ETV Bharat / entertainment

'ಎಕ್ಸ್‌ ಅಂಡ್‌ ವೈ‌' ಹಿಂದೆ ಬಿದ್ದ ರಾಮಾ ರಾಮಾ ರೇ ನಿರ್ದೇಶಕ ಸತ್ಯ ಪ್ರಕಾಶ್‌ - X and Y film

ರಾಮಾ ರಾಮಾ ರೇ ನಿರ್ದೇಶಕ ಡಿ ಸತ್ಯ ಪ್ರಕಾಶ್‌ ಅವರು 'ಎಕ್ಸ್‌ ಅಂಡ್‌ ವೈ‌' ಎಂಬ ಚಿತ್ರದ ಮೂಲಕ ಮತ್ತೆ ಸಿನಿಮಾ ಅಖಾಡಕ್ಕೆ ಇಳಿದಿದ್ದಾರೆ.

Etv Bharat
Etv Bharat
author img

By ETV Bharat Karnataka Team

Published : Nov 25, 2023, 11:43 AM IST

ರಾಷ್ಟ್ರ ಮತ್ತು ರಾಜ್ಯ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ಡಿ. ಸತ್ಯ ಪ್ರಕಾಶ್‌ ಚಿತ್ರ ಸೆಟ್ಟೇರಿತು ಎಂದರೆ ಹಲವು ವಿಶೇಷತೆಗಳನ್ನು ಹೊಂದಿರುತ್ತದೆ ಎಂದು ಪ್ರೇಕ್ಷಕರು ಮತ್ತು ಚಿತ್ರೋದ್ಯಮದ ಮಂದಿ ಎದುರು ನೋಡುತ್ತಾರೆ. ಅದೇ ರೀತಿ ಸತ್ಯ ಪ್ರಕಾಶ್ ಕೂಡ ಕಂಟೆಂಟ್ ಹಾಗೂ ಸಂದೇಶ ಇರುವ ಚಿತ್ರಗಳನ್ನು ಮಾಡಿಕೊಂಡು ಬರ್ತಾ ಇದ್ದಾರೆ ನಿರ್ದೇಶಕ ಸತ್ಯ. ಯೆಸ್ ಬಹಳ ದಿನಗಳ ನಂತರ ಈಗ ಅಳೆದು ತೂಗಿ ಅತ್ಯಾಪ್ತ ಕಥೆ ಮಾಡಿಕೊಂಡು ಅದಕ್ಕೆ 'ಎಕ್ಸ್ ಅಂಡ್‌ ವೈ' ಎಂಬ ಶೀರ್ಷಿಕೆ ಇಟ್ಟುಕೊಂಡು ಸತ್ಯ ಪ್ರಕಾಶ್ ಮತ್ತೆ ಸಿನಿಮಾ ಅಖಾಡಕ್ಕೆ ಇಳಿದಿದ್ದಾರೆ.

director Satya Prakash
'ಎಕ್ಸ್‌ ಅಂಡ್‌ ವೈ‌' ಚಿತ್ರಕ್ಕೆ ಸತ್ಯ ಪ್ರಕಾಶ್‌ ಆ್ಯಕ್ಷನ್ ಕಟ್

ಸತ್ಯ ಪಿಕ್ಚರ್ಸ್‌ ಬ್ಯಾನರ್​ನಡಿ ಚಿತ್ರ ನಿರ್ಮಾಣ: ತಮ್ಮ ಹಿಂದಿನ ಮೂರು ಚಿತ್ರಗಳಲ್ಲಿ ಮೂಡಿಸಿದ ವಿಶೇಷತೆಗಳಂತೆ ಇಲ್ಲೂ ಚಿತ್ರದ ಟೈಟಲ್‌, ಆರಿಸಿಕೊಂಡ ಕಥೆ, ಲೊಕೇಶನ್ಸ್‌, ಕಲಾವಿದರ ಆಯ್ಕೆಯಲ್ಲದೆ ತಾವೇ ಮುಖ್ಯ ಪಾತ್ರಧಾರಿಯಾಗಿ ನಟನೆಗೆ ಇಳಿದಿದ್ದಾರೆ. ಇತ್ತೀಚೆಗಷ್ಟೇ ಬೆಳಗಿನ ಜಾವ ಬ್ರಾಹ್ಮಿ ಮುಹೂರ್ತದಲ್ಲಿ ಜಯ ನಗರದ ತಮ್ಮದೇ ಕಚೇರಿಯಲ್ಲಿ ಸ್ನೇಹಿತರು, ಕಲಾವಿದರು ಹಾಗೂ ತಮ್ಮ ತಂಡದ ತಂತ್ರಜ್ಞರನ್ನೊಳಗೂಡಿ ಸತ್ಯ ಪಿಕ್ಚರ್ಸ್‌ ಬ್ಯಾನರ್‌ ಅಡಿಯಲ್ಲಿ ಮುಹೂರ್ತ ಮುಗಿಸಿಕೊಂಡಿದ್ದಾರೆ.

