ETV Bharat / entertainment

ಹಾಸ್ಟೆಲ್ ಹುಡುಗರ ಪ್ರತಿಭಟನೆಗೆ ಮಣಿದ ನಟಿ ರಮ್ಯಾ... ನಟನೆ ಕೊನೆಗೂ ಕಮ್‌ ಬ್ಯಾಕ್​! - Hostel Hudugaru Bekagiddare

ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ ನಟನೆಗೆ ಕಮ್ ಬ್ಯಾಕ್ ಮಾಡಿದ್ದಾರೆ. ಹಾಸ್ಟೆಲ್ ಹುಡುಗರ ಮನವಿಗೆ ಮಣಿದು ಡಿಫರೆಂಟ್ ಆಗಿ ಮೋಹಕತಾರೆ ಕಮ್ ಬ್ಯಾಕ್ ಆಗಿದ್ದಾರೆ.

Ramya Special Appearance In Hostel Hudugaru Bekagiddare movie
ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಚಿತ್ರಕ್ಕೆ ರಮ್ಯಾ ಸಾಥ್
author img

By

Published : Nov 5, 2022, 11:22 AM IST

'ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ' ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಪ್ರಮೋಷನ್​​ನಿಂದಲೇ ಸಿನಿಮಾ ರಸಿಕರನ್ನ ಗಮನ ಸೆಳೆಯುತ್ತಿರುವ ಚಿತ್ರ. ಯೂತ್ ಸಬ್ಜೆಕ್ಟ್ ಒಳಗೊಂಡ ಚಿತ್ರವನ್ನು ನಿತಿನ್ ಕೃಷ್ಣಮೂರ್ತಿ ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಹಲವು ರಂಗಭೂಮಿ ಪ್ರತಿಭೆಗಳು ಈ ಚಿತ್ರದಲ್ಲಿ ನಟಿಸಿದ್ದಾರೆ.

ಕ್ರಿಯೇಟಿವ್ ಸಿನಿಮಾ ಪ್ರಮೋಷನಲ್ ವಿಡಿಯೋ ಮೂಲಕ ಸೌಂಡ್ ಮಾಡುತ್ತಿರುವ, 'ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ' ಚಿತ್ರದ ಪೋಸ್ಟರ್​​ನ್ನು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಲಾಂಚ್ ಮಾಡಿದ್ದರು. ಹೀಗೆ ಸ್ಟಾರ್ ನಟರ ಮೂಲಕ ಸಿನಿಮಾದ ಭರ್ಜರಿ ಪ್ರಚಾರ ಕಾರ್ಯ ನಡೆಸುತ್ತಿರುವ ಈ ಚಿತ್ರತಂಡ ಇದೀಗ ಸ್ಯಾಂಡಲ್​ವುಡ್ ಕ್ವೀನ್ ಮೋಹಕ ತಾರೆ ರಮ್ಯಾ ಅವರನ್ನು ಚಿತ್ರದ ಪ್ರಚಾರ ಕಾರ್ಯಕ್ಕೆ ಕರೆ ತಂದಿದೆ.

ವಿಶೇಷ ಪಾತ್ರದಲ್ಲಿ ಮೋಹಕ ತಾರೆ: ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಟೀಂ ಈ ಹಿಂದೆ‌ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ, ಕಿಚ್ಚ ಸುದೀಪ್​​ ಅವರಿಂದ ಸಿನಿಮಾ ಪ್ರಮೋಷನಲ್ ಕಟೆಂಟ್ ಮಾಡಿಸಿ ಗಮನ ಸೆಳೆದಿತ್ತು. ಸ್ಟಾರ್ ನಟರ ಮೂಲಕ ಸಿನಿಮಾ ಪ್ರಚಾರ ಒಂದು ಕಡೆಯಾದರೆ ಇಂಟ್ರೆಸ್ಟಿಂಗ್ ಪ್ರಮೋಷನಲ್ ಕಂಟೆಂಟ್ ಕೂಡ ಸಾಮಾಜಿಕ ಜಾಲತಾಣದಲ್ಲಿ ಎಲ್ಲರನ್ನು ಸಖತ್ ಇಂಪ್ರೆಸ್ ಮಾಡಿತ್ತು. ಹೀಗೆ ವಿಭಿನ್ನವಾಗಿ ಸಿನಿಮಾ ಪ್ರಚಾರ ಮಾಡುತ್ತಾ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿರುವ ಈ ಚಿತ್ರದಲ್ಲಿ ಮೋಹಕ ತಾರೆ ರಮ್ಯಾ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

  • " class="align-text-top noRightClick twitterSection" data="">

ಇದನ್ನೂ ಓದಿ: ಮತ್ತೆ ಕಾಲೇಜು ಹುಡುಗನಾದ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ!

ಮೊದಲಿಗೆ ರಮ್ಯಾ ಅಭಿಮಾನಿಗಳು ಮತ್ತೆ ಸಿನಿಮಾ ಇಂಡಸ್ಟ್ರಿಗೆ ಬರುವಂತೆ ಪ್ರತಿಭಟನೆ ಮಾಡುವ ಮೂಲಕ‌ ಶುರುವಾಗುವ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಚಿತ್ರದ ಹಾಡು ವಿಭಿನ್ನತೆಯಿಂದ‌ ಕೂಡಿದೆ. ಫೈನಲಿ ಮೋಹಕ ತಾರೆ ಈ ಹಾಡಿನಲ್ಲಿ ಸ್ಟೈಲಿಷ್ ಆಗಿ ಕಾಣಿಸಿಕೊಂಡಿದ್ದಾರೆ. ಇದರ ಜೊತೆಗೆ ಸ್ಯಾಂಡಲ್ ವುಡ್ ಸ್ಟಾರ್ ನಟರ ಗೆಸ್ಟ್ ಅಪಿಯರೆನ್ಸ್ ಕೂಡ ಚಿತ್ರದಲ್ಲಿರಲಿದೆ.

ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ಅರವಿಂದ್ ಕಶ್ಯಪ್ ಛಾಯಾಗ್ರಹಣ, ಸುರೇಶ್ ಸಂಕಲನವಿದೆ. ವರುಣ್ ಸ್ಟುಡಿಯೋಸ್ ಹಾಗೂ ಪ್ರಜ್ವಲ್ ಬಿ.ಪಿ ಅವರ ಗುಲ್ ಮೋಹರ್ ಫಿಲಂಸ್ ಬ್ಯಾನರ್ ಅಡಿ ನಿರ್ಮಾಣವಾಗಿರುವ ಮೊದಲ ಸಿನಿಮಾ ಇದಾಗಿದೆ. ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ನಿರತವಾಗಿದ್ದು, ಜನವರಿಯಲ್ಲಿ ಸಿನಿಮಾ ತೆರೆಗೆ ಬರಲಿದೆ.

ಇದನ್ನೂ ಓದಿ: 'ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ' ಚಿತ್ರಕ್ಕೆ ನಟಿ ರಮ್ಯಾ ಸಾಥ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.