ಉಡುಪಿ ಶ್ರೀಕೃಷ್ಣ ಮಠದ ಸ್ಥಳದ ವಿಚಾರವಾಗಿ ಇತ್ತೀಚೆಗೆ ಕಾಂಗ್ರೆಸ್ ಮುಖಂಡ ಮಿಥುನ್ ರೈ ನೀಡಿದ್ದ ಹೇಳಿಕೆ ಭಾರಿ ವಿವಾದ ಸೃಷ್ಟಿಸಿತ್ತು. ಬಳಿಕ ತಮ್ಮ ಹೇಳಿಕೆಯ ಬಗ್ಗೆ ಸ್ಪಷ್ಟೀಕರಣ ಕೂಡ ನೀಡಿದ್ದರು. ಇದೀಗ ಕನ್ನಡದ ಬೇಡಿಕೆಯ ನಟ ರಕ್ಷಿತ್ ಶೆಟ್ಟಿ ಮಾತನಾಡಿದ್ದಾರೆ. ಮಿಥುನ್ ರೈ ಅವರನ್ನು ಪರೋಕ್ಷವಾಗಿ ತರಾಟೆಗೆ ತೆಗೆದುಕೊಂಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಹುಟ್ಟು ಹಾಕಿದೆ.
-
The temple town of Udupi has written history of more than thousand years… Why talk nonsense on a public platform when you have no idea???
— Rakshit Shetty (@rakshitshetty) March 11, 2023 " class="align-text-top noRightClick twitterSection" data="
">The temple town of Udupi has written history of more than thousand years… Why talk nonsense on a public platform when you have no idea???
— Rakshit Shetty (@rakshitshetty) March 11, 2023The temple town of Udupi has written history of more than thousand years… Why talk nonsense on a public platform when you have no idea???
— Rakshit Shetty (@rakshitshetty) March 11, 2023
ರಕ್ಷಿತ್ ಶೆಟ್ಟಿ ಟ್ವೀಟ್ ಏನು?: ಕಾಂಗ್ರೆಸ್ ಮುಖಂಡ ಮಿಥುನ್ ರೈ ಹೆಸರು ಹೇಳದೇ ಉಡುಪಿ ಶ್ರೀಕೃಷ್ಣ ಮಠ ಕುರಿತು ರಕ್ಷಿತ್ ಶೆಟ್ಟಿ ಟ್ವೀಟ್ ಮಾಡಿದ್ದಾರೆ. ''ಉಡುಪಿ ದೇವಸ್ಥಾನಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ. ಯಾವ ಮಾಹಿತಿಯ ಅರಿವಿಲ್ಲದೇ ಸಾರ್ವಜನಿಕವಾಗಿ ಮೂರ್ಖರಂತೆ ಮಾತನಾಡೋದು ಏಕೆ?'' ಎಂದು ತರಾಟೆಗೆ ತೆಗೆದುಕೊಂಡಿದ್ದರು. ಟ್ವೀಟ್ನಲ್ಲಿ ರಕ್ಷಿತ್ ಶೆಟ್ಟಿ ಅವರು ಕಾಂಗ್ರೆಸ್ ಮುಖಂಡ ಮಿಥುನ್ ರೈ ಅವರ ಹೆಸರು ಉಲ್ಲೇಖಿಸದಿದ್ದರೂ, ಅದು ಅವರಿಗೆ ಕೊಟ್ಟ ಟಾಂಗ್ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.
ಪರ-ವಿರೋಧ ಚರ್ಚೆಗೆ ವೇದಿಕೆ: ಸಾಮಾನ್ಯವಾಗಿ ರಕ್ಷಿತ್ ಶೆಟ್ಟಿ ಅವರು ಸಾಮಾಜಿಕ ಜಾಲತಾಣ ಬಳಸುವುದು, ತಮ್ಮ ಪ್ರತಿಕ್ರಿಯೆ ವ್ಯಕ್ತಪಡಿಸುವುದು ಬಹಳ ಕಡಿಮೆ. ರಾಜಕೀಯ ವ್ಯಕ್ತಿಗಳ ಹೇಳಿಕೆಗಳಿಗಂತೂ ರಕ್ಷಿತ್ ಶೆಟ್ಟಿ ಪ್ರತಿಕ್ರಿಯೆ ಕೊಟ್ಟಿರಲಿಲ್ಲ. ಅವರ ವೈಯಕ್ತಿಕ ವಿವಾದಗಳು ಕೆಲ ಕಾಲ ಸದ್ದು ಮಾಡಿದ್ದ ಸಂದರ್ಭದಲ್ಲಿಯೂ ನಟ ಮೌನ ವಹಿಸಿದ್ದರು. ಇದೀಗ ಶ್ರೀಕೃಷ್ಣ ಮಠದ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ. ಇದು ಪರ-ವಿರೋಧ ಚರ್ಚೆಗೆ ವೇದಿಕೆಯಾಗಿದೆ.