ಬೆಂಗಳೂರು, ಮಂಗಳೂರಿನಲ್ಲಿ ಚಿತ್ರೀಕರಿಸಲು ಯೋಜನೆ: ನಿರ್ಮಾಣ ಹಾಗೂ ನಿರ್ದೇಶನದ ಜೊತೆಗೆ ಸತ್ಯಪ್ರಕಾಶ್‌ ಹಾಗೂ ಅಥರ್ವ ಪ್ರಕಾಶ್‌ ನಾಯಕರಾಗಿ ಅಭಿನಯಿಸುತ್ತಿದ್ದು, ಲವಿತ್‌ ಛಾಯಾಗ್ರಹಣ, ವಾಸುಕಿ ವೈಭವ್‌ ಸಂಗೀತ ನರ್ದೇಶನ, ಬಿ.ಎಸ್‌. ಕೆಂಪರಾಜು ಅವರ ಸಂಕಲನ ಇದೆ. ವರದರಾಜ್‌ ಕಾಮತ್‌ ಕಲಾ ನಿರ್ದೇಶನ ಮಾಡುತ್ತಿದ್ದಾರೆ. ಇಡೀ ಚಿತ್ರ ಬೆಂಗಳೂರು ಮತ್ತು ಮಂಗಳೂರು ಸುತ್ತ ಮುತ್ತಲಿನ ಪರಿಸರದಲ್ಲಿ ಚಿತ್ರೀಕರಿಸಲು ಯೋಜಿಸಲಾಗಿದೆ ಎಂದು ಸತ್ಯಪ್ರಕಾಶ್‌ ತಿಳಿಸಿದ್ದಾರೆ.

director Satya Prakash
ರಾಮಾ ರೇ ರಾಮಾ ರೇ ನಿರ್ದೇಶಕ ಸತ್ಯ ಪ್ರಕಾಶ್‌

ನಿರ್ದೇಶಕ ಸತ್ಯಪ್ರಕಾಶ್ ರಾಮಾ ರಾಮಾ ರೇ', 'ಒಂದಲ್ಲಾ ಎರಡಲ್ಲಾ', 'ಮ್ಯಾನ್ ಆಫ್ ದಿ ಮ್ಯಾಚ್' ನಂತಹ ಅಪರೂಪದ ಸಿನಿಮಾಗಳನ್ನು ನಿರ್ದೇಶಿಸಿ ಗಮನ ಸೆಳೆದಿದ್ದರು. ಪ್ರಸ್ತುತ 'ಎಕ್ಸ್‌ ಅಂಡ್‌ ವೈ‌' ಸಿನಿಮಾಕ್ಕೆ ಕೈಹಾಕಿದ್ದಾರೆ.

ಇದನ್ನೂ ಓದಿ: ಒನ್ ಅಂಡ್ ಹಾಫ್​: ಶ್ರೇಯಸ್ ಚಿಂಗಾ ಜೊತೆ ತೆರೆ ಹಂಚಿಕೊಂಡ ಮಾನ್ವಿತಾ ಹರೀಶ್

'ಅಂಬರೀಶ್ ಆಶೀರ್ವಾದದಿಂದ ಮಗನ ಸಿನಿಮಾ ಬಿಡುಗಡೆ': ಅಂಬಿ ಸಮಾಧಿಗೆ ಪೂಜೆ ಸಲ್ಲಿಸಿದ ಸುಮಲತಾ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.