ETV Bharat / entertainment

'ದಸರಾ‌' ಟೀಸರ್ ಬಿಡುಗಡೆಗೊಳಿಸಲಿದ್ದಾರೆ ನಟ ರಕ್ಷಿತ್‌ ಶೆಟ್ಟಿ - ರಕ್ಷಿತ್ ಶೆಟ್ಟಿ

ಟಾಲಿವುಡ್ ನ್ಯಾಚುರಲ್​ ಸ್ಟಾರ್​ ನಾನಿ ಅಭಿನಯದ ದಸರಾ ಚಿತ್ರದ ಟೀಸರ್​ ಅನ್ನು ಕನ್ನಡದಲ್ಲಿ ನಟ ರಕ್ಷಿತ್ ಶೆಟ್ಟಿ ಇಂದು ಬಿಡುಗಡೆ ಮಾಡಲಿದ್ದಾರೆ.

Natural Star Nani
ನ್ಯಾಚುರಲ್ ಸ್ಟಾರ್ ನಾನಿ
author img

By

Published : Jan 30, 2023, 2:21 PM IST

ದಕ್ಷಿಣ ಸಿನಿಮಾ ಇಂಡಸ್ಟ್ರಿಯ ನ್ಯಾಚುರಲ್ ಸ್ಟಾರ್ ನಾನಿ ಅಭಿನಯದ ಮೆಗಾ ಪ್ರಾಜೆಕ್ಟ್ ಪ್ಯಾನ್ ಇಂಡಿಯಾ ಸಿನಿಮಾ 'ದಸರಾ' ಟೀಸರ್ ಬಿಡುಗಡೆಗೆ ಕೌಂಟ್​ಡೌನ್ ಶುರುವಾಗಿದೆ. ಬಹು ನಿರೀಕ್ಷಿತ ಟೀಸರ್ ವೀಕ್ಷಿಸಲು ಸಿನಿಮಾಪ್ರೇಮಿಗಳು ಎದುರು ನೋಡುತ್ತಿದ್ದಾರೆ. ಕನ್ನಡ, ಹಿಂದಿ, ತಮಿಳು, ಮಲಯಾಳಂ ಭಾಷೆಯ ಸ್ಟಾರ್ ನಟರು ಜನವರಿ 30 ರಂದು ಟೀಸರ್​ ರಿಲೀಸ್​ ಮಾಡಲಿದ್ದಾರೆ ಎಂದು ಚಿತ್ರತಂಡ ತಿಳಿಸಿದೆ.

ಮಾಸ್ ಆ್ಯಕ್ಷನ್ ವಿಷಯ ಒಳಗೊಂಡ ‘ದಸರಾ’ ಈಗಾಗಲೇ ಬಹಳಷ್ಟು ನಿರೀಕ್ಷೆ ಹುಟ್ಟುಹಾಕಿದೆ. ಪ್ಯಾನ್ ಇಂಡಿಯಾ ಸಿನಿಮಾವಾಗಿ ಮೂಡಿ ಬರುತ್ತಿರುವ ಚಿತ್ರದಲ್ಲಿ ನಟ ನಾನಿ ಮಾಸ್ ಅವತಾರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇಂದು ಬಾಲಿವುಡ್ ನಟ ಶಾಹಿದ್ ಕಪೂರ್, ಧನುಷ್, ರಕ್ಷಿತ್ ಶೆಟ್ಟಿ, ದುಲ್ಕರ್ ಸಲ್ಮಾನ್ ಚಿತ್ರದ ಟೀಸರ್ ಬಿಡುಗಡೆ ಮಾಡಲಿದ್ದಾರೆ ಎಂದು ಚಿತ್ರತಂಡ ವಿಶೇಷ ವಿಡಿಯೋ ಮುಖಾಂತರ ಮಾಹಿತಿ ಹಂಚಿಕೊಂಡಿದೆ. ಹಾಗೆಯೇ, ಕನ್ನಡದಲ್ಲಿ ರಕ್ಷಿತ್ ಶೆಟ್ಟಿ ಟೀಸರ್​ ಬಿಡುಗಡೆ ಮಾಡಲಿದ್ದಾರೆ.

  • " class="align-text-top noRightClick twitterSection" data="">

ನಾನಿ ಹಾಗೂ ಕೀರ್ತಿ ಸುರೇಶ್ ಜೋಡಿಯಾಗಿ ನಟಿಸಿರುವ ‘ದಸರಾ’ ಚಿತ್ರಕ್ಕೆ ಶ್ರೀಕಾಂತ್ ಒಡೆಲಾ ಆ್ಯಕ್ಷನ್ ಕಟ್ ಹೇಳಿದ್ದಾರೆ. ಬಹು ದೊಡ್ಡ ತಾರಾಗಣ ಒಳಗೊಂಡ ಚಿತ್ರದಲ್ಲಿ ದೀಕ್ಷಿತ್ ಶೆಟ್ಟಿ, ಸಮುದ್ರಕನಿ, ಸಾಯಿಕುಮಾರ್, ಜರೀನಾ ವಹಾಬ್ ಸೇರಿದಂತೆ ಸ್ಟಾರ್ ಕಲಾವಿದರ ತಾರಾ ಬಳಗವಿದೆ.