ಮಿಥುನ್ ರೈ ಹೇಳಿದ್ದೇನು?: ಇತ್ತೀಚೆಗಷ್ಟೇ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯ ಪುತ್ತಿಗೆಯಲ್ಲಿ ನೂರಾನಿ ಮಸೀದಿಯಲ್ಲಿ 'ನಮ್ಮೂರ ಮಸೀದಿ ನೋಡಬನ್ನಿ' ಕಾರ್ಯಕ್ರಮ ನಡೆದಿತ್ತು. ಈ ಸಮಾರಂಭದಲ್ಲಿ ಕಾಂಗ್ರೆಸ್ ಮುಖಂಡ ಮಿಥುನ್ ರೈ ಭಾಗಿಯಾಗಿ ಸೌಹಾರ್ದತೆಯ ಬಗ್ಗೆ ಮಾತನಾಡಿದ್ದರು. ಕರಾವಳಿ ಸೌಹಾರ್ದತೆಯ ಇತಿಹಾಸ ಹೊಂದಿದೆ. ಬಪ್ಪನಾಡು ದೇವಿ ಒಲಿದದ್ದು ಬಪ್ಪ ಬ್ಯಾರಿಗೆ, ಕವತಾರಿನಲ್ಲಿ ಮುಸ್ಲಿಂ ಅರ್ಚಕರಿಂದ ಕೊರಗಜ್ಜನ ಕಟ್ಟೆಗೆ ಪೂಜೆ ನಡೆಯುತ್ತಿದೆ. ಶ್ರೀಕೃಷ್ಣ ಮಠಕ್ಕೂ ಜಾಗ ನೀಡಿದ್ದು ಮುಸ್ಲಿಂ ರಾಜರು. ಅತ್ತೂರು ಚರ್ಚ್, ಸುಬ್ರಹ್ಮಣ್ಯ ದೇವಸ್ಥಾನ, ಉಳ್ಳಾಲ ದರ್ಗಾಕ್ಕೆ ಎಲ್ಲಾ ಧರ್ಮದವರು ಬರುತ್ತಾರೆ ಎಂದು ತಿಳಿಸಿದ್ದರು.
ಶ್ರೀಕೃಷ್ಣ ಮಠಕ್ಕೆ ಜಾಗ ನೀಡಿದ್ದು ಮುಸ್ಲಿಂ ರಾಜರು ಎಂಬ ಹೇಳಿಕೆ ವಿವಾದ ಸೃಷ್ಟಿಸಿದ ಬೆನ್ನಲ್ಲೇ ಸ್ಪಷ್ಟೀಕರಣ ಸಹ ನೀಡಿದ್ದರು. ನಮ್ಮ ಜಿಲ್ಲೆ ಸೌಹಾರ್ದತೆಯ ಇತಿಹಾಸ ಹೊಂದಿದೆ. ಒಡಕು ಮಾಡುವ ಕೆಲಸ ಯಾರೂ ಮಾಡಬಾರದು. ಸೌಹಾರ್ದತೆಗೆ ಬೇಕಾದಷ್ಟು ಉದಾಹರಣೆಗಳಿವೆ ನಮ್ಮಲ್ಲಿವೆ. ಸೌಹಾರ್ದತೆ ಕಾಪಾಡುವ ಪ್ರಾಮಾಣಿಕ ಪ್ರಯತ್ನ ನಾನು ಮಾಡಿದ್ದೇನೆ. ನೂರು ಉದಾಹರಣೆಗಳಲ್ಲಿ ಈ ಹೇಳಿಕೆ ಕೊಟ್ಟದ್ದು ಎಂದು ಹೇಳಿದ್ದರು.
ಇದನ್ನೂ ಓದಿ: ಅಪ್ಪು ಜನ್ಮದಿನಕ್ಕೆ ದಿನಗಣನೆ: ಮಡದಿ ಅಶ್ವಿನಿ ತೆಗೆದುಕೊಂಡ ನಿರ್ಧಾರವೇನು ಗೊತ್ತಾ?
ಬಕೆಟ್ ಅಲ್ಲ, ಟ್ಯಾಂಕರ್ ಹಿಡಿತೀನಿ: ಈ ಬಗ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಜಾಸ್ತಿ ಯಾರಿಗೂ ಬಕೆಟ್ ಹಿಡಿಯೋಕೆ ಹೋಗಬೇಡಿ ಎಂದು ಸಾಮಾಜಿಕ ಜಾಲತಾಣ ಬಳಕೆದಾರರು ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ನಟ, ಉಡುಪಿ ನನ್ನ ಜನ್ಮಸ್ಥಳ. ಬಕೆಟ್ ಅಲ್ಲ, ಟ್ಯಾಂಕರ್ ಹಿಡಿತೀನಿ. ಅವರು ಯಾವ ಭೂಮಿಯ ಬಗ್ಗೆ ಮಾತನಾಡುತ್ತಿದ್ದಾರೆಂದು ಖಚಿತವಾಗಿಲ್ಲ. ಆದರೆ, ಅವರು ಹೇಳಿರುವ ಜಾಗ ಕಾರ್ ಸ್ಟ್ರೀಟ್‌ನಲ್ಲಿರುವ ಜಮೀನು ಖಂಡಿತವಾಗಿಯೂ ಅಲ್ಲ. ಅನಂತೇಶ್ವರ ದೇವಸ್ಥಾನವು ಕೃಷ್ಣ ಮಠಕ್ಕಿಂತ ಹಳೇಯದು ಮತ್ತು ಚಂದ್ರಮೌಳೀಶ್ವರ ದೇವಸ್ಥಾನ ಇನ್ನೂ ಹಳೆಯದು ಎಂದು ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: ಕೃಷ್ಣ ಮಠ ಜಾಗದ ಮೂಲದ ಬಗ್ಗೆ ನೀಡಿದ ಹೇಳಿಕೆ ವಿವಾದ: ಸ್ಪಷ್ಟೀಕರಣ ನೀಡಿದ ಮಿಥುನ್ ರೈ