೆರೆದಿದ್ದಾರೆ.

ಮೆಗಾಸ್ಟಾರ್​ ಅಣ್ಣಾಮಲೈಯಾರ್​​ ದೇವಸ್ಥಾನಕ್ಕೆ ಭೇಟಿ ನೀಡಿರುವ ಫೋಟೋಗಳು ಮತ್ತು ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್​ ಆಗಿದೆ. ನಟ ಯಾವುದೇ ಆಡಂಬರವಿಲ್ಲದೇ, ಸರಳವಾಗಿ ತಿಳಿ ಕಂದು ಬಣ್ಣದ ಟಿ-ಶರ್ಟ್​ ಮತ್ತು ಬಿಳಿ ಪಂಚೆಯನ್ನು ಧರಿಸಿದ್ದರು. ರಜನಿ ಪವಿತ್ರ ದೇಗುಲವನ್ನು ಪ್ರವೇಶಿಸುತ್ತಿದ್ದಂತೆ ಅವರನ್ನು ಕಾಣಲು ಅಭಿಮಾನಿಗಳು ದೇವಸ್ಥಾನಕ್ಕೆ ಜಮಾಯಿಸಿದರು. ನೆಚ್ಚಿನ ನಟನೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಗಿಬಿದ್ದರು.

ರಜನಿಕಾಂತ್​ ಇತ್ತೀಚೆಗೆ ಮುಂಬೈನಲ್ಲಿದ್ದರು. ಸುಮಾರು ಒಂದು ವಾರ ಲಾಲ್​ ಸಲಾಂ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದರು. ಜೊತೆಗೆ ಖ್ಯಾತ ಕ್ರಿಕೆಟಿಗ ಕಪಿಲ್​ ದೇವ್​ ಅವರೊಂದಿಗೆ ಶೂಟಿಂಗ್​ನಲ್ಲಿ ತೊಡಗಿಸಿಕೊಂಡಿದ್ದರು. ಅವರು ಕೂಡ ಈ ಸಿನಿಮಾದಲ್ಲಿ ಅತಿಥಿ ಪಾತ್ರ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಮುಂಬೈನಲ್ಲಿ ಚಿತ್ರೀಕರಣದ ವೇಳೆ ರಜನಿಕಾಂತ್​ ಅವರು ಕಪಿಲ್​ ದೇವ್​ ಜೊತೆಗಿನ ಫೋಟೋವನ್ನು ಹಂಚಿಕೊಂಡಿದ್ದರು.

ಇದನ್ನೂ ಓದಿ: Houseful 5 ಘೋಷಣೆ ಬೆನ್ನಲ್ಲೇ ಫ್ಯಾಮಿಲಿ ಟ್ರಿಪ್​ ಹೊರಟ ಬಾಲಿವುಡ್​ ಕಿಲಾಡಿ ಅಕ್ಷಯ್ ಕುಮಾರ್

ಚಿತ್ರತಂಡ ಹೀಗಿದೆ.. 'ಲಾಲ್​ ಸಲಾಂ' ಸಿನಿಮಾವನ್ನು ರಜನಿ ಪುತ್ರಿ ಐಶ್ವರ್ಯಾ ರಜನಿಕಾಂತ್​ ನಿರ್ದೇಶಿಸುತ್ತಿದ್ದಾರೆ. ಈ ಚಿತ್ರದ ಮೂಲಕ ಮತ್ತೆ ನಿರ್ದೇಶನಕ್ಕಿಳಿದಿದ್ದಾರೆ. ಕ್ರಿಕೆಟ್​ ಕಥಾಧಾರಿತ ಹಿನ್ನೆಲೆಯಲ್ಲಿ ಸಿನಿಮಾ ನಿರ್ಮಾಣವಾಗುತ್ತಿದೆ. ಲೈಕಾ ಪ್ರೊಡಕ್ಷನ್ಸ್ ಈ ಚಿತ್ರವನ್ನು ನಿರ್ಮಿಸುತ್ತಿದೆ. ಚಿತ್ರದಲ್ಲಿ ರಜನಿ ಜೊತೆ ಯುವ ನಟರಾದ ವಿಷ್ಣು ವಿಶಾಲ್ ಮತ್ತು ವಿಕ್ರಾಂತ್ ನಾಯಕರಾಗಿ ಅಭಿನಯಿಸುತ್ತಿದ್ದಾರೆ.