ಇದನ್ನೂ ಓದಿ: 'ದಸರಾ' ಸಿನಿಮಾದ ಫಸ್ಟ್​​​ ಲುಕ್ ರಿಲೀಸ್​: ಖಡಕ್ ಲುಕ್​​ನಲ್ಲಿ ಎಂಟ್ರಿ ಕೊಟ್ಟ ನಾನಿ

ಶ್ರೀಲಕ್ಷ್ಮೀ ವೆಂಕಟೇಶ್ವರ ಸಿನಿಮಾಸ್ ಬ್ಯಾನರ್​ನಡಿ ಸುಧಾಕರ್ ಚೆರುಕುರಿ ಚಿತ್ರವನ್ನು ಅದ್ಧೂರಿಯಾಗಿ ನಿರ್ಮಾಣ ಮಾಡಿದ್ದಾರೆ. ಸಂತೋಷ್ ನಾರಾಯಣನ್ ಮ್ಯೂಸಿಕ್, ಸತ್ಯನ್ ಸೂರ್ಯನ್ ಕ್ಯಾಮರಾ ವರ್ಕ್, ನವೀನ್ ನೂಲಿ ಸಂಕಲನ, ಅನ್ಬರಿವ್ ಸಾಹಸ ನಿರ್ದೇಶನ, ವಿಜಯ್ ಚಗಂಟಿ ಕಾರ್ಯಕಾರಿ ನಿರ್ಮಾಣ ಚಿತ್ರಕ್ಕಿದೆ. ಮಾರ್ಚ್ 30ರಂದು ಸಿನಿಮಾ ಗ್ರ್ಯಾಂಡ್ ಆಗಿ ತೆರೆ ಕಾಣಲಿದೆ. ಈಗಾಗಲೇ ಹಾಡುಗಳ ಮೂಲಕ ಕ್ರೇಜ್ ಸೃಷ್ಟಿಸಿರುವ ಚಿತ್ರತಂಡ, ಟೀಸರ್ ಝಲಕ್ ಮೂಲಕ ಪ್ರೇಕ್ಷಕರ ಮನ ಸೆಳೆಯಲು ಸಜ್ಜಾಗಿದೆ.

ಇದನ್ನೂ ಓದಿ: ನಾನಿ ಅಭಿನಯದ ದಸರಾ ಚಿತ್ರದಲ್ಲಿ ಹಳ್ಳಿ ಹುಡುಗಿಯಾಗಿ ಮಿಂಚಲಿದ್ದಾರೆ ಮಹಾನಟಿ!

ಹಳ್ಳಿ ಹುಡುಗಿಯಾಗಿ ಕೀರ್ತಿ ಸುರೇಶ್: 'ದಸರಾ'ದಲ್ಲಿ ನಟಿ ಕೀರ್ತಿ ಸುರೇಶ್ ಯಾವ ರೀತಿ ಕಾಣಸಿಗುತ್ತಾರೆ ಎಂಬ ಕುತೂಹಲ ಅವರ ಅಭಿಮಾನಿ ಬಳಗದಲ್ಲಿತ್ತು. ಆ ಕುತೂಹಲವನ್ನು ಹಾಗೆಯೇ ಕಾಪಾಡಿಕೊಂಡು ಬಂದಿದ್ದ ಚಿತ್ರತಂಡ, ಕೀರ್ತಿ ಸುರೇಶ್ ಜನ್ಮದಿನದ ಪ್ರಯುಕ್ತ ಫಸ್ಟ್ ಲುಕ್ ರಿವೀಲ್ ಮಾಡಿತ್ತು. ನಾನಿ ಹೊಸ ಅವತಾರ ಕಂಡು ಫಿದಾ ಆಗಿದ್ದ ಸಿನಿ ರಸಿಕರು, ಕೀರ್ತಿ ಸುರೇಶ್ ಲುಕ್ ಕೂಡ ಬೋಲ್ಡ್​ ಆಗಿದ್ದರು. ಚಿತ್ರದಲ್ಲಿ ವೆನ್ನಲ ಪಾತ್ರವನ್ನು ನಿಭಾಯಿಸುತ್ತಿದ್ದು ಹಳ್ಳಿ ಹುಡುಗಿಯಾಗಿ ಮಿಂಚಲಿದ್ದಾರೆ. ಈಗಾಗಲೇ ಬಿಡುಗಡೆಯಾಗಿರುವ ಧೂಮ್ ದಾಮ್ ದೊಸ್ತಾನ ಹಾಡು ಸಿನಿ ಪ್ರಿಯರಿಂದ ಅದ್ಭುತ ರೆಸ್ಪಾನ್ ಪಡೆದುಕೊಂಡಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.