ಟಾಲಿವುಡ್ ತಾರೆ ಜೀವತಾ ರಾಜಶೇಖರ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಪಿರಿಯಾಡಿಕಲ್ ಡ್ರಾಮಾವಾಗಿ ತಯಾರಾಗುತ್ತಿರುವ ಈ ಚಿತ್ರಕ್ಕೆ ಎಆರ್ ರೆಹಮಾನ್ ಸಂಗೀತ ನೀಡುತ್ತಿದ್ದಾರೆ. ಚಿತ್ರೀಕರಣ ಭರದಿಂದ ಸಾಗುತ್ತಿದ್ದು, ಈ ವರ್ಷದ ಕೊನೆಯಲ್ಲಿ ಚಿತ್ರವು ಥಿಯೇಟರ್‌ಗೆ ಬರಲಿದೆ.

ಇನ್ನೊಂದೆಡೆ ರಜನಿ ಮುಖ್ಯಭೂಮಿಕೆಯಲ್ಲಿ ನಟಿಸಿರುವ 'ಜೈಲರ್​' ತೆರೆ ಕಾಣಲು ಸಜ್ಜಾಗಿದೆ. ಕಲಾನಿಧಿ ಮಾರನ್ ಈ ಚಿತ್ರವನ್ನು ಭಾರಿ ಬಜೆಟ್‌ನಲ್ಲಿ ನಿರ್ಮಿಸಿದ್ದಾರೆ. ತಮಿಳಿನ ಸ್ಟಾರ್ ಸಂಗೀತ ನಿರ್ದೇಶಕ ಅನಿರುದ್ಧ ರವಿಚಂದರ್ ಚಿತ್ರಕ್ಕೆ ಸಂಗೀತ ನೀಡಿದ್ದಾರೆ.​ ರಜನಿಗೆ ನಾಯಕಿಯಾಗಿ ಸೌತ್​ ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ ನಟಿಸಿದ್ದಾರೆ. ಸ್ಯಾಂಡಲ್​ವುಡ್​ ಹ್ಯಾಟ್ರಿಕ್​ ಹೀರೋ ಶಿವ ರಾಜ್​​ಕುಮಾರ್​, ಮಲಯಾಳಂ ಸೂಪರ್​ ಸ್ಟಾರ್​ ಮೋಹನ್​ ಲಾಲ್​, ಜಾಕಿ ಶ್ರಾಫ್​, ರಮ್ಯಾ ಕೃಷ್ಣ, ಹಾಸ್ಯನಟ ಸುನೀಲ್​ ಮುಂತಾದವರು ಪ್ರಮುಖ ಪಾತ್ರದಲ್ಲಿದ್ದಾರೆ.

ಆರ್.ನಿರ್ಮಲ್​ ಸಂಕಲನ ಮತ್ತು ವಿಜಯ್ ಕಾರ್ತಿಕ್ ಕಣ್ಣನ್ ಛಾಯಾಗ್ರಹಣವಿದೆ. ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶಿಸುತ್ತಿರುವ ಜೈಲರ್​ ರಜನಿಕಾಂತ್ ಅವರ 169ನೇ ಚಿತ್ರವಾಗಲಿದೆ. ಸಿನಿಮಾ ಆಗಸ್ಟ್ 10 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಇದಲ್ಲದೇ 'ಜೈ ಭೀಮ್' ಖ್ಯಾತಿಯ ಟಿ ಜೆ ಜ್ಞಾನವೇಲ್ ನಿರ್ದೇಶನದ ಚಿತ್ರವೊಂದಕ್ಕೆ ರಜನಿ ಸಹಿ ಹಾಕಿದ್ದಾರೆ. ಸದ್ಯದಲ್ಲೇ ಈ ಸಿನಿಮಾದ ಶೂಟಿಂಗ್ ಕೂಡ ಶುರುವಾಗಲಿದೆ.

ಇದನ್ನೂ ಓದಿ: Actor Komal: ಭಯದ ಜೊತೆ ನಗಿಸಲು ಮತ್ತೆ ಬಂದ್ರು 'ನಮೋ ಭೂತಾತ್ಮ 2' ಗ್ಯಾಂಗ್​; ಹಾರರ್ ಟೀಸರ್​ ನೋಡಿ..

ETV Bharat Logo

Copyright © 2025 Ushodaya Enterprises Pvt. Ltd., All Rights Reserved